ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿರುವ ಕೆಎಎಸ್ ಅಧಿಕಾರಿ ಬಿ.ಕೆ.ನಾಗರಾಜಪ್ಪ ಅವರ ಮೇಲೆ ಕೊಲೆ ಬೆದರಿಕೆ ಕೇಳಿ ಬಂದಿದ್ದು ಸರ್ಕಾರಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮಹಾಲಕ್ಷ್ಮಿ ಲೇಔಟ್ ನ ಭೋವಿ ಪಾಳ್ಯದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ ಹಣ ಮಂಜೂರಾತಿ ಮಾಡುವಂತೆ ಧಮ್ಕಿ ಹಾಕಿರೋ ಆರೋಪಿಗಳು. ನಾವು ಹೇಳಿದ ವ್ಯಕ್ತಿಗಳಿಗೆ ಹಣ ಮಂಜೂರು ಮಾಡಬೇಕು. ಇಲ್ಲದಿದ್ದರೆ ಸರ್ಕಾರಿ ಕಚೇರಿಯಲ್ಲಿ …
Read More »ವಿದೇಶಿ ಏಜೆನ್ಸಿಗಳಿಗೆ ರಕ್ಷಣಾ ಮಾಹಿತಿ ನೀಡುತ್ತಿದ್ದ ಬೆಂಗಳೂರಿನ ಬಟ್ಟೆ ವ್ಯಾಪಾರಿಯ ಬಂಧನ
ಬೆಂಗಳೂರು: ನಗರದ ಸಿಸಿಬಿ ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ವಿಭಾಗದ ಅಧಿಕಾರಿಗಳ ಜಂಟಿ ಕಾರ್ಯಾಚಾರಣೆಯಲ್ಲಿ ವಿದೇಶಿ ಏಜೆನ್ಸಿಗಳಿಗೆ ಭಾರತದ ರಕ್ಷಣಾ ಮಾಹಿತಿ ನೀಡುತ್ತಿದ್ದ ಯುವಕನ್ನು ಬಂಧಿಸಲಾಗಿದೆ. ರಾಜಸ್ಥಾನ ಮೂಲದ ಈತ ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದ ಎನ್ನಲಾಗಿದೆ. ಆರೋಪಿಯು ರಾಜಸ್ಥಾನದ ಬೆರ್ಮರ್ ಮೂಲದವನು. ಬೆಂಗಳೂರಿನ ಕಾಟನ್ ಪೇಟೆಯ ಜಾಲಿ ಮೊಹಲ್ಲಾದಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದ. ಸೇನೆಯ ಕಮಾಂಡೋ ಸಮವಸ್ತ್ರ ಧರಿಸಿ ಬಾರ್ಮರ್ ನ ಮಿಲಿಟರಿ ಸ್ಟೇಶನ್ ಮಾಹಿತಿ, ಸೇನಾ ವಾಹನಗಳ ಓಡಾಟದ ಮಾಹಿತಿಯನ್ನು …
Read More »ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಫಲಿತಾಂಶ ಪ್ರಕಟ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಫಲಿತಾಂಶ ಪ್ರಕಟವಾಗಿದೆ. ಆಗಸ್ಟ್ 28 ಮತ್ತು 29ರಂದು ಸಿಇಟಿ ಪರೀಕ್ಷೆಗಳು ನಡೆದಿತ್ತು. ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಮೈಸೂರಿನ ಪ್ರಮತಿ ಹಿಲ್ ವೀವ್ ಅಕಾಡೆಮಿಯ ಮೇಘನ್ ಎಚ್.ಕೆ. ಅವರು ಎಲ್ಲಾ ವಿಭಾಗದಲ್ಲೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಎಂಜಿನಿಯರಿಂಗ್, ಬಿ-ಫಾರ್ಮಾ, ಕೃಷಿ …
Read More »ದ್ವಿತೀಯ ಪಿಯು ಫಲಿತಾಂಶ: ಇಲಾಖೆ ಫಲಿತಾಂಶ ತಿರಸ್ಕರಿಸಿದ 36 ವಿದ್ಯಾರ್ಥಿಗಳು ಅನುತ್ತೀರ್ಣ!
ಬೆಂಗಳೂರು: ಕೋವಿಡ್ ಕಾರಣದಿಂದ ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಹಿಂದಿನ ತರಗತಿಗಳ ಫಲಿತಾಂಶದಂತೆ ಉತ್ತೀರ್ಣ ಮಾಡಲಾಗಿತ್ತು. ಆದರೆ ಪಿಯು ಇಲಾಖೆ ನೀಡಿದ್ದ ಫಲಿತಾಂಶವನ್ನು ತಿರಸ್ಕರಿಸಿ, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶ ಇಂದು ಪ್ರಕಟವಾಗಿದೆ. ಪಿಯು ಇಲಾಖೆ ನೀಡಿದ್ದ ಫಲಿತಾಂಶವನ್ನು ತಿರಸ್ಕರಿಸಿ, 592 ಹೊಸ ಅಭ್ಯರ್ಥಿಗಳು (ಫ್ರೇಶರ್) ಪರೀಕ್ಷೆ ಬರೆದಿದ್ದರು. ಅದರಲ್ಲಿ 556 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, 36 ಮಂದಿ ಅನುತ್ತೀರ್ಣರಾಗಿದ್ದಾರೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದಿನ ಫಲಿತಾಂಶ ಪುನಃ …
Read More »ಬೆಂಗಳೂರಿನಲ್ಲಿ ಛತ್ತೀಸ್‍ಗಢದ ಬಿಜೆಪಿ ಮಾಜಿ MLA ನಿಧನ
ರಾಯ್‍ಪುರ್: ಛತ್ತೀಸ್‍ಗಢದ ಬಿಜೆಪಿ ಮಾಜಿ ಶಾಸಕ ಯುಧ್ವೀರ್ ಸಿಂಗ್ ಜುದೇವ್ ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್(39) ಲಿವರ್ ಸಮಸ್ಯೆಯಿಂದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್ ಛತ್ತೀಸ್‍ಗಢದ ಜಶ್‍ಪುರದ ಹಿಂದಿನ ರಾಜಮನೆಯನಕ್ಕೆ ಸೇರಿದವರಾಗಿದ್ದು, 2013ರಲ್ಲಿ ನಿಧನರಾದ ಬಿಜೆಪಿಯ ಪ್ರಭಾವಿ ನಾಯಕ ದಿಲೀಪ್ ಸಿಂಗ್ ಜುದೇವ್ ಅವರ ಕಿರಿಯ ಪುತ್ರರಾಗಿದ್ದಾರೆ. ಯುಧ್ವೀರ್ ಸಿಂಗ್‍ರವರು ಬಹಳ ದಿನಗಳಿಂದ ಲಿವರ್ ಸಂಬಂಧಿತ …
Read More »ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ: ರಾಜೂ ಗೌಡ
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ ಎಂದು ಶಾಸಕ ರಾಜೂ ಗೌಡ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನ ಬಿಎಸ್‍ವೈ ಅವರು ಕಾರ್ಯಕಾರಿಣಿ ಸಭೆಯಲ್ಲಿ ವಿರೋಧ ಪಕ್ಷದವರನ್ನು ಯಾರು ನಿರ್ಲಕ್ಷಿಸ ಬಾರದು. ಒಳ್ಳೆಯ ರೀತಿ ಕೆಲಸವನ್ನು ಮಾಡಬೇಕು. ಮೋದಿ, ಮೋದಿ ಎನ್ನಲು ಹೋಗಬೇಡಿ ನಿಮ್ಮ ಕೆಲಸವನ್ನು ಮಾಡಿ ಎಂದರು ಹೇಳಿದ್ದಾರೆ ಎಂದಿದ್ದಾರೆ. ನಾವೇಲ್ಲರು ಬಿಜೆಪಿಯಲ್ಲಿಯೇ ಇರುತ್ತೇವೆ. ಮತ್ತೆ ಬಿಜೆಪಿಯಿಂದಲೇ ಗೆದ್ದು ಮಂತ್ರಿಯಾಗುತ್ತೇವೆ. ಕಾಂಗ್ರೆಸ್‍ನಿಂದ ಕೆಲವು ಶಾಸಕರಿಗೆ …
Read More »ಕಾಫಿ, ಟೀ ಕುಡಿಯೋಕೆ ಇಲ್ಲಿಗೆ ಬರಬೇಕಾ: ಮಾತನಾಡಲು ಅವಕಾಶ ಕೋರಿದ ಶಿವಲಿಂಗೇಗೌಡ
ಬೆಂಗಳೂರು: ‘ನೀವು ಕೂತ್ಕೊ ಅಂದ್ರೆ ಕೈಮುಗಿದು ಕೂತು ಬಿಡ್ತೀನಿ. ನಮಗೂ ಮಾತಾಡೋಕೆ ಅವಕಾಶ ಕೊಡಿ. ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬೆಲೆ ಏರಿಕೆ ಬಗ್ಗೆ ನಡೆಯುತ್ತಿದದ ಚರ್ಚೆಗೆ ಉತ್ತರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದ್ದು ನಿಂತರು. ಈ ವೇಳೆ ಮಾತನಾಡಲು ನಿಂತ ಶಿವಲಿಂಗೇಗೌಡರಿಗೆ ಕುಳಿತುಕೊಳ್ಳುವಂತೆ ಕುಮಾರ್ ಬಂಗಾರಪ್ಪ ಸೂಚಿಸಿದರು. ಸ್ಪೀಕರ್ …
Read More »ರೈತ ಚಳವಳಿ ಸ್ಪಾನ್ಸರ್ಡ್: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ರೈತರ ಹೋರಾಟ
ಬೆಂಗಳೂರು: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವನ್ನು ಪ್ರಾಯೋಜಿತ ಎಂದು ಕರೆದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಯ ಬಗ್ಗೆ ಪ್ರತಿಪಕ್ಷಗಳು ಬುಧವಾರ ವಿಧಾನಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದವು. ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಮಾತನಾಡಿ, ‘ರೈತರ ಚಳವಳಿ ಸ್ಪಾನ್ಸರ್ಡ್ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಸಮರ್ಥನೆ ಮಾಡಿಕೊಂಡು, ಅದಕ್ಕೆ ಬದ್ಧರಾಗಿದ್ದಾರೆ, ಸಂತೋಷ. ಈ ಬಗ್ಗೆ ರೈತರು ಮತ್ತು ಹೊರಗಿನ ಜನರು ತೀರ್ಮಾನಿಸುತ್ತಾರೆ ಎಂದು ರಮೇಶ್ ಕುಮಾರ್ ಹೇಳಿದರು. ರಮೇಶ್ …
Read More »ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ಸಿಕ್ಕಿದ್ದು ಒಟ್ಟು 27 ಪುಟಗಳ ಡೆತ್ ನೋಟ್!
ಬೆಂಗಳೂರು: ನಗರದಲ್ಲಿ ಶಂಕರ್ ಎಂಬವರ ಕುಟುಂಬದ ಐವರ ಸಾವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ತನಿಖೆ ಚುರುಕುಗೊಂಡಿದೆ. ಈ ವೇಳೆ, ಪ್ರತ್ಯೇಕವಾಗಿ ಬರೆದಿದ್ದ 27 ಪುಟಗಳ ಡೆತ್ನೋಟ್ ಪತ್ತೆಯಾಗಿದೆ. ಈ ಮೊದಲು ಮನೆಯಲ್ಲಿ 3 ಪ್ರತ್ಯೇಕ ಡೆತ್ನೋಟ್ ಪತ್ತೆಯಾಗಿತ್ತು. ಸಿಂಚನಾ ಎಂಬವರ ಕೊಠಡಿಯಲ್ಲಿ 4 ಪುಟಗಳ ಡೆತ್ನೋಟ್ ಸಿಕ್ಕಿತ್ತು. ಸಿಂಧೂರಾಣಿ ಕೊಠಡಿಯಲ್ಲಿ 4 ಪುಟದ ಡೆತ್ನೋಟ್ ಸಿಕ್ಕಿತ್ತು. ಇಬ್ಬರೂ ತಮ್ಮ ಗಂಡನ ಮನೆ ಮತ್ತು ತಂದೆ ವಿರುದ್ಧ ಆರೋಪ ಮಾಡಿದ್ದರು. ಬಳಿಕ …
Read More »ರೋಡ್ ಹಂಪ್‌ಗಳ ಬಗ್ಗೆ ಸದನದಲ್ಲಿ ವ್ಯಗ್ರರಾದ ಶಾಸಕ ರಮೇಶ್ ಕುಮಾರ್; ಬೇಜವಾಬ್ದಾರಿ ಅಧಿಕಾರಿಗಳ ಸಸ್ಪೆಂಡ್ ಮಾಡಿ ಅಂದರು
ಬೆಂಗಳೂರು: ಅವೈಜ್ಞಾನಿಕ ರೋಡ್ ಹಂಪ್‌ಗಳು ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಸದನದಲ್ಲಿ ಶಾಸಕ ರಮೇಶ್ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ. ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಹೋಗುವುದಿಲ್ಲ. ಒಬ್ಬ ಜೆಇ, ಇಇ ಯಾರೂ ಸ್ಥಳ ಪರಿಶೀಲನೆ ಮಾಡಲ್ಲ. ಬೇಕಾಬಿಟ್ಟಿಯಾಗಿ ರೋಡ್ ಹಂಪ್‌ಗಳನ್ನ ಹಾಕಿದ್ದಾರೆ. ಇದಕ್ಕೆಲ್ಲಾ ಯಾರು ಹೊಣೆ ಎಂದು ಇಂದು ನಡೆದ ಸದನದಲ್ಲಿ ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತನಾಡುತ್ತ ಅವರು, ಹಳ್ಳಿ ರಸ್ತೆಯಿಂದ ಮುಖ್ಯ ರಸ್ತೆಗೆ ಬರಬೇಕಾದ್ರೆ ಹಂಪ್ …
Read More »