Breaking News
Home / ಜಿಲ್ಲೆ / ಬೆಂಗಳೂರು (page 78)

ಬೆಂಗಳೂರು

ಭೂ ಕಬಳಿಕೆಗೆ ನಕಲಿ ದಾವೆ: ವಕೀಲರ ಪರಿಷತ್ತು, ಸಂಘವೂ ಪಾರ್ಟಿ

ಬೆಂಗಳೂರು: ವಾರಸುದಾರರು ಉಪಯೋಗಿಸದ ಖಾಲಿ ಜಾಗವನ್ನು ಕೊಳ್ಳೆ ಹೊಡೆಯಲು ನಕಲಿ ಕಕ್ಷಿದಾರ-ಪ್ರತಿವಾದಿಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಲಪಟಾಯಿಸುತ್ತಿದ್ದ ಪ್ರಕರಣವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿಗಣಿಸಿರುವ ಹೈಕೋರ್ಟ್‌, ಈ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಮತ್ತು ಬೆಂಗಳೂರು ವಕೀಲರ ಸಂಘವನ್ನು ಪಾರ್ಟಿಗಳಾಗಿ ಒಳಗೊಳ್ಳುವಂತೆ ನಿರ್ದೇಶನ ನೀಡಿದೆ. ಮೋಸದ ಮಾರ್ಗದಿಂದ ಆಸ್ತಿ ಹಕ್ಕಿನ ರಾಜಿ ಡಿಕ್ರಿ ಪಡೆಯುತ್ತಿದ್ದ ಬಗ್ಗೆ ತನಿಖೆ ನಡೆಸಲು ಸಿಐಡಿಗೆ ನ್ಯಾಯಮೂರ್ತಿ …

Read More »

ಸಾಂತ್ವನ ಕೇಂದ್ರದಿಂದ ಸಿನಿಮೀಯ ರೀತಿಯಲ್ಲಿ ಪರಾರಿಯಾದ ಮಹಿಳಾ ಕೈದಿಗಳು!

ಬೆಂಗಳೂರು: ಇಲ್ಲಿನ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದ್ದ ಐವರು ವಿದೇಶಿ ಮಹಿಳಾ ಕೈದಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅಧಿಕಾರಿಗಳ ಕಣ್ತಪ್ಪಿಸಿ ಪರಾರಿಯಾಗಿರುವ ಕೈದಿಗಳು ಆಫ್ರಿಕಾದ ಕಾಂಗೊ, ನೈಜೀರಿಯ ದೇಶದ ಮೂಲದವರೆಂದು ತಿಳಿದುಬಂದಿದೆ. ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ನಡೆಸಿದ ಕಾರ್ಯಾಚರಣೆಯಿಂದ 15 ಕೈದಿಗಳನ್ನು ಬಂಧಿಸಿದ್ದರು. ಅವರಲ್ಲಿ ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ಸಂಬಂಧ 5 ಮಂದಿ ವಿದೇಶಿ ಮಹಿಳೆಯರನ್ನೂ ಬಂಧಿಸಲಾಗಿತ್ತು. ಈ ಐವರನ್ನು ಅವರ ದೇಶನ್ನೆ ವಾಪಸ್‍ ಕಳುಹಿಸುವ …

Read More »

ರಾಜಧಾನಿಯಲ್ಲಿ ಮುಂದಿನ ಆಗಸ್ಟ್‌ 3೦ ರ ವರೆಗೆ ನೈಟ್‌ ಕರ್ಫ್ಯೂ ಮುಂದುವರಿಕೆ

ಬೆಂಗಳೂರು: ನಗರದಲ್ಲಿ ಆಗಸ್ಟ್ 30 ರ ವರೆಗೆ ನೈಟ್‌ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು (ಆಗಸ್ಟ್ 17) ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದಂತ ರಾತ್ರಿ ಕರ್ಫ್ಯೂ ನಿರ್ಬಂಧ ವಿಧಿಸಲಾಗಿತ್ತು. ಜೊತೆಗೆ, ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಹಾಕಲಾಗಿತ್ತು. ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಮೆಟ್ರೋ ಸಂಚಾರ …

Read More »

ಮನೆ ಮನೆ ಆರೋಗ್ಯ ಸಮೀಕ್ಷೆಗೆ ಸಚಿವ ಅಶೋಕ್ ಚಾಲನೆ: ಆರೋಗ್ಯ ಪರಿಶೀಲನೆಗೆ ಇನ್ಮುಂದೆ ಮನೆ ಬಾಗಿಲಿಗೇ ಬರುತ್ತಾರೆ ವೈದ್ಯರು!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸುವ ಗುರಿಯೊಂದಿಗೆ ದೇಶದಲ್ಲೇ ಮೊದಲ ಬಾರಿಗೆ ‘ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ’ ಎಂಬ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಸೋಮವಾರ ಕಂದಾಯ ಸಚಿವ ಆರ್. ಅಶೋಕ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೊರೋನಾ ನಿಯಂತ್ರಣ ಸಂಬಂಧ ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಗರದ 29 ಲಕ್ಷ ಮನೆಗಳಿಗೂ ಭೇಟಿ …

Read More »

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ನೀಡಲು ಆರೋಗ್ಯ ಸಂಜೀವಿನಿ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ಯೋಜನೆ ಜಾರಿಗೆ ತರಲಾಗುತ್ತಿದೆ. ನಿಯಮಗಳನ್ನು ರೂಪಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿರ್ದೇಶಕರಿಗೆ ಸರ್ಕಾರ ಆದೇಶಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳು, ಅನುದಾನ ಪಡೆಯುವ ಆರೋಗ್ಯ ಸಂಸ್ಥೆ ಮತ್ತು ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳು, ಆಯುಷ್ ಇಲಾಖೆಗೆ …

Read More »

ಕೊರೋನಾದಿಂದ ಚೇತರಿಸಿಕೊಂಡವರಿಗೆ ಶಾಕ್; ಶ್ವಾಸಕೋಶಕ್ಕೆ ಹಾನಿಯಾಗಿರಬಹುದು, ಟಿಬಿ ಪರೀಕ್ಷೆಗೆ ಸಲಹೆ

ಬೆಂಗಳೂರು: ಮಾರಕ ಕೊರೋನಾ ಸೋಂಕಿನಿಂದ ಗುಣಮುಖರಾದವರು ಟಿಬಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಆಗಸ್ಟ್ 31 ರವರೆಗೆ ಕ್ಷಯರೋಗ ಪತ್ತೆ ಆಂದೋಲನ ನಡೆಯಲಿದ್ದು, ವಿಧಾನಸೌಧದಲ್ಲಿ ಚಾಲನೆ ನೀಡಿದ ಸಚಿವರು, ಕೊರೋನಾ ಸೋಂಕಿನಿಂದ ಗುಣಮುಖರಾದವರು ಕ್ಷಯರೋಗ ಪತ್ತೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸೋಂಕಿನಿಂದ ಶ್ವಾಸಕೋಶಕ್ಕೆ ಹಾನಿಯಾಗಿರಬಹುದು. ರಾಜ್ಯದಲ್ಲಿ 28 ಲಕ್ಷಕ್ಕೂ ಅಧಿಕ ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಅವರಲ್ಲಿ ಶ್ವಾಸಕೋಶಕ್ಕೆ ಹಾನಿ ಉಂಟಾಗಿರುವ ಸಾಧ್ಯತೆಯಿರುತ್ತದೆ. ಕ್ಷಯರೋಗ ಶ್ವಾಸಕೋಶಕ್ಕೆ ಹಾನಿ …

Read More »

ರಾಜ್ಯದಲ್ಲಿ ತೈಲದರ ಇಳಿಕೆ ಪ್ರಸ್ತಾಪ ಇಲ್ಲ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದಿದ್ದಾರೆ.   ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡು ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ಮಾಡಿದಂತೆ ರಾಜ್ಯದಲ್ಲೂ ಕಡಿತ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದರು.   ಇಂದು 3 ಇಲಾಖೆಗಳ ಪದಾಧಿಕಾರಿಗಳ ಸಭೆ ಮಾಡುತ್ತೇನೆ. …

Read More »

ರಾಜ್ಯದಲ್ಲಿ 3,000 ವೈದ್ಯರು, 7,000 ನರ್ಸ್, 7,000 ಗ್ರೂಪ್ ಡಿ. ಸಿಬ್ಬಂದಿ ನೇಮಕ : ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: 3ನೇ ಅಲೆ ಮಾತ್ರವಲ್ಲ ಭವಿಷ್ಯದಲ್ಲಿ ಯಾವುದೇ ರೀತಿಯ ಆರೋಗ್ಯ ತುರ್ತು ಸಂದರ್ಭ ಬಂದರೂ ಸಶಕ್ತವಾಗಿ ಎದುರಿಸಲು ಸಾಧ್ಯವಾಗುವಂತೆ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಮತ್ತು ಪ್ರಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಮೂಲಭೂತ ಸೌಲಭ್ಯಗಳನ್ನು ಆಮೂಲಾಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದರು. ಇದೇ ನಿಟ್ಟಿನಲ್ಲಿ 3,000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇದರಲ್ಲಿ 2,000 ಮಂದಿ ತಜ್ಞ …

Read More »

ಸಚಿವರ ಸರ್ಕಾರಿ ಕಾರಿನಲ್ಲಿ ಉಲ್ಟಾ ಹಾರಿದ ರಾಷ್ಟ್ರ ಧ್ವಜ

ಬೆಂಗಳೂರು: ಕೇಂದ್ರ ರಾಜ್ಯ ಖಾತೆ ಸಚಿವ ನಾರಾಯಣ ಸ್ವಾಮಿ ಅವರ ಕಾರಿನಲ್ಲಿ ರಾಷ್ಟ್ರ ಧ್ವಜ ತಲೆ ಕೆಳಗಾಗಿ (ಉಲ್ಟಾ) ಹಾರಿದ ಘಟನೆ ನಡೆದಿದೆ. ಇಲ್ಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಗೂಟದ ಕಾರಿನಲ್ಲಿ ಉಲ್ಟಾ ಧ್ವಜ ಹಾರಾಡಿದೆ. ಕೇಸರಿ, ಬಿಳಿ, ಹಸಿರು ಬದಲಾಗಿ. ಹಸಿರು, ಬಿಳಿ, ಕೇಸರಿ ಧ್ವಜ ಹಾರಾಡಿದೆ. ಆದರೆ, ಈ ಯಡವಟ್ಟು ನಡೆದ ವೇಳೆ ಸಚಿವರು ಆ ಕಾರಿನಲ್ಲಿ ಇರಲಿಲ್ಲ. ಖಾಸಗಿ ಕಾರಿನಲ್ಲಿ ಸಚಿವ ನಾರಾಯಣ ಸ್ವಾಮಿ ಆಗಮಿಸಿದರು. …

Read More »

ಸಿಎಂ ಭೇಟಿ ವೇಳೆ ಮೊಬೈಲ್ ನಿಷೇಧ..!

ಬೆಂಗಳೂರು,ಆ.16- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗುವ ಸಾರ್ವಜನಿಕರ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆರ್‍ಟಿನಗರದಲ್ಲಿರುವ ಅವರ ನಿವಾಸದ ಮುಂದೆ ಫಲಕವನ್ನು ಹಾಕಲಾಗಿದ್ದು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವ ಸಾರ್ವಜನಿಕರು ಮೊಬೈಲ್‍ಗಳನ್ನು ಬಳಸಬಾರದೆಂದು ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ. ಒಂದು ವೇಳೆ ಸಾರ್ವಜನಿಕರು ಮೊಬೈಲ್ ಬಳಕೆ ಮಾಡಿದರೆ ಅಂಥವರಿಗೆ ಭೇಟಿಗೆ ಅವಕಾಶವನ್ನೇ ಕೊಡುವುದಿಲ್ಲ ಎಂದು ಎಚ್ಚರಿಸಲಾಗಿದೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವವರು ತಮ್ಮ ಕೆಲಸ ಮುಗಿಸಿಕೊಂಡು ಹೋಗುವ ಬದಲು ಸೆಲ್ಫಿಗೆ ಮುಗಿಬೀಳುವುದು, …

Read More »