ಬೆಂಗಳೂರು : ಹಬ್ಬಗಳ ಋತುವಿನಲ್ಲಿ ಅಡುಗೆ ಎಣ್ಣೆಗಳ ಬೆಲೆಯನ್ನು ನಿಯಂತ್ರಣದಲ್ಲಿ ಇರಿಸುವುದಕ್ಕಾಗಿ ಕೇಂದ್ರ ಸರಕಾರವು ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳ ಆಮದು ಸುಂಕವನ್ನು ಶೇ. 2.11ರಷ್ಟು ಕಡಿಮೆ ಮಾಡಿದ ಬೆನ್ನಿಗೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ಮೋದಿ ಸರ್ಕಾರ ಹಬ್ಬಕ್ಕೆ ಜನಸಾಮಾನ್ಯರಿಗೆ ಕೊಟ್ಟ ಬಹುದೊಡ್ಡ ಕೊಡುಗೆಯಿದು ಎಂದು ಹೇಳಿದ್ದಾರೆ. ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಕೇಂದ್ರ ಸರ್ಕಾರವನ್ನು ವ್ಯಂಗ್ಯ ಧ್ವನಿಯಲ್ಲಿ ಟೀಕೆ ಮಾಡಿದ ಗುಂಡೂರಾವ್, ಕೇಂದ್ರ ಸರ್ಕಾರ ಅಡುಗೆ …
Read More »ಒಂದೇ ಸಮುದಾಯದ 70 ಮಂದಿಗೆ ಎಫ್ಡಿಎ ಅರ್ಹತೆ?; ಕೆಪಿಎಸ್ಸಿಯಲ್ಲಿ ಮತ್ತೆ ಅಕ್ರಮ ಶಂಕೆ, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದವರಿಗೆ ಜಾಕ್ಪಾಟ್
ಬೆಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಸುದ್ದಿಯಲ್ಲಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹುದ್ದೆಗಳ ಪರೀಕ್ಷೆಯ ಅರ್ಹತಾ ಪಟ್ಟಿಯನ್ನು ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ಬಿಡುಗಡೆ ಮಾಡಿದ್ದು, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಬಹುಸಂಖ್ಯೆಯಲ್ಲಿ ಆಯ್ಕೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೆಪಿಎಸ್ಸಿ ಬಿಡುಗಡೆ ಮಾಡಿದ ಎಫ್ಡಿಎ ಅರ್ಹತಾ ಪಟ್ಟಿಯಲ್ಲಿ 5241, 42, 43 ನೋಂದಣಿ ಸಂಖ್ಯೆಯಲ್ಲಿರುವ ಒಂದೇ ಸಮುದಾಯದ (ನಾಯ್್ಕ ಸುಮಾರು 70ಕ್ಕೂ ಹೆಚ್ಚು ಅಭ್ಯರ್ಥಿಗಳಿದ್ದಾರೆ. ಈ ಎಲ್ಲ ಅಭ್ಯರ್ಥಿಗಳು ಒಂದೇ …
Read More »ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಧಿವೇಶನದ ಅಗ್ನಿ ಪರೀಕ್ಷೆ
ಬೆಂಗಳೂರು: ಮುಖ್ಯಮಂತ್ರಿಯಾಗಿ ನಲವತ್ತೈದು ದಿನಗಳ ಆಡಳಿತ ನಿರ್ವಹಣೆಯಲ್ಲಿ ಸೈ ಎನಿಸಿಕೊಂಡಿರುವ ಬಸವರಾಜ ಬೊಮ್ಮಾಯಿ ಅವರಿಗೆ ವಿಧಾನಮಂಡಲ ಅಧಿವೇಶನ ಅಗ್ನಿಪರೀಕ್ಷೆಯಾಗಲಿದೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭ ವಿಪಕ್ಷಗಳು ಸರಕಾರದ ವಿರುದ್ಧ ಮುಗಿಬಿದ್ದಾಗ ತಕ್ಕ ತಿರುಗೇಟು ನೀಡುವ ಮೂಲಕ ಸಿಎಂಗೆ ಬೆಂಬಲ ನೀಡುತ್ತಿದ್ದ ಬಸವರಾಜ ಬೊಮ್ಮಾಯಿ ಅವರೀಗ ಸವಾಲುಗಳಿಗೆ ಸ್ವತಃ ಎದೆಯೊಡ್ಡಬೇಕಾಗಿದೆ. ರಾಜ್ಯ ರಾಜಕಾರಣದಲ್ಲಿ ಮೂರು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ಮತ್ತು ಉಭಯ ಸದನಗಳಲ್ಲೂ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಬಸವರಾಜ ಬೊಮ್ಮಾಯಿ ಅವರಿಗೆ …
Read More »ಅಕ್ಟೋಬರ್-ನವೆಂಬರ್ ನಲ್ಲಿ ಕೋವಿಡ್-19 ಮೂರನೇ ಅಲೆ: ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್-19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ಹಬ್ಬಗಳ ಸಾಲುಗಳು ಈ ತಿಂಗಳಲ್ಲಿ ಬರುವುದರಿಂದ ಇತ್ತೀಚೆಗೆ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಠಿಣವಾಗಿ ಜಾರಿಗೊಳಿಸಿ ಪಾಲಿಸಬೇಕೆಂದು ಟಿಎಸಿ ಹೇಳಿದೆ. “ಒಂದು ವೇಳೆ ಮಾರ್ಗಸೂಚಿಗಳನ್ನು ಪಾಲಿಸದೇ ಇದ್ದಲ್ಲಿ ಅವ್ಯವಸ್ಥೆ ಉಂಟಾಗಲಿದೆ. ಈ ಹಂತದಲ್ಲಿ ಮಾರ್ಗಸೂಚಿಗಳನ್ನು ಪಾಲಿಸುವುದು ಬಹಳ ಮುಖ್ಯ. ರಾಜ್ಯದಲ್ಲಿ ಈಗ ಕೋವಿಡ್-19 ಸೋಂಕು ಪ್ರಸರಣ ಸಂಖ್ಯೆ …
Read More »ಪುರಾತನ ಹಿಂದೂ ದೇವಾಲಯಗಳ ತೆರವು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು: ಮೈಸೂರಿನಲ್ಲಿ ಪುರಾತನ ಹಿಂದೂ ದೇವಾಲಯಗಳನ್ನು ತೆರವುಗೊಳಿಸಲಾಗಿದ್ದು, ಈ ವಿಚಾರವಾಗಿ ಕಿಡಿಕಾರಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿಂದೂ ಭಾವನೆಗಳ ವಿರುದ್ಧದ ಕೃತ್ಯಕ್ಕೆ ಸರ್ಕಾರವೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂ ದೇವಾಲಯಗಳನ್ನು ಕೆಡವಿದ್ದು ಖಂಡನೀಯ. ಇದು ಹಿಂದೂ ಭಾವನೆಗಳಿಗೆ ನೋವುಂಟುಮಾಡಿದೆ. ಇದಕ್ಕೆ ಸರ್ಕಾರವೇ ಹೊಣೆ. ತೆರವುಗೊಳಿಸಿದ ದೇವಾಲಯವನ್ನು ಪುನರ್ ನಿರ್ಮಾಣಕ್ಕೆ ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ನಂಜನಗೂಡಿನ …
Read More »ವಿಧಾನ ಪರಿಷತ್ ಸಭಾ ನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಾಮ ನಿರ್ದೇಶನ
ಬೆಂಗಳೂರು: ವಿಧಾನ ಪರಿಷತ್ ಸಭಾ ನಾಯಕರಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನ ಪರಿಷತ್ ಸಭಾಪತಿಗೆ ಬಸವರಾಜ ಹೊರಟ್ಟಿ ಅವರಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ಜಾತಿಗಣತಿ ವರದಿ ಬಿಡುಗಡೆಗೆ ಸರ್ಕಾರ ಮುಕ್ತ ಮನಸ್ಸಿನಿಂದ ಸಿದ್ಧವಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಾತಿಗಣತಿ ವರದಿಗೆ 170 ಕೋಟಿ ರೂಪಾಯಿ ಖರ್ಚಾಗಿದ್ದು, …
Read More »2 ಕೆಎಸ್ಆರ್ಟಿಸಿ ಬಸ್, 1 ವಾಯವ್ಯ ಸಾರಿಗೆ ಬಸ್ ನಡುವೆ ಅಪಘಾತವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು: ಮೂರು ಸರ್ಕಾರಿ ಬಸ್ಗಳು ಡಿಕ್ಕಿ ಹೊಡೆದು, ಬಸ್ಗಳಲ್ಲಿದ್ದ ಪ್ರಯಾಣಿಕರಿಗೆ ಗಾಯವಾದ ಘಟನೆ ಬೆಂಗಳೂರು ನಗರದ ರಾಜ್ಕುಮಾರ್ ರಸ್ತೆಯಲ್ಲಿ ಸಂಭವಿಸಿದೆ. 2 ಕೆಎಸ್ಆರ್ಟಿಸಿ ಬಸ್, 1 ವಾಯವ್ಯ ಸಾರಿಗೆ ಬಸ್ ನಡುವೆ ಅಪಘಾತವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲಕೋಟೆ: ಚಿಕ್ಕಪಡಸಲಗಿ ಸೇತುವೆಯ ಮೇಲೆ ಕಾರು ಅಪಘಾತ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಸೇತುವೆ ಮೇಲೆ ಕಾರು ಅಪಘಾತ ಸಂಭವಿಸಿದೆ. ತಡೆಗೋಡೆ ಮಧ್ಯೆ ಸಿಲುಕಿ ಕಾರು ನೇತಾಡುತ್ತಿದ್ದು, ಕಾರಿನ …
Read More »ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ 4 ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು. ಅದರಂತೆ ರಾಜ್ಯದಾದ್ಯಂತ ನಗರ …
Read More »ಕೇಂದ್ರ ಸರಕಾರಕ್ಕೆ ಜನರ ಕಷ್ಟ ಅರ್ಥವಾಗುತ್ತಿಲ್ಲ: ಖರ್ಗೆ
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಸಂಸತ್ತಿನ ಒಳಗೆ ಮತ್ತು ಹೊರಗೆ ನಾವು ಹೋರಾಟ ಮಾಡಿದರೂ ಆಡಳಿತಾರೂಢ ಬಿಜೆಪಿಗೆ ಸಮಸ್ಯೆ ಯಾಕೆ ಅರ್ಥವಾಗುತ್ತಿಲ್ಲವೋ ಗೊತ್ತಿಲ್ಲ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಲೆ ಏರಿಕೆ ಬಗ್ಗೆ ಸೈಕಲ್ ರ್‍ಯಾಲಿ ನಡೆಸಿದ್ದೇವೆ. ಪೆಟ್ರೋಲ್ ಬಂಕ್‌ಗಳ ಮುಂದೆ ಧರಣಿ ಕೂತಿದ್ದೇವೆ, ರಾಜಭವನ ಚಲೋ ಮಾಡಿದ್ದೇವೆ. ಇನ್ನೇನು …
Read More »ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯದಲ್ಲಿ 1.72 ಲಕ್ಷ `BPL’ ಕಾರ್ಡ್ ರದ್ದು
ಬೆಂಗಳೂರು : ಅನರ್ಹ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ತೆರಿಗೆ ಪಾವತಿದಾರರಾಗಿದ್ದರೂ ಸುಳ್ಳು ದಾಖಲೆ ನೀಡಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಪಡೆದಿದ್ದ 1.72 ಲಕ್ಷ ಪಡಿತರ ಚೀಟಿಗಳನ್ನು ಆಹಾರ ಇಲಾಖೆ ರದ್ದು ಮಾಡಿದೆ. ಆಹಾರ ಇಲಾಖೆಯು 2021 ರ ಜನವರಿ 1 ರಿಂದ ಸೆ. 1 ರವರೆಗೆ 1,69,400 ಬಿಪಿಎಲ್ ಕಾರ್ಡ್ ಗಳು, 3080 ಅಂತ್ಯೋದಯ ಪಡಿತರ ಚೀಟಿ ಸೇರಿದಂತೆ ಒಟ್ಟು 1,72,480 ಪಡಿತರಚೀಟಿ …
Read More »