Breaking News

ಬೆಂಗಳೂರು

ಮೈಸೂರು ಅರಮನೆಯಲ್ಲಿ ಫೋಟೋ ತೆಗೆಯಲು ಅವಕಾಶ: ಮಾಧುಸ್ವಾಮಿ

ಬೆಂಗಳೂರು: ಮೈಸೂರು ಅರಮನೆ ವ್ಯಾಪ್ತಿಯಲ್ಲಿ ಫ್ಲ್ಯಾಶ್‌ ಬಳಸದೆ ಫೋಟೊ ತೆಗೆಯಲು ಅವಕಾಶ ಇದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಸಚಿವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2016ರಲ್ಲಿ ಭಾರೀ ಸುದ್ದಿಯಾಗಿದ್ದ ಮೈಸೂರು ಅರಮನೆ ಒಳಾಂಗಣ ಮತ್ತು ಹೊರಾಂಗಣದಲ್ಲಿ ಚಿತ್ರೀಕರಣ ಪ್ರಕರಣವನ್ನು ಸಂಪುಟ ಸಭೆ ಕೈಬಿಟ್ಟಿದೆ. ಚಿತ್ರೀಕರಣಕ್ಕೆ ಅನುಮತಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್‌. ಸುಬ್ರಹ್ಮಣ್ಯ ವಿರುದ್ಧ ಉಪ …

Read More »

ಕೋವಿಡ್ ಲಸಿಕೆ ಬೂಸ್ಟರ್ ಡೋಸ್ ಕುರಿತು ಚರ್ಚೆಗೆ ಎಡೆಮಾಡಿಕೊಟ್ಟ ಬಿಬಿಎಂಪಿ ಸೆರೋಸರ್ವೆ!

ಬೆಂಗಳೂರು: 1,800 ನಾಗರೀಕರ ಮೇಲೆ ಆರೋಗ್ಯ ಇಲಾಖೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗಷ್ಟೇ ನಡೆಸಿದ ಸೆರೋಸರ್ವೇಯೊಂದು ತಜ್ಞರಲ್ಲಿ ಚರ್ಚೆಗಳನ್ನು ಹುಟ್ಟುಹಾಕುವಂತೆ ಮಾಡಿದೆ. ವೈರಸ್ ವಿರುದ್ಧ ಹೋರಾಡಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಎರಡು ಡೋಸ್ ಲಸಿಕೆ ಪಡೆದುಕೊಂಡ ಬಳಿಕ ಬೂಸ್ಟರ್ ಡೋಸ್ ನೀಡಬೇಕೆಂದು ಕೆಲ ತಜ್ಞರು ಹೇಳುತ್ತಿದ್ದಾರೆ. ಆದರೆ, ಇನ್ನೂ ಕೆಲವರು, ಬೂಸ್ಟರ್ ಡೋಸ್ ಗಳ ಕುರಿತು ಸೂಕ್ತ ರೀತಿಯ ಅಧ್ಯಯನ ನಡೆಸದ ಹೊರತು ಅದನ್ನು ನೀಡಬಾರದು ಎಂದು …

Read More »

ಮದ್ಯ ಕುಡಿಸಿ ಮಹಿಳಾ ಟೆಕ್ಕಿ ಮೇಲೆ ನೈಜೀರಿಯಾ ಪ್ರಜೆಗಳಿಂದ ಅತ್ಯಾಚಾರ – ಇಬ್ಬರ ಬಂಧನ

ಬೆಂಗಳೂರು, ಸೆ 04 : ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜೀರಿಯಾ ಪ್ರಜೆಗಳಿಬ್ಬರು ಬಂಧಿಸಲಾಗಿದೆ. ಮಹಿಳಾ ಟೆಕ್ಕಿ ಈ ಬಗ್ಗೆ ಬಾಣಸವಾಡಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದು, ನೈಜೀರಿಯಾ ಪ್ರಜೆಗಳಾದ ಬಾಣಸವಾಡಿ ನಿವಾಸಿ ಟೋನಿ (35) ಹಾಗೂ ಉಬಾಕಾ (36) ಇವರಿಬ್ಬರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಡಾ. ಎಸ್‌.ಡಿ. ಶರಣಪ್ಪ ಮಾಹಿತಿ ನೀಡಿದ್ದಾರೆ. ಸಂತ್ರಸ್ತ ಯುವತಿ ಮೂಲತಃ ಕಲ್ಬುರ್ಗಿ ಜಿಲ್ಲೆಯವಳಾಗಿದ್ದು, ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್‌ವೇರ್‌ …

Read More »

ಅಚ್ಚರಿ ಬೆಳವಣಿಗೆ -ಸಿದ್ದರಾಮಯ್ಯರ ಭೇಟಿಯಾದ ಶಿಕ್ಷಣ ಸಚಿವ ಬಿಸಿ ನಾಗೇಶ್

ಬೆಂಗಳೂರು: ಮಹತ್ವದ ಬೆಳವಣಿಗೆ ಒಂದರಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ಮಾಡಿದ್ದಾರೆ. ಶಿಕ್ಷಣ ಸಚಿವರ ಈ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭೇಟಿ ಮಾಡಿದ ಬಿಸಿ ನಾಗೇಶ್, ಸಿದ್ದರಾಮಯ್ಯರ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಕೆಲವು ಹೊತ್ತುಗಳ ಕಾಲ ಇತ್ತೀಚೆಗಿನ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಿ.ಸಿ.ನಾಗೇಶ್​, ಇದೊಂದು ಸೌಜನ್ಯದ ಭೇಟಿ ಅಂತಾ ತಿಳಿಸಿದ್ದಾರೆ.

Read More »

ಕೋವಿಡ್ ಲಸಿಕೆ: ರಾಜ್ಯದ 9 ಜಿಲ್ಲೆಗಳಲ್ಲಿ ಶೇ 50ಕ್ಕಿಂತ ಕಡಿಮೆ ಸಾಧನೆ

ಬೆಂಗಳೂರು: ಕೋವಿಡ್ ಲಸಿಕೆ ವಿತರಣೆಯಲ್ಲಿ ರಾಜ್ಯದ 9 ಜಿಲ್ಲೆಗಳು ಹಿಂದೆ ಬಿದ್ದಿದ್ದು, ಲಸಿಕಾ ಅಭಿಯಾನ ಪ್ರಾರಂಭವಾಗಿ ಏಳೂವರೆ ತಿಂಗಳು ಕಳೆದರೂ ಶೇ 50ರಷ್ಟ ಗುರಿ ಸಾಧನೆ ಸಾಕಾರವಾಗಿಲ್ಲ. ಕಳೆದ ಜ.16ರಿಂದ ರಾಜ್ಯದಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾಗಿದೆ. ಸಂಭಾವ್ಯ ಕೋವಿಡ್ ಮೂರನೇ ಅಲೆಯ ಮುನ್ನೆಚ್ಚರಿಕಾ ಕ್ರಮವಾಗಿ ಎರಡು ವಾರಗಳಿಂದ ಲಸಿಕೆ ವಿತರಣೆಗೆ ವೇಗ ನೀಡಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪ್ರತಿ ಬುಧವಾರ 15 ಲಕ್ಷ ಹಾಗೂ ಉಳಿದ ದಿನ 6 ಲಕ್ಷ ಡೋಸ್‌ಗಳನ್ನು ವಿತರಿಸುವ ಗುರಿಯನ್ನು …

Read More »

ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ : ಸಿಎಂ ಬೊಮ್ಮಾಯಿ

ದಾವಣಗೆರೆ : ರೈತ ಮಕ್ಕಳಿಗೆ ಶಿಷ್ಯವೇತನ, ವಿವಿಧ ಸಾಮಾಜಿಕ ಭದ್ರತಾ ಮಾಸಾಶನ ಹೆಚ್ಚಳ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ ಎಂದು ತೋರಿಸಿಕೊಟ್ಟಿದ್ದೇವೆ ಎಮದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಜಿ.ಎಂ.ಐ.ಟಿ. ಕಾಲೇಜು ಆವರಣದಲ್ಲಿ ಇಂದು (ಗುರುವಾರ, ಸೆಪ್ಟೆಂಬರ್ 2) ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದ ಅವರು, …

Read More »

ಬೆಲೆ ಏರಿಕೆಯನ್ನು ಸಮರ್ಥನೆ ಮಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಬೆಂಗಳೂರು: ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ತಾತ್ಕಾಲಿಕ ಅಷ್ಟೇ. ಮುಂದಿನ ದಿನಗಳಲ್ಲಿ ಬೆಲೆ ಕಡಿಮೆಯಾಗಲಿದೆ. ಟೊಮೆಟೊ, ಪೆಟ್ರೊಲ್, ಡಿಸೆಲ್, ಈರುಳ್ಳಿ ಒಂದು ವಸ್ತುವಿನ ಬೆಲೆ ಮೇಲೆ ಮಾತ್ರ ಪ್ರಶ್ನೆ ಮಾಡಿದರೆ ನಾನು ಉತ್ತರ ನೀಡಲು ಆಗುವುದಿಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಮೋದಿ ಸರ್ಕಾರ ಅನೇಕ ಯೋಜನೆ ಮಾಡಿದೆ. ರೈತರ ಖಾತೆಗಳಿಗೆ ಆರು ಸಾವಿರ ರೂ. ಹಾಕುತ್ತಿದ್ದಾರೆ. ಆಯುಷ್ಮಾನ್ ಭಾರತ …

Read More »

ಎತ್ತಿನ ಬಂಡಿ ಓಟ: ‘ಸುಪ್ರೀಂ’ ಆದೇಶ ಪಾಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಸುಪ್ರೀಂಕೋರ್ಟ್‌ ವಿಧಿಸಿರುವ ಷರತ್ತುಗಳ ಪಾಲನೆಯನ್ನು ಖಾತರಿಪಡಿಸಿಕೊಂಡ ಬಳಿಕವೇ ಎತ್ತಿನ ಬಂಡಿಗಳ ಓಟದ ಸ್ಪರ್ಧೆಗೆ ಅನುಮತಿ ನೀಡುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮೈಸೂರಿನ ಪೀಪಲ್‌ ಫಾರ್‌ ಅನಿಮಲ್‌ ಎಂಬ ಸರ್ಕಾರೇತರ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಗೊಳಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ‘ಪ್ರಾಣಿಗಳ ಹಿಂಸೆ ತಡೆ ಕಾಯ್ದೆ-2017 (ಎರಡನೇ ತಿದ್ದುಪಡಿ ಕಾಯ್ದೆ)ಯ ಪ್ರಕಾರ, ಎತ್ತಿನ ಬಂಡಿ ಓಟದ ಸ್ಪರ್ಧೆಗೆ …

Read More »

ಸೈಟ್, ಮನೆ, ಜಮೀನು, ಫ್ಲ್ಯಾಟ್ ಖರೀದಿಸುವವರಿಗೆ ಸಿಹಿ ಸುದ್ದಿ: ಮಾರ್ಗಸೂಚಿ ದರ ಕಡಿತ ಸಾಧ್ಯತೆ

ಬೆಂಗಳೂರು: ನಿವೇಶನ, ಜಮೀನು, ಫ್ಲಾಟ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯ ಸರ್ಕಾರ ಭೂಮಿ ಮಾರ್ಗಸೂಚಿ ದರ ಕಡಿತಗೊಳಿಸಲು ಮುಂದಾಗಿದೆ. ಕೃಷಿ ಜಮೀನು, ಕೃಷಿಯೇತರ ಜಮೀನು, ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಮಳಿಗೆಗಳ ಮಾರಾಟ ಮತ್ತು ಖರೀದಿಸುವಾಗ ಮಾರ್ಗಸೂಚಿ ದರ ಹೆಚ್ಚಾಗಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ನೋಂದಣಿ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿ ದರ ಕಡಿತಗೊಳಿಸಿ ರಿಯಲ್ ಎಸ್ಟೇಟ್ ಉದ್ಯಮ ಚೇತರಿಕೆಗೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಕೊರೋನಾದಿಂದಾಗಿ ನೆಲಕಚ್ಚಿರುವ ರಿಯಲ್ ಎಸ್ಟೇಟ್ …

Read More »

ಜೆಡಿಎಸ್‌ದ್ದು ಹಣದ ಮೇಲೆ ರಾಜಕಾರಣ ಮಾಡುವ ಸಂಸ್ಕೃತಿ: ನಳಿನ್‌ ಕುಮಾರ್‌ ಕಟೀಲ್‌

ಮೈಸೂರು: ಜೆಡಿಎಸ್ ಪಕ್ಷದ್ದು ಹಣದ ಮೇಲೆ ರಾಜಕಾರಣ ಮಾಡುವ ಸಂಸ್ಕೃತಿ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಬುಧವಾರ ಇಲ್ಲಿ ತಿರುಗೇಟು ನೀಡಿದರು. ‘ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಹಣ ವಸೂಲಿಗಾಗಿ ಆಗಾಗ್ಗೆ ರಾಜ್ಯಕ್ಕೆ ಬರುತ್ತಿರುತ್ತಾರೆ’ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ಅವರು ತಿರುಗೇಟು ನೀಡಿದ್ದಾರೆ. ‘ತಮ್ಮ ಅನುಭವವನ್ನು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ. ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ. ರಾಜ್ಯ, ದೇಶ ಆಳಿದ ಇವರ ನಾಲಿಗೆ ಸರಿಯಾಗಿದ್ದಿದ್ದರೆ …

Read More »