Breaking News

ಬೆಂಗಳೂರು

ಕಾಡ್ಗಿಚ್ಚು ನಿಯಂತ್ರಣಕ್ಕೆ ಪಂಚಾಯ್ತಿ ಅಧಿಕಾರಿಗಳ ಜೊತೆ ಸಭೆ ಈಶ್ವರ ಬಿ ಖಂಡ್ರೆ ನಡೆಸಲು ಸೂಚನೆ

ಬೆಂಗಳೂರು : ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಅರಣ್ಯ ಭವನದಲ್ಲಿಂದು ವಿಡಿಯೋ ಕಾನ್ಘರೆನ್ಸ್‌ ಮೂಲಕ ಸಭೆ ನಡೆಸಿದ ಅವರು, ಕಳೆದ ವರ್ಷ ಸುರಿದ ಉತ್ತಮ ಮಳೆಯ ನಡುವೆಯೂ ಈ ಬಾರಿ ಬಿಸಿಲು ಹೆಚ್ಚಳವಾಗಿದ್ದು, ಕಾಡ್ಗಿಚ್ಚಿನ ಅಪಾಯ ಎದುರಿಸಲು ಸರ್ವಸನ್ನದ್ಧರಾಗಿರುವಂತೆ ಸೂಚನೆ ನೀಡಿದರು. …

Read More »

ಟ್ಯಾಂಕರ್ ನಲ್ಲಿ ನೆರೆ ರಾಜ್ಯದ ತ್ಯಾಜ್ಯ: ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ನೆರೆ ರಾಜ್ಯದಿಂದ ಅಪಾಯಕಾರಿ ದ್ರವ ತ್ಯಾಜ್ಯವನ್ನು ಟ್ಯಾಂಕರ್ ಗಳಲ್ಲಿ ತದಂದು ಮಂಗಳೂರಿನ ಚರಂಡಿ ಮತ್ತು ರಾಜಕಾಲುವೆಗೆ ಸುರಿಯಲಾಗುತ್ತಿದೆ ಎಂಬ ಮಾಧ್ಯಮ ವರದಿಗೆ ಸ್ಪಂದಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಈ ಬಗ್ಗೆ ಜಲ ಕಾಯಿದೆ ಅಡಿ ಪ್ರಕರಣ ದಾಖಲಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿಂದು ವರದಿಗಾರರೊಂದಿಗೆ ಮಾತನಾಡಿದ ಅವರು, ಚರಂಡಿ, ರಾಜಕಾಲುವೆಗಳಿಗೆ ಸುರಿದ ದ್ರವ ತ್ಯಾಜ್ಯ, ನದಿ, …

Read More »

ಪ್ರೊ. ಮಾಧವ ಗಾಡ್ಗೀಳ್ ಆತ್ಮಕಥೆ ಏರುಘಟ್ಟದ ನಡಿಗೆ ಬಿಡುಗಡೆ ; ಈಶ್ವರ ಖಂಡ್ರೆ

ಬೆಂಗಳೂರು : ಅದ್ಭುತ ಜೀವವೈವಿಧ್ಯತೆಯ ತಾಣ ಹಾಗೂ ಹಲವು ಪ್ರಮುಖ ನದಿಗಳ ಮೂಲವಾದ ಪಶ್ಚಿಮಘಟ್ಟಗಳ ಮಹತ್ವದ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಚಿತ್ರಕಲಾ ಪರಿಷತ್ತಿನಲ್ಲಿಂದು ಪ್ರೊ. ಮಾಧವ ಗಾಡ್ಗೀಳ್ ಅವರ ಆತ್ಮಕತೆ A Walk up the Hill ನ ಕನ್ನಡ ಕೃತಿ ‘ಏರುಘಟ್ಟದ ನಡಿಗೆ’ ಬಿಡುಗಡೆ ಮಾಡಿ ಮಾತನಾಡಿದ ಅವರು, …

Read More »

ಹುಸ್ಕೂರು ಗೇಟ್‌ನಿಂದ ಹೆಬ್ಬಗೋಡಿ ಮೆಟ್ರೋ ಪಿಲ್ಲರ್‌ಗಳ ಮೇಲೆ ಚನ್ನಪಟ್ಟಣ ಕಲೆ ಬಿಂಬಿಸುವ ದೈನಂದಿನ ಸೆಲೆಬ್ರಿಟೀಸ್‌ಗಳ ಚಿತ್ರಣ.

ಬೆಂಗಳೂರು: ನಗರದ 50ಕ್ಕೂ ಹೆಚ್ಚು ಮೆಟ್ರೋ ಸ್ಥಂಭಗಳಿಗೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಬಯೋಕಾನ್‌ ಫೌಂಡೇಷನ್‌ನ ಸಿಎಸ್‌ಆರ್‌ ಅಡಿಯಲ್ಲಿ ಚಿತ್ರಿಸಲಾಗಿದೆ. ಹುಸ್ಕೂರು ಗೇಟ್‌ನಿಂದ ಹೆಬ್ಬಗೋಡಿ ಮೆಟ್ರೋ ನಿಲ್ದಾಣದವರೆಗೂ ಬರುವ 50 ಮೆಟ್ರೋ ಪಿಲ್ಲರ್‌ಗಳ ಮೇಲೆ ಚೆನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಸುಂದರವಾಗಿ ಚಿತ್ರಿಸಲಾಗಿದೆ. “ಪಿಲ್ಲರ್‌ ಆಫ್‌ ಬೆಂಗಳೂರು- ಪ್ರತಿನಿತ್ಯದ ಚಾಂಪಿಯನ್‌ಗಳ ಸಂಭ್ರಮಾಚರಣೆ” ಶೀರ್ಷಿಕೆಯಡಿ ಈ ಚಿತ್ತಾರ ಬಿಡಿಸಲಾಗಿದೆ. ನಮ್ಮ ದೈನಂದಿನ ಜೀವನದ ಚಾಪಿಂಯನ್ಸ್‌ಗಳಾದ ಹೂ ಮಾರಾಟಗಾರರು, ಎಲೆಕ್ಟ್ರೀಷಿಯನ್‌, ಟೈಲರ್‌ಗಳು, ಪ್ಲಂಬರ್ಸ್‌, …

Read More »

ತಮ್ಮ ಇಷ್ಟದ ಭಾಷೆಯಲ್ಲೇ ಮಾಹಿತಿ ಕೊಡುವ ಎಐ ಚಾಟ್ ಬಾಟ್ ; ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದರು. ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ …

Read More »

ಕರ್ನಾಟಕದಲ್ಲಿಂದು ಒಂದೇ ದಿನ 7 ಆತ್ಮಹತ್ಯೆ

ಬೆಂಗಳೂರು, (ಫೆಬ್ರವರಿ 03): ಕರ್ನಾಟಕದಲ್ಲಿಂದು (ಫೆಬ್ರವರಿ 03) ಒಂದೇ ದಿನ ಬರೋಬ್ಬರಿ ಏಳು ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ ಐದು ಜನರು ಸಾಲಬಾಧೆಯಿಂದ ಸಾವಿನ ಹಾದಿ ತುಳಿದಿದ್ದರೆ,. ಸಾಲಬಾಧೆಯಿಂದ ಚಿಕ್ಕಬಳ್ಳಾಪುರದಲ್ಲಿ ಇಬ್ಬರು, ಹಾಸನ-1 , ಬೀದರ್-1, ದಾವಣಗೆರೆ ಜಿಲ್ಲೆಯಲ್ಲಿ ಓರ್ವ ರೈತ ಸಾವಿನ ಹಾದಿ ತುಳಿದಿದ್ದಾರೆ. ಇನ್ನು ತುಮಕೂರಿನ ವ್ಯಕ್ತಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇನ್ನು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಗೆಳೆಯ ಮೋಸ ಮಾಡಿದ್ದಾನೆಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ …

Read More »

ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಖಂಡ್ರೆ ಸೂಚನೆ.

ಬೆಂಗಳೂರು : ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ …

Read More »

ಭವಿಷ್ಯ ಹೇಳುತ್ತಿರುವ ಆರ್. ಅಶೋಕ ಬಳಿ ನಾನು ಕೂಡ ಭವಿಷ್ಯ ಕೇಳಲು ಹೋಗಿ ಬರ್ತೇನೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ನನಗೂ ಜ್ಯೋತಿಷ್ಯ ಶಾಸ್ತ್ರದ ಚಟವಿದೆ. ಆರ್. ಅಶೋಕ ಬೋರ್ಡ ಹಾಕಿಕೊಂಡಿದ್ದಾರೆ. ಸ್ವಲ್ಪ ಸಮಯ ತೆಗೆದುಕೊಂಡು ತಾವೂ ಕೂಡ ಅವರ ಬಳಿ ಜ್ಯೋತಿಷ್ಯ ಕೇಳಿ ಬರುತ್ತೇನೆಂದು ಸಿಎಂ ಬದಲಾವಣೆ ಭವಿಷ್ಯ ನುಡಿದಿರುವ ವಿಪಕ್ಷ ನಾಯಕ ಆರ್. ಅಶೋಕ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದರು. ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ ನೀಡಿರುವ ಹೇಳಿಕೆ ಟಾಂಗ್ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನಗೂ ಜ್ಯೋತಿಷ್ಯ ಶಾಸ್ತ್ರದ …

Read More »

‘I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.

ಬೆಂಗಳೂರು:ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ಅವರು ತಮ್ಮ ಆತ್ಮೀಯ ಗೆಳೆಯ ಮುಡಾ ಮಾಜಿ ಅಧ್ಯಕ್ಷ ಸಿ.ಬಸವೇಗೌಡ ಅವರ ಮಗನ ಹೊಸ ಪಯಣಕ್ಕೆ ಶುಭಾಶಯ ಕೋರಿದ್ದಾರೆ. ಧ್ವಜ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದ ರವಿ ಗೌಡ I’m god ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಈ ಚಿತ್ರದಲ್ಲಿ ನಾಯಕನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಅವರು ಜವಾಬ್ದಾರಿ ಹೊತ್ತುಕೊಂಡಿದ್ದಾರೆ. …

Read More »

ಕುಸ್ತಿಕಥೆಯಲ್ಲಿ ರಾಜವರ್ಧನ್..ಫೆ.7ಕ್ಕೆ ‘ಗಜರಾಮ’ ರಿಲೀಸ್.

ಬೆಂಗಳೂರು: ಟ್ರೇಲರ್ ಹಾಗೂ ಹಾಡಿನ ಮೂಲಕ ಸದ್ದು ಮಾಡುತ್ತಿರುವ ಗಜರಾಮ ಸಿನಿಮಾ ಫೆಬ್ರವರಿ 7ಕ್ಕೆ ತೆರೆಗೆ ಬರ್ತಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ನಟನೆ ಮೂಲಕ ಗುರುತಿಸಿಕೊಂಡಿರುವ ಡಿಂಗ್ರಿ ನಾಗರಾಜ್ ಅವರ ಮಗ ರಾಜವರ್ಧನ್ ಹೀರೋ ಆಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಬಿಡುಗಡೆಗೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ಈ ಹಿನ್ನೆಲೆ ಚಿತ್ರತಂಡ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಆಯೋಜಿಸಿತ್ತು. ಈ ವೇಳೆ ನಟ ರಾಜವರ್ಧನ್ ಮಾತನಾಡಿ, …

Read More »