Breaking News

ಬೆಂಗಳೂರು

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

ಬೆಂಗಳೂರು: ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ  ಭೇಟಿ ನೀಡುವ ಯಾತ್ರಿಗಳಿಗೆ ತಲಾ 5 ಸಾವಿರ ಸಹಾಯಧನ ಯೋಜನೆ ಜಾರಿ ಮಾಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ  ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‌ನ ಮಂಜೇಗೌಡ ಪ್ರಶ್ನೆಗೆ ಉತ್ತರ ನೀಡಿದ ಅವರು, ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಿಗಳಿಗೆ ತಲಾ 5 ಸಾವಿರ ಸಹಾಯಧನ ಯೋಜನೆ ಜಾರಿ ಮಾಡಲಾಗಿದೆ. ಇದಕ್ಕಾಗಿ ಸರ್ಕಾರ 5 ಕೋಟಿ ಹಣ ಮೀಸಲು ಇಡಲಾಗಿದೆ. …

Read More »

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ಒಂದು ವಾರ ಹೋಟೆಲ್‌ಗಳು  ಗ್ಯಾಸ್ ಸಿಲಿಂಡರ್‌ಗಾಗಿ  ಸಹಕಾರ ಕೊಡಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ  ಹೋಟೆಲ್ ಅಸೋಸಿಯೇಷನ್‌ಗೆ ಮನವಿ ಮಾಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗ್ಯಾಸ್ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮಗೆ ಡೊಮೆಸ್ಟಿಕ್ ಸಿಲಿಂಡರ್ ಸಮಸ್ಯೆ ಇಲ್ಲ. ಎಷ್ಟು ಸಪ್ಲೈ ಆಗಬೇಕೋ ಅಷ್ಟು ಆಗಿದೆ. ಗೃಹ ಬಳಕೆ ನಿಲ್ಲಿಸೋದಿಲ್ಲ. 3 ಲಕ್ಷಕ್ಕೂ ಹೆಚ್ಚು ಸಿಲಿಂಡರ್ ಬಳಕೆ ಆಗುತ್ತಿದೆ. ಅದನ್ನ ಕೊಡುತ್ತಿದ್ದೇವೆ. ಕಮರ್ಷಿಯಲ್ ಗ್ಯಾಸ್ …

Read More »

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

ಬೆಂಗಳೂರು: ಗ್ಯಾಸ್ ವಿತರಣೆಗೆ ಕರ್ನಾಟಕ ಸರ್ಕಾರದಿಂದ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಪ್ರಾಮುಖ್ಯತೆ ನೀಡಿದ್ದು, ಶೇ.100 ಗ್ಯಾಸ್ ವಿತರಣೆಗೆ ಸೂಚನೆ ನೀಡಿದೆ. ಆದರೆ, ಹೋಟೆಲ್‌ಗಳಿಗೆ ಕೇವಲ 10% ಗ್ಯಾಸ್ ವಿತರಣೆಗೆ ಸೂಚಿಸಲಾಗಿದೆ. ನಾಳೆಯಿಂದ ಗ್ಯಾಸ್ ವಿತರಣೆಗೆ ಸರ್ಕಾರ ಸೂಚಿಸಿದೆ. ಅಗತ್ಯ ವಲಯಗಳಿಗೆ ಪ್ರಮುಖ ಆದ್ಯತೆ ನೀಡಲಾಗಿದೆ. ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಪರ್ಸೆಂಟೇಜ್ ಗ್ಯಾಸ್ ವಿತರಿಸಬೇಕೆಂದು ಏಜೆನ್ಸಿ ಕಂಪನಿಗಳಿಗೆ ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ. ಯಾವ್ಯಾವ …

Read More »

ಉತ್ತರ ಕೊಡದ ಇಲಾಖೆಗಳು – ಸಚಿವರಿಗೆ ಸಿಎಂ ಪತ್ರ, ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದ ಸ್ಪೀಕರ್

ಬೆಂಗಳೂರು: ಸ್ಪೀಕರ್ ಖಾದರ್  ಖದರ್‌ಗೆ ಸರ್ಕಾರ ಬೆಚ್ಚಿಬಿದ್ದಿದೆ. ಸ್ಪೀಕರ್ ಸಭಾತ್ಯಾಗದ ಅಪರೂಪದ ಘಟನೆಯಿಂದ ಸರ್ಕಾರಕ್ಕೆ ಮುಜುಗರ ಆಗಿದೆ. ಹಾಗಾಗಿಯೇ ತಮ್ಮದೇ ಸಂಪುಟದ ಸಚಿವರಿಗೂ ಸಿಎಂ ಪತ್ರ ಬರೆದು ವಾರ್ನಿಂಗ್ ಮಾಡಿದ್ದಾರೆ. ಸರ್ಕಾರಕ್ಕೆ ಮುಜಗರ, ಶಾಸಕರ ಹಕ್ಕಿಗೆ ಚ್ಯುತಿ ಆಗಿದೆ ಎಂದು ಖಾರವಾಗಿ ಪತ್ರ ಬರೆದಿದ್ದಾರೆ. ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸದನದಲ್ಲಿ ಉತ್ತರಿಸಲು ಬಾಕಿ ಇರುವ ಪ್ರಶ್ನೆಗಳಿಗೆ ಉತ್ತರ ಕಳುಹಿಸಿಲ್ಲ. ಇದುವರೆಗೂ ಉತ್ತರ ಕಳುಹಿಸದೇ ಇರುವುದು ಶಾಸಕರುಗಳಿಗೆ ಸದನದಲ್ಲಿ ಅನಾನುಕೂಲ ಆಗಿದೆ. …

Read More »

ಬೆಳಗಾವಿಯಲ್ಲಿ ಐಟಿ, ಸೆಮಿಕಂಡಕ್ಟರ್ ಪಾರ್ಕ್‌ ಸ್ಥಾಪಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ರಾಜ್ಯದ ಎರಡನೇ ರಾಜಧಾನಿಯೆಂದೇ ಘೋಷಣೆಗೊಂಡಿರುವ ಹಾಗೂ ರಾಜ್ಯದ ಗಡಿ ಜಿಲ್ಲೆಯಾದ ಬೆಳಗಾವಿಯಲ್ಲಿ  ಐ.ಟಿ ಪಾರ್ಕ್ , ಸೆಮಿಕಂಡಕ್ಟರ್ ಪಾರ್ಕ್‌ಗಳನ್ನು  ನಿರ್ಮಿಸಿ ಅಭಿವೃದ್ಧಿ ಪರ ರಾಜ್ಯವನ್ನಾಗಿ ಮಾಡುವ ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಉದ್ದೇಶ ಸರ್ಕಾರಕ್ಕೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ  ಅವರು ತಿಳಿಸಿದರು. ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ವಿಧಾನಸಭಾ ಸದಸ್ಯರಾದ ಅಭಯ್‌ …

Read More »

ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು

ಬೆಂಗಳೂರು: ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಳಸಂದರ್ಶನಕ್ಕೆ ಕೋರ್ಟ್ ಅನುಮತಿ ಅಂದಿದ್ದು, ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟಿದೆ. ಜೈಲ್ ಮ್ಯಾನ್ಯುಯಲ್‌ನಲ್ಲಿ ಒಳಸಂದರ್ಶನಕ್ಕೆ ಅವಕಾಶ ಇದ್ರೆ ನೀಡುವಂತೆ ಆದೇಶ ನೀಡಿದ್ದು, ದರ್ಶನ್ ಕುಟುಂಬಸ್ಥರ ಜೊತೆ ಒಳಸಂದರ್ಶನ ನಡೆಸಬಹುದಾ ಎನ್ನುವ ಪ್ರಶ್ನೆ ಹುಟ್ಟಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್‌ಗೆ ಜೈಲಿನ ಒಳಸಂದರ್ಶನಕ್ಕೆ 57ನೇ ಸೆಷನ್ಸ್ ಕೋರ್ಟ್ ತಾತ್ವಿಕ ಒಪ್ಪಿಗೆ ನೀಡಿದೆ. ಆದರೆ, ಈ ಸಂಬಂಧ ಅಂತಿಮ ನಿರ್ಧಾರ …

Read More »

ಸ್ಪೀಕರ್ ಸಿಟ್ಟಿಗೆ​​ ಮೂವರು ಅಧಿಕಾರಿಗಳ ತಲೆದಂಡ

ಬೆಂಗಳೂರು: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನ ಮುಂದೂಡಿದ್ದಲ್ಲದೆ ಪೀಠದಿಂದಲೇ ಎದ್ದು ಹೊರ ನಡೆದ ಯು.ಟಿ. ಖಾದರ್​​ ಅವರನ್ನು ಸಿಎಂ ಸಿದ್ದರಾಮಯ್ಯ ಅಂತಿಮವಾಗಿ ಮನವೊಲಿಸಿದ್ದಾರೆ. ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ.  ಜೊತೆಗೆ ಸಮರ್ಪಕ ಉತ್ತರ ಕೊಡದ 3-4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಉತ್ತರ …

Read More »

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ – ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ಶರಣ್ ಪ್ರಕಾಶ್ ಪಾಟೀಲ್  ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಆರತಿರಾವ್ ಪ್ರಶ್ನೆ ಕೇಳಿದ್ರು. ಇದಕ್ಕೆ ಸಚಿವ ಶರಣ್ ಪ್ರಕಾಶ್ ಪಾಟೀಲ್ ಉತ್ತರ ನೀಡಿ, ಮೈಸೂರು, ತುಮಕೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಆಗ್ತಿದೆ. ಕಟ್ಟಡ ಸಂಪೂರ್ಣ ಆಗಿ, ಉದ್ಘಾಟನೆ ಆಗಿದೆ. ಎಕ್ಯುಪ್‌ಮೆಂಟ್ ಟೆಂಡರ್ ಕರೆಯಲಾಗಿದೆ. ಹುದ್ದೆಯ ನೇಮಕಾತಿ ಪ್ರಕ್ರಿಯೆಯೂ ನಡೆಯುತ್ತಿದೆ. …

Read More »

ಬಿ.ಎಡ್ ಕಾಲೇಜುಗಳ ಶುಲ್ಕ ಶೀಘ್ರವೇ ಹೆಚ್ಚಳ: ಡಾ. ಸುಧಾಕರ್

ಬೆಂಗಳೂರು: ರಾಜ್ಯದ ಬಿ.ಎಡ್  ಕಾಲೇಜುಗಳ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್  ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ ಮಧು ಜಿ ಮಾದೇಗೌಡ ಪ್ರಶ್ನೆ ಕೇಳಿದ್ರು. ಇದಕ್ಕೆ ಸಚಿವರು ಉತ್ತರ ನೀಡಿ, ರಾಜ್ಯದ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಕ್ರಮ ತೆಗೆದುಕೊಳ್ತೀವಿ. ಅನೇಕ ವರ್ಷಗಳಿಂದ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಮಾಡಿಲ್ಲ. ಬೇರೆ ಬೇರೆ ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಜಾಸ್ತಿ ಇದೆ. ಹೀಗಾಗಿ …

Read More »

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಮೆಡಿಕಲ್ ಸೀಟು ಹಂಚಿಕೆಯಲ್ಲಿ ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ ಅಂತ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ ಐವಾನ್ ಡಿಸೋಜ ಪ್ರಶ್ನೆ ಕೇಳಿದ್ರು. ರಾಜ್ಯದಲ್ಲಿ ನೀಟ್ ವ್ಯವಸ್ಥೆ ರದ್ದು ಮಾಡಬೇಕು. CET ಅಡಿಯೇ ಮೆಡಿಕಲ್ ಸೀಟು ರಾಜ್ಯದ ಮಕ್ಕಳಿಗೆ ಕೊಡಬೇಕು. ಪಿಯುಸಿಯಲ್ಲಿ ಫೇಲ್ ಆಗಿ ನೀಟ್‌ನಲ್ಲಿ ರ‍್ಯಾಂಕ್ ಪಡೆಯುತ್ತಾರೆ. ನೀಟ್ ಸೀಟಿನಲ್ಲಿ ಮಾಫಿಯಾ ನಡೆಯುತ್ತಿದೆ. ಇದರಿಂದ ನಮ್ಮ …

Read More »