ಬೆಂಗಳೂರು: ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಮನೆಯಂಗಳದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು, ಸುಟ್ಟು ಹಾಕಿದ ಘಟನೆ ಬುಧವರಾ ತಡರಾತ್ರಿ ನಡೆದಿದೆ. ತಡರಾತ್ರಿ ಒಂದೂವರೆ ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸತೀಶ್ ರೆಡ್ಡಿ ಅವರ ಫಾರ್ಚೂನರ್ ಕಾರು ಹಾಗೂ ಮಹೀಂದ್ರ ಥಾರ್ ಜೀಪ್ ಸುಟ್ಟು ಹೋಗಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದ್ದು, ನಾಲ್ಕು ಮಂದಿ ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್ ಗಳನ್ನ ತಂದು ಬೆಂಕಿ …
Read More »2 ನಾಡ ಪಿಸ್ತೂಲು, 5 ಜೀವಂತ ಗುಂಡು ವಶ : ನಾಲ್ವರ ಬಂಧನ
ಬೆಂಗಳೂರು,ಆ.11-ಬಿಹಾರ ರಾಜ್ಯದಿಂದ ಅಕ್ರಮವಾಗಿ ನಾಡಪಿಸ್ತೂಲುಗಳನ್ನು ಖರೀದಿ ಮಾಡಿಕೊಂಡು ಬಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿರುವ ಅಶೋಕನಗರ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿ ಎರಡು ನಾಡಪಿಸ್ತೂಲು, 5 ಜೀವಂತ ಗುಂಡುಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಸೋನುಕುಮಾರ್(32), ಸುನೀಲ್‍ಕುಮಾರ್(32), ಇರ್ಫಾನ್(26) ಮತ್ತು ಆಂಧ್ರ ಪ್ರದೇಶದ ಮುರುಳಿ ವಿನೋದ್(47) ಬಂಧಿತ ಆರೋಪಿಗಳು. ಆಗಸ್ಟ್ 7ರಂದು ಹೊಸೂರು ರಸ್ತೆಯ ಸಿಮೆಂಟ್ರಿ ರಸ್ತೆಯಲ್ಲಿರುವ ಹಿಂದೂ ಸಿಮೆಂಟ್ರಿ ಬಳಿ ಮೂವರು ಯಾವುದೇ ಪರವಾನಗಿ ಇಲ್ಲದೆ ನಾಡಪಿಸ್ತೂಲಗಳನ್ನಿಟ್ಟುಕೊಂಡು …
Read More »ರಾಜ್ಯದಲ್ಲಿಂದು ಕೊರೋನಾ ಮತ್ತೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳವಾಗಿದ್ದು, ಇಂದು ಹೊಸದಾಗಿ 1826 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 33 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1618 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 22,851 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.09 ರಷ್ಟು ಇದೆ. ಇವತ್ತು 1,67,237 ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನಲ್ಲಿಂದು 377 ಜನರಿಗೆ ಸೋಂಕು ತಗುಲಿದೆ. 280 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 8290 …
Read More »ದೂರದೃಷ್ಟಿ ಇಟ್ಟುಕೊಂಡು ಸಮರ್ಥವಾಗಿ ವಿದ್ಯುತ್ ನಿರ್ವಹಣೆ ಮಾಡಿ
ಬೆಂಗಳೂರು : ವಿದ್ಯುತ್ ಕ್ಷೇತ್ರದಲ್ಲಿ ಸಾವಲಂಬಿ ಆಗುವುದರ ಜೊತೆಗೆ ಸಮರ್ಥವಾಗಿ ವಿದ್ಯುತ್ ನಿರ್ವಹಣೆಯನ್ನು ದೂರದೃಷ್ಟಿಯನ್ನು ಇಟ್ಟುಕೊಂಡು ಕೆಲಸ ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೂಚನೆ ನೀಡಿದರು. ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಸಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ವಿದ್ಯುತ್ ಉತ್ಪಾದನೆ ಮತ್ತು ನಿರ್ವಹಣೆ ಇನ್ನು ಬಹಳ ವ್ಯವಸ್ಥಿತವಾಗಿ ಮಾಡಬೇಕು. ಮಾರುಕಟ್ಟೆ ಸ್ಥಿತಿಗತಿಯನ್ನು ಆಧರಿಸಿ ಹೆಚ್ಚಿನ ದರಕ್ಕೆ …
Read More »ಸರ್ಕಾರದ ಹೂ ನಿಷೇಧ ಆದೇಶಕ್ಕೆ ಹೂ ಮಾರಾಟಗಾರರ ಪ್ರತಿಭಟನೆ
ಬೆಂಗಳೂರು, – ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಅವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿ ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ವತಿಯಿಂದ ನಾಳೆ (ಗುರುವಾರ) ಬೃಹತ್ ಪ್ರತಿಭಟನೆಯನ್ನು …
Read More »ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ಇಂದು(ಬುಧವಾರ, ಆಗಸ್ಟ್ 11) ವೇಳಾಪಟ್ಟಿ ಪ್ರಕಟಿಸಿದೆ.
ಬೆಂಗಳೂರು : ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ಇಂದು(ಬುಧವಾರ, ಆಗಸ್ಟ್ 11) ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ, ಈ ಮೂರು ಮಹಾನಗರ ಪಾಲಿಕೆಗಳಿಗೆ ಸೆ.3 ರಂದು ಚುನಾವಣೆ ನಡೆಯಲಿದ್ದು, ಸೆ.6ಕ್ಕೆ ಫಲಿತಾಂಶ ಹೊರಬೀಳಲಿದೆ. ಈ ಸಂಬಂಧ ಆ.16ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅದೇ ದಿನದಿಂದ ಮೂರು ಮಹಾನಗರ …
Read More »ನಮಗೆ ಬೆಂಕಿ ಬಂಡಾಯ ಏನೂ ಇಲ್ಲ : ಸಚಿವ ಶ್ರೀರಾಮುಲು
ಬೆಂಗಳೂರು : ನಮಗೆ ಬೆಂಕಿ ಬಂಡಾಯ ಏನೂ ಇಲ್ಲ ನಮ್ಮದು ಶಿಸ್ತಿನ ಪಕ್ಷ, ನಮ್ಮ ಹೈಕಮಾಂಡ್ ಇದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆಯ ವಿಚಾರಕ್ಕೆ ಸಂಬಂಧಿಸಿದಂತೆ ರಾಮುಲು ಅಸಮಧಾನಗೊಂಡಿದ್ದರೆ ನಾನು ಕೆಲವು ಮಾಧ್ಯಮದಲ್ಲಿ ನೋಡಿದ್ದೇನೆ. ನನಗೆ ಯಾವ ಅಸಮಾಧಾನ ಇಲ್ಲ, ನಮ್ಮದು ಶಿಸ್ತಿನ ಪಕ್ಷ, ಹೈಕಮಾಂಡ್ ಎಲ್ಲವನ್ನು ನಿರ್ಧರಿಸುತ್ತದೆ ಎಂದಿ ಹೇಳಿದ್ದಾರೆ. ನನಗೆ ಕೊಟ್ಟ ಸಾರಿಗೆ ಇಲಾಖೆ ನಿರ್ವಹಣೆ ಮಾಡುತ್ತೇನೆ. ಜನಪರವಾದ ಕೆಲಸ ಮಾಡಬೇಕು. …
Read More »ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು
ದೆಹಲಿ: ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ವಿಧಾನಸಭೆಯ ನಿವೃತ್ತ ಭದ್ರತಾ ಅಧೀಕ್ಷಕರಾದ ಎಂ.ಎನ್.ಪಿಳ್ಳಪ್ಪ ಎಂಬುವವರು ದೂರು ನೀಡಿದ್ದು, ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಲು ಮನವಿ ಮಾಡಿದ್ದಾರೆ.
Read More »ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆಗೆ 1 ವರ್ಷ; ಇನ್ನೂ ನನಗೆ ನ್ಯಾಯ ಸಿಕ್ಕಿಲ್ಲಾ ಎಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ
ಬೆಂಗಳೂರು: ಒಂದು ವರ್ಷದ ಹಿಂದೆ ಇಡೀ ಬೆಂಗಳೂರಿಗೆ ಬೆಂಗಳೂರೆ ಬೆಚ್ಚಿ ಬೀಳುವಂತ ಘಟನೆ ನಡೆದಿತ್ತು. ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆ ಪ್ರಕರಣ(DJ Halli and KG Halli Violence) ಜನರ ನಿದ್ದೆ ಕೆಡಿಸಿತ್ತು. ಒಂದು ಫೇಸ್ಬುಕ್ ಪೋಸ್ಟ್ನಿಂದ ಭಾರಿ ಅನಾಹುತ ನಡೆದಿತ್ತು. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ(Akhanda Srinivas Murthy) ಮನೆ ಬೆಂಕಿಗೆ ಆಹುತಿಯಾಗಿತ್ತು. ಸದ್ಯ ಇಂದು ಈ ಘಟನೆ ನಡೆದು ಒಂದು ವರ್ಷ ಕಳೆದಿದೆ. ಈ ಬಗ್ಗೆ ಡಿಜೆ …
Read More »ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು : ಸಿಎಂ ಬೊಮ್ಮಾಯಿ
ಬೆಂಗಳೂರು : ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಬೇಕು ಮತ್ತು ಅಪರಾಧವನ್ನು ಸಂಪೂರ್ಣವಾಗಿ ಸದೆಬಡಿಯುವ ಕೆಲಸ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಸಿಎಂ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ. ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಜೂಜು, ಡಾರ್ಕ್ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವಂತಿಲ್ಲ. ಭೂ ವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ಮಾದಕ ವಸ್ತುಗಳ …
Read More »