Breaking News

ಬೆಳಗಾವಿ

ಸಹ್ಯಾದ್ರಿ ನಗರ ಬಸ್ ಪಲ್ಟಿ

ಸಹ್ಯಾದ್ರಿ ನಗರ ಬಸ್ ಪಲ್ಟಿ: ಗಾಯಾಳುಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಭೇಟಿಯಾದ ಮುಸ್ತಾಕ್ ಮುಲ್ಲಾ | ಸಹ್ಯಾದ್ರಿ ನಗರದಲ್ಲಿ ಸಾರಿಗೆ ಬಸ್ ಪಲ್ಟಿಯಾಗಿ ಗಾಯಗೊಂಡ ಪ್ರಯಾಣಿಕರ ಆರೋಗ್ಯವನ್ನು ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಮುಸ್ತಾಕ್ ಮುಲ್ಲಾ ಜಿಲ್ಲಾಸ್ಪತ್ರೆಗೆ ದೌಡಾಯಿಸಿ ವಿಚಾರಣೆ ನಡೆಸಿದರು. ಸಹ್ಯಾದ್ರಿ ನಗರದಲ್ಲಿ ಸಾರಿಗೆ ಬಸ್ ಪಲ್ಟಿಯಾಗಿರುವುದರಿಂದ ಸಾರಿಗೆಯಲ್ಲಿ ಪ್ರಯಾಣ ಮಾಡುತ್ತಿರುವವರಿಗೆ ಹಾಗೂ ಚಾಲಕ, ನಿರ್ವಾಹಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆ ನೀಡಬೇಕು. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಗಾಯಾಳುಗಳಿಗೆ ಮುಸ್ತಾಕ್ …

Read More »

ಬೋರಗಾಂವ ವೃತ್ತದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ‌ಇಂದು‌ ಚಾಲನೆ ನೀಡಿದ ಪ್ರಿಯಾಂಕ ಸತೀಶ್ ಜಾರಕಿಹೊಳಿ

 ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕುಮಾರಿ ಪ್ರಿಯಾಂಕ ಸತೀಶ್ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿನ ನಿಪ್ಪಾಣಿ‌ ವಿಧಾನಸಭಾ ಕ್ಷೇತ್ರದ ಬೋರಗಾಂವ ವೃತ್ತದಲ್ಲಿ ಇಂದು ಭಾಟನಾಗನೂರ ಬೋರಗಾಂವವಾಡಿ ರಸ್ತೆ (ರಾಜಿ-98) ರಸ್ತೆ ಕಿಮೀ 35.38 ರಿಂದ 38.00 (ಬೋರಗಾಂವವಾಡಿ ಕ್ರಾಸ್‌ದಿಂದ ಬೋರಗಾಂವ ವೃತ್ತ ) ವರೆಗೆ ಅಂದಾಜು ₹ 3.50 ಕೋಟಿ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ‌ಇಂದು‌ ಚಾಲನೆ ನೀಡಿದರು. ಈ ವೇಳೆ ಬೋರಗಾಂವ ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿ, …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿ ದೇವಸ್ಥಾನದ ಆವರಣದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.. ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಹರಿಹರ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಮಾತನಾಡಿದ್ದಾರೆ.

ಚಿಕ್ಕೋಡಿ (ಬೆಳಗಾವಿ) : ಸರ್ಕಾರ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ನಾವು ಅದರ ಪೂರ್ವಭಾವಿಯಾಗಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳಿ ಸದ್ಭಕ್ತರ ಭಾವನೆ ಹಾಗೂ ವಿಚಾರಗಳನ್ನು ತಿಳಿದುಕೊಂಡು ಸಮೀಕ್ಷೆ ಪಟ್ಟಿಯಲ್ಲಿ ಏನನ್ನು ಬರೆಯಿಸಬೇಕು ಅಂತ ಸಮಾಲೋಚನೆಯನ್ನು ಮಾಡುತ್ತಿದ್ದೇವೆ ಎಂದು ಹರಿಹರ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಹೇಳಿದ್ದಾರೆ. ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂಬರುವ ದಿನಾಂಕ 28 ರಿಂದ ಅಕ್ಟೋಬರ್ 7ರವರೆಗೆ ಸರ್ಕಾರ ಸಾಮಾಜಿಕ ಮತ್ತು …

Read More »

ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ

ನಿಪ್ಪಾಣಿಯ ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ ಚಿಕ್ಕೋಡಿ:ನಿಪ್ಪಾಣಿ ತಾಲೂಕಿನ ತವಂದಿ ಘಾಟ್‌ನಲ್ಲಿ ಕಂಟೇನರ್ ವಾಹನ ಪಲ್ಟಿಯಾದ ಪರಿಣಾಮ ಅದೃಷ್ಟವಶಾತ ಯಾವುದೇ ಸಾವುನೋವು ಸಂಭವಿಸಿಲ್ಲ. ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಕಂಟೇನರ್ ಪಲ್ಟಿಯಾಗಿದೆ. ಅದೃಷ್ಟವಶಾತ್, ಅಪಘಾತದಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಕಂಟೇನರ್ ಚಾಲಕ ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ಕಂಟೇನರ ವಾಹನ ಕಂದಕಕ್ಕೆ ಬಿದ್ದಿದೆ.

Read More »

ನೇತ್ರ ದಾನ ಮಾಡಿ ಇಬ್ಬರ ಬಾಳಿಗೆ ಬೆಳಕಾಗಿ – ನಿಜಲಿಂಗೇಶ್ವರ ಮಹಾಸ್ವಾಮಿಜಿ.

ಹುಕ್ಕೇರಿ : ನೇತ್ರ ದಾನ ಮಾಡಿ ಇಬ್ಬರ ಬಾಳಿಗೆ ಬೆಳಕಾಗಿ – ನಿಜಲಿಂಗೇಶ್ವರ ಮಹಾಸ್ವಾಮಿಜಿ. ನೇತ್ರ ದಾನ ಮಾಡುವ ಮೂಲಕ ಇಬ್ಬರ ಬಾಳಿಗೆ ಬೆಳಕಾಗಬೇಕು ಎಂದು ನಿಡಸೋಸಿ ಮಠದ ನಿಜಲಿಂಗೇಶ್ವರ ಮಹಾಸ್ವಾಮಿಜಿ ಹೇಳಿದರು. ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ ಅಂಗವಾಗಿ ಸಂಕೇಶ್ವರ ನಗರದ ಎಂ ಎಂ ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಹಮ್ಮಿಕೊಂಡ ಜಾಗ್ರತಾ ಜಾಥಾಕ್ಕೆ ನಿಡಸೋಸಿ ಮಠದ ನಿಜಲಿಂಗೇಶ್ವರ ಮಹಾಸ್ವಾಮಿಗಳು ಮತ್ತು ಡಾಕ್ಟರ ಶೀಲಾ ದೋಡಬಂಗಿ ಲಕ್ಷ್ಮಿ ದೇವಿ …

Read More »

ಕೆ. ಎಲ್. ಈ ಸಂಸ್ಥೆಯ ಶ್ರೀ ಬಿ. ಏಮ್. ಕಂಕನಾವಾಡಿ ಆಯುರ್ವೇದ ಮಹಾವಿದ್ಯಾಲಯ ಶಹಾಪುರ ಬೆಳಗಾವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ 03ರ ವಿಶೇಷ ಶಿಬಿರವನ್ನು ಮಣ್ಣೂರು ಗ್ರಾಮದಲ್ಲಿ ದಿನಾಂಕ 8 – ಸೆಪ್ಟೆಂಬರ್ 2025 ಸೋಮವಾರದಂದು ಉದ್ಘಾಟಿಸಲಾಯಿತು.

ಕೆ. ಎಲ್. ಈ ಸಂಸ್ಥೆಯ ಶ್ರೀ ಬಿ. ಏಮ್. ಕಂಕನಾವಾಡಿ ಆಯುರ್ವೇದ ಮಹಾವಿದ್ಯಾಲಯ ಶಹಾಪುರ ಬೆಳಗಾವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ 03ರ ವಿಶೇಷ ಶಿಬಿರವನ್ನು ಮಣ್ಣೂರು ಗ್ರಾಮದಲ್ಲಿ ದಿನಾಂಕ 8 – ಸೆಪ್ಟೆಂಬರ್ 2025 ಸೋಮವಾರದಂದು ಉದ್ಘಾಟಿಸಲಾಯಿತು. ಡಾ. ಸಂದೀಪ ಸಗರೆ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳು ಕಾರ್ಯಕ್ರಮದ ಸ್ವಾಗತ ಭಾಷಣ ಹಾಗೂ ಅತಿಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಮುಖ್ಯ ಉದ್ಘಾಟಕರಾಗಿ ಶ್ರೀ ಪಲ್ಲೇದ ರವೀಂದ್ರ ಜಡಿಯಪ್ಪ , …

Read More »

ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ರೈತರಿಂದ ಪ್ರತಿಭಟನೆ

ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ರೈತರಿಂದ ಪ್ರತಿಭಟನೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ನೂರಾರು ರೈತರು ಐನಾಪೂರ ಏತ ನೀರಾವರಿ ಯೋಜನೆಯ ಕಾಲುವೆ ನಿರ್ಮಿಸಲು 140 ಏಕರೆ ಜಮೀನ ರಾಜ್ಯ ಸರ್ಕಾರ ತಮ್ಮ ವಶಕ್ಕೆ ತೆಗೆದುಕೊಂಡರು ಆದರೆ, 12 ವರ್ಷ ಕಳೆದರು ಜಮೀನಿಗೆ ನೀಡಬೇಕಾದ ಪರಿಹಾರ ನೀಡದೆ ಇರದ ಹಿನ್ನಲೆಯಲ್ಲಿ ನೂರಾರು ರೈತರು ತಮ್ಮ ಜಮೀನಗಳಲ್ಲಿ ಸರ್ಕಾರ ನಿರ್ಮಿಸಿದ ಕಾಲುವೆಯಲ್ಲಿ ಇಳಿದು ಸರ್ಕಾರ ವಿರುದ್ದ ಉಗ್ರ ಹೋರಾಟ ಮಾಡಿ ಆಕ್ರೋಶ …

Read More »

ಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ

ಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಗೋಕಾಕ : ನಗರದ ಲಕ್ಷ್ಮೀ ಟಾಕೀಸ್ ಎದುರು ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆಯನ್ನು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಪ್ತ ಸಹಾಯಕರಾದ ಸದಾನಂದ ಕಲಾಲ, ಮಾಲೀಕರಾದ ಮೋಹನ್ ಶೆಟ್ಟಿ, ರಮೇಶ್ ಶೆಟ್ಟಿ, ಸಂತೋಷ್ ಶೆಟ್ಟಿ, ಅರುಣ ಶೆಟ್ಟಿ, ಜಾದವ್ ಹಾಗೂ ಶೆಟ್ಟಿ ಕುಟುಂಬಸ್ಥರು ಉಪಸ್ಥಿತರಿದ್ದರು

Read More »

ನಗರ ಪೊಲೀಸರು ಮಾಡಿರುವ ಹೋಸ ರೂಲ್ಸ್ ಗೆ ಬಿಜೆಪಿ ಶಾಸಕ ಅಭಯ ಪಾಟೀಲ್ ಅವರು ಕೆರಳಿದ್ದಾರೆ.

ಬೆಳಗಾವಿ: ಬೆಳಗಾವಿ ನಗರದಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ವಿಸರ್ಜನೆ ನಡೆಯಲಿದ್ದು, ನಗರ ಪೊಲೀಸರು ಮಾಡಿರುವ ಹೋಸ ರೂಲ್ಸ್ ಗೆ ಬಿಜೆಪಿ ಶಾಸಕ ಅಭಯ ಪಾಟೀಲ್ ಅವರು ಕೆರಳಿದ್ದಾರೆ. ಇಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಅವರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗಣೇಶ ವಿಸರ್ಜನೆ ಮೆರವಣಿಗೆಯ ಸಮಯದಲ್ಲಿ ಪೊಲೀಸ್‌ ಇಲಾಖೆ ಹಾಕಿರುವ ಹೊಸ ಷರತ್ತುಗಳ ಬಗ್ಗೆ ಗಣೇಶ ಮಂಡಳಗಳ ಪದಾಧಿಕಾರಿಗಳ ಭಾವನೆಗಳನ್ನು ಕಮೀಷನ‌ರ್ ಅವರೊಂದಿಗೆ …

Read More »