Breaking News

ಅಥಣಿ

ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದ ಅಥಣಿ-ಕೊಟ್ಟಲಗಿ ನೂರಾರು ವಿದ್ಯಾರ್ಥಿಗಳು

ಅಥಣಿ ಉತ್ತಮ ರಸ್ತೆ ನಿರ್ಮಿಸಿ ಮತ್ತು ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿ ಎಂದು ಆಗ್ರಹಿಸಿ ರಾಮತೀರ್ಥ ಗ್ರಾಮದ ನೂರಾರು ವಿದ್ಯಾರ್ಥಿಗಳು ಅಥಣಿ-ಕೊಟ್ಟಲಗಿ ರಾಜ್ಯ ಹೆದ್ದಾರಿಯ ರಾಮತೀರ್ಥ ಕ್ರಾಸ್ ಬಳಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸ್ಥಳೀಯ ಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ರಾಮತೀರ್ಥ ಕ್ರಾಸ್ ನಿಂದ ರಾಮತೀರ್ಥ ಗ್ರಾಮಕ್ಕೆ ಬಸ್ಸು ಬರುವುದಿಲ್ಲ, ಪ್ರಯಾಣಿಕರನ್ನು ಹಾಗೆಯೇ ಕ್ರಾಸಿನಲ್ಲಿ ಇಳಿಸಿ ಹೋಗುತ್ತಾರೆ, ಕೇಳಿದರೆ ರಸ್ತೆ ಸರಿಯಿಲ್ಲ ಅದಕ್ಕೆ ಬಸ್ಸು …

Read More »

ಮನುಷ್ಯನ ಏಳ್ಗೆಗೆ ಧರ್ಮ ಅವಶ್ಯ: ಶ್ರೀಶೈಲ ಶ್ರೀ

ಅಥಣಿ: ಧರ್ಮ ರಕ್ಷಣೆ ಮಾಡುವವರನ್ನು ಧರ್ಮ ರಕ್ಷಿಸುತ್ತದೆ. ಧರ್ಮದೊಂದಿಗೆ ಎಲ್ಲರೂ ಕೈ ಜೋಡಿಸುವಂತೆ ಶ್ರೀಶೈಲ ಪೀಠದ ಜಗದ್ಗುರು ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಕರೆ ನೀಡಿದರು. ಶ್ರೀಗಳು ಶ್ರೀಶೈಲವರೆಗಿನ ಜನಜಾಗೃತಿ ಪಾದಯಾತ್ರೆ ಮಾರ್ಗ ಮಧ್ಯೆ ಸತ್ತಿ ಗ್ರಾಮದಲ್ಲಿ ಜರುಗಿದ ಧರ್ಮಸಭೆಯ ಸಾನ್ನಿಧ್ಯವಹಿಸಿ ಮಾತನಾಡಿ, ಮನುಷ್ಯನ ಏಳ್ಗೆಗೆ ಧರ್ಮವು ಅತ್ಯವಶ್ಯವಾಗಿದೆ.   ಇತ್ತೀಚಿಗೆ ರಸಾಯನಿಕ ಗೊಬ್ಬರ ಅತಿಯಾಗಿ ಬಳಕೆಯಾಗುತ್ತಿದ್ದು, ಫಲವತ್ತಾದ ಭೂಮಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಕೃಷಿಕರು ಸಾವಯವ ಕೃಷಿ ಮಾಡುವ …

Read More »

ಕರ್ನಾಟಕದಲ್ಲೇ ಬೆಳಗಾವಿ ಉಳಿಸಲು ಹೋರಾಡಿದ್ದ ನಾಗನೂರು ಶ್ರೀ

ಅಥಣಿ(ನ.01): ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಅಗ್ರಗಣ್ಯರಲ್ಲಿ ಬೆಳಗಾವಿ ರುದ್ರಾಕ್ಷಿ ಮಠದ ನಾಗನೂರಿನ ಡಾ. ಶಿವಬಸವ ಸ್ವಾಮೀಜಿಯೂ ಒಬ್ಬರು. ಅವರು ಸ್ವಾತಂತ್ರ್ಯಕ್ಕೆ ಎಷ್ಟು ಶ್ರಮಿಸಿದ್ದರೋ ಅಷ್ಟೇ ಶ್ರಮವಹಿಸಿ ಗಡಿ ನಾಡುವ ಬೆಳಗಾವಿಯಲ್ಲಿ ಕನ್ನಡ ಕಟ್ಟುವ ಕೆಲಸ ಮಾಡಿದ್ದಾರೆ. ಆಗ ಕನ್ನಡ-ಮರಾಠಿಗರ ಭಾಷಾ ಏಕೀಕರಣ ದನಿ ಮುಗಿಲೆತ್ತರಕ್ಕೆ ಏರಿತ್ತು. ಕೇಂದ್ರ ಸರ್ಕಾರ ಫಜಲ್‌ ಅಲಿ ಅವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ನೇಮಿಸಿತ್ತು. ಈ ಸಮಿತಿ ಬೆಳಗಾವಿಗೆ ಭೇಟಿ ನೀಡಿದ್ದಾಗ ಸಮಿತಿಯ ಮುಂದೆ ಶಿವಬಸವ …

Read More »

ಶತಮಾನ ಕಳೆದರೂ ಮಾದರಿಯಾಗದ ಶಾಸಕರ ಮಾದರಿ ಶಾಲೆ

ತೆಲಸಂಗ: ಈಗಿನ ಆಂಗ್ಲ ಮಾಧ್ಯಮ ಶಾಲೆಗಳ ಆಕರ್ಷಣೆಯ ನಡುವೆಯೂ ಬ್ರಿಟಿಷರ ಕಾಲದಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಗ್ರಾಮದ ನಮ್ಮೂರ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 151 ವರ್ಷ ತುಂಬಿದರೂ ಶತಮಾನೋತ್ಸವದ ಸಂಭ್ರಮ ಕಾಣದೇ ಅನಾಥವಾಗಿದೆ.   ಸರಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶತಮಾನ ಕಂಡ ರಾಜ್ಯದ 143 ಸರಕಾರಿ ಶಾಲೆಗಳಿಗೆ 20 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಬೆಳಗಾವಿ ಜಿಲ್ಲೆಯ 5 ಶಾಲೆಗಳನ್ನು ಅನುದಾನಕ್ಕಾಗಿ ಆಯ್ಕೆ …

Read More »

ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ಅಥಣಿ (ಬೆಳಗಾವಿ): ಪಕ್ಕದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಬಿಳ್ಳೂರ ಗ್ರಾಮದ ಹೊರವಲಯದಲ್ಲಿ ತಾಯಿ ಮತ್ತು ಮೂರು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ. ಮೃತ ಮಹಿಳೆ ಬೆಳಗಾವಿ ಮೂಲದವರಾಗಿದ್ದು, ಮಹಾರಾಷ್ಟ್ರ ವ್ಯಕ್ತಿಯನ್ನು ಮದುವೆಯಾಗಿದ್ದರು. ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ: ಮೃತಪಟ್ಟವರನ್ನು ತಾಯಿ ಸುನೀತಾ ತುಕಾರಾಮ ಮಾಳಿ (27), ಮಕ್ಕಳಾದ ಅಮೃತಾ ತುಕಾರಾಮ ಮಾಳಿ (13), ಅಂಕಿತ ತುಕಾರಾಮ ಮಾಳಿ (10) ಮತ್ತು …

Read More »

ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ

ಅಥಣಿ: ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ ನೆರವೇರಿಸಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಕೋತಿಗೆ ಗ್ರಾಮಸ್ಥರು ಮನುಷ್ಯರಿಗೆ ಮಾಡುವ ಅಂತ್ಯಸಂಸ್ಕಾರ ಕ್ರಿಯೆ ಮಾಡಿದ್ದಾರೆ. ಮೃತ ಮಂಗನ ದೇಹವನ್ನು ಲಕ್ಷ್ಮಿ ದೇವಸ್ಥಾನದ ಎದುರು ಇಟ್ಟು ಸತತ 5ಗಂಟೆಗಳ ಕಾಲ ಭಜನೆ ಮಾಡಿದ್ದಾರೆ. ನಂತರ ಮೆರವಣಿಗೆ ಮಾಡಿ ಮಾಡಿ ಉತ್ತರ ಕ್ರಿಯೆ ನೆರವೆರಿಸಿದ್ದಾರೆ. ಈ ಕಾರ್ಯವನ್ನು ಹಿಂದೂ ಮುಸ್ಲಿಮರು …

Read More »

ಗೋಕಾಕ್​​​ ಶಾಸಕರಿಗೆ, ಸವದಿಗೆ ಸಚಿವ ಸಂಪುಟ ಸ್ಥಾನಮಾನ ಕೊಡಲಿ: ಮಹೇಶ್​ ಕುಮಠಳ್ಳಿ

ಅಥಣಿ: ಗೋಕಾಕ್​​ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಲಿ. ನನಗೆ ಸಚಿವ ಸ್ಥಾನಕ್ಕಿಂತಲೂ ನನ್ನ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ. ನನಗೆ ಸಚಿವ ಸಂಪುಟದಲ್ಲಿ ಸ್ಥಾನ ಬೇಡ ಎಂದು ಶಾಸಕ ಮಹೇಶ್ ಕುಮಠಳ್ಳಿ ಅವರು ಹೇಳಿಕೆ ನೀಡಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆ ಉದ್ಘಾಟನೆ ನೆರವೇರಿಸಿ ಮಾತನಾಡಿ, ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ. …

Read More »

ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಅವರನ್ನ ನಾನೂ ಸ್ವಾಗತಿಸುತ್ತೇನೆ ಎಂದ ಲಕ್ಷ್ಮಣ್ ಸವದಿ

ಅಥಣಿ: ರಾಜ್ಯಕ್ಕೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ಆಗಮಿಸಿದ್ದು, ಅವರಿಗೆ ನಾನು ಸ್ವಾಗತ ಕೋರುತ್ತೇನೆ, ಅವರು ಕಾಲು ಇಟ್ಟಲೆಲ್ಲ ಬಿಜೆಪಿಯ ಕಮಲ ಅರಳುತ್ತದೆ. ಹಾಗಾಗಿ ನಾನು ಅವರನ್ನ ಸ್ವಾಗತ ಬಯಸುತ್ತೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಲಕ್ಷ್ಮಣ್ ಸವದಿ ಕೈ ಮುಖಂಡರ ವಿರುದ್ಧ ವ್ಯಂಗ್ಯವಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ನೂತನವಾಗಿ ಪೊಲೀಸ್ ಠಾಣಾ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸದ್ಯ …

Read More »

200 ವರ್ಷ ಇತಿಹಾಸ ಇರುವ ದೇವನಾಥ ಮಂದಿರ ಕಾಮಗಾರಿ ಶಾಸಕರಿಂದ ಪೂಜೆ

ಅಥಣಿ ಮತಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಮಟಳ್ಳಿಯವರಿಂದ ಹಲ್ಯಾಳ ಗ್ರಾಮದಲ್ಲಿ ಸುಮಾರು 12ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ದೇವನಾಥ ದೇವಸ್ಥಾನ ಕಾಮಗಾರಿ ಭೂಮಿ ಪೂಜೆ ಹಾಗೂ 5 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ಹನುಮಾನ ದೇವಸ್ಥಾನದ ಸಮುದಾಯ ಭವನಗಳ ಕಾಮಗಾರಿ ಪೂಜೆಯನ್ನು ನೆರವೇರಿಸಲಾಯಿತು..   ಈ ಸಂದರ್ಭದಲ್ಲಿ ಶ್ರೀ ಮ. ನಿ ಪ್ರ ಗುರುಸಿದ್ದೆಶ್ವರ ಮಹಾಸ್ವಾಮಿಗಳು …

Read More »

ಅಥಣಿಯಲ್ಲಿ ಭಾರಿ ಮಳೆಗೆ ಕೊಚ್ಚಿಹೋದ ಸೇತುವೆ

ಅಥಣಿ(ಬೆಳಗಾವಿ): ಕಳೆದ ಎರಡು ದಿನದ ಹಿಂದೆ ಸುರಿದ ಧಾರಾಕಾರ ಮಳೆಗೆ ತೇಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ‌ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು, ಶಾಲೆ ಮಕ್ಕಳು ಜೀವ ಪಣಕ್ಕಿಟ್ಟು ಹಳ್ಳ ದಾಟುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೇಲಸಂಗ- ಬಿಜ್ಜರಗಿ ರಸ್ತೆಯ ಡೋಣಿ ಹಳ್ಳಕ್ಕೆ ನಿರ್ಮಿಸಿದ ಸೇತುವೆ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು, ತೋಟದ ಕೆಲಸಕ್ಕೆ ಹೋದ ರೈತರು ಹಾಗೂ ಶಾಲೆ ಮಕ್ಕಳು ಹಗ್ಗ ಹಿಡಿದು ಹಳ್ಳ …

Read More »