ಕಿತ್ತೂರು: ಪಟ್ಟಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂಲ ಸೌಕರ್ಯ ಕೊರತೆ ಇದ್ದು, ಸರ್ಕಾರದಿಂದ ಬರುವ ಅನುದಾನ ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸಿ, ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಕೆಲ ಬೋಧಕರು ವಿದ್ಯಾರ್ಥಿನಿಯರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡುತ್ತಿದ್ದಾರೆ. ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಪ್ರಾಂಶುಪಾಲರು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು. ಪ್ರತಿಭಟನಾ ನಡೆದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬಾಬಾಸಾಹೇಬ ಪಾಟೀಲ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಶೀಘ್ರ ಸಿಡಿಪಿ ಸಭೆ …
Read More »ನಾರಿ ಶಕ್ತಿಗೆ ನಮನ: ಕಿತ್ತೂರಿನಲ್ಲಿ ಮಹಿಳಾ ದಿನಾಚರಣೆಯ ಸಂಭ್ರಮ!
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ರೊಹಿಣಿ ಬಾ. ಪಾಟೀಲ ಮತ್ತು ಕಿತ್ತೂರ ರಾಣಿ ಚೆನ್ನಮ್ಮ ಮಹಿಳಾ ಅಭಿಮಾನಿ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ವಿಶೇಷ ಸಂದರ್ಭದಲ್ಲಿ ನನ್ನ ಧರ್ಮಪತ್ನಿಯವರಾದ ಶ್ರೀಮತಿ Shruti Vaidya ರವರು ಭಾಗವಹಿಸಿ, ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿ. ಮಹಿಳಾ ಸಬಲೀಕರಣ ಮತ್ತು ಸಮಾಜದಲ್ಲಿ ಮಹಿಳೆಯರ ಪಾತ್ರದ ಕುರಿತು ಅವರು ತಮ್ಮ ವಿಚಾರಗಳನ್ನು ಹಂಚಿಕೊಂಡರು. ಧೈರ್ಯ ಮತ್ತು …
Read More »ಕಿತ್ತೂರು ಹಿರೇನಂದಿಹಳ್ಳಿ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು: ಪತ್ನಿ–ಪುತ್ರ ಸೇರಿ ನಾಲ್ವರ ಬಂಧನ
ಬೆಳಗಾವಿ, ಫೆಬ್ರವರಿ 26: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದ ಅಮಾನುಷ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆಗೈದ ಪ್ರಕರಣದಲ್ಲಿ ಮೃತನ ಪತ್ನಿ ಹಾಗೂ ಪುತ್ರನೇ ಸಂಚಿನಲ್ಲಿ ಭಾಗಿಯಾಗಿದ್ದರೆಂಬ ಅಂಶ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಫೆಬ್ರವರಿ 20ರಂದು ಹಿರೇನಂದಿಹಳ್ಳಿ ಹೊರವಲಯದ ಜಮೀನಿನಲ್ಲಿ ಶವ ಪತ್ತೆಯಾಗಿತ್ತು. ಮೃತರನ್ನು ಹಿರೇನಂದಿಹಳ್ಳಿ ಗ್ರಾಮದ ಕಲ್ಮೇಶ್ …
Read More »ಕಿತ್ತೂರು ಕೈ ಶಾಸಕರಿಂದ ಬಿಜೆಪಿಗರ ಅವಹೇಳನ ಆರೋಪ ಶಾಸಕ ಬಾಬಾಸಾಹೇಬ್ ಪಾಟೀಲ್ ಗೃಹ ಕಚೇರಿಗೆ ಮುತ್ತಿಗೆ?!!!
ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಬಿಜೆಪಿ ಕಾರ್ಯಕರ್ತರನ್ನು ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಇಂದು ಕೈ ಶಾಸಕರ ಗೃಹ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಕೈ ಶಾಸಕರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು. ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಬಿಜೆಪಿ ಕಾರ್ಯಕರ್ತರನ್ನು ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಇಂದು ಶಾಸಕರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಶಾಸಕ …
Read More »ಭೀಕರ ಅಪಘಾತ…ಹಿಂಬದಿಯಿಂದ ಗುದ್ದಿದ ಬಸ್…ಲಾರಿ ಪಲ್ಟಿ!!!
ಭೀಕರ ಅಪಘಾತ…ಹಿಂಬದಿಯಿಂದ ಗುದ್ದಿದ ಬಸ್…ಲಾರಿ ಪಲ್ಟಿ!!! ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ದುರ್ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ವೇಗದಲ್ಲಿದ್ದ ಖಾಸಗಿ ಬಸ್ಸೊಂದು ಹಿಂಬದಿಯಿಂದ ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ, ಟ್ರಕ್ ಪಲ್ಟಿಯಾಗಿದೆ. ಘಟನೆಯಲ್ಲಿ ಟ್ರಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ಎಸ್ ಎಸ್ ಟ್ರಾವೇಲ್ಸ್ ಬಸ್ ಹಾಗೂ ಟ್ರಕ್ ನಡುವೆ …
Read More »ನಾಳೆ ಕರೆ ನೀಡಿದ್ದ ಕಿತ್ತೂರು ಬಂದ್ ವಾಪಸ್…!!!! ಕೇವಲ ಮನವಿಗೆ ಸೀಮಿತವಾದ ಪ್ರತಿಭಟನೆ.
ಕಿತ್ತೂರು: ಬಜೆಟನಲ್ಲಿ ಕಿತ್ತೂರು ಪ್ರಾಧಿಕಾರಕ್ಕೆ ಅನುದಾನವನ್ನು ನೀಡದ ಹಿನ್ನೆಲೆ ನಾಳೆ ಕರೆ ನೀಡಿದ್ದ ಕಿತ್ತೂರು ಬಂದ್’ನ್ನು ವಾಪಸ್ಸು ಪಡೆಯಲಾಗಿದೆ. ಇಂದು ಕೇವಲ ಪ್ರತಿಭಟನಾ ರ್ಯಾಲಿಯ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕೆಲವು ಪ್ರಾಧಿಕಾರಗಳಿಗೆ ಅನುದಾನ ನೀಡಿದ ಸರ್ಕಾರ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನೇ ಕಡೆಗಣಿಸಿದೆ. ಈ ತಾರತಮ್ಯ ಖಂಡಿಸಿ ಮಾರ್ಚ್ 18ರಂದು ಚನ್ನಮ್ಮನ ಕಿತ್ತೂರು ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲು, ಕಿತ್ತೂರು ರಾಜಗುರು …
Read More »ಪೊಲೀಸರು ಸ್ಥಳ ಮಹಜರಿಗೂ ಮೊದಲೇ ಕಾರನ್ನು ಬೆಳಗಾವಿ ಹೊರ ವಲಯದಲ್ಲಿರುವ ಶೋರೂಮ್ಗೆ ಶಿಫ್ಟ್ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಬೆಳಗಾವಿ, ಸಚಿವೆ ಲಕ್ಷ್ಮೀ ಹೆಬ್ಬಾಕ್ಳರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಇಂದು (ಜನವರಿ 14) ಸಂಕ್ರಾಂತಿ ಹಬ್ಬದ ದಿನವೇ ಬೆಳಗಾವಿಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಾಯಿಗಳು ಅಡ್ಡಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಹೆಬ್ಬಾಳ್ಕರ್ ಗಾಯಗಳಾಗಿವೆ. ಇನ್ನು ಈ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸರ್ಕಾರಿ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಗನ್ಮ್ಯಾನ್ ಈರಪ್ಪ ಹುಣಶಿಕಟ್ಟಿ ದೂರಿನ ಮೇರೆಗೆ …
Read More »ಜನಾಕರ್ಷಿಸಿದ ಚನ್ನಮ್ಮನ ಕಿತ್ತೂರು ದೋಣಿ ವಿಹಾರ
ಕಿತ್ತೂರು: ಕಿತ್ತೂರು ಉತ್ಸವದ ಅಂಗವಾಗಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಾಹಸ ಅಕಾಡೆಮಿ ಆಶ್ರಯದಲ್ಲಿ ತುಂಬುಗೆರೆಯಲ್ಲಿ ಬುಧವಾರ ನಡೆದ ದೋಣಿ ವಿಹಾರ ಜನಾಕರ್ಷಿಸಿತು. ಸುಡು ಬಿಸಿಲಿನ ನಡುವೆ ಕೆರೆಯತ್ತ ಬಂದ ಜನ ತುಂಬುಕೆರೆಯ ದೋಣಿ ವಿಹಾರದಲ್ಲಿ ಕೆಲಹೊತ್ತು ನಲಿದರು. ದಶಕಗಳಿಂದ ನೀರು ಕಾಣದ ಐತಿಹಾಸಿಕ ಕೆರೆ ಈ ವರ್ಷ ಸುರಿದ ಭಾರಿ ಮಳೆಯಿಂದ ಮೈ ತುಂಬಿ ಹರಿಯುತ್ತಿರುವುದನ್ನು ಕಂಡು ಸಂಭ್ರಮಿಸಿದರು. ಬ್ರಿಟಿಷರ ವಿರುದ್ಧ …
Read More »ಕಿತ್ತೂರು ವಿಜಯೋತ್ಸವ: ಕಲಾವಿದರಿಗೆ ಮನಸೋತ ಜನಸಾಗರ
ಚನ್ನಮ್ಮನ ಕಿತ್ತೂರು: ಕಿತ್ತೂರ ನಾಡು ಹತ್ತೂರು ಕಲಾವಿದರನ್ನು ಬುಧವಾರ ಚುಂಬಕಶಕ್ತಿಯಂತೆ ಸೆಳೆಯಿತು. ಜನಪದರು, ಸಂಗೀತಗಾರರು, ನೃತ್ಯಪಟುಗಳು ಸೇರಿ ಕಲಾವಿದರ ದಂಡೇ ಕ್ರಾಂತಿಯ ನೆಲದತ್ತ ಹರಿದುಬಂದಿತ್ತು. ಬೆಳಿಗ್ಗೆ ಆರಂಭಗೊಂಡ ಜಾನಪದ ಕಲಾವಾಹಿನಿ ಮೆರವಣಿಗೆ ಮಧ್ಯಾಹ್ನದವರೆಗೂ ಸಾಗಿತು. ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದ ಈ ಮೆರವಣಿಗೆ ಮೇಲೂ ಕಾರ್ಮೋಡ ಕವಿದಿತ್ತು. ಆದರೆ, ವರುಣ ಬಿಡುವು ಕೊಟ್ಟಿದ್ದರಿಂದ ಮೆರವಣಿಗೆ ರಂಗೇರಿತು. ಉತ್ಸವದ ಹಿನ್ನೆಲೆಯಲ್ಲಿ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಗಾಗಿ ಶಾಲಾ …
Read More »ಗೋಡೆಗಳಲ್ಲಿ ಅರಳಿದ ಕಲಾಕೃತಿ
ಕಿತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಹಾಗೂ ಸೋಮವಾರ ಪೇಟೆಯ ಹೃದಯ ಭಾಗದಲ್ಲಿರುವ ರಾಣಿ ಚನ್ನಮ್ಮನ ಪುತ್ಥಳಿಗೆ ಹೊಸಕಳೆ ಬಂದಿದ್ದು, ಹೆದ್ದಾರಿ ಕೆಳ ಸೇತುವೆಯ ಪಕ್ಕದ ಗೋಡೆಗಳಲ್ಲಿ ರಾಣಿ ಚನ್ನಮ್ಮ ಹಾಗೂ ಇತಿಹಾಸ ಬಿಂಬಿಸುವ ಕೆಲವು ಸನ್ನಿವೇಶ, ಚಿತ್ರಗಳು ಜೀವ ಪಡೆದಿದ್ದು, ಕಿತ್ತೂರು ಕಳೆಗಟ್ಟಿದೆ. ಇಲ್ಲಿನ ಕೋಟೆ ಆವರಣದಲ್ಲಿ ಅ. 23ರಿಂದ 25 ರ ವರೆಗೆ ನಡೆಯಲಿರುವ ಚನ್ನಮ್ಮನ ಕಿತ್ತೂರು ಉತ್ಸವದ ಅಂಗವಾಗಿ ಕಲಾಕೃತಿಗಳು ಜೀವತಳೆದಿವೆ. ಅಶ್ವಾರೂಢ ಚನ್ನಮ್ಮನ ಪ್ರತಿಮೆಗೆ …
Read More »
Laxmi News 24×7