ಬೆಳಗಾವಿ: ‘ಚನ್ನಮ್ಮನ ಕಿತ್ತೂರಿನಲ್ಲಿ ಅ.23ರಿಂದ 25ರವರೆಗೆ ನಡೆಯಲಿರುವ ಉತ್ಸವವನ್ನು ಸಂಭ್ರಮದಿಂದ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. 23ರಂದು ಸಂಜೆ 7ಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ‘ದ್ವಿಶತಮಾನೋತ್ಸವದ ಕಾರಣಕ್ಕಾಗಿ ಈ ಬಾರಿ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 5 ಕೋಟಿ ಅನುದಾನ ಘೋಷಿಸಿದೆ. ಒಂದೆರಡು ದಿನಗಲ್ಲಿ ಸಂಪೂರ್ಣ ಅನುದಾನ ಬಿಡುಗಡೆಯಾಗಲಿದೆ’ ಎಂದು ಅವರು ನಗರದಲ್ಲಿ ಶನಿವಾರ …
Read More »ನಿಯಂತ್ರಣಕ್ಕೆ ಬಾರದ ಅಕ್ರಮ ಚಟುವಟಿಕೆ
ಚನ್ನಮ್ಮನ ಕಿತ್ತೂರು: ‘ಜೂಜಾಟ, ಮಟ್ಕಾ, ಪಡ್ಡೆ ಹುಡುಗರ ಕಿಡಿಗೇಡಿತನ ಹಾಗೂ ಮನೆ ಕಳ್ಳತನ ನಿಯಂತ್ರಿಸುವಲ್ಲಿ ಯಶಸ್ಸು ಕಾಣದ ಕಿತ್ತೂರು ಪೊಲೀಸರ ವರ್ತನೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮಡುಗಟ್ಟಿದೆ’ ಎಂಬ ಆರೋಪಗಳು ಕೇಳಿಬರುತ್ತಿವೆ. ‘ಎತ್ತರದ ಪ್ರದೇಶ, ಹೊರವಲಯದ ಹೊಲದಲ್ಲಿರುವ ಮನೆಗಳು ಇಸ್ಪೀಟ್ ಅಡ್ಡೆಗಳಾಗಿ ಪರಿವರ್ತನೆಯಾದ ವಿಷಯ ಗುಟ್ಟಾಗೇನು ಉಳಿದಿಲ್ಲ. ಹಾಡುಹಗಲೇ ಮನೆ ಕಳ್ಳತನಗಳಾಗಿವೆ. ಕೆಲವು ಪ್ರಕರಣಗಳು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ದಾಖಲಾದ ಚಿತ್ರಗಳು ಸ್ಪಷ್ಟವಾಗಿದ್ದರೂ ಅದರಲ್ಲಿರುವ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಇನ್ನೂ …
Read More »ಬಿಜೆಪಿ ಸದಸ್ಯ ಅಪಹರಣ; ಮೂವರ ಮೇಲೆ ಪ್ರಕರಣ
ಚನ್ನಮ್ಮನ ಕಿತ್ತೂರು: ಇಲ್ಲಿಯ ಪಟ್ಟಣ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಬಿಜೆಪಿ ಸದಸ್ಯ ನಾಗರಾಜ ಬಸವರಾಜ ಅಸುಂಡಿ (36) ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನ ಕಿತ್ತೂರು ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ಮೇಟ್ಯಾಲ ಗ್ರಾಮದ ಅಶೋಕ ಚನ್ನಬಸಪ್ಪ ಮಾಳಗಿ, ಚನ್ನಾಪುರದ ಬಸವರಾಜ ಶೇಖಪ್ಪ ಸಂಗೊಳ್ಳಿ ಮತ್ತು ಕಿತ್ತೂರಿನ ಸೋಮವಾರ ಪೇಟೆಯ ಸುರೇಶ ಈರಪ್ಪ ಕಡೇಮನಿ ಆರೋಪಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಾಗರಾಜ ತಂದೆ ಬಸವರಾಜ ಈ …
Read More »ಎಂ ಎಸ್ ಆಯ್ ಎಲ್ ಮದ್ಯದ ಮಳಿಗೆಯನ್ನು ಸ್ಥಳಾಂತರ ಮಾಡುವುದು ಬೇಡ:
ಚನ್ನಮ್ಮನ ಕಿತ್ತೂರು : ಪಟ್ಟಣದ ಸೋಮವಾರ ಪೇಟೆಯಲ್ಲಿರುವ ಎಂ ಎಸ್ ಆಯ್ ಎಲ್ ಮದ್ಯದ ಮಳಿಗೆಯನ್ನು ಸ್ಥಳಾಂತರ ಮಾಡುವುದು ಬೇಡ ಎಂದು ಮಂಜುನಾಥ ಅಮರಪ್ಪನವರ ಹೇಳಿದರು. ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಇವರು. ಎಂ ಎಸ್ ಆಯ್ ಎಲ್ ಮದ್ಯದ ಮಳಿಗೆ ಮುಂದೆ ಅಷ್ಟೇ ಮಹಿಳೆಯರು, ವೃದ್ಧರು ಹಾಗೂ ಮಕ್ಕಳು ಓಡಾಡುವುದಿಲ್ಲ. ಪಟ್ಟಣದ ಕೋಟೆಯ ಮುಂದೆ ಇರುವ ಮದ್ಯದ ಅಂಗಡಿ ಸೇರಿದಂತೆ ಎಲ್ಲ ಮದ್ಯದ ಅಂಗಡಿಗಳ ಮುಂದೆ ಸಾರ್ವಜನಿಕರು ಓಡಾಡುತ್ತಾರೆ. …
Read More »200 ನೇ ಕಿತ್ತೂರು ವಿಜಯೋತ್ಸವಕ್ಕೆ 40 ಕೋಟಿ ರೂ.ಅನುದಾನ
ಚನ್ನಮ್ಮನ ಕಿತ್ತೂರು: 2024 ನೇ ಸಾಲಿನ ಚನ್ನಮ್ಮನ ಕಿತ್ತೂರು ವಿಜಯೋತ್ಸವವನ್ನು ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಸೋಮವಾರ(ಆ19) ಬೆಂಗಳೂರಿನ ವಿಕಾಸ ಸೌಧದಲ್ಲಿ ಕಂದಾಯ ಸಚಿವ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು. 200ನೇ ಕಿತ್ತೂರು ವಿಜಯೋತ್ಸವದ ಉತ್ಸವಕ್ಕೆ ಚನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲು 35 ಕೋಟಿ ರೂ. ಹಾಗೂ ಉತ್ಸವಕ್ಕೆ ರೂ 5 ಕೋಟಿ …
Read More »ನಿಂಗಾಪುರ ಗ್ರಾಮಸ್ಥರಲ್ಲಿ ಹರ್ಷ ವರದಿ ಬೆನ್ನಲ್ಲೆ ಗ್ರಾಮಕ್ಕೆ ಬಂತು ಹೊಸ ಬೋಟ್
ವರದಿ ಬೆನ್ನಲ್ಲೆ ಗ್ರಾಮಕ್ಕೆ ಬಂತು ಹೊಸ ಬೋಟ್ ನಿಂಗಾಪುರ ಗ್ರಾಮಸ್ಥರಲ್ಲಿ ಹರ್ಷ *ಬೆಳಗಾವಿ:* ನಿಂಗಾಪುರ ಗ್ರಾಮಸ್ಥರು ಹೊಸ ಬೋಟ್ ಸಿಗುತ್ತಿದ್ದಂತೆಯೇ ಹರ್ಷದಿಂದ ಕುಣಿದರು. ಬೋಟ್ ವ್ಯವಸ್ಥೆ ಇಲ್ಲದೆ, ಗಾಳಿ ತುಂಬಿದ ಟ್ಯೂಬ್ ಮೇಲೆ ಶಾಲಾ ಮಕ್ಕಳು ಹಿಂಜರಿಯುತ್ತಿದ್ದ ನಂತರ, ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ, ಜಿಲ್ಲಾಡಳಿತವು ತಕ್ಷಣ ಪ್ರತಿಕ್ರಿಯಿಸಿತು. ನಿಂಗಾಪುರ ಗ್ರಾಮ, ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿರುವ ಹಿಂದುಳಿದ ಪ್ರದೇಶವಾಗಿದೆ, ಇತ್ತೀಚಿನ ಭಾರಿ ಮಳೆಯಿಂದಾಗಿ ಗ್ರಾಮಸ್ಥರು ಹುಲಿಕೆರೆಯನ್ನು ದಾಟಲು …
Read More »ಮಳೆಗಾಲದಲ್ಲಿ ‘ಟ್ಯೂಬ್ ತೆಪ್ಪ’ದಲ್ಲೇ ಶಾಲಾ ಮಕ್ಕಳ ಪಯಣ
ಕಿತ್ತೂರು: ಎರಡು ಲಾರಿ ಟ್ಯೂಬ್ ಗಳಿಗೆ ಗಾಳಿ ತುಂಬಿಸಿ ಅದರ ಮೇಲೆ ಕಟ್ಟಿಗೆಯಿಟ್ಟು, ಎರಡೂ ದಂಡೆಗೆ ನೆಡಲಾಗಿರುವ ಗೂಟಗಳಿಗೆ ಹಗ್ಗ ಕಟ್ಟಿ ಮಾಡಿರುವ ‘ಜಗ್ಗುವ ಟ್ಯೂಬ್ ತೆಪ್ಪ’ದಲ್ಲಿ ತಾಲ್ಲೂಕಿನ ಕುಲವಳ್ಳಿಯ ನಿಂಗಾಪುರ ಗ್ರಾಮಸ್ಥರು, ಶಾಲಾ ಮಕ್ಕಳು, ಮಹಿಳೆಯರು, ರೈತರಿಗೆ ಇದೇ ಸಂಚಾರದ ಜಲಮಾರ್ಗವಾಗಿದೆ. ‘ಧಾರವಾಡ ತಾಲ್ಲೂಕಿನ ಅಳ್ನಾವರ ಬಳಿಯ ಹುಲಿಕೆರೆ ಭರ್ತಿಯಾದರೆ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ನಿಂಗಾಪುರಕ್ಕೆ ಈ ಅಪಾಯಕಾರಿ ನೀರ ಮೇಲಿನ ಸಂಚಾರ ತಪ್ಪಿದ್ದಲ್ಲ’ ಎನ್ನುತ್ತಾರೆ ಗ್ರಾಮಸ್ಥರು. ‘ಅಲ್ಲದೇ, …
Read More »ಕಾರ್ ಅಡ್ಡಗಟ್ಟಿ ₹10 ಲಕ್ಷ ಕಳವು
ಕಿತ್ತೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಹಿರೇಹಳ್ಳ ಬಳಿ ಕಾರ್ ಅಡ್ಡಗಟ್ಟಿ ₹10 ಲಕ್ಷ ಕಸಿದ ಕಳ್ಳರು ಪರಾರಿಯಾಗಿದ್ದಾರೆ. ಬೆಳಗಾವಿ ಶಾಸ್ತ್ರೀನಗರದ ಹಾರ್ಡ್‌ವೇರ್ ಅಂಗಡಿ ಮಾಲೀಕ ಅಮಿತ್ ಅಶೋಕ ಪೇರಿವಾಲ ಅವರು ಶಿವಮೊಗ್ಗದ ಮಿತ್ರರಿಗೆ ₹10 ಲಕ್ಷ ಕೊಡಲು, ತಮ್ಮ ಅಂಗಡಿಯ ಕೆಲಸಗಾರ ಚಂದನಾಥ ರಾಮೇಶ್ವರ ಸಿದ್ ಹಾಗೂ ಸುನೀಲ ರಾಜಕುಮಾರ ಪ್ರಜಾಪತ್ ಅವರನ್ನು ಕಳುಹಿಸಿದ್ದರು. ಅವರು ಸಾಗುತ್ತಿದ್ದ ಕಾರ್ ಅಡ್ಡಗಟ್ಟಿದ ಕಳ್ಳರು ಹಣ ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚುವರಿ …
Read More »ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಕಲ್ಲೆದ್ದ ರಸ್ತೆಯಲ್ಲೇ ಮಕ್ಕಳ ನಡಿಗೆ!
ಚನ್ನಮ್ಮನ ಕಿತ್ತೂರು: ಕಾಲು ದಾರಿ ಮೇಲೆ ಮುಷ್ಟಿಗಾತ್ರದ ಚೂಪನೆಯ ಕಲ್ಲುಗಳು ಎದ್ದು ಕುಳಿತಿವೆ. ಸ್ಮಶಾನಕ್ಕೂ ಇದೇ ದಾರಿ ಅವಲಂಬನೆ. ಮಳೆಯಾದರೆ ಸಾಕು ಮನೆಯೊಳಗೆ ನೀರು ನುಗ್ಗಿ ಬದುಕೇ ಯಾತನಾಮಯ ಆಗುತ್ತದೆ. ಇದು ತಾಲ್ಲೂಕಿನ ಉಗರಖೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತಿಮ್ಮಾಪುರ ಗ್ರಾಮದ ಅಂಬೇಡ್ಕರ್ ಕಾಲೊನಿ ಮಕ್ಕಳು ಮತ್ತು ನಾಗರಿಕರ ಗೋಳು. ‘ಕಾಲೊನಿಯಿಂದ ಸುಮಾರು ಅರ್ಧ ಕಿ.ಮೀ ದೂರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಮಕ್ಕಳು ರಸ್ತೆ ಮೇಲೆ ಎದ್ದು …
Read More »ಸತ್ಯ ಪ್ರತಿಪಾದಕ ಸ್ವಾಮೀಜಿಗೆ ಈಗ 60ರ ಸಂಭ್ರಮ.
ಚನ್ನಮ್ಮನ ಕಿತ್ತೂರು: ‘ನಿಷ್ಟುರವಾಗಿ ಸತ್ಯ ಹೇಳುವುದು ಮತ್ತು ಸತ್ಯವನ್ನು ನಿಷ್ಟುರವಾಗಿ ಹೇಳುವುದು’ ಇದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ವ್ಯಕ್ತಿತ್ವ. ಸತ್ಯ ಪ್ರತಿಪಾದಕ ಸ್ವಾಮೀಜಿಗೆ ಈಗ 60ರ ಸಂಭ್ರಮ. ಹೆಸರಿಗೆ ತಕ್ಕಂತೆಯೇ ಅವರದು ‘ನಿಜ-ಗುಣ’. ಮೂರು ದಶಕದ ಹಿಂದೆ ಚನ್ನಮ್ಮನ ಕಿತ್ತೂರು ನಾಡಿಗೆ ಬಂದ ನಂತರ ಅವರು ಸಾಮಾಜಿಕ ಪರಿವರ್ತನೆಗೆ ಹೆಜ್ಜೆ ಇಟ್ಟರು. ಸಾಂಪ್ರದಾಯಿಕ, ಮೌಢ್ಯ ಆಚರಣೆಗಳಿಂದ ಸಮಾಜವನ್ನು ಹೊರತರಲು ಮುಂದಾದರು. ‘ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ’ …
Read More »
Laxmi News 24×7