Home / ಜಿಲ್ಲೆ / ಬೆಳಗಾವಿ / ಖಾನಾಪುರ (page 2)

ಖಾನಾಪುರ

ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ತಂಡ ಬಂಧಿಸಿದೆ.

ಖಾನಾಪುರ: ತಾಲೂಕಿನ ನಂದಗಡದಲ್ಲಿ ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ತಂಡ ಬಂಧಿಸಿದೆ. ಡೆವಿಡ್ ಫಿಗೇರ್ ಮತ್ತು ಹಸನ್ ಬೇಪಾರಿ ಬಂಧಿತರು. ಇವರಿಂದ 11 ಕೆಜಿ ಕಾಡುಕೋಣದ ಮಾಂಸ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ, ೆರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.     ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.     ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಅವರ …

Read More »

ಕಳಪೆ ಕಾಮಗಾರಿ 15 ದಿನಗಳಲ್ಲಿ ಹದಗೆಟ್ಟರಸ್ತೆ

ಖಾನಾಪುರ: ಪಟ್ಟಣದಿಂದ ಕೇವಲ ನಾಲ್ಕು ಕಿ.ಮೀ ಅಂತರದಲ್ಲಿರುವ ರಾಮಗುರವಾಡಿ ಗ್ರಾಮ ಹಲವು ಮೂಲಸೌಕರ್ಯಗಳ ಕೊರತೆಯಿಂದ ಬಡವಾಗಿದೆ. ಜಾಂಬೋಟಿ- ಜತ್ತ ರಾಜ್ಯ ಹೆದ್ದಾರಿಯಿಂದ ಉತ್ತರ ದಿಕ್ಕಿಗೆ 1 ಕಿ.ಮೀ ಅಂತರದಲ್ಲಿರುವ ಈ ಗ್ರಾಮಕ್ಕೆ ಸರಿಯಾದ ಸಂಪರ್ಕ ರಸ್ತೆಯೇ ಇಲ್ಲ. ಇದು ಇಲ್ಲಿನ ಬಹುಮುಖ್ಯ ಸಮಸ್ಯೆ. ರಸ್ತೆ ಸುಸ್ಥಿತಿಯಲ್ಲಿ ಇಲ್ಲದ ಕಾರಣ ಬಸ್‌ಗಳು ಗ್ರಾಮದೊಳಗೆ ಬರುತ್ತಿಲ್ಲ. ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತೊಂದರೆ ಅನುಭವಿಸುವುದು ತಪ್ಪಿಲ್ಲ. 2,000 ಜನಸಂಖ್ಯೆ ಹೊಂದಿರುವ ರಾಮಗುರವಾಡಿ ಗ್ರಾಮದಲ್ಲಿ ಸ್ಥಳೀಯ …

Read More »

ಖಾನಾಪುರ | ಕಾಡಾನೆ ಹಿಂಡು ದಾಳಿ: ಅಪಾರ ಬೆಳೆ ಹಾನಿ

ಖಾನಾಪುರ: ತಾಲ್ಲೂಕಿನ ಭೂರಣಕಿ ಮತ್ತು ಕರೀಕಟ್ಟಿ ಗ್ರಾಮಗಳ ಸುತ್ತಲಿನ ಕೃಷಿ ಜಮೀನುಗಳಲ್ಲಿ ಶನಿವಾರ ನಸುಕಿನಜಾವ 16 ಕಾಡಾನೆಗಳ ಹಿಂಡು ದಾಳಿ ಮಾಡಿದ್ದು, ಅಪಾರ ಪ್ರಮಾಣದ ಬೆಳೆ ತಿಂದು, ತುಳಿದು ನಾಶ ಮಾಡಿವೆ. ಇದರಿಂದ ಗ್ರಾಮಗಳಲ್ಲಿ ಆತಂಕದ ವಾತಾವರಣ ಮನೆ ಮಾಡಿದೆ.   ಶುಕ್ರವಾರ ರಾತ್ರಿಯೇ ದಾಂಡೇಲಿ ಅರಣ್ಯದಿಂದ ಬಂದ ನಾಲ್ಕು ಮರಿ ಹಾಗೂ 12 ದೊಡ್ಡ ಆನೆಗಳು ತಾವರಗಟ್ಟಿ, ಚುಂಚವಾಡ ಮಾರ್ಗವಾಗಿ ಭೂರಣಕಿ ಗ್ರಾಮದ ಕಡೆ ಬಂದವು. ಮಧ್ಯರಾತ್ರಿಯಿಂದ ಶನಿವಾರ ನಸುಕಿನಜಾವದವರೆಗೆ …

Read More »

ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭ

ನಂದಗಡ (ಖಾನಾಪುರ ತಾಲ್ಲೂಕು): ಕ್ರಾಂತಿಯ ನೆಲ, ರಕ್ತಸಿಕ್ತ ಇತಿಹಾಸಕ್ಕೆ ಸಾಕ್ಷಿಯಾಗಿ ನಿಂತ ತಾಲ್ಲೂಕಿನ ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭವಾಗಿದೆ. ಈ ಸ್ಥಳಕ್ಕೆ ಜಾಗತಿಕ ಗುರುತು ತಂದುಕೊಟ್ಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ಈಗ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.   ಹಲವು ವರ್ಷಗಳಿಂದ ನಂದಗಡ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಚನ್ನಮ್ಮನ ಕಿತ್ತೂರು, ಬೈಲಹೊಂಗಲದಲ್ಲಿ ಆದಂಥ ಅಭಿವೃದ್ಧಿ ಕಾರ್ಯಗಳನ್ನು ಇಲ್ಲಿಯೂ ಮಾಡಬೇಕು ಎಂದು ಜನ ದಶಕದಿಂದ ಹೋರಾಟ ಮಾಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಶುಕ್ರದೆಸೆ …

Read More »

ನಂದಗಡದಲ್ಲಿ ಶಾಲೆಗಳ ನೂತನ ಕೊಠಡಿಗಳ ಉದ್ಘಾಟನೆ: ಅಂಜಲಿ ನಿಂಬಾಳ್ಕರ್

ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿನ ಜೆಸಿಎಸ್ ಆವರಣದಲ್ಲಿನ ಉರ್ದು ಹೆಣ್ಣು ಮಕ್ಕಳ ಶಾಲೆಯ ಕೊಠಡಿ, ಅದರಂತೆ ಮರಾಠಿ ಶಾಲೆಯ ನೂತನ ಕೊಠಡಿಯ ಉದ್ಘಾಟನೆಯನ್ನು ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ನೆರವೇರಿಸುವರು. ಈ ಸಂದರ್ಭದಲ್ಲಿ ಉರ್ದು ಶಾಲೆಯ ವಿದ್ಯಾರ್ಥಿಗಳೊಂದಿಗೆ,ದುವಾ ಅದರಂತೆ ಮರಾಠಿ ಶಾಲೆಯ ಮಕ್ಕಳೊಂದಿಗೆ ಪೂಜೆ ಸಲ್ಲಿಸಿ ಮಕ್ಕಳಲ್ಲಿ ಸರಳತೆಯಿಂದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಶಿಕ್ಷಕರಿಂದ ಶಾಸಕಿ ಅಂಜಲಿ ಅವರನ್ನು …

Read More »

ರೈತರ ಆಕ್ರೋಶಕ್ಕೆ ಕಾರಣವಾಗಿದೆ ಲೈಲಾ ಶುಗರ್ಸ ಕಾರ್ಖಾನೆ

ಖಾನಾಪುರದ ಲೈಲಾ ಶುಗರ್ಸ್ ಕಾರ್ಖಾನೆಯಲ್ಲಿ ಕಬ್ಬು ಪೂರೈಕೆ ಮಾಡಿದ ರೈತರು ಸಕ್ಕರೆ ಪಡೆಯಲು ಪರದಾಡಿದ ಘಟನೆ ನಡೆದಿದೆ. ಹೌದು ಮಹಾಲಕ್ಷ್ಮೀ ಗ್ರುಪ್ ಸಂಚಾಲಿತ ಲೈಲಾ ಶುಗರ್ಸ್ ಕಾರ್ಖಾನೆಯಲ್ಲಿ ಕಳೆದ ದಿನಾಂಕ 14ರಿಂದ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಪ್ರತಿ ಟನ್ 25 ರೂಪಾಯಿ ದರದಲ್ಲಿ ಸಕ್ಕರೆ ಪಡೆದುಕೊಳ್ಳುವ ವ್ಯವಸ್ಥೆ ಮಾಡಿಕೊಡಲಾಗಿತ್ತು. ಆದರೆ ತಾಲೂಕಿನ ಗಡಿಭಾಗ ಸೇರಿದಂತೆ ತಾಲೂಕಿನ ಬೇರೆ ಕಡೆಯಿಂದ ಬಂದು ತಮ್ಮ ಸ್ಲೀಪ್ ತೋರಿಸಿ ಆಧಾರ್ ಕಾರ್ಡ್ …

Read More »

ಬಿಜೆಪಿ ವಿರುದ್ಧ ಖಾನಾಪುರದಲ್ಲಿ ದಲಿತರ ಪ್ರತಿಭಟನೆ

ಖಾನಾಪೂರದಲ್ಲಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಸತೀಶ ಜಾರಕಿಹೊಳಿ ಅವರ ವಿರುದ್ಧ ಮಾಡಿದ ಪ್ರತಿಭಟನೆ ಖಂಡಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಲಾಯಿತು. ದಿನಾಂಕ ೧೧ ರಂದು ಖಾನಾಪೂರ ತಾಲೂಕಿನ ಬಿಜೆಪಿ ಸಂಘ ಪರಿವಾರದವರು ಎಲ್ಲ ಹಿಂದೂ ಪರ ಸಂಘಟನೆಗಳು ಒಂದಾಗಿ ಖಾನಾಪೂರ ಪಟ್ಟಣದ ಶಿವಸ್ಮಾರಕದ ಎದುರು ಸತೀಶ್ ಅಣ್ಣಾ ಜಾರಕಿಹೊಳಿಯವರ ವಿರುದ್ಧ ಅವರ ಪ್ರತಿಕೃತಿಯನ್ನು ದಹಿಸಿ ಅವರ ಭಾವಚಿತ್ರಕ್ಕೆ ಅವಮಾನ ಮಾಡೋವ ಮೂಲಕ ಇಡೀ ದಲಿತ ಸಮಾಜಕ್ಕೆ ಧಕ್ಕೆ …

Read More »

ವಿದ್ಯುತ್‌ ತಂತಿ ತುಳಿದು ಸುಟ್ಟು ಕರಕಲಾದ ವ್ಯಕ್ತಿ

ಖಾನಾಪುರ: ಕಳೆದ 26 ದಿನಗಳ ಹಿಂದೆ ಮೇವು ತರಲು ಹೊಲಕ್ಕೆ ತೆರಳಿದ್ದ ತಾಲ್ಲೂಕಿನ ಲಕ್ಕೇಬೈಲ ಗ್ರಾಮದ ರಾಮಚಂದ್ರ ಅಂಧಾರೆ (36) ಅವರ ಅಸ್ತಿಪಂಜರ ಗುರುವಾರ ಪತ್ತೆಯಾಗಿದೆ. ಪೊಲೀಸರು ‘ಹೆಸ್ಕಾಂ’ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.   ಹೊಲದಲ್ಲಿ ಹರಿದುಬಿದ್ದ ವಿದ್ಯುತ್‌ ತಂತಿ ಸ್ಪರ್ಶದಿಂದಾಗಿ ಈ ವ್ಯಕ್ತಿ ಮೃತಪಟ್ಟಿದ್ದಾರೆ. ವಿದ್ಯುತ್‌ ಪ್ರವಹಿಸಿದ ಕಾರಣ ಇಡೀ ದೇಹ ಸುಟ್ಟು ಕರಕಲಾಗಿದೆ. ದೇಹದ ಮೂಳೆಗಳು ಹಾಗೂ ತಲೆಬುರುಡೆ ಪ್ರತ್ಯೇಕವಾಗಿ ಸಿಕ್ಕಿವೆ. ಗ್ರಾಮದಿಂದ ದೂರದಲ್ಲಿ ಕಬ್ಬಿನ …

Read More »

ಖಾನಾಪುರ ತಾಲೂಕಿನಲ್ಲಿ ಕಳ್ಳರ ಪತ್ತೆ ಹಚ್ಚಿ: ಎಸ್‍ಪಿಗೆ ಮನವಿ

ಖಾನಾಪೂರ ತಾಲೂಕಿನಲ್ಲಿ ಕಳ್ಳತನದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹೀಗಾಗಿ ಕಳ್ಳರನ್ನು ಪತ್ತೆ ಹಚ್ಚಿ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡೆ ಧನಶ್ರೀ ಸರ್‍ದೇಸಾಯಿ ಹೌದು ಖಾನಾಪೂರ ತಾಲೂಕಿನಲ್ಲಿ ಕಳೆದ ಆರು ತಿಂಗಳಿನಿಂದ ಕಳ್ಳತನದ ಪ್ರಕರಣಗಳು ಹೆಚ್ಚುಗಿವೆ. ಇದರಲ್ಲಿ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಇನ್ನು ಅನರಕ್ಷಸ್ಥರ ಜನರು, ರೈತರು ತಮ್ಮ ಮನೆಗಳಲ್ಲಿ ನಡೆದ ಕಳ್ಳತನಕ್ಕೆ ಸಂಬಂಧ ಪ್ರಕರಣಗಳನ್ನು ದಾಖಲಿಸಿಲ್ಲ. ಹೀಗಾಗಿ ತಕ್ಷಣ ಇದರ ಬಗ್ಗೆ ಸೂಕ್ತ ಕ್ರಮ …

Read More »

ಉಚಿತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಮಾಡಿದರು..

ಇಂದು ಸನ್ಮಾನ್ಯ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ರವರು ಖಾನಾಪೂರ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಡಾ ಅಂಜಲಿತಾಯಿ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಮಾಡಿದರು.. ತಾಲೂಕಿನ _ಮುಗಳಿಹಾಳ್_ ಗ್ರಾಮದ ಪ್ರೌಢಶಾಲೆ ‌ಹಾಗೂ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ್ಯ ಶಾಸಕರು ಸ್ವತಃ ಹೋಗಿ ಭವಿಷ್ಯದ ಭಾರತದ ಬೆಳಕು ಮುದ್ದು ವಿದ್ಯಾರ್ಥಿಗಳಿಗೆ ಡಾ ಅಂಜಲಿತಾಯಿ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ …

Read More »