Breaking News
Home / ಜಿಲ್ಲೆ / ಬೆಳಗಾವಿ / ಖಾನಾಪುರ (page 3)

ಖಾನಾಪುರ

ಖಾನಾಪುರ ತಾಲೂಕಿನಲ್ಲಿ ರಸ್ತೆ ಮೇಲೆ ಬಿದ್ದ ಮರ: ತೆರವುಗೊಳಿಸದ ಅಧಿಕಾರಿಗಳ ನಿರ್ಲಕ್ಷ

ಖಾನಾಪುರ ತಾಲೂಕಿನ ಕಡತನ ಬಾಗೇವಾಡಿಯಿಂದ ಬೇಕವಾqಗೆÀ ಹೋಗುವ ರಸ್ತೆ ಮೇಲೆ ಪಕ್ಕದ ಗಿಡ ಮರಗಳು ಬಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅರಣ್ಯ ಇಲಾಖೆಯ ಈ ನಿರ್ಲಕ್ಷ್ಯ ಧೋರಣೆ ಹಾಗೂ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.ಹೌದು ಜೂನ್ ತಿಂಗಳಿನಿಂದ ಅಗಸ್ಟ್ ತಿಂಗಳವರೆಗೆ ಅತಿ ಹೆಚ್ಚು ಮಳೆಗಾಲದ ದಿನಗಳು, ಈ ದಿನಗಳಲ್ಲಿ ರಸ್ತೆ ಪಕ್ಕದಲ್ಲಿರುವ ಮರಗಳು ರಸ್ತೆಯ ಮೇಲೆ ಬಿದ್ದು ಸಾರ್ವಜನಿಕರಿಗೆ ತೊಂದರೆಗಳಾಗುವುದು ಜಾಸ್ತಿ. ಆದರೆ ಈ ರೀತಿ ಆಗಬಹುದಾದ …

Read More »

ನಿರಂತರ ಮಳೆಖಾನಾಪುರ ತಾಲೂಕಿನ ಪ್ರಾಥಮಿಕ ಶಾಲೆಯ ಗೋಡೆಯೂ ತೇವಗೊಂಡು ಕುಸಿತ

ಬೆಳಗಾವಿ: ಕಳೆದೊಂದು ವಾರದಿಂದ ಕುಂದಾನಗರಿಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿರುವ ಖಾನಾಪುರ ತಾಲೂಕಿನ ಗುರ್ಲಗಂಜಿ ಗ್ರಾಮದ ಶಾಲಾ ಕೊಠಡಿಯೊಂದು ಕುಸಿದು ಬಿದ್ದಿದೆ. ಇನ್ನೊಂದೆಡೆ, ಮುಡೇವಾಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆಯೂ ತೇವಗೊಂಡು ಕುಸಿತವಾಗಿದೆ. ಶಾಲೆಗೆ ರಜೆ ಇದ್ದ ಕಾರಣ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಖಾನಾಪೂರ ತಾಲೂಕಿನಲ್ಲಿ ಎರಡು ದಿನಗಳ ಅಂತರದಲ್ಲಿ ಎರಡು ಶಾಲಾ ಗೋಡೆಗಳು ಮಳೆ ಅಬ್ಬರಕ್ಕೆ ಹಾನಿಯಾಗಿದ್ದು, ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ …

Read More »

ಕೆವಿಜಿ ಬ್ಯಾಂಕ್ ಶಟರ್ ಮುರಿದು ಒಳ ನುಗ್ಗಿದ್ದ ಕಳ್ಳರು ಲಾಕರ್ ಮುರಿಯಲು ಪ್ರಯತ್ನಿ

ಹೌದು ಖಾನಾಪೂರ ತಾಲೂಕಿನ ಜಾಂಬೋಟಿ ಗ್ರಾಮದ ಕೆವಿಜಿ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನಿಸಲಾಗಿದೆ ಮೊದಲನೇಯ ಶಟರ್ ಮುರಿದು ಒಳ ನುಗ್ಗಿದ್ದ ಕಳ್ಳರು ಲಾಕರ್ ಮುರಿಯಲು ಪ್ರಯತ್ನಿಸಿದಾರೆ , ಆದರೆ ಸೈರನ್ ಧ್ವನಿ ಕೂಗಲಾರಂಭಿಸಿದ್ದು, ಅದರಿಂದ ವಿಚಲಿತರಾದ ಕಳ್ಳರು ಪರಾರಿಯಾಗಿದ್ದಾರೆ,ಈ ಘಟನೆ ಬೆಳಕಿಗೆ ಜಾವ ನಾಲ್ಕು ಗಂಟೆಗೆ ನಡೆದಿದ್ದು ಈ ಸಂದರ್ಭದಲ್ಲಿ ಕೆಲವು ಗ್ರಾಮಸ್ಥರು ಕೂಡಾ ಎಚ್ಚರ ಇದ್ದರಿಂದ ಕೂಡಲೇ ಬ್ಯಾಂಕ್ ನಂತ ದೌಡಾಯಿಸಿದ್ದಾರೆ , ತದನಂತರದಲ್ಲಿ ಈ ವಿಷಯ ಖಾನಾಪೂರ ಪೋಲಿಸ್ …

Read More »

ಖಾನಾಪುರದಲ್ಲಿ ಉತ್ತಮ ವರ್ಷಧಾರೆ

ಖಾನಾಪುರ: ಪಟ್ಟಣ ಸೇರಿದಂತೆ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಉತ್ತಮ ಪ್ರಮಾಣದ ಮಳೆಯಾಗಿದೆ. ಸೋಮವಾರ ಇಡೀ ದಿನ ತಾಲ್ಲೂಕಿನ ದೇವಲತ್ತಿ, ಪಾರಿಶ್ವಾಡ, ನಂದಗಡ, ಬೀಡಿ, ಹಲಸಿ, ಲೋಂಡಾ, ಕಕ್ಕೇರಿ, ಜಾಂಬೋಟಿ, ಕಣಕುಂಬಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆ ಸುರಿದಿದೆ.   ಕರ್ನಾಟಕ-ಗೋವಾ ಗಡಿಯ ಘಟ್ಟ ಪ್ರದೇಶದಲ್ಲಿ ಮಳೆ ಸತತವಾಗಿ ಸುರಿಯುತ್ತಿದೆ. ಕಣಕುಂಬಿಯಲ್ಲಿ 4 ಸೆಂ.ಮೀ, ಲೋಂಡಾದಲ್ಲಿ 3.8 ಸೆಂ.ಮೀ, ಜಾಂಬೋಟಿ ಮತ್ತು ಕಕ್ಕೇರಿಯಲ್ಲಿ 2 ಸೆಂ.ಮೀ, …

Read More »

ಕಾಡು ಬೆಕ್ಕು ಬೇಟೆಯಾಡಿದ್ದ ಆರೋಪಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ..

ಕಾಡು ಬೆಕ್ಕನ್ನು ಬೇಟೆಯಾಡಿದ್ದ ಖದೀಮರನ್ನು ಅರಣ್ಯ ಇಲಾಖೆ ಸಿಬ್ಬಂದಿ ಹೆಡೆಮುರಿಕಟ್ಟಿದ ಘಟನೆ ಖಾನಾಪುರ ತಾಲೂಕಿನ ಖುದ್ದಾನಪೂರ್ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಕಿತ್ತೂರು ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡು ಬೆಕ್ಕು ಬೇಟೆಯಾಡಿದ್ದ ಆರೋಪಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ.. ಖುದ್ದಾನಪೂರ ವ್ಯಾಪ್ತಿಯಲ್ಲಿ ಬೇಟೆಯಾಡಿ ಬೆಳವಡಿಯ ಹರಿಜನಕೆರೆಯ ಮನೆಯಲ್ಲಿ ಇದನ್ನು ಇಟ್ಟಿದ್ದುರು. ಅಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಬೇಟೆಯಾಡಿದ ಕಾಡು ಬೆಕ್ಕಿನ ಮಾಂಸ ಸೇರಿದಂತೆ ಬೇಟೆಗೆ ಬೆಳೆಸಿದ ದಾರದ ಬೆಲೆ, 3 …

Read More »

ಆ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿದ ಭೀಮ ವಾದ

ಖಾನಾಪುರ ತಾಲೂಕಿನ ಚಿಕ್ಕ ಮುನವಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ದಲಿತ ಕುಟುಂಬಗಳಿಗೆ ನಿಷೇಧಿಸಲಾಗಿತ್ತು. ಇದೀಗ ಈ ದಲಿತ ಕುಟುಂಬಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮ ವಾದ) ಜಿಲ್ಲಾ ಘಟಕದ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. ಹೌದು ಚಿಕ್ಕಮುನವಳ್ಳಿ ಗ್ರಾಮದಲ್ಲಿ ಇತ್ತಿಚಿಗೆ ಗ್ರಾಮದೇವಿಗೆ ಉಡಿ ತುಂಬುವ ಕಾರ್ಯಕ್ರಮವಿತ್ತು. ಈ ವೇಳೆ ದಲಿತರಿಗೆ ದೇವಸ್ಥಾನಗದ ಒಳಗೆ ಪ್ರವೇಶ ಇಲ್ಲ ಎಂದು ಕಮೀಟಿ ಅವರು ಹೇಳಿದ್ದರು. ಈ ವಿಚಾರ ಇಡೀ ರಾಜ್ಯದಲ್ಲಿಯೇ ತೀವ್ರ …

Read More »

ಸಹಕಾರಿ ಸಂಘಗಳು ರೈತರ ಜೀವನಾಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

  -ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ ಹೊಸ ಸರ್ಕಾರಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಯಮಕನಮರಡಿ: ಸಕಾಲಕ್ಕೆ ಸಾಲ ಮರುಪಾವತಿಸಿದಾಗ ಮಾತ್ರ ಸಹಕಾರಿ ಸಂಘಗಳು ಮುಂದೆ ಬರಲು ಸಾಧ್ಯ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು. ಉ. ಖಾನಾಪುರ ಗ್ರಾಮದಲ್ಲಿ ನಡೆದ ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ …

Read More »

ದಿನಕ್ಕೊಂದು ತಾಲ್ಲೂಕಿನಲ್ಲಿ ಮಿಂಚಿನ ಓಡಾಟ ನಡೆಸಿರುವ ರಮೇಶ್ ಜಾರಕಿಹೊಳಿ

ಬೆಳಗಾವಿ-ವಿಧಾನ ಪರಿಷತ್ರಿನ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರ ಪರವಾಗಿ ಮಿಂಚಿನ ಪ್ರಚಾರ ನಡೆಸಿದ್ದಾರೆ. ದಿನಕ್ಕೊಂದು ತಾಲ್ಲೂಕಿನಲ್ಲಿ ಮಿಂಚಿನ ಓಡಾಟ ನಡೆಸಿರುವ ರಮೇಶ್ ಜಾರಕಿಹೊಳಿ ನಿನ್ನೆ ಗುರುವಾರ ಖಾನಾಪೂರ ತಾಲ್ಲೂಕಿನಲ್ಲಿ ಭರ್ಜರಿ ಪ್ರಚಾರ ಮಾಡಿದ್ದಾರೆ. ಒಂದೇ ದಿನ ಖಾನಾಪೂರ ತಾಲ್ಲೂಕಿನ 50 ಕ್ಕೂ ಹೆಚ್ವು ಗ್ರಾಮ ಪಂಚಾಯತಿ ಸದಸ್ಯರನ್ನು ಭೇಟಿಯಾಗಿ ‌ಮತಯಾಚನೆ ಮಾಡುವ ಮೂಲಕ ರಾಜಕೀಯ ವಿರೋಧಿಗಳಿಗೆ ನಡುಕ ಹುಟ್ಟಿಸಿದ್ದಾರೆ. …

Read More »

ವಿವಿಧ ಬೇಡಿಕೆ ಈಡೇರಿಸುವಂತೆ ನಂದಗಡ ಗ್ರಾಮಸ್ಥರಿಂದ ತಹಶೀಲ್ದಾರರ ಮೂಲಕ ಸಿಎಂಗೆ ಮನವಿ

ಖಾನಾಪುರ: ತಾಲೂಕಿನ ನಂದಗಡ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕು. ಪ್ರಕೃತಿ ವಿಕೋಪದಲ್ಲಿ ಮನೆ ಕಳೆದಕೊಂಡವರಿಗೆ ಹಾಗೂ ಹಾನಿಗೊಳಗಾದ ರೈತರಿಗೆ ಶೀಘ್ರವೇ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನಂದಗಡ ಗ್ರಾಮಸ್ಥರು ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.ರಾಯಣ್ಣನ ಪುಣ್ಯಭೂಮಿ ನಂದಗಡ ಹೆದ್ದಾರಿ ಪಕ್ಕದಲ್ಲಿದ್ದರೂ ಸರಿಯಾಗಿ ಬಸ್ ಸೌಲಭ್ಯವಿಲ್ಲದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಇನ್ನು ಕಳೆದ ಎರಡು ವರ್ಷಗಳಿಂದ ಸುರಿದ ಭಾರೀ ಮಳೆಗೆ ನಂದಗಡ ಗ್ರಾಮಸ್ಥರು ಕೆಲವರು ಮನೆಯನ್ನು ಕಳೆದುಕೊಂಡಿದ್ದಾರೆ. ಇನ್ನು ವಿಪರೀತ ಮಳೆಯಿಂದ ಕೆಲ …

Read More »

ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷ ಸೋನಾಲಿ ಸರ್ನೋಬ ತ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ

  ಖಾನಾಪುರ :ದಿ. 18-10-2021 ರಂದು ಖಾನಾಪುರ ತಾಲೂಕಿನ ಭೋರುಣಕಿ ಗ್ರಾಂ ಪಂ ವ್ಯಾಪ್ತಿಯಲ್ಲಿ ಬರುವ ಗಸ್ಟೋಳ್ಳಿ ಮತ್ತು ಚಣಕೆಬೈಲ ಗ್ರಾಮದಲ್ಲಿ ಪಡಿತರ ರೇಶನ್ ಪಡೆಯಲಿಕ್ಕೆ ಇಲ್ಲಿನ ಗ್ರಾಮಸ್ಥರು, ಇಲ್ಲಿಂದ ಸುಮಾರು 7km ದೂರದ ಗೊಳಿಹಳ್ಳಿಯಿಂದ ರೇಶನ್ ತೆಗೆದುಕೊಂಡು ಬರುತ್ತಿದ್ದರು. ಇದನ್ನು ಬೆಳಗಾವಿ ಮಹಿಳಾ ಮೋರ್ಚಾ ಉಪಾಧ್ಯಕ್ಷರು ಹಾಗೂ ಖಾನಾಪುರ ತಾಲೂಕಿನ ಪ್ರಭಾರಿಗಳು ಆದ ಡಾ. ಸೋನಾಲಿ ಸರ್ನೋಬತ್. ರವರು ಗ್ರಾಮಸ್ಥರ ಸಮಸ್ಯೆಯನ್ನು ನೋಡಿ ಸಂಬಂಧಿಸಿದ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ …

Read More »