Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 38)

ಗೋಕಾಕ

ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ …

Read More »

ಸಾರ್ವಜನಿಕರಿಂದ ಅತಿಕ್ರಮಣಗೊಂಡಿದ ಸರ್ಕಾರಿ ಜಾಗ ಮರು ವಶಕ್ಕೆ.

ಘಟಪ್ರಭಾ : ಕಳೆದ ಹತ್ತು ಹದಿನೈದು ವರ್ಷಗಳಿಂದ ಸಾರ್ವಜನಿಕರಿಂದ ಆಕ್ರಮಿಸಿಕೊಂಡಿದ್ದ ಸರ್ಕಾರಿ ಭೂಮಿಯನ್ನು ಮರು ವಶಪಡಿಸಿಕೊಂಡ ಘಟನೆ ಪಾಮಲದಿನ್ನಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.   ಪಾಮಲದಿನ್ನಿ ಗ್ರಾಮದಲ್ಲಿ ಸರ್ವೆ ನಂ. 4 ರಲ್ಲಿ ಸುಮಾರು 10 ಎಕರೆ ಭೂಮಿ ಇದ್ದು, ಅದರಲ್ಲಿಯ 2 ಎಕರೆಯಷ್ಟು ಭೂಮಿಯನ್ನು ಸರಕಾರಿ ಪ್ರೌಢಶಾಲೆಗೆ ಬಿಟ್ಟು ಕೊಡಲಾಗಿದೆ. ಇನ್ನುಳಿದ ಜಾಗದಲ್ಲಿ ಸಾರ್ವಜನಿಕರ ಅಭಿವೃದ್ಧಿಯ ಹಿತ ದೃಷ್ಟಿಯಿಂದ ವಿವಿಧ ಇಲಾಖೆಗಳ ಉಪಯೋಗಕೆಂದು ಕಾಯ್ದಿರಿಸಲಾಗಿತ್ತು. ಈಗ ಈ …

Read More »

ಸತೀಶ್ ಜಾರಕಿಹೊಳಿಯವರು ಬಿ ಜೆ ಪಿಗೆ ಕೆಂಡ ಕಾರಿದರು….

ಗೋಕಾಕ : ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಸ್ಪಂಧಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸರ್ಕಾರದ ವಿರುದ್ಧ ಗುಡುಗಿದರು.   ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಧಿವೇಶನ ನಡೆಸುವ ಇಚ್ಛಾಶಕ್ತಿ ಇಲ್ಲ. ಆದ ಕಾರಣ ಅಧಿವೇಶನ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದ ಜನರ ಸಮಸ್ಯೆಗಳನ್ನು ಬಗೆ ಹರಿಸುವ ಮೂಲಕ, …

Read More »

ಯುವಕ ಮಂಡಳಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ

    ಗೋಕಾಕ : ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳ ಯುವಕ ಮಂಡಳಗಳಿಗೆ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ನೀಡಿದ ಕ್ರೀಡಾ ಸಾಮಗ್ರಿಗಳನ್ನು ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಇಂದು ವಿತರಿಸಿದರು.   ಹುಕ್ಕೇರಿ ತಾಲ್ಲೂಕಿನ ಬಗರನಾಳ ಗ್ರಾಮದ ಗಜಾನನ ಯುವ ಮಂಡಳ, ಶಹಾಬಂದರದ ಮೆಹಬೂಬ ಸುಬಾನಿ ಯುವಕ ಮಂಡಳ, ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದ ಅಮರಜ್ಯೋತಿ ಯುವಕ ಮಂಡಳಕ್ಕೆ ಕ್ರೀಡಾ ಸಾಮಗ್ರಿಗಳನ್ನು …

Read More »

50ಕ್ರೀಡಾ ಪಟುಗಳಿಗೆ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಅಮರನಾಥ ಜಾರಕಿಹೊಳಿ ವಿತರಿಸಿದರು.

ಗೋಕಾಕ: ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಇಂದು ( ಸೋಮವಾರ) ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯಿಂದ SCP /TSP ಯೋಜನೆ ಅಡಿಯಲ್ಲಿ ರಾಜ್ಯ ವಲಯ ಕ್ರೀಡಾ ತರಬೇತಿಯಲ್ಲಿ ಭಾಗವಹಿಸಿದ 50ಕ್ರೀಡಾ ಪಟುಗಳಿಗೆ ಹಾಗೂ ಗೋಕಾಕ ಮತಕ್ಷೇತ್ರದ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ವಿತರಿಸಿದರು.     ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಟಿ , ಆರ್ ಕಾಗಲ …

Read More »

ಸರ್ಕಾರಿ ಹೊಸ ಮಾಧ್ಯಮಿಕ ಶಾಲೆ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಕೆ ಎಂ ಎಫ್ ನಿರ್ದೇಶಕರು ಅಮರನಾಥ ಜಾರಕಿಹೊಳಿ….

ಗೋಕಾಕ ಜು 4 : ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಇಲ್ಲಿನ ಸರಕಾರಿ ಹೊಸ ಮಾಧ್ಯಮಿಕ ಶಾಲೆಗೆ ಆರ್ ಐ ಡಿ ಎಫ್ ಯೋಜನೆಯಡಿ 62.80 ಲಕ್ಷ ರೂ, ನ್ಯಾಯಾಂಗ ಇಲಾಖೆ ವತಿಯಿಂದ 15 ಲಕ್ಷ ರೂ ಹಾಗೂ ಕೆ ಆರ್ ಡಿ ಸಿ ಯೋಜನೆಯಡಿ 30 ಲಕ್ಷ ರೂ ಒಟ್ಟು ರೂ 1.7 ಕೋಟಿ ವೆಚ್ಚದಲ್ಲಿ ಮಂಜೂರಾದ 7 ಶಾಲಾ ಕೊಠಡಿ, 6 ಶೌಚಾಲಯಗಳಿಗೆ ಹಾಗೂ ಲೋಕೋಪಯೋಗಿ …

Read More »

ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ …

Read More »

ಹಿರಿಯರ ಸ್ಮರಣಾರ್ಥ ಆಹಾರ ಕಿಟ್ ವಿತರಣೆ

  ಘಟಪ್ರಭಾ: ದಿ.ಜಾನ್ ಆರ್.ಕಲಾರಕೊಪ್ಪ, ಹಾಗೂ ದಿ.ಎಂ.ಬಿ.ಐಹೊಳಿ ಅವರ ಸ್ಮರನಾರ್ಥ ದೈಹಿಕ ಶಿಕ್ಷಕ ಡಿ.ಜೆ.ಕಲಾರಕೊಪ್ಪ ಅವರಿಂದ ಸರ್ಕಾರಿ ಶಾಲೆಗಳ ಬಿಸಿ ಊಟ ಸಿಬ್ಬಂದಿಗೆ ಆಹಾರ ಧಾನ್ಯ ಕಿಟ್‌ಗಳನ್ನು ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿತಿರಿಸಲಾಯಿತು.   ಸಮಾರಂಭಕ್ಕೆ ಮುಖ್ಯ ಅತಿಥಿಗಾಳಗಿ ಆಗಮಿಸಿದ ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಅವರು ಮಲ್ಲಾಪೂರ ಪಿ.ಜಿ ಹಾಗೂ ಶಿಂದಿಕುರಬೇಟ ಸಿ.ಆರ್.ಸಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ 30 ಕ್ಕೂ ಹೆಚ್ಚು ಬಿಸಿ …

Read More »

ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ.

    ಗೋಕಾಕ ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ಗೋಕಾಕ ನ ಗರದಲ್ಲಿ ಇಂದು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು .   ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ ಜಾರಕಿಹೊಳಿ ವಹಿಸಿದರು ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಆಂಟಿನ ಕಾಯ೯ಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಮತ್ತು ಡಾಕ್ಟರ್ ಬಿ.ಹೆಚ್ ಬಾಗಲಕೋಟ ಹಾಗೂ ದಲಿತ ಮುಖಂಡರಾದ ಸತ್ಯಪ್ಪ ಕರವಾಡಿ ಹಾಜರಿದ್ದರು ಪ್ರಾಸ್ತಾವಿಕವಾಗಿ ಪಾಸ್ಟರ ವಾಯ್.ಆರ್ .ಕರಬನ್ನವರ …

Read More »

ಸರ್ಕಾರಿ ಮಳಿಗೆ ಗಳ ದುರುಪಯೋಗ ಮಾಡುತ್ತಿರುವ ಶಿಂದಿ ಕುರಬೆಟ್ ಗ್ರಾಮ ಪಂಚಾಯತಿ ಮೇಲೆ ಕರವೇ ಆರೋಪ

ಗೋಕಾಕ; ತಾಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಇತ್ತಿಚ್ಚಿಗೆ ತುಂಬಾ ಅಕ್ರಮ ಹಾಗೂ ಅವ್ಯವಹಾರ ಗಳು ಕಂಡು ಬರುತ್ತಿವೆ. ಇಂದು ಗೋಕಾಕ ತಾಲೂಕಿನ ಶಿಂಧಿ ಕುರ್ ಬೇಟ ಗ್ರಾಮದಲ್ಲಿ ಅಕ್ರಮ ನಡೆದಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಆರೋಪ ವ್ಯಕ್ತ ಪಡಿಸಿದರು.   ತಾವು ಕೇಳಿದ ಮಾಹಿತಿ ಕೊಡುತ್ತಿಲ್ಲ ಹಾಗೂ ಗ್ರಾಮ ಪಂಚಾಯತಿ ಅಡಿಯಲ್ಲಿ ನೀಡಿರುವ ಕಟ್ಟಡ ಹಾಗೂ, ಮಳಿಗೆ ಗಳು ಯಾವ ಇಸ್ವಿಯಲ್ಲಾಗಿವೆ ಹಾಗೂ ಇನ್ನಿತರ …

Read More »