ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಜಪ್ತಿ : ಎಸ್ ಪಿ ಗುಳೇದ್ ಬೆಳಗಾವಿ: ಮಹಾಲಕ್ಷ್ಮೀ ಕೋ ಆಪ್ ರೇಟಿವ್ ಬ್ಯಾಂಕ್ ನ ಅವ್ಯವಹಾರಕ್ಕೆ ಸಂಬಂಧಿಸಿದಂತೆ 14 ಜನರ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾಹಿತಿ ತಿಳಿಸಿದ ಅವರು, ಗೋಕಾಕ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಬ್ಯಾಂಕಿನಲ್ಲಿ 74.86 ಕೋಟಿ ಅವ್ಯವಹಾರ ನಡೆದಿರುವ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ.
ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು. ದೇವಶಿಲ್ಪಿ ಭಗವಾನ್ ವಿಶ್ವಕರ್ಮ ಜಯಂತಿಯ ಅಂಗವಾಗಿ ಕಾರ್ಖಾನೆಯಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಆಚರಣೆ ಮಾಡಿದರು. ಸೃಷ್ಟಿಕರ್ತ ಬ್ರಹ್ಮನ ಅಂಶವಾಗಿರುವ ದೇವಶಿಲ್ಪಿ ವಿಶ್ವಕರ್ಮನು ಎಲ್ಲಾ ಕುಶಲಕರ್ಮಿಗಳಿಗೆ ಒಳಿತನ್ನು ತರಲಿ ಎಂದು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಹಿರಿಯರು ಯುವಕರು ಕಾರ್ಖಾನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು
Read More »ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ
ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ ಅಡವಿ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಅಂಕಲಗಿ ಶ್ರೀ ಮಠದ ಕಾರ್ಯಗಳನ್ನು ಪ್ರಶಂಶಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ …
Read More »ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯ: ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಹಿಂದುಳಿದ ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯವಾಗಿದೆ. ಈ ದಿಸೆಯಲ್ಲಿ ಸಮಾಜಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧ. ಸಮಾಜ ಬಾಂಧವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುವ ಮೂಲಕ ಸಮಾಜವು ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಹಣಬರ (ಯಾದವ) ಸಮಾಜ ಕ್ಷೇಮಾಭಿವೃದ್ಧಿ ಸಂಘದ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದ ಶ್ರೀ ಹನುಮಂತ ದೇವರ ಹಾಗೂ ಶ್ರೀ ಹಾಲಸಿದ್ದೇಶ್ವರ ದೇವರ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಇಂದಿಗೂ, ಎಂದೆಂದಿಗೂ ಅಮರ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ನಮ್ಮ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯೋತ್ಸವದ ದಿನದಂದು ಹುಟ್ಟಿ, ಗಣ ರಾಜ್ಯೋತ್ಸವದಂದು ಮರಣ ಹೊಂದಿದ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಇಂದಿಗೂ, ಎಂದೆಂದಿಗೂ ಅಮರ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ತಾಲ್ಲೂಕಿನ ಕಲ್ಲೊಳ್ಳಿ ಪ.ಪಂ ಕಚೇರಿಯ ಹತ್ತಿರ ನಿರ್ಮಾಣಗೊಂಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ರಾಯಣ್ಣನಂತಹ ಕೆಚ್ಚದೆಯ ಶೂರರ ಜೀವನವು ಪ್ರತಿಯೊಬ್ಬ ವ್ಯಕ್ತಿಗೂ ಮಾದರಿಯಾಗಿದೆ ಎಂದು ತಿಳಿಸಿದರು. ಕಿತ್ತೂರು …
Read More »ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆ
ಗೋಕಾಕ- ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ರವಿವಾರ ಸಂಜೆ ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 14.38 ಲಕ್ಷ ರೂಪಾಯಿಗಳ …
Read More »ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದಮಂಗನ ಕಾಟ
ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ಮಂಗವೊಂದು ಸಾರ್ವನಿಕರಿಗೆ ವಿಪರೀತ ಕಾಟ ನೀಡುತ್ತಿದ್ದು, ಅದರ ಕಡಿತದಿಂದ ಹಲವರು ಗಾಯಗೊಂಡಿದ್ದಾರೆ. ಮಂಗನ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರೂ, ಫಲಕಾರಿಯಾಗಲಿಲ್ಲ. ಮಂಗನ ಕಾಟದಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದ್ದು, ಕೂಡಲೇ ಅದನ್ನು ಸೆರೆಹಿಡಿಯಬೇಕೆಂದು ಸ್ಥಳೀಯರ ಆಗ್ರಹಿಸಿದರು. ರಾಯಬಾಗದಿಂದ ಮಂಗನ ಸೆರೆ ಹಿಡಿಯುವವರನ್ನು ಕರೆಸಲಾಗಿದ್ದು, ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಅಥಣಿ ಆರ್‌ಎಫ್‌ಒ ರಾಕೇಶ ಅರ್ಜುನವಾಡ ಹೇಳಿದರು.
Read More »ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು.
ಗೋಕಾಕ: ಪ್ರವಾಹದಿಂದ ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು. ಸೋಮವಾರದಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇತ್ತಿಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಕ್ಷೇತ್ರದ ಸುಮಾರು 30 ಗ್ರಾಮಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ …
Read More »ಯಡಿಯೂರಪ್ಪ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿದೆ: ಸಿದ್ದರಾಮಯ್ಯ ವ್ಯಂಗ್ಯ
ಗೋಕಾಕ (ಬೆಳಗಾವಿ ಜಿಲ್ಲೆ): ‘ಯಡಿಯೂರಪ್ಪ ನನ್ನ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ. ಅವರ ತಟ್ಟೆಯಲ್ಲಿ ಹೆಗ್ಗಣ ಮಾತ್ರವಲ್ಲ; ಕತ್ತೆಯೇ ಸತ್ತು ಬಿದ್ದಿದೆ. ಅಂಥವರಿಗೆ ನನ್ನ ರಾಜೀನಾಮೆ ಕೇಳುವ ಹಕ್ಕು ಇದೆಯೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಪಾದಯಾತ್ರೆ ಮುಗಿಯುವುದರೊಳಗೆ ನಾನು ರಾಜೀನಾಮೆ ನೀಡಬೇಕು ಎಂದು ಯಡಿಯೂರಪ್ಪ ಕೇಳಿದ್ಧಾರೆ. ಸ್ವತಃ ಅವರೇ ಪೋಕ್ಸೊ ಪ್ರಕರಣದಲ್ಲಿ ಸೊಕ್ಕಿಕೊಂಡಿದ್ದಾರೆ. ಯಾವ ನೈತಿಕತೆ ಇದೆ ಅವರಿಗೆ’ ಎಂದರು. …
Read More »