Breaking News

ಗೋಕಾಕ

ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಇಂದಿಗೂ, ಎಂದೆಂದಿಗೂ ಅಮರ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ನಮ್ಮ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯೋತ್ಸವದ ದಿನದಂದು ಹುಟ್ಟಿ, ಗಣ ರಾಜ್ಯೋತ್ಸವದಂದು ಮರಣ ಹೊಂದಿದ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಇಂದಿಗೂ, ಎಂದೆಂದಿಗೂ ಅಮರ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ತಾಲ್ಲೂಕಿನ ಕಲ್ಲೊಳ್ಳಿ ಪ.ಪಂ ಕಚೇರಿಯ ಹತ್ತಿರ ನಿರ್ಮಾಣಗೊಂಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ರಾಯಣ್ಣನಂತಹ ಕೆಚ್ಚದೆಯ ಶೂರರ ಜೀವನವು ಪ್ರತಿಯೊಬ್ಬ ವ್ಯಕ್ತಿಗೂ ಮಾದರಿಯಾಗಿದೆ ಎಂದು ತಿಳಿಸಿದರು. ಕಿತ್ತೂರು …

Read More »

ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆ

ಗೋಕಾಕ- ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ರವಿವಾರ ಸಂಜೆ ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 14.38 ಲಕ್ಷ ರೂಪಾಯಿಗಳ …

Read More »

ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದಮಂಗನ ಕಾಟ

ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ಮಂಗವೊಂದು ಸಾರ್ವನಿಕರಿಗೆ ವಿಪರೀತ ಕಾಟ ನೀಡುತ್ತಿದ್ದು, ಅದರ ಕಡಿತದಿಂದ ಹಲವರು ಗಾಯಗೊಂಡಿದ್ದಾರೆ. ಮಂಗನ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರೂ, ಫಲಕಾರಿಯಾಗಲಿಲ್ಲ. ಮಂಗನ ಕಾಟದಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದ್ದು, ಕೂಡಲೇ ಅದನ್ನು ಸೆರೆಹಿಡಿಯಬೇಕೆಂದು ಸ್ಥಳೀಯರ ಆಗ್ರಹಿಸಿದರು. ರಾಯಬಾಗದಿಂದ ಮಂಗನ ಸೆರೆ ಹಿಡಿಯುವವರನ್ನು ಕರೆಸಲಾಗಿದ್ದು, ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಅಥಣಿ ಆರ್‌ಎಫ್‌ಒ ರಾಕೇಶ ಅರ್ಜುನವಾಡ ಹೇಳಿದರು.

Read More »

ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು.

ಗೋಕಾಕ: ಪ್ರವಾಹದಿಂದ ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು. ಸೋಮವಾರದಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇತ್ತಿಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಕ್ಷೇತ್ರದ ಸುಮಾರು 30 ಗ್ರಾಮಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ …

Read More »

ಯಡಿಯೂರಪ್ಪ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿದೆ: ಸಿದ್ದರಾಮಯ್ಯ ವ್ಯಂಗ್ಯ

ಗೋಕಾಕ (ಬೆಳಗಾವಿ ಜಿಲ್ಲೆ): ‘ಯಡಿಯೂರಪ್ಪ ನನ್ನ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ. ಅವರ ತಟ್ಟೆಯಲ್ಲಿ ಹೆಗ್ಗಣ ಮಾತ್ರವಲ್ಲ; ಕತ್ತೆಯೇ ಸತ್ತು ಬಿದ್ದಿದೆ. ಅಂಥವರಿಗೆ ನನ್ನ ರಾಜೀನಾಮೆ ಕೇಳುವ ಹಕ್ಕು‌ ಇದೆಯೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಪಾದಯಾತ್ರೆ ಮುಗಿಯುವುದರೊಳಗೆ ನಾನು ರಾಜೀನಾಮೆ ನೀಡಬೇಕು ಎಂದು ಯಡಿಯೂರಪ್ಪ ಕೇಳಿದ್ಧಾರೆ. ಸ್ವತಃ ಅವರೇ ಪೋಕ್ಸೊ ಪ್ರಕರಣದಲ್ಲಿ ಸೊಕ್ಕಿಕೊಂಡಿದ್ದಾರೆ. ಯಾವ ನೈತಿಕತೆ ಇದೆ ಅವರಿಗೆ’ ಎಂದರು. …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ರಾಜನಕಟ್ಟಿ ಗ್ರಾಮದ ಶ್ರೀ ಬ್ರಹ್ಮಲಿಂಗೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ಲಗಮಣ್ಣ ಬಾದರವಾಡಿ, ಮಲ್ಲಪ್ಪಾ ನಿ …

Read More »

ಮುಳುಗಡೆ ಹೊಂದಿದ್ದ ಗೋಕಾಕ ನಗರದ ಚಿಕ್ಕೊಳಿ ಸೇತುವೆಗೆ ವಿಧಾನಪರಿತ್ ಸದಸ್ಯ ಲಖನ್ ಜಾರಕಿಹೊಳಿ ಭೇಟಿ

ಮುಳುಗಡೆ ಹೊಂದಿದ್ದ ಚಿಕ್ಕೊಳಿ ಸೇತುವೆ ಪರಿಶೀಲಿಸಿದ ವಿಧಾನಪರಿತ್ ಸದಸ್ಯ ಲಖನ್ ಜಾರಕಿಹೊಳಿ, ತುರ್ತು ಕ್ರಮ ಅಧಿಕಾರಿಗಳಿಗೆ ಸೂಚನೆ. ಮುಳುಗಡೆ ಹೊಂದಿದ್ದ ಗೋಕಾಕ ನಗರದ ಚಿಕ್ಕೊಳಿ ಸೇತುವೆಗೆ ವಿಧಾನಪರಿತ್ ಸದಸ್ಯ ಲಖನ್ ಜಾರಕಿಹೊಳಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು‌. ಅಧಿಕಾರಿಗಳೊಡನೆ ದೂರವಾಣಿಯಲ್ಲಿ ಮಾತನಾಡಿ ಜನರಿಗೆ ತೊಂದರೆಯಾಗದಂತೆ ಸೇತುವೆ ಮೇಲೆ ವಾಹನ ಸಂಚಾರ ಪ್ರಾರಂಭ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Read More »

ಡಿ.ಕೆ.ಶಿವಕುಮಾರ್‌ ಅವರಿಗೆ ‘ಸಿ.ಡಿ ಶಿವು’ ಎಂದು ಹೊಸದಾಗಿ ನಾಮಕರಣ ಮಾಡಿದ್ದೇವೆ:.ರಮೇಶ ಜಾರಕಿಹೊಳಿ

ಗೋಕಾಕ(ಬೆಳಗಾವಿ ಜಿಲ್ಲೆ): ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭಾಗಿಯಾದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಿಂದ ಬಳ್ಳಾರಿಯವರೆಗೆ ಪಾದಯಾತ್ರೆ ಮಾಡುತ್ತೇವೆ. ಇದಕ್ಕಾಗಿ ನಾನು, ಶಾಸಕ ಬಸನಗೌಡ ಪಾಟೀಲ ಯತ್ನಾಳ ರೂಪುರೇಷೆ ಸಿದ್ಧಪಡಿಸುತ್ತೇವೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.   ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಅಕ್ರಮವಾಗಿ ಬೇನಾಮಿ ಖಾತೆಗಳಿಗೆ ವರ್ಗಾಯಿಸಿರುವ ಈ ಪ್ರಕರಣ ದೇಶದಲ್ಲೇ ದೊಡ್ಡದು. ಇದರ ವಿರುದ್ಧ ಮಾಡಲಿರುವ ಪಾದಯಾತ್ರೆಯಲ್ಲಿ ನಮ್ಮ …

Read More »

ಸಂತೋಷ್ ಜಾರಕಿಹೊಳಿ ಅವರ“ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಹನುಮಸಾಗರ ಗ್ರಾಮದ ಶ್ರೀ ಹನುಮಂತ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ನಿಂಗಪ್ಪ ಮ ಹಳ್ಳೂರ,ವಿಠ್ಠಲ ಯ ಹೊನ್ನಿಕೊಳ್ಳ …

Read More »

ಅಂಕಲಗಿ ಗ್ರಾಮದಲ್ಲಿ ಬೈಕ್ ಮತ್ತು ಕ್ರೂಸರ್ ನಡುವೆ ಡಿಕ್ಕಿ: ಓರ್ವ ಸಾವು

ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಬೈಕ್ ಮತ್ತು ಕ್ರೂಸರ್ ನಡುವೆ ಡಿಕ್ಕಿ: ಓರ್ವ ಸಾವು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ, ಅಡಿವೆಪ್ಪನ ಮಠದ ಮುಂಭಾಗದ ರಸ್ತೆಯಲ್ಲಿ ಬೈಕ್ ಮತ್ತು ಕ್ರೂಸರ್ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ವರ್ಷದ ಅನೀಲ್ ಬಿಚಗತ್ತಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಬೈಕ್ ಹಿಂಬದಿ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಲ್ಮೆಟ್ ಧರಿಸದೆ ಇದ್ದುದರಿಂದ ಅನೀಲ್ ತಲೆಗೆ ಗಂಭೀರ …

Read More »