Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 77)

ಗೋಕಾಕ

ಸಾವಳಗಿಯಲ್ಲಿ SSLC ಶಾಲಾ ಮಕ್ಕಳಿಗೆ ಮಾಸ್ಕ್ ವಿತರಣೆ

ಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಇಂದು ನಾಲ್ಕು ಊರಿನ ಎಲ್ಲಾ SSLC ಬರೆಯಲು ಹೋಗುತ್ತಿರುವ 94 ವಿಧ್ಯಾಥಿ೯ಗಳಿಗೆ ಸ್ಪಧಾ೯ವಿವೇಕ ಗೋಕಾಕ ತರಬೇತಿ ಕೇಂದ್ರದಿಂದ ಕಬಾಡಗಿ ಸರ್ ವತಿಯಿಂದ ಮಾಸ್ಕ್ ವಿತರಣೆ ಮಾಡಿದರು. ಎಲ್ಲಾ ಶಾಲಾ ಮಕ್ಕಳಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಹೋಗಲು ಹೇಳಿದರು. ಹಾಗೂ ಇದು ಕೋರಾನ ವೈರಸ್ ಹೆಮ್ಮರವಾಗಿ ಬೆಳೆಯುತ್ತಿದೆ  ತಮ್ಮ ಸುರಕ್ಷತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಪರೀಕ್ಷೆ ಬರೆಯಲು ಹೇಳಲಾಯಿತು.

Read More »

ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ  ಮೌಢ್ಯಕ್ಕೆ ಸೆಡ್ಡು ಹೊಡೆದ ಕೆಪಿಸಿಸಿ  ಕಾರ್ಯಾಧ್ಯಕ್ಷ,

ಗೋಕಾಕ:  ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ  ಮೌಢ್ಯಕ್ಕೆ ಸೆಡ್ಡು ಹೊಡೆದ ಕೆಪಿಸಿಸಿ  ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಕುಟುಂಬ ಸದಸ್ಯರು ಮತ್ತು ಕಾರ್ಯಕರ್ತರೊಂದಿಗೆ ಉಪಹಾರ ಸೇವಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಭಾನುವಾರ ತಮ್ಮ ಮಕ್ಕಳಾದ ಪ್ರಿಯಾಂಕಾ ಹಾಗೂ ರಾಹುಲ್ ಜತೆಗೆ ಉಪಹಾರ ಸೇವಿದರು. ಇದೇ ವೇಳೆ ‘ಉದಯನಾಡು’ದೊಂದಿಗೆ  ಮಾತನಾಡಿದ ಅವರು,  ಸೂರ್ಯ, ಚಂದ್ರ ಗ್ರಹಣ ಗೋಚರ ಇದೊಂದು  ಸಹಜ ಪ್ರಕ್ರಿಯೆ, ಆದ್ರೆ ಇದನ್ನೇ ಬಂಡವಾಳ ಮಾಡಿಕೊಂಡು ಕೆಲವರು ಜನರಲ್ಲಿ …

Read More »

ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ರಮೇಶ್ ಜಾರಕಿಹೊಳಿ ಮನೆ ‘ಗೃಹಪ್ರವೇಶ…..? ‘

2018ರಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಸದಾ ಒಂದಲ್ಲೊಂದು ಸುದ್ದಿಯಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ ಇಟ್ಟಿರುವ ಇನ್ನೊಂದು ಹೆಜ್ಜೆ, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿಯ ರಾಜಕೀಯದಲ್ಲಿ ಮೂಗು ತೂರಿಸುತ್ತಿದ್ದಾರೆ ಎನ್ನುವ ವಿಚಾರದಲ್ಲಿ ಆರಂಭವಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ದ್ವೇಷ ಈಗ ಇನ್ನೊಂದು ಮಜಲಿಗೆ ಬಂದು ನಿಂತಿದೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಗೋಕಾಕ್ ಉಪ ಚುನಾವಣೆ ಬಳಿಕ ಮತ್ತೆ ಒಂದಾದ್ರಾ ಜಾರಕಿಹೊಳಿ ಬ್ರದರ್ಸ್? ಯಡಿಯೂರಪ್ಪನವರ …

Read More »

ಮಹಾರಾಷ್ಟ್ರದಲ್ಲಿ ಭಾರೀ ಮಳೆ- ಚಿಕ್ಕೋಡಿ ಭಾಗದ ನದಿಗಳ ಒಳ ಹರಿವು ಹೆಚ್ಚಳ………

ಚಿಕ್ಕೋಡಿ/ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಚಿಕ್ಕೋಡಿ, ನಿಪ್ಪಾಣಿ ಭಾಗದ ನದಿಗಳ ಒಳಹರಿವಿನ ಪ್ರಮಾಣದಲ್ಲಿ ದಿಢೀರ್ ಹೆಚ್ಚಳ ಕಂಡಿದ್ದು, ದೂಧ್ ಗಂಗಾ, ವೇದ ಗಂಗಾ, ಕೃಷ್ಣಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಜನರಿಗೆ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದೆ. ನಿಪ್ಪಾಣಿ ತಾಲೂಕಿನ ದೂಧ್ ಗಂಗಾ ನದಿಯ ಒಳಹರಿವಿನ ಪ್ರಮಾಣ ಭಾರೀ ಹೆಚ್ಚಳವಾಗಿದ್ದು, …

Read More »

ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ: ರಮೇಶ ಜಾರಕಿಹೊಳಿ

ಗೋಕಾಕ : ಬೆಳಗಾವಿ ತಾಲೂಕಾ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಬಿಜೆಪಿ ನಾಯಕರು ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ   ನಡೆದ ಮಾತಿನ ಚಕಮಕಿ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗೋಕಾಕದಲ್ಲಿ ಪ್ರತಿಕ್ರಿಯೆ ನೀಡಿ  ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ, ಲಕ್ಷ್ಮಿ ಹೆಬ್ಬಾಳ್ಕರ್ ನನಗೆ ಸವಾಲು ಹಾಕಿಲ್ಲ. ಅವರ ಪಕ್ಷದ ಪರವಾಗಿ ಅವರು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.  ನಗರದ ತಾ. ಪಂ. ಕಚೇರಿಯಲ್ಲಿ …

Read More »

ಮೂಲ ಸೌಕರ್ಯ ಪೂರೈಸಲುದಗಿಸುವಂತೆ ಸಚಿವ …….

ಕಾಯಿಪಲ್ಯ ವ್ಯಾಪಾರಸ್ಥರಿಂದ ಮಾರು ಕಟ್ಟೆಗೆ ಮೂಲ ಸೌಕರ್ಯ ಪೂರೈಸಲು ಜಲಸಂಪನ್ಮೂಲ ಸಚಿವರಿಗೆ ಮನವಿ ಘಟಪ್ರಭಾ: ಘಟಪ್ರಭಾ ತರಕಾರಿ ಮಾರುಕಟ್ಟೆಯಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ತರಕಾರಿ ವ್ಯಾಪಾರಸ್ಥರು ಮತ್ತು ಜನಪ್ರತಿನಿಧಿಗಳು ಇಂದು  ಮನವಿ ಸಲ್ಲಿಸಿದರು. ಪಟ್ಟಣದ ತರಕಾರಿ ಮಾರುಕಟ್ಟೆ ತುಂಬಾ ಹೆಸರುವಾಸಿಯಾಗಿದ್ದು ದಿನನಿತ್ಯ  ಸುತ್ತ ಮುತ್ತಲಿನ ಹಳ್ಳಿಯ ನೂರಾರು  ರೈತರು ತಾವು ಬೆಳಸಿದ ತರಕಾರಿಗಳನ್ನು ಮಾರಾಟ ಮಾಡಲು ಮಾರುಕಟ್ಟೆಗೆ ಬರುತ್ತಾರೆ. ಆದ್ರೆ ಮಾರುಕಟ್ಟೆಯಲ್ಲಿ …

Read More »

ಗೋಕಾಕ ತಾಲೂಕಿನ ಸರ್ಕಾರದ ವಿವಿದ ಕಾರ್ಯಕ್ರಮಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.

ಗೋಕಾಕ:ಗೋಕಾಕ ತಾಲೂಕಿನ ಸರ್ಕಾರದ ವಿವಿದ ಕಾರ್ಯಕ್ರಮಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆಯನ್ನು ಗೋಕಾಕ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಜಲಸಂಪನ್ಮೂಲ ಸಚಿವರು‌ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಅದ್ಯಕ್ಷತೆಯಲ್ಲಿ ಸಭೆ ನಡೆಯಿತು ಈ ಸಂದರ್ಭದಲ್ಲಿ ವಿವಿದ ಇಲಾಖೆಗಳ‌ ಅಧಿಕಾರಿಗಳಿಗೆ ಸಚಿವರು ಅವರ ಪ್ರಗತಿಯ ಬಗ್ಗೆ ವಿವರ ಕೇಳುತ್ತಿರುವಾಗ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಕೆನಾಲ ಗೆಟಗಳನ್ನೆ ದುರಸ್ತಿಯಾಗದೆ ನೀರು ಹೇಗೆ ರೈತರಿಗೆ ಮುಟ್ಟುತ್ತದೆ ,ಎಂದು ಜಿಲ್ಲಾ ಪಂಚಾಯತ ಸದಸ್ಯ ತುಕಾರಾಮ‌ ಕಾಗಲ್ …

Read More »

ರೈತ ವಿರೋಧಿ ಸರಕಾರ ಎಂದು ಘೋಷಣೆ ಕೂಗಿದ ರೈತ ಸಂಘ

ಗೋಕಾಕ: ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಸ್ವಕ್ಷೇತ್ರದ ಸಂತ್ರಸ್ತರು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ದನ-ಕರು, ಎಮ್ಮೆ- ಎತ್ತುಗಳೊಂದಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಇಲ್ಲಿನ ತಹಶೀಲ್ದಾರರ ಕಚೇರಿಗೆ ನೆರೆ ಸಂತ್ರಸ್ತರು ಮುತ್ತಿಗೆ ಹಾಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ರು. 6 ತಿಂಗಳು ಕಳೆದರು ಕೂಡ ನೆರೆ ಪರಿಹಾರ ವಿತರಣೆಯಾಗದ ಹಿನ್ನೆಲೆಯಲ್ಲಿ ಪುಟ್ಟ ಮಕ್ಕಳನ್ನು ಕರೆದುಕೊಂಡು …

Read More »

ಕೊಣ್ಣೂರ:ಗೆಳೆಯರ ಜೊತೆ ನದಿಗೆ ಈಜಲು ಹೋಗಿ ನೀರು ಪಾಲಾದ ಯುವಕ

ಕೊಣ್ಣೂರ:ಗೆಳೆಯರ ಜೊತೆ ನದಿಗೆ ಈಜಲು ಹೋಗಿ ನೀರು ಪಾಲಾದ ಘಟನೆ ಗೋಕಾಕ ತಾಲೂಕಿನ 9 ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಫರೀದ್ ಅಸ್ಲಂ ಸೌ ದಾಗರ (೧೬) ಮೃತ ಯುವಕ. ಘಟಪ್ರಭಾ ನದಿಗೆ ಗೆಳೆಯರ ಜೊತೆ ಈಜಲು ಹೋಗಿದ್ದ. ಫರೀದ್ ಗೆ ಈಜು ಬರದೆ ನದಿ ದಡದಲ್ಲಿ ಕುಳಿತು ಸ್ನಾನ‌ ಮಾಡುತ್ತಿದ್ದ ಇಂದು ನದಿಗೆ ನೀರು ಹೆಚ್ಚಿಗೆ ಇರುವುದರಿಂದ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು, ಸುಳಿಯಲ್ಲಿ ಸಿಲುಕಿದ್ದ ನಂತರ ಸ್ಥಳೀಯರ ಸಹಾಯದಿಂದ …

Read More »

ಅರಭಾವಿ ಶಾಸಕರ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹಕ್ಕೆ ಭೇಟಿ ನೀಡಿ ಸತ್ಕಾರ ಸ್ವೀಕರಿಸಿದ ನೂತನ ರಾಜ್ಯಸಭಾ ಸದಸ್ಯ

  ಗೋಕಾಕ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಂಡಿಯಾಗಿ ರಾಜ್ಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ರವಿವಾರದಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹಕ್ಕೆ ಭೇಟಿ ನೀಡಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹಿರಿಯರ ಮಾರ್ಗದರ್ಶನದಲ್ಲಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು. ಮೂರು ದಶಕಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ …

Read More »