Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ

ಚಿಕ್ಕೋಡಿ

ಕರ್ನಾಟಕದ ಕುದುರೆಗಳಿಗೆ ‘ಮಹಾ’ ಮರ್ಯಾದೆ

ಚಿಕ್ಕೋಡಿ: ಹೀರಾ ಮತ್ತು ಮೋತಿ ಅವರಿಗೆ ಮಹಾರಾಷ್ಟ್ರದ ಪಂಢರಪುರದ ವಿಠ್ಠಲನ ಸನ್ನಿಧಿಯಲ್ಲಿ ಆಷಾಢ ಏಕಾದಶಿಯಲ್ಲಿ ರಾಜ ಮರ್ಯಾದೆ ಸಿಗುತ್ತದೆ. ಪ್ರತಿ ವರ್ಷ ಪಂಢರಪುರಕ್ಕೆ ಹೊರಡುವ ದಿಂಡಿಯಲ್ಲಿ 315 ಕಿ.ಮೀ ದಾರಿಯುದ್ದಕ್ಕೂ ಇವರೂ ಹೆಜ್ಜೆ ಹಾಕುತ್ತಾರೆ..! ಇದರಲ್ಲೇನು ವಿಶೇಷ ಎಂದುಕೊಳ್ಳಬೇಡಿ. ಹೀರಾ, ಮೋತಿ ಎಂಬುದು ಎರಡು ಕುದುರೆಗಳ ಹೆಸರು. ತಾಲ್ಲೂಕಿನ ಅಂಕಲಿ ಗ್ರಾಮದ ಶಿಥೋಳೆ ಮನೆತನದವರು ಸಾಕಿರುವ ಈ ಕುದುರೆ ಜೋಡಿಗೆ ಪಂಢರಪುರದ ದೇವಸ್ಥಾನದಲ್ಲಿ ವಿಶೇಷ ಆತಿಥ್ಯ ಸಿಗುತ್ತದೆ. ಪ್ರತಿವರ್ಷ ಜ್ಯೇಷ್ಠ …

Read More »

ನಿಬ್ಬೆರಗಾಗಿಸುವ ಜಲಯೋಗ ಸಾಧಕ: 3 ತಾಸು ನೀರಿನಲ್ಲಿ ತೇಲುವ 72ರ ವೃದ್ಧ!

ಕಬ್ಬೂರ: 72 ವರ್ಷದ ಈ ಹಿರಿಯರು ಜಲಯೋಗದಲ್ಲಿ ವಿಶ್ವದಾಖಲೆ ಮಾಡಿದ್ದಾರೆ. ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದಿದ್ದಾರೆ. ನೀರಿನ ಮೇಲೆ ಮೂರು ತಾಸಿಗೂ ಅಧಕ ಸಮಯ ಲೀಲಾಜಾಲವಾಗಿ ಯೋಗದ ಭಂಗಿಗಳನ್ನು ಪ್ರದರ್ಶಿಸುತ್ತಾರೆ. ಅವರ ಸಾಮರ್ಥ್ಯ, ಚುರುಕುತನ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಎಂಥವರನ್ನೂ ನಿಬ್ಬೆರಗು ಮಾಡುತ್ತದೆ. ಚಿಕ್ಕೋಡಿ ತಾಲ್ಲೂಕಿನ ಕಬ್ಬೂರ ಪಟ್ಟಣದ ಪ್ರಕಾಶ ಬಸಲಿಂಗಪ್ಪ ಬೆಲ್ಲದ ಅವರೇ ಈ ಯೋಗ ಸಾಧಕ. ಬ್ಯಾಂಕ್‌ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅವರು 37 …

Read More »

40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಚಿಕ್ಕೋಡಿ: ನೀರಿಲ್ಲದ 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ಚಿಕ್ಕೋಡಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿ ಜೀವದಾನ ನಿಡಿದ್ದಾರೆ.   ಚಿಕ್ಕೋಡಿ ನಗರದ ವಾಡ ಗಲ್ಲಿಯ ಶ್ರೀನಿವಾಸ್ ದೊಡಮನಿ ಅವರ ಸುಮಾರು 40 ಅಡಿ ಆಳದ ಬಾವಿಯಲ್ಲಿ ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಬೆಕ್ಕು ಕಾಲು ಜಾರಿ ಬಿದ್ದಿದೆ. ಹೀಗಾಗಿ ದೊಡಮನಿ ಮನೆಯವರು ಚಿಕ್ಕೋಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಬೆಕ್ಕನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ. ಅದರಂತೆ ಅಗ್ನಿಶಾಮಕ ದಳದ ಸಿಬ್ಬಂದಿ …

Read More »

ಮತ್ತೆ ಗರಿಗೆದರಿದ ಮೀನುಗಾರಿಕೆ

ಚಿಕ್ಕೋಡಿ: ಬೇಸಿಗೆಯಲ್ಲಿ ಹನಿ ನೀರಿಲ್ಲದೆ ಬರಡು ಭೂಮಿಯಂತಾಗಿದ್ದ ಕೃಷ್ಣಾ ನದಿಗೆ ಈಗ ಮತ್ತೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಕೃಷ್ಣಾ ಹಾಗೂ ಅದರ ಉಪನದಿಗಳಲ್ಲಿ ನೀರು ಇಲ್ಲದ್ದರಿಂದ ಮೀನುಗಾರಿಕೆ ಸ್ಥಗಿತಗೊಂಡಿತ್ತು. ಮಹಾರಾಷ್ಟ್ರದಲ್ಲಿ ವರುಣ ಅಬ್ಬರಿಸುತ್ತಿದ್ದು, ಕಳೆದೊಂದು ವಾರದಿಂದ ಕೃಷ್ಣೆಗೆ ನೀರು ಹರಿದುಬರುತ್ತಿದೆ. ಹಾಗಾಗಿ ಯಡೂರ, ಕಲ್ಲೋಳ, ಮಾಂಜರಿ, ಅಂಕಲಿ ಸೇರಿದಂತೆ ಕೃಷ್ಣಾ ನದಿ ತಟದ ಗ್ರಾಮಗಳಲ್ಲಿ ಯುವಕರು ಗುರುವಾರ ಮೀನು ಹಿಡಿಯುವಲ್ಲಿ ನಿರತರಾಗಿರುವುದು ಕಂಡುಬಂತು. ‘ಕೃಷ್ಣಾ ನದಿಗೆ ನೀರು ಹರಿದು …

Read More »

ಕೇಳಿಸದೇ ಕಲ್ಲು ಕಲ್ಲಿನಲಿನ ಕಲ್ಲುಕುಟಿಗರ ಧ್ವನಿ

ಚಿಕ್ಕೋಡಿ: ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಲ್ಲು ಕುಟಿಗರು ಈಗಲೂ ತಮ್ಮ ಕುಲಕಸುಬು ಮಾಡುತ್ತಿದ್ದಾರೆ. ತುತ್ತಿನಚೀಲ ತುಂಬಿಸಿಕೊಳ್ಳಲು ಕಲ್ಲು- ಬಂಡೆಗಳನ್ನೇ ಪುಡಿ ಮಾಡಿ ರೂಪ ನೀಡುತ್ತಿದ್ದಾರೆ. ‌ಮೂರು ತಲೆಮಾರುಗಳಿಂದ ಇದೇ ಕೆಲಸ ಮಾಡುತ್ತಿದ್ದರೂ ಅವರ ಬದುಕು ಮಾತ್ರ ಇನ್ನೂ ಮೂರ್ತರೂಪ ಪಡೆದಿಲ್ಲ. ಸಂಕಷ್ಟಗಳು ಕಲ್ಲು-ಬಂಡೆಗಳಂತೆಯೇ ದೃಢವಾಗಿ ಉಳಿದುಬಿಟ್ಟಿವೆ. ಜೈನಾಪುರ ಕ್ರಾಸ್‌ಗೆ ಬಂದರೆ ಸಾಕು; ಒಳಕಲ್ಲು, ಬೀಸುವ ಕಲ್ಲು, ರುಬ್ಬುವ ಕಲ್ಲು, ಚಟ್ನಿ ಕಲ್ಲು, ನಂದಿ, ಲಿಂಗ, ನಾಗಪ್ಪ ಮುಂತಾದ ಮೂರ್ತಿಗಳು …

Read More »

ಚಿಕ್ಕೋಡಿ: ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾಗೆ 90,834 ಮತಗಳ ಅಂತರದಿಂದ ಗೆಲುವು

ಚಿಕ್ಕೋಡಿ: ಲೋಕಸಭೆ ಕ್ಷೇತ್ರಕ್ಕೆ ಈ ಬಾರಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮೊದಲ ಯತ್ನದಲ್ಲೇ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ 90,834 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಇಲ್ಲಿನ ಆರ್‌.ಡಿ ಕಾಲೇಜು ಆವರಣದಲ್ಲಿ ಮಂಗಳವಾರ ಬೆಳಿಗ್ಗೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭಗೊಂಡಿತು. ಮಧ್ಯಾಹ್ನದವರೆಗೆ 22 ಸುತ್ತುಗಳ ಎಣಿಕೆ ನಡೆಯಿತು. ಮೊದಲ ಸುತ್ತಿನಲ್ಲಿ 8,533 ಮತಗಳ ಮುನ್ನಡೆ ಸಾಧಿಸಿದ ಪ್ರಿಯಾಂಕಾ, ಎರಡನೇ ಸುತ್ತಿನಲ್ಲಿ 20,314 …

Read More »

ದುಃಸ್ಥಿತಿಯಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ

ಚಿಕ್ಕೋಡಿ: ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕು ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಬಾಲಕ ಹಾಗೂ ಬಾಲಕಿಯರ 16 ವಸತಿ ನಿಲಯಗಳು ಇದ್ದು, ಇವುಗಳ ಪೈಕಿ ಚಿಕ್ಕೋಡಿ ಪಟ್ಟಣದ ಬಾಲಕಿಯರ ವಸತಿ ನಿಲಯ ಶಿಥಿಲಗೊಂಡಿದ್ದು, ಈಗಲೋ ಆಗಲೋ ಬೀಳುವ ಸ್ಥಿತಿಯಲ್ಲಿದೆ. ಶಾಲಾ ತರಗತಿಗಳು ಪ್ರಾರಂಭವಾಗುತ್ತಿದ್ದರೂ ಪರ್ಯಾಯ ವ್ಯವಸ್ಥೆ ಮಾಡದೇ ಅಧಿಕಾರಿಗಳು ಕೈ ಕಟ್ಟಿ ಕುಳಿತಿದ್ದಾರೆ. ಮೆಟ್ರಿಕ್ ಪೂರ್ವ 13 ಹಾಗೂ ಮೆಟ್ರಿಕ್ ನಂತರದ 3 ವಸತಿ ನಿಲಯಗಳಲ್ಲಿ 2024-25ನೇ ಸಾಲಿನಲ್ಲಿ ವ್ಯಾಸಾಂಗ …

Read More »

ಚಿಕ್ಕೋಡಿಯಲ್ಲಿ ಯಾರ ಪಾಲಾಗಲಿದೆ ಗೆಲುವಿನ ಪಟ್ಟ?

ಚಿಕ್ಕೋಡಿ, ಮೇ 27: ಬೆಳಗಾವಿ ಜಿಲ್ಲೆ ತಾಲೂಕು ಕೇಂದ್ರವಾಗಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಈ ಭಾರಿ ಎರಡು ಪ್ರಮುಖ ಪಕ್ಷಗಳು ತೀವ್ರ ಪೈಪೋಟಿ ಒಡ್ಡಿದವು. ಮೇ 7ರಂದು ಚುನಾವಣೆ ನಡೆದಿದ್ದು, ಬರೋಬ್ಬರಿ ಈ ಕ್ಷೇತ್ರವೊಂದರಲ್ಲೇ ಶೇಕಡಾ 78.66 ರಷ್ಟು ಮತದಾನ ಆಗಿದೆ. ಹಾಗಾದರೆ ಈ ಬಾರಿ ಗೆಲುವು ಯಾರಿಗೆ? ಕಾಂಗ್ರೆಸ್‌-ಬಿಜೆಪಿಗೆ ಇರುವ ಪೂರಕ ಅಂಶಗಳ ಏನು?. ಚಿಕ್ಕೋಡಿಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಕಾಂಗ್ರೆಸ್‌ನಿಂದ ಕರ್ನಾಟಕದ ಹಾಲಿ …

Read More »

ಚಿಕ್ಕೋಡಿ: ಎಂದೂ ಬತ್ತದ ರಾಮಲಿಂಗೇಶ್ವರ ಬಾವಿ

ಚಿಕ್ಕೋಡಿ: ತಾಲ್ಲೂಕಿನ ಉಮರಾಣಿ ಹೊರವಲಯದಲ್ಲಿರುವ ರಾಮಲಿಂಗ ದೇವಸ್ಥಾನ ಪೌರಾಣಿಕ ಹಾಗೂ ಐತಿಹಾಸಿಕ ಮಹತ್ವ ಹೊಂದಿದೆ. ಇಡೀ ಜಿಲ್ಲೆಯಲ್ಲಿ ಭೀಕರ ಬರದಿಂದ ಜಲಕ್ಷಾಮ ಉಂಟಾಗಿದೆ. ನದಿ, ಹಳ್ಳ, ಕೊಳ್ಳಗಳು ಬತ್ತಿವೆ. ಆದರೆ, ಇಲ್ಲಿನ ರಾಮಲಿಂಗೇಶ್ವರ 20 ಅಡಿ ಬಾವಿಯಲ್ಲಿ ಮಾತ್ರ ನಿರಂತರ ಜಲ ಪೂರಣವಾಗಿದೆ. ಗ್ರಾಮದಿಂದ 3 ಕಿ.ಮೀ ದೂರದಲ್ಲಿರುವ ಈ ಬಾವಿ ಎಂಥದ್ದೇ ಬಿರು ಬೇಸಿಗೆಯಲ್ಲೂ, ಬರದಲ್ಲೂ ಬತ್ತಿದ ಉದಾಹರಣೆ ಇಲ್ಲ. ಬೆಟ್ಟ ಗುಡ್ಡಗಳ ನಡುವೆ ತಲೆ ಎತ್ತಿನಿಂತ ದೇವಸ್ಥಾನದಲ್ಲಿ …

Read More »

ಬತ್ತಿದ ಜೀವನದಿ; ಹೆಚ್ಚಿದ ದುಗುಡ

ಚಿಕ್ಕೋಡಿ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯಲ್ಲಿ ನೀರಿನ ಪ್ರಮಾಣ ತೀವ್ರ ಕುಸಿತ ಕಂಡಿದೆ. ಇದರಿಂದ ಮನುಷ್ಯರು ಮಾತ್ರವಲ್ಲ; ಜಲಚರಗಳಿಗೂ ಆತಂಕ ಎದುರಾಗಿದೆ. ಚಿಕ್ಕೋಡಿ ಉಪವಿಭಾಗದ ಎಲ್ಲ ಪ್ರದೇಶಗಳಲ್ಲೂ ಕುಡಿಯುವ ನೀರಿಗೆ, ಬಳಕೆಗೆ, ಹೊಲ- ಗದ್ದೆಗಳಿಗೆ, ಜಾನುವಾರುಗಳಿಗೂ ಸಂಕಷ್ಟ ಎದುರಾಗಿದೆ. ಚಿಕ್ಕೋಡಿ, ರಾಯಬಾಗ, ಕಾಗವಾಡ, ಅಥಣಿ ತಾಲ್ಲೂಕು ವ್ಯಾಪ್ತಿಯ ನೂರಾರು ಗ್ರಾಮಗಳು ಕೃಷ್ಣಾ ನದಿಯನ್ನು ಅವಲಂಬಿಸಿವೆ. ಉಪ ವಿಭಾಗ ವ್ಯಾಪ್ತಿಯಲ್ಲಿ 10 ಸಣ್ಣ ಪುಟ್ಟ ಬ್ಯಾರೇಜ್‌ಗಳಿದ್ದು, ಇನ್ನು 10 ದಿನಗಳಲ್ಲಿ ಬ್ಯಾರೇಜ್‌ನಲ್ಲಿ ಸಂಗ್ರಹವಾಗಿರುವ …

Read More »