Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ (page 14)

ಚಿಕ್ಕೋಡಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪುರಸಭೆ ಕಾರ್ಯಾಲಯ ಆವರಣದಲ್ಲಿ ಪೌರ ಕಾರ್ಮಿಕರು ಧರಣಿ ಕೈಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪುರಸಭೆ ಕಾರ್ಯಾಲಯ ಆವರಣದಲ್ಲಿ ಪೌರ ಕಾರ್ಮಿಕರು ಧರಣಿ ಕೈಗೊಂಡಿದ್ದಾರೆ. ಕರ್ನಾಟಕ ರಾಜ್ಯ ಪೌರ ನೌಕರರ ಸೇವಾ ಸಂಘ ಬೆಂಗಳೂರು ಚಿಕ್ಕೋಡಿ ಶಾಖೆ ಪೌರ ಕಾರ್ಮಿಕರ ವಿಶೇಷ ನೇರ ನೇಮಕಾತಿ ವಿಳಂಬ ಖಂಡಿಸಿ ಅನಿರ್ದಿಷ್ಟ ಅವಧಿಯವರೆಗೂ ಮುಸ್ಕರ ನಡೆಸಿದ್ದಾರೆ. ಸುಮಾರು ಹತ್ತು ವರ್ಷದಿಂದ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂ ಗೊಳಿಸಬೇಕು, ಹಾಗೂ ಪೌರಕಾರ್ಮಿಕರು ಕೆಲಸದಲ್ಲಿ ಮರಣ ಹೊಂದಿದಲ್ಲಿ ಅವರ ಮನೆಯವರಿಗೆ ಕೆಲಸಕ್ಕೆ ನೇಮಿಕ ಮಾಡಿಕೊಳ್ಳಬೇಕು ಎಂದು …

Read More »

ಹಿಡಕಲ್‌ ಡ್ಯಾಂಗೆ ಒಂದೇ ದಿನ 8 ಅಡಿ ನೀರು

ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಅದರೆ ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆದರೆ ಜಿಲ್ಲೆಯಲ್ಲಿ ಇನ್ನೂ ಆತಂಕ ಪಡುವಷ್ಟು ಪ್ರವಾಹದ ಸ್ಥಿತಿ ಎದುರಾಗಿಲ್ಲ.   ಮಹಾರಾಷ್ಟ್ರದ ಅಂಬೋಲಿ ಮತ್ತು ಚಂದಗಡ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಇದರಿಂದ ಹಿಡಕಲ್‌ ಜಲಾಶಯದ ನೀರಿನ ಮಟ್ಟ ಒಂದೇ ದಿನದಲ್ಲಿ ಎಂಟು ಅಡಿಗಳಷ್ಟು ಏರಿಕೆಯಾಗಿದೆ. ಘಟಪ್ರಭಾ ನದಿಗೆ ಈಗ …

Read More »

ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ಕೃಷ್ಣಾ ಹಾಗೂ ಉಪನದಿಗಳಿಗೆ ಉಂಟಾದ ಭೀಕರ ಪ್ರವಾಹದ ಸಂತ್ರಸ್ತರ ಕಣ್ಣಿರೂ ಮಾತ್ರ ಇನ್ನೂ ನಿಂತಿಲ್ಲ

ಚಿಕ್ಕೋಡಿ: ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ಕೃಷ್ಣಾ ಹಾಗೂ ಉಪನದಿಗಳಿಗೆ ಉಂಟಾದ ಭೀಕರ ಪ್ರವಾಹದ ಸಂತ್ರಸ್ತರ ಕಣ್ಣಿರೂ ಮಾತ್ರ ಇನ್ನೂ ನಿಂತಿಲ್ಲ. ಪ್ರವಾಹದಲ್ಲಿ ಕೊಚ್ಚಿ ಹೋದ ರಸ್ತೆ, ಬ್ರಿಡ್ಜ್ಗಳ ಕಾಮಗಾರಿ ಮುಕ್ತಾಯಗೊಂಡಿವೆ. ಆದರೆ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪೂರ್ಣ ಪ್ರಮಾಣದ ಪರಿಹಾರ ಸಿಕ್ಕಿಲ್ಲ. ಇದರಿಂದ ನದಿ ತೀರದ ಜನ ಸಂಕಷ್ಟ ಪಡುವಂತಾಗಿದೆ. ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿದ ಭಾರಿ ಮಳೆಯಿಂದ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ ಅಪಾರ …

Read More »

12 ಕ್ವಿಂಟಾಲ್ ರೇಶನ್ ಅಕ್ಕಿ ಜಪ್ತಿ ವಶಕ್ಕೆ ಪಡೆದುಕೊಳ್ಳುವಲ್ಲಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಠಾಣೆ ಪೊಲೀಸರು ಯಶಸ್ವಿ

ಟ್ರಕ್‍ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ರೇಶನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಗಾಂಧಿನಗರದಿಂದ ಕೊಲ್ಲಾಪುರಕ್ಕೆ ರೇಶನ್ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಂಕೇಶ್ವರ ಠಾಣೆ ಪಿಎಸ್‍ಐ ಮತ್ತು ಸಿಬ್ಬಂದಿಗಳು 12 ಕ್ವಿಂಟಾಲ್ ಅಕ್ಕಿಯನ್ನು ಟ್ರಕ್ ಸಮೇತ ಜಪ್ತಿ ಮಾಡಿದ್ದಾರೆ. ಏಂ 24 1751 ಅಶೋಕ್ ಲೈಲೆಂಡ್ ಟ್ರಕ್ ಇದಾಗಿದೆ. ಬೆಳಗಾವಿ ತಾಲೂಕಿನ ಬಸವಣ್ಣ ಕುಡಚಿ …

Read More »

ಬೋಟ್ ಮೂಲಕ ವಾಹದ ಪರಿಸ್ಥಿತಿಯನ್ನು ಅವಲೋಕಿಸಿದ ತಹಶೀಲ್ದಾರ ಸಿ.ಎಸ್.ಕುಲಕರ್ಣಿ

ಕೃಷ್ಣಾ ಹಾಗೂ ಉಪನದಿಗಳಿಗೆ ಪ್ರವಾಹ ಭೀತಿ ಹಿನ್ನಲೆಯಲ್ಲಿ ಬೋಟ್ ಮೂಲಕ ತಹಶೀಲ್ದಾರ ಸಿ.ಎಸ್.ಕುಲಕರ್ಣಿಯವರು ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿದರು. ಹೌದು ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಇತ್ತ ಚಿಕ್ಕೋಡಿ ತಾಲೂಕಿನ ಮಾಂಜರಿ, ಇಂಗಳಿ, ಚಂದೂರ, ಯಡೂರ ಗ್ರಾಮದ ನದಿಗಳಿಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕೋಡಿ ತಹಶೀಲ್ದಾರ ಸಿ.ಎಸ್.ಕುಲಕರ್ಣಿ ಬೋಟ್ ಮೂಲಕ ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿದರು. ನಂತರ ನದಿತೀರದ ಜನರ ಜೊತೆಗೆ ತಹಶೀಲ್ದಾರ ಕುಲಕರ್ಣಿ …

Read More »

ಚಿಕ್ಕೋಡಿ: ವಿದ್ಯುತ್ ಅವಘಡದಿಂದ ವಿದ್ಯಾರ್ಥಿನಿ ಸಾವು: ಪರಿಹಾರಕ್ಕಾಗಿ ಬೃಹತ್ ಪ್ರತಿಭಟನೆ

ಚಿಕ್ಕೋಡಿ: ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ವಿದ್ಯಾರ್ಥಿ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಬೇಕೆಂದು ಆಗ್ರಹಿಸಿ ಚಿಕ್ಕೋಡಿ ನಗರದಲ್ಲಿ ರಾಜ್ಯ ರೈತ ಸಂಘ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರಕಾರದ ವಿರುದ್ದ ಆಕ್ರೋಶ ಹೊರ ಹಾಕಿದೆ. ಕಳೆದ ಎರಡು ದಿನಗಳ ಹಿಂದೆ ನಿಪ್ಪಾಣಿ ತಾಲೂಕಿನ ಡೋಣೆವಾಡಿ ಮರಾಠಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ವಿದ್ಯುತ್ ಅವಘಡದಿಂದ ಮೂರನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅನುಷ್ಕಾ ಬೆಂಡೆ ಮೃತಪಟ್ಟಿದ್ದು. ಬಾಲಕಿ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಕೊಡಬೇಕೆಂದು …

Read More »

ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಯುವಕರಿಬ್ಬರ ಕುತ್ತಿಗೆ ಭಾಗದ ಮೇಲೆ ಬ್ಲೇಡ್‌ನಿಂದ ಹಲ್ಲೆ

ಸಂಕೇಶ್ವರ : ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ, ವ್ಯಕ್ತಿಯೊಬ್ಬ ಯುವಕರಿಬ್ಬರ ಕುತ್ತಿಗೆ ಭಾಗದ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.   ಇಲ್ಲಿನ ವಡ್ಡರ ಓಣಿಯ ನಿವಾಸಿಗಳಾದ ಸಂತೋಷ ವಡ್ಡರ ಹಾಗೂ ಇವರ ಸಹೋದರ ಲಕ್ಷ್ಮಣ ವಡ್ಡರ ಗಾಯಗೊಂಡವರು. ಆರೋಪಿ ದಿಲೀಪ್‌ ಎಂಬಾತ ಚಪ್ಪಲಿಯ ಚರ್ಮ ಕತ್ತರಿಸುವ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದಾನೆ. ಜೂಜಾಟವೇ ಗಲಾಟೆಗೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ದಿಲೀಪ್‌ಗೆ …

Read More »

ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ,ಅಪಾಯಕ್ಕೆ ಆಹ್ವಾನ

ಬೆಳಗಾವಿ: ಮತ್ತೊಂದು ಮಳೆಗಾಲ ಬಂದರೂ ಹಳ್ಳಿಗಳ ಸಂಪರ್ಕ ರಸ್ತೆಗಳು ಮಾತ್ರ ಇನ್ನೂ ದುರಸ್ತಿ ಕಂಡಿಲ್ಲ. ಕಳೆದ ಬಾರಿಯ ಅತಿವೃಷ್ಟಿ ಹಾಗೂ ಪ್ರವಾಹ ಪ್ರಭಾವದಿಂದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ಬಿದ್ದಿದ್ದವು. ಅವುಗಳಲ್ಲಿ ಕೆಲವನ್ನು ತೇಪೆ ಹಚ್ಚಿ ದುರಸ್ತಿ ಮಾಡಲಾಗಿದೆ. ಮತ್ತೆ ಕೆಲವು ಇನ್ನೂ ಹಾಗೇ ಇವೆ. ಹೀಗಾಗಿ, ಹಳ್ಳಿ ಮತ್ತು ನಗರಗಳ ಮಧ್ಯೆ ಸಂಚಾರ ಕೊಂಡಿಯಾದ ರಸ್ತೆಗಳೇ ಈಗ ಸಂಚಕಾರ ತರುವಂತಾಗಿವೆ. ಅತಿಯಾಗಿ ಮಳೆ ಬಿದ್ದ ಬೆಳಗಾವಿ ತಾಲ್ಲೂಕು, …

Read More »

ತನ್ನ ಹೇಳಿಕೆಯಿಂದ U ಟರ್ನ್ ಹೊಡೆದ ಕತ್ತಿ

ಚಿಕ್ಕೋಡಿ:2024ರ ಬಳಿಕ ಕರ್ನಾಟಕದಲ್ಲಿ ಎರಡು ರಾಜ್ಯ ಹಾಗೂ ದೇಶದಲ್ಲಿ 50 ರಾಜ್ಯಗಳು ನಿರ್ಮಾಣ ಆಗುತ್ತವೆ ಎಂದು ಹೇಳಿಕೆ ನೀಡಿದ್ದ ಸಚಿವ ಸಚಿವ ಉಮೇಶ ಕತ್ತಿ ಮತ್ತೆ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಪದೇ ಪದೇ ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯ ಆಗುತ್ತದೆ ಎಂದು ಹೇಳಿಕೆ ನೀಡುತ್ತಲೇ ಬಂದಿದ್ದ ಉಮೇಶ ಕತ್ತಿ ಇದೀಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿದ್ದು, ಭಾನುವಾರ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ರಾಜ್ಯ ಸೇರಿ …

Read More »

ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ‌ನೀಡಿದರು…

ಶ್ರೀಶೈಲ್ ಜಗದ್ಗುರಗಳ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ‌ನೀಡಿದರು… ಚಿಕ್ಕೋಡಿ ತಾಲೂಕಿನ ಯಡೂರಿನ ವೀರಭದ್ರೇಶ್ವರ ದೇವಸ್ಥಾನದ ಕಾಡಸಿದ್ದೇಶ್ವರ ಕಲ್ಯಾಣಭವನದ ಆವರಣದಲ್ಲಿ ಸಸಿ‌ ನೆಡುವ ಕಾರ್ಯಕ್ರಮಕ್ಕೆ ಶ್ರೀಶೈಲ ಜದ್ಗುರುಗಳು ಹಾಗೂ ನಿಡಸೋಸಿಯ ಪಂಚಮಶಿವಲಿಂಗೇಶ್ವರ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು..ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ …

Read More »