Breaking News

ಚಿಕ್ಕೋಡಿ

ಹೆಂಡತಿ ಹೊಟ್ಟೆಗೆ ಚೂರಿ ಹಾಕಿದ ಗಂಡ: ಭಯಗೊಂಡು ಆತ್ಮಹತ್ಯೆಗೆ ಶರಣು

ಚಿಕ್ಕೋಡಿ (ಬೆಳಗಾವಿ): ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಂಡ – ಹೆಂಡತಿ ಜಗಳ ವಿಕೋಪಕ್ಕೆ ತಿರುಗಿದ್ದು, ಹೆಂಡತಿ ಹೊಟ್ಟೆಗೆ ಗಂಡ ಚೂರಿ ಹಾಕಿದ್ದಾನೆ. ಬಳಿಕ ಇದರಿಂದ ಭಯಗೊಂಡ ಆತ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಪ್ಪಲಗುದ್ದಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ‌ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ನಿವಾಸಿ ಪ್ರಭು ರಾಮಪ್ಪ ಮೇತ್ರಿ (48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ಪ್ರಭು ರಾಮಪ್ಪ ಮತ್ತು ಆತನ ಹೆಂಡತಿ ಪಾರ್ವತಿ ಮಧ್ಯೆ ಆಗಾಗ …

Read More »

ಉಮೇಶ್ ಕತ್ತಿ ನಿಧನ ಹಿನ್ನೆಲೆ ಅದ್ದೂರಿ ದಸರಾ ಆಚರಣೆ ಇಲ್ಲ : ಹುಕ್ಕೇರಿ ಹಿರೇಮಠ ಶ್ರೀ

ಚಿಕ್ಕೋಡಿ: ಹುಕ್ಕೇರಿ ಮತಕ್ಷೇತ್ರದ ಶಾಸಕ ಹಾಗೂ ಸಚಿವರಾಗಿದ್ದ ಉಮೇಶ್ ಕತ್ತಿ (Umesh Katthi) ಅವರು ಅಕಾಲಿಕ ನಿಧನರಾದ ಹಿನ್ನೆಲೆ ಹುಕ್ಕೇರಿ ಹಿರೇಮಠದ ದಸರಾ ಉತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಹುಕ್ಕೇರಿ ಹಿರೇಮಠದ (Hukkeri Hiremath) ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳು (Chandrasekhar Shivacharya Mahaswami) ತಿಳಿಸಿದರು. ಹುಕ್ಕೇರಿ ಹಿರೇಮಠದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು (Mysuru) ನಂತರದಲ್ಲಿ ಹುಕ್ಕೇರಿ ಹಿರೇಮಠ ದಸರಾ ಉತ್ಸವ ಉತ್ತರ ಕರ್ನಾಟಕ (UttarKarnataka) ಭಾಗದಲ್ಲಿ ಹೆಸರಾಗಿದೆ. …

Read More »

ಚಿಕ್ಕೋಡಿ: ಅಕ್ರಮ ಮದ್ಯ ಮಾರಾಟ ಮಾಡಿದ ವ್ಯಕ್ತಿಗೆ 3 ವರ್ಷ ಕಠಿಣ ಶಿಕ್ಷೆ; 20 ಸಾವಿರ ದಂಡ

ಚಿಕ್ಕೋಡಿ: ಅಕ್ರಮ ಸಾರಾಯಿ ಮಾರಾಟ ಮಾಡಿದ ವ್ಯಕ್ತಿಗೆ ಚಿಕ್ಕೋಡಿ ಜೆಎಂಎಫ್‌ಸಿ ನ್ಯಾಯಾಲಯ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 20 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಚಿಕ್ಕೋಡಿ ತಾಲೂಕಿನ ಜೈನಾಪೂರ ಗ್ರಾಮದ ಆನಂದ ಮಹಾದೇವ ಗರಬುಡೆ ಎಂಬಾತನೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯಾಗಿದ್ದಾನೆ. ಕಳೆದ 24-09- 2015 ರಂದು ಜೈನಾಪೂರ ಕ್ರಾಸ್ ಹತ್ತಿರ ಅಕ್ರಮ ಸಾರಾಯಿ ಮಾರಾಟ ಮಾಡುವ ಕುರಿತು ಆರೋಪಿ ಮೇಲೆ ಅಬಕಾರಿ ಉಪ ನಿರೀಕ್ಷಕ ವಿ.ಎ.ಕಳ್ಳಿಕದ್ದಿ …

Read More »

ಗಣೇಶ ಹುಕ್ಕೇರಿ, ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಸರಳವಾಗಿ ಜರುಗಿದ ಗಣಹೋಮ

ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪ್ರತಿ‌ ವರ್ಷ ಅದ್ದೂರಿಯಾಗಿ ಜರುಗುತ್ತಿದ್ದ ಗಣಹೋಮವು ಈ ವರ್ಷ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರ ಸಹೋದರ ಕೇದಾರಿ ಹುಕ್ಕೇರಿ ನಿಧನ ಹೊಂದಿದ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಗಣಹೋಮ ಜರುಗಿತು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಹನುಮಾನ ಗಣೇಶ ಮಂಡಳ ವತಿಯಿಂದ ಶಾಸಕ ಗಣೇಶ ಹುಕ್ಕೇರಿ ಹಾಗೂ ಎಂಎಲ್ಸಿ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಪ್ರತಿವರ್ಷ ಗಣಹೋಮ ಅದ್ದೂರಿಯಾಗಿ ಜರಗುತಿತ್ತ. ಆದರೆ ಈ ಬಾರಿ …

Read More »

ಉಮೇಶ್‌ ಕತ್ತಿ ಸಮಾಧಿಗೆ ಪೂಜೆ- ಗುಟ್ಕಾ ಪ್ಯಾಕೆಟ್ ಇಟ್ಟು ನಮನ

ಚಿಕ್ಕೋಡಿ: ಹೃದಯಾಘಾತದಿಂದ ಸಾವನ್ನಪ್ಪಿದ ಉಮೇಶ್ ಕತ್ತಿ(Umesh Katti) ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿ ಅಂತಿಮ ವಿಧಿ ವಿಧಾನವನ್ನು ಇಂದು ಪೂರೈಸಿದರು. ನಿನ್ನೆ ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ಗದ್ದೆಯಲ್ಲಿ ತಂದೆ ತಾಯಿ ಸಮಾಧಿ ಪಕ್ಕವೇ ಅವರ ಅಂತ್ಯಕ್ರಿಯೆ ನಡೆದಿತ್ತು. ಸಮಾಧಿಗೆ ತೆರಳಿ ಪುತ್ರ ನಿಖಿಲ್ ಕತ್ತಿ, ಅಳಿಯ ನಿತಿನ್ ಪ್ರಭುದೇವ ಅವರು ಪುರೋಹಿತರ ಮಾರ್ಗದರ್ಶನದಂತೆ ಪೂಜೆ ಸಲ್ಲಿಸಿದರು. ಸಮಾಧಿಗೆ ಪೂಜೆ ಮಾಡಿ ಸಮಾಧಿಯ ಮೇಲೆ ಅವರಿಷ್ಟದ ತಿಂಡಿ, …

Read More »

ರಾಯಬಾಗದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿದ ಹದಿನೈದು ಕುರಿಗಳು ಸ್ಥಳದಲ್ಲೇ ಸಾವು…!

ಚಿಕ್ಕೋಡಿ: ರೈಲು ಹಳಿಯಲ್ಲಿ ಹೋಗುತ್ತಿದ್ದ ಕುರಿಗಳ ಮೇಲೆ ರೈಲು ಹರಿದ ಪರಿಣಾಮ 15 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬೆಳಗಾವಿಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ರೈಲು ನಿಲ್ದಾಣದ ಹೊರವಲಯದಲ್ಲಿರುವ ರೈಲ್ವೆ ಗೇಟ್ ಬಳಿ ಅವಘಡ ಸಂಭವಿಸಿದೆ. ಚಿಂಚಲಿ ಪಟ್ಟಣದ ವಸಂತ ಜಾವೇದಾರ್ ಎಂಬುವವರಿಗೆ ಸೇರಿದ 15 ಕುರಿಗಳು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಕುರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ …

Read More »

ಪೊಲೀಸ್ ಎಂದು ನಂಬಿಸಿ ಮಹಿಳೆಯ ಚಿನ್ನಾಭರಣ ಎಗರಿಸಿದ್ದ ಆರೋಪಿ ಅಂದರ್

ಚಿಕ್ಕೋಡಿ: ತಾನು ಪೊಲೀಸ್ ಎಂದು ನಂಬಿಸಿ ಮಹಿಳೆಯ ಬಳಿ ಇದ್ದ ಚಿನ್ನಾಭರಣ ಎಗರಿಸಿದ್ದ ಆರೋಪಿಯನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಾರಾಷ್ಟ್ರದ ಸಾಂಗ್ಲಿಯ ಮಹಮ್ಮದ್ ಯೂಸುಫ್ ಇರಾನಿ ಎಂದು ಗುರುತಿಸಲಾಗಿದೆ. ಇತ್ತಿಚೆಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ವಿಜಯಲಕ್ಷ್ಮೀ ರಾಜು ಚೌಗಲೆ ಎಂಬ ಮಹಿಳೆಗೆ ತಾನು ಪೊಲೀಸ್ ಎಂದು ನಂಬಿಸಿ, ಬೇರೆ ಕಡೆ ಗಮನ ಸೆಳೆದು 1.5 ಲಕ್ಷ ರೂ. ಬೆಲೆಯ ಚಿನ್ನಾಭರಣ ಕದ್ದು ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ …

Read More »

ಲೋಕಕಲ್ಯಾಣಕ್ಕಾಗಿ 220 ಕಿ.ಮೀ. ಉರುಳು ಸೇವೆ ಮಾಡಿದ ಪಂಡರಪುರದ ವಿಠ್ಠಲನ ಭಕ್ತ

ಚಿಕ್ಕೋಡಿ: ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ದೇವಸ್ಥಾನಗಳಲ್ಲಿ ಉರುಳು ಸೇವೆ ಮಾಡೋದನ್ನ ಕೇಳಿದ್ದೀವಿ, ನೋಡಿದ್ದೀವಿ‌. ಅಷ್ಟೆ ಯಾಕೆ ಪಾದಯಾತ್ರೆ ಮೂಲಕ ತಮ್ಮ ಮನೆದೇವರ ಹರಕೆ ತೀರಿಸಿದವರನ್ನೂ ಸಹ ನೋಡಿರ್ತೀವಿ. ಆದರೆ ಇಲ್ಲೊಬ್ಬ ವಿಠ್ಠಲನ ಭಕ್ತ ಲೋಕಕಲ್ಯಾಣಕ್ಕಾಗಿ ಸುಮಾರು 220 ಕಿ.ಮೀ. ಉರುಳು ಸೇವೆ ಮಾಡಿ ಪಂಡರಪುರದ ವಿಠ್ಠಲನ ಕೃಪೆಗೆ ಪಾತ್ರನಾಗಿದ್ದಾ‌ನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೇವನೂರು ಗ್ರಾಮದ ನಿವಾಸಿ ಶಹಾಜೀ ಜಾಧವ್ ಉರುಳು ಸೇವೆ ಸಲ್ಲಿಸಿದ ಭಕ್ತ. ಶಹಾಜೀ ಅಥಣಿ ತಾಲೂಕಿನ …

Read More »

ಬಸವೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ಜನಮನ ಸೆಳೆದ‌ ನಿಕಾಲಿ ಜಂಗಿ ಕುಸ್ತಿ

ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಬಸವೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ನಿಕಾಲಿ ಜಂಗಿ ಕುಸ್ತಿಗಳನ್ನು ಆಯೋಜಿಸಲಾಗಿತ್ತು… ಕಳೆದ 2 ವರ್ಷಗಳಿಂದ ‌ಕೊರೊನಾದಿಂದಾಗಿ ಸರಳವಾಗಿ ನಡೆದಿದ್ದ ಇಂಗಳಿ ಗ್ರಾಮದ ಬಸವೇಶ್ವರ ಜಾತ್ರಾಮಹೋತ್ಸವ ಈ ಬಾರಿ ಅದ್ದೂರಿಯಾಗಿ ಜರುಗಿತು .ಇನ್ನೂ ಜಾತ್ರಾಮಹೋತ್ಸವ ಅಂಗವಾಗಿ ನಿಕಾಲಿ ಜಂಗಿ ಕುಸ್ತಿಗಳನ್ನು ಆಯೋಜಿಸಲಾಗಿತ್ತು.ಇದರಲ್ಲಿ ಕರ್ನಾಟಕ, ಮಹಾರಾಷ್ಟ್ರದ, ಹರಿಯಾಣ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ‌ಹೆಸರಾಂತ ಕುಸ್ತಿಪಟುಗಳು ಭಾಗಿಯಾಗಿದ್ದರು. ಈ ನಿಕಾಲಿ ಜಂಗಿ ಕುಸ್ತಿಗಳನ್ನು ನೋಡಲು ಶಾಸಕ ಗಣೇಶ ಹುಕ್ಕೇರಿ …

Read More »

ರಸ್ತೆಅಗೆದು ಗ್ರಾಮಗಳಿಗೆ ಸಂಚಾರ ಬಂದ್ ಮಾಡಿದ್ದ ಬಿಜೆಪಿ ಮುಖಂಡನ ವಿರುದ್ಧ ಸಾರ್ವಜನಿಕರ ಆಕ್ರೋಶ

ಚಿಕ್ಕೋಡಿ: ತನ್ನ ಜಮೀನಿನಲ್ಲಿ ಕಾಲುವೆ ನೀರು ಬರುತ್ತಿದೆ ಎನ್ನುವ ಕಾರಣಕ್ಕೆ ರಸ್ತೆಯನ್ನು ಅಗೆದು ಎರಡು ಗ್ರಾಮಗಳಿಗೆ ಸಂಚಾರ ಬಂದ್ ಮಾಡಿದ್ದ ಬಿಜೆಪಿ ಮುಖಂಡನೋರ್ವನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೇಗುಣಶಿ – ಯಬರಟ್ಟಿ ರಸ್ತೆಯ ಪಕ್ಕದ ತನ್ನ ಗದ್ದೆಯಲ್ಲಿ ನೀರು ನಿಲ್ಲುತ್ತೆ ಎನ್ನುವ ಕಾರಣಕ್ಕೆ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತಮ್ಮಣ್ಣ ತೇಲಿ ಎಂಬಾತ ಸರ್ಕಾರದ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ರಸ್ತೆಯನ್ನೆ …

Read More »