Breaking News

ಚಿಕ್ಕೋಡಿ

ಸೋತ ವ್ಯಕ್ತಿಯನ್ನ ಡಿಸಿಎಂ ಮಾಡಿದರು, ಈಗ ಯಾವುದೇ ಬೇಸರ ಇಲ್ಲ: ಲಕ್ಷ್ಮಣ ಸವದಿ

ಚಿಕ್ಕೋಡಿ: ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಲಕ್ಷ್ಮಣ ಸವದಿಯನ್ನ ಕೈ ಬಿಟ್ಟಿದ್ದಾರೆ. ಇದೇ ವಿಚಾರವಾಗಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಂಪುಟದಿಂದ ತನ್ನನ್ನ ಕೈ ಬಿಟ್ಟಿದ್ದಕ್ಕೆ ಯಾವುದೇ ಬೇಸರ ಇಲ್ಲ ಎಂದಿದ್ದಾರೆ. ಸೋತಂತಹ ವ್ಯಕ್ತಿಯನ್ನು ಡಿಸಿಎಮ್ ಮಾಡಿದ್ದಾರೆ, ಸಚಿವನನ್ನಾಗಿ ಮಾಡಿ ನನಗೆ ಒಳ್ಳೆಯ ಸ್ಥಾನಮಾನವನ್ನ ಪಕ್ಷ ನೀಡಿದೆ. ಈಗ ಬೇಸರ ಮಾಡಿಕೊಳ್ಳುವ ಪ್ರಶ್ನೆಯೇ ಬರಲ್ಲ ಎಂದಿದ್ದಾರೆ. ಕೆಲವೊಮ್ಮೆ ಮತ್ತೊಬ್ಬರಿಗೆ ಅವಕಾಶ ಕೊಡುವುದಕ್ಕಾಗಿ ಅವಧಿ …

Read More »

ಕಾಗವಾಡ, ಕುಗನೊಳ್ಳಿ ಚೆಕ್ ಪೋಸ್ಟ್​​​ಗಳಿಗೆ ಜಿಲ್ಲಾಧಿಕಾರಿ, ಎಸ್‌ಪಿ ಭೇಟಿ

ಚಿಕ್ಕೋಡಿ : ಮಹಾರಾಷ್ಟ್ರದಿಂದ ಬೆಳಗಾವಿ‌ ಮೂಲಕ ರಾಜ್ಯದ ಗಡಿ ಪ್ರವೇಶಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ನೆಗೆಟಿವ್ ವರದಿ ಹೊಂದಿದವರಿಗೆ ಮಾತ್ರ ರಾಜ್ಯದೊಳಗೆ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲೆಯ ಕುಗನೊಳ್ಳಿ ಹಾಗೂ ಕಾಗವಾಡ ಚೆಕ್ ಪೋಸ್ಟ್​​​ಗಳಿಗೆ ಜಿಲ್ಲಾಧಿಕಾರಿ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಲ್ಲಿ ನಿಯೋಜಿತ ಅಧಿಕಾರಿಗಳು ಹಾಗೂ …

Read More »

ಚಿಕ್ಕೋಡಿ: ಕಾಲೇಜು ಕಾಂಪೌಂಡ್​ ಗೋಡೆಗೆ ಅಳವಡಿಸಿದ್ದ ಗೇಟ್​​ ಆಕಸ್ಮಿಕವಾಗಿ ಬಿದ್ದ ಕಾರಣ 10 ವರ್ಷದ ಬಾಲಕ ಸ್ಥಳದಲ್ಲಿಯೇ ಸಾವು

ಚಿಕ್ಕೋಡಿ: ಕಾಲೇಜು ಕಾಂಪೌಂಡ್​ ಗೋಡೆಗೆ ಅಳವಡಿಸಿದ್ದ ಗೇಟ್​​ ಆಕಸ್ಮಿಕವಾಗಿ ಬಿದ್ದ ಕಾರಣ 10 ವರ್ಷದ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ಚಿಕ್ಕೋಡಿಯ ಆರ್.ಡಿ ಕಾಲೇಜಿನಲ್ಲಿ ನಡೆದಿದೆ. ಚಿಕ್ಕೋಡಿ ನಗರದ ಇಂದಿರಾನಗರ ನಿವಾಸಿಯಾಗಿದ್ದ ಸೂಫಿಯಾನ್ ರಾಜು ಮುಲ್ಲಾ (10) ಮೃತ ದುರ್ದೈವಿ. ಬಾಲಕ ಗೇಟ್ ದಾಟಿ ಮನೆಗೆ ಹೊರಟಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಎಣ್ಣೆ ಬೇಕು ಎಣ್ಣೆ, ಬಾರ್ ಬಂದ್ ಮಾಡ್ಬೇಡಿ: ಬಿಜೆಪಿ ಮುಖಂಡನ ಪ್ರತಿಭಟನೆ

ಬೆಳಗಾವಿ/ಚಿಕ್ಕೋಡಿ: ಎಣ್ಣೆ ಬೇಕು ಎಣ್ಣೆ ಎಂದು ಬಿಜೆಪಿ ಮುಖಂಡ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಚಿಕ್ಕೋಡಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಬಾರ್ ಬಂದ್ ಮಾಡದಂತೆ ಮದ್ಯ ಪ್ರಿಯರ ಜೊತೆಗೆ ಗ್ರಾಮ ಪಂಚಾಯತಿ ಸದಸ್ಯ ಪ್ರತಿಭಟನೆ ನಡೆಸಿದ್ದಾರೆ. ಬಾರ್ ಎದುರೇ ಗುಂಪು ಕಟ್ಟಿಕೊಂಡು ಎಣ್ಣೆ ಬೇಕು ಎಣ್ಣೆ ಎಂದು ಪ್ರೊಟೆಸ್ಟ್ ಮಾಡಿದ್ದಾರೆ. ಸಂಬರಗಿ ಗ್ರಾಮ ಪಂಚಾಯತ ಸದಸ್ಯ ಅಶೋಕ್ ಭಾನುದಾಸೆ ಮಾನೆ ಹಾಗೂ ಕೆಲವು …

Read More »

ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು, ಜೊತೆಗೆ ಉತ್ತಮ ವಾಗ್ಮಿಗಳಾಗಿದ್ದಾರೆ”: ಉಮೇಶ್ ಕತ್ತಿ

ಚಿಕ್ಕೋಡಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು, ಜೊತೆಗೆ ಉತ್ತಮ ವಾಗ್ಮಿಗಳಾಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ಚಿಕ್ಕೋಡಿಯಲ್ಲಿ ಹಾಡಿಹೊಗಳಿದ್ದಾರೆ. ಇಂದು ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಉಮೇಶ್ ಕತ್ತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಶಿಕ್ಷಣ ಸಚಿವರು ಜವಾಬ್ದಾರಿಯುತ ಮಂತ್ರಿಯಾಗಿದ್ದಾರೆ. ಉತ್ತಮ ರೀತಿಯಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ …

Read More »

ಮಳೆರಾಯನ ಅಬ್ಬರ- ಕೃಷ್ಣಾ ನದಿ ನೀರಿನಲ್ಲಿ ಏರಿಕೆ, ಸೇತುವೆ ಜಲಾವೃತ

ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮತ್ತೆ ಮಳೆರಾಯನ ಅಬ್ಬರ ಆರಂಭವಾಗಿದೆ. ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿ ಸೇತುವೆಗಳು ಜಲಾವೃತವಾಗಿದೆ. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಕೃಷ್ಣಾ ನದಿಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾದ ಪರಿಣಾಮ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ಕೃಷ್ಣಾ ನದಿಯ ಕಲ್ಲೋಳ – ಯಡೂರ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಸದ್ಯ 56 ಸಾವಿರ ಕ್ಯೂಸೇಕ್ ನಷ್ಟು …

Read More »

ವಿಧವಾ ಮಾಸಾಶನಕ್ಕಾಗಿ ಕಚೇರಿಗೆ ಬಂದಿದ್ದ ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಸಿಲ್ದಾರ ಸಾರ್ವಜನಿಕರಿಂದ ಒದೆ

ವಿಧವಾ ಮಾಸಾಶನಕ್ಕಾಗಿ ಕಚೇರಿಗೆ ಬಂದಿದ್ದ ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಸಿಲ್ದಾರ ಸಾರ್ವಜನಿಕರಿಂದ ಒದೆ ತಿಂದಿದ್ದಾನೆ. ಚಿಕ್ಕೋಡಿ ಗ್ರೇಡ್ 2 ತಹಸಿಲ್ದಾರ ಜಮಾದಾರ ಎನ್ನುವಾತ ಮಾನಗೇಡಿ ಕೃತ್ಯ ಮಾಡಿದಾತ. ತಾಲೂಕಿನ ಮಹಿಳೆಯೊಬ್ಬಳ ಪತಿ ಕೊರೋನಾದಿಂದ ಸಾವಿಗೀಡಾಗಿದ್ದಾರೆ. ಹಾಗಾಗಿ ತನಗೆ ವಿಧವಾ ಮಾಸಾಶನ ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಿದ್ದಾಳೆ. ಆಕೆಯ ಪುತ್ರ ಈ ಸಂಬಂಧ ಹಲವು ಬಾರಿ ತಹಸಿಲ್ದಾರ ಕಚೇರಿಗೆ ಬಂದಿದ್ದಾನೆ. ಆದರೆ ಕೆಲಸ ಮಾಡಿಕಕೊಡದ ಜಮಾದಾರ, ತಾಯಿಯನ್ನು ಕಚೇರಿಗೆ …

Read More »

ನೀರಾವರಿ ಯೋಜನೆಯಿಂದ ರೈತರ ಅಭಿವೃದ್ಧಿ-ಸಚಿವೆ ಶಶಿಕಲಾ ಜೊಲ್ಲೆ

ಚಿಕ್ಕೋಡಿ – ನಿಪ್ಪಾಣಿ ತಾಲೂಕಿನ ಸಮಗ್ರ ಅಭಿವೃದ್ಧಿ ಜೊತೆಗೆ ರೈತರ ಅಭಿವೃದ್ಧಿಗೆ ಕೂಡ ಆದ್ಯತೆ ನೀಡಲಾಗಿದೆ. ಕಳೆದ ೩೦-೩೫ ವರ್ಷಗಳಿಂದ ನೀರಿಲ್ಲದೆ ಒಣಗುತ್ತಿರುವ ಬರಡು ಭೂಮಿ ನೀರಾವರಿ ಯೋಜನೆಯಿಂದ ಹಸಿರಿಕರಣವಾಗಲಿದೆ. ಗಂಗಾಕಲ್ಯಾಣ ಯೋಜನೆಯಿಂದ ರೈತರ ಆರ್ಥಿಕ ಅಭಿವೃದ್ಧಿ ಆಗಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.           ಸಮೀಪದ ಸೌಂದಲಗಾ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ ೧.೫ ಕೋಟಿ ವೆಚ್ಚದಲ್ಲಿ ಗಂಗಾಕಲ್ಯಾಣ ನೀರಾವರಿ ಯೋಜನೆಯನ್ನು …

Read More »

ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಸಿಬ್ಬಂದಿ ಎಸಿಬಿ ಬಲೆಗೆ

ಚಿಕ್ಕೋಡಿ: ಅನಧಿಕೃತ ಪಾನ್‌ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ ಎಂದು ಹೆದರಿಸಿ, ಮಾಲೀಕನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸದಲಗಾ ಪೊಲೀಸ್‌ ಠಾಣೆಯ ಪಿಎಸ್‌ಐ ಹಾಗೂ ಇಬ್ಬರು ಪೊಲೀಸ್‌ ಪೇದೆಗಳು ಭ್ರಷ್ಟಾಚಾರ ನಿಗೃಹ ದಳ(ಎಸಿಬಿ)ದ ಬಲೆಗೆ ಬಿದ್ದಿದ್ದಾರೆ. ಗುರುವಾರ ರಾತ್ರಿ ಠಾಣೆ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ ಕುಮಾರ ಹಿತ್ತಲಮನಿ ಹಾಗೂ ಕಾನ್ಸಟೇಬಲ್‌ ಮಾಯಪ್ಪಾ ಗಡ್ಡೆ ಮತ್ತು ಶ್ರೀಶೈಲ ಮಂಗಿ ಅವರನ್ನು ವಶಕ್ಕೆ …

Read More »

ಬೈಕ್ ಅಪಘಾತ : ಸ್ಥಳದಲ್ಲಿಯೇ ಇಬ್ಬರ ಸಾವು.

ಚಿಕ್ಕೋಡಿ : ಬೈಕ್ ಸವಾರರಿಬ್ಬರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಾಗರಮುನ್ನೊಳ್ಳಿ ಟೋಲ್ ಗೆಟ್ ಹತ್ತಿರ ನಡೆದಿದೆ.   ಮೃತರನ್ನು ಸಿದ್ದಾರ್ಥ ಅಶೋಕ ಖೇಮಲಾಪೊರೆ(24) ಮತ್ತು ಪ್ರಮೋದ ಕರೇಪ್ಪ ನಾಯ್ಕ(24) ಅಂತಾ ತಿಳಿದು ಬಂದಿದೆ.         ನಿಪ್ಪಾಣಿ ಸಮೀಪದ ಸ್ತವನಿಧಿಗೆ ದೇವರಿಗೆಂದು ಹೋಗಿ ವಾಪಸ್ಸು ತಮ್ಮೂರಾದ ಬೆಲ್ಲದ-ಬಾಗೇವಾಡಿಗೆ ಬರುವಾಗ ನಾಗರಮುನ್ನೊಳ್ಳಿ ಟೋಲ್ ಗೇಟ್ ಹತ್ತಿರ ಮಳೆಯಾದ ಕಾರಣ …

Read More »