Breaking News

ಬೈಲ್ ಹೊಂಗಲ್

ಪಲ್ಚಿಯಾದ ಕಾರು: ಪ್ರಯಾಣಿಕರು ಪಾರು

ಬೈಲಹೊಂಗಲ : ಸಮೀಪದ ಚಚಡಿ ಗ್ರಾಮದ ಹೊರವಲಯದಲ್ಲಿ ಬುಧವಾರ ನಸುಕಿನಲ್ಲಿ ಕಾರ್ ಪಲ್ಟಿಯಾಗಿ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಚಡಿ ಗ್ರಾಮದಿಂದ ನಯಾನಗರ ಗ್ರಾಮದ ಮಲಪ್ರಭಾ ನದಿ ಸೇತುವೆ ಮಾರ್ಗವಾಗಿ ಚಲಿಸುತ್ತಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಯಿತು. ಅಷ್ಟರಲ್ಲಿ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಅದರಲ್ಲಿದ್ದವರಿಗೆ ಹೆಚ್ಚಿನ ಗಾಯಗಳಾಗಿಲ್ಲ. ಕಾರ್ ತಲೆ ಕೆಳಗಾಗಿ ಬಿದ್ದರೂ ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಸಿಪಿಐ ಯು.ಎಚ್.ಸಾತೇನಹಳ್ಳಿ ಹಾಗೂ ಪೊಲೀಸ್ ಸಿಬ್ಬಂದಿ …

Read More »

ಇಸ್ಟೀಟ್ ಅಡ್ಡೆ ಮೇಲೆ ಬೈಲಹೊಂಗಲ ಪೊಲೀಸ್ ಭರ್ಜರಿ ದಾಳಿ

ಬೈಲಹೊಂಗಲ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಗ್ಯಾಂಬ್ಲಿಂಗ್ ಅಡ್ಡೆಯನ್ನು ಭೇದಿಸಿದ್ದಾರೆ. ಹೌದು ನಿನ್ನೆ ತಡರಾತ್ರಿ ಬೈಲಹೊಂಗಲ ಪಟ್ಟಣದಲ್ಲಿ ಖಚಿತ ಮಾಹಿತಿ ಮೇರೆಗೆ ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಇಸ್ಪೀಟ್ ಆಡುತ್ತಿದ್ದ 7 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1,10,320 ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ

Read More »

ಜನನ, ಮರಣ ನೋಂದಣಿ ಕಾಯ್ದೆತಿದ್ದುಪಡಿ ರದ್ದುಗೊಳಿಸಲು ಆಗ್ರಹ

ಬೈಲಹೊಂಗಲ: ಜನನ ಮತ್ತು ಮರಣ ನೋಂದಣಿ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದ ನ್ಯಾಯಾಂಗದ ವ್ಯಾಪ್ತಿಯನ್ನು ಬದಲಾವಣೆ ಮಾಡಿರುವುದನ್ನು ರದ್ದುಗೊಳಿಸಿ ಮೊದಲಿನಂತೆ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕು ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು. ತಹಶೀಲ್ದಾರ್ ಬಸವರಾಜ ನಾಗರಾಳ ಅವರಿಗೆ ವಕೀಲರು ಸೋಮವಾರ ಮನವಿ ಸಲ್ಲಿಸಿದರು. ವಕೀಲರ ಸಂಘದ ಉಪಾಧ್ಯಕ್ಷ ಎಂ.ಆರ್. ಸೋಮಣ್ಣವರ, ವಕೀಲರ ಸಂಘದ ಕಾರ್ಯದರ್ಶಿ ಸಂತೋಷ ಭಾವಿ ಮಾತನಾಡಿ, ‘ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ಸಂಬಂಧಿಸಿದ ವಿಷಯಗಳು …

Read More »

ನೇಸರಗಿ: ಅಕ್ರಮ ಸಾಗಾಟವಾಗುತ್ತಿದ್ದ ಪಡಿತರ ಅಕ್ಕಿ ವಶ

ಬೈಲಹೊಂಗಲ: ನೇಸರಗಿಯಲ್ಲಿ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ.   ಅಂದಾಜು 76076 ರೂ. ಮೌಲ್ಯದ ಪಡಿತರ ಅಕ್ಕಿಯ 71 ಬ್ಯಾಗ್ ಗಳನ್ನು ಬೊಲೆರೊ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.       ಬೊಲೆರೊ ಪಿಕ್ ಅಪ್ ವಾಹನವನ್ನು ಜಪ್ತಿ ಮಾಡಿ ಕಾನೂನು ಕ್ರಮ ಮುಂದುವರಿಸಲಾಗಿದೆ

Read More »

ವಿವಿಧ ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳ ದಾಳಿ: ೧೫೦ ಕೆಜಿ ಪ್ಲಾಸ್ಟಿಕ್ ಚೀಲ ವಶ೨೩ ಸಾವಿರ ದಂಡ

ಬೈಲಹೊಂಗಲ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ಸೋಮವಾರ ಪುರಸಭೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸುಮಾರು ೧೫೦ ಕೆ.ಜಿ ಪ್ಲಾಸ್ಟಿಕ್ ವಶಪಡಿಸಿಕೊಂಡು ರೂ. ೨೩ ಸಾವಿರ ದಂಡ ವಿದಿಸಿ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಮಾಡದಿರುವ ಬಗ್ಗೆ ಎಚ್ಚರಿಕೆ ನೀಡಿದರು. ಪುರಸಭೆ ಮುಖ್ಯಾಧಿಕಾರಿ ಕವಿರಾಜ ನಾಗನೂರ ಮಾತನಾಡಿ, ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆಯನ್ನು ಜುಲೈ ೧ ರಿಂದ ಸುಪ್ರೀಂ ಕೋರ್ಟ ಆದೇಶದ ಮೇರೆಗೆ ಕೇಂದ್ರ ಸರ್ಕಾರ …

Read More »

ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ

ಬೆಳಗಾವಿ: ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು. ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ, ಒಂದು ತಾಸಿಗೂ ಹೆಚ್ಚು ಸಮಯ ನಿರಂತರವಾಗಿ ಸುರಿಯಿತು. ಯರಗಟ್ಟಿಯಿಂದ ಬೈಲಹೊಂಗಲ ತಾಲ್ಲೂಕಿನ ನೇಸರಗಿವರೆಗೆ ಬಿರುಗಾಳಿ, ಗುಡುಗಿನ ಸದ್ದು ಜೋರಾಗಿತ್ತು. ಮಳೆಯ ಆರ್ಭಟದಿಂದಾಗಿ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯ ಮೇಲೆ ವಾಹನ ಸವಾರರು ವಾಹನಗಳ ಹೆಡ್‌ಲೈಟ್‌ ಆನ್‌ ಮಾಡಿ ಸಂಚರಿಸಿದರು.

Read More »

ದೆಹಲಿ ಗಣರಾಜ್ಯೋತ್ಸವ ಪೆರೇಡೆಗೆ ಬೈಲಹೊಂಗಲದ ಕೃಷ್ಣಾ ಬಡಿಗೇರ ಆಯ್ಕೆ

ಬೈಲಹೊಂಗಲ : ಪಟ್ಟಣದ ಮೂರುಸಾವಿರ ಮಠದ ಎಸ್.ಜಿ.ವಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಎನ್.ಸಿ.ಸಿ. ಘಟಕದ ವಿದ್ಯಾರ್ಥಿ ಕೃಷ್ಣಾ ಬಡಿಗೇರ ಇದೇ ಜ.26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಗೆ ಆಯ್ಕೆಯಾಗಿದ್ದಾನೆ. ಬಿಕಾಂ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಎನ್.ಸಿ.ಸಿ ಘಟಕದಲ್ಲಿ ಸೀನಿಯರ್ ಅಂಡರ್ ಆಫೀಸರ ಇದ್ದಾನೆ. ರಾಜ್ಯದಿಂದ ಒಟ್ಟು 26 ಕೆಡೆಟಗಳು ದೆಹಲಿಯ ಗಣರಾಜ್ಯೋತ್ಸವ ಪರೇಡನಲ್ಲಿ ಭಾಗವಹಿಸುತ್ತಿದ್ದು, ಬೆಳಗಾವಿಯಿಂದ ಇಬ್ಬರಿಗೆ ಮಾತ್ರ ಅವಕಾಶ ಸಿಕ್ಕಿದ್ದು . 25 ನೇ …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೂತನ ಪ್ರತಿಮೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು  ಉದ್ಘಾಟನೆ ಮಾಡಿದರು.

ಬೈಲಹೊಂಗಲ:  ತಾಲೂಕಿನ ಹಹೊಳಿನಾಗಲಾಪುರ ಗ್ರಾಮದಲ್ಲಿ ನಿರ್ಮಿಸಲಾಗಿರುವ  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೂತನ ಪ್ರತಿಮೆಯನ್ನು ಸೋಮವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು  ಉದ್ಘಾಟನೆ ಮಾಡಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿ ಶಾಸಕ ಸತೀಶ ಜಾರಕಿಹೊಳಿ ಗೌರವ   ನಮನ ಸಲ್ಲಿಸಿದರು ಬಳಿಕ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಅಪ್ರತಿಮ ಹೋರಾಟಗಾರ.  ಆತ ಒಂದು ಸಮುದಾಯಕ್ಕೆ ಸೀಮಿತವಲ್ಲ, ಇಡೀ ದೇಶದ ಆಸ್ತಿ. ರಾಯಣ್ಣ ಆದರ್ಶಗಳನ್ನು ಮೈಗೂಡಿಸಿಕೊಂಡು ನಾಡು, ನುಡಿಗಾಗಿ …

Read More »

ಯಾವುದೇ ಸಂಘಟನೆ ಒಂದು ಜಾತಿಗೆ ಸೀಮಿತವಾಗದೇ ಮಾನವೀಯತೆ ಪರವಾಗಿ ಕೆಲಸ ಮಾಡಬೇಕು: ಸತೀಶ ಜಾರಕಿಹೊಳಿ

ಬೈಲಹೊಂಗಲ: ಯಾವುದೇ ಸಂಘಟನೆ ಒಂದು ಜಾತಿಗೆ ಸೀಮಿತವಾಗದೇ ಮಾನವೀಯತೆ ಪರವಾಗಿ ಕೆಲಸ ಮಾಡಬೇಕು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಬೈಲಹೊಂಗಲ ತಾಲೂಕಿನ ಮುರ್ಕಿಭಾಂವಿ ಗ್ರಾಮದಲ್ಲಿ ಸೋಮವಾರ ದಂದು ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಸಂಘಟನೆಗೆ ಚಾಲನೆ ನೀಡಿ  ಉದ್ಘಾಟಿಸಲಾಯಿತು. ನೀಡಿ ಬಳಿಕ ಮಾತನಾಡಿದ ಅವರು, ಸಂಘ ಕಟ್ಟುವುದು ಸುಲಭ, ಆದ್ರೆ ಅವುಗಳನ್ನು ಸರಿಯಾದ ದಾರಿಯಲ್ಲಿ ನಡೆಸುವುದು ಕಷ್ಟಕರವಾಗಿದೆ. ಇತ್ತೀಚಿಗೆ ಸಾಕಷ್ಟು ಸಂಘಟನೆಗಳು ಹುಟ್ಟಿಕೊಂಡಿವೆ. …

Read More »

ಭೂಮಿಯಲ್ಲಿ ಅಂತರ್ಜಲ ಹೆಚ್ಚಾಗಲುಬಾಂದಾರಗಳನಿರ್ಮಾಣ

ಬೈಲಹೊಂಗಲ: ಬಾಂದಾರಗಳನ್ನು ನಿರ್ಮಾಣ ಮಾಡುವುದರಿಂದ ಭೂಮಿಯಲ್ಲಿ ಅಂತರ್ಜಲ ಹೆಚ್ಚಾಗಲು ಸಹಕಾರಿಯಾಗುತ್ತದೆ ಎಂದು ಕಿತ್ತೂರ ಶಾಸಕ ಮಹಾಂತೇಶ ದೊಡಗೌಡರ ಹೇಳಿದರು. ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ  ಸಣ್ಣ ನೀರಾವರಿ ಇಲಾಖೆಯಲ್ಲಿ ಟಿಎಸ್‍ಪಿ ಅನುದಾನದಡಿ 40 ಲಕ್ಷ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ಬಾಂದಾರ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಹೊಸ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ಶುದ್ಧ ನೀರು ಕುಡಿಯುವುದರಿಂದ ಸಾಂಕ್ರಾಮಿಕ ರೋಗಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದುದು. ಗ್ರಾಮಾಂತರ …

Read More »