Breaking News
Home / ಜಿಲ್ಲೆ / ಬೆಳಗಾವಿ / ರಾಮದುರ್ಗ (page 3)

ರಾಮದುರ್ಗ

ರಾಮದುರ್ಗ: ಅನೈತಿಕ ಸಂಬಂಧ, ಪ್ರಿಯಕರನ ಜೊತೆ ಸೇರಿ ಪತಿ ಕೊಂದ ಪತ್ನಿ

ರಾಮದುರ್ಗ (ಬೆಳಗಾವಿ): ತಾಲ್ಲೂಕಿನ ಹೊಸೂರ ಗ್ರಾಮದ ಬಳಿ ಸೋಮವಾರ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಕೊಲೆಯಾದವರ ಪತ್ನಿ ಹಾಗೂ ಆಕೆಯ ಪ್ರಿಯಕರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹೊಸೂರ ನಿವಾಸಿ ಪಾಂಡಪ್ಪ ದುಂಡಪ್ಪ ಜಟಕನ್ನವರ (35) ಕೊಲೆಯಾದವರು. ಇವರ ಪತ್ನಿ ಲಕ್ಷ್ಮಿ ಜಟಕನ್ನವವರ (30) ಹಾಗೂ ಪ್ರಿಯಕರ ಎನ್ನಲಾದ ರಮೇಶ ಬಡಿಗೇರ (36) ಬಂಧಿತರು. ಅನೈತಿಕ ಸಂಬಂಧ ಕಾರಣ: ‘ಪಾಂಡಪ್ಪ ಹಾಗೂ ಲಕ್ಷ್ಮಿ ಕೆಲ ವರ್ಷಗಳಿಂದ ಹೊಸೂರ ಹೊರವಲಯದ ತಮ್ಮ ಜಮೀನಿನಲ್ಲಿ …

Read More »

ಕಲ್ಲೂರ-ಮಾರಡಗಿ ಮಧ್ಯೆ ಸೇತುವೆ ನಿರ್ಮಾಣ

ರಾಮದುರ್ಗ: ಮಳೆಗಾಲದ ಸಂದರ್ಭದಲ್ಲಿ ಗ್ರಾಮದ ಜನರು ಅನುಭವಿಸುತ್ತಿದ್ದ ಸಮಸ್ಯೆ ಯನ್ನು ನಿವಾರಿಸುವ ನಿಟ್ಟಿನಲ್ಲಿ ಸೇತುವೆ ನಿರ್ಮಾಣಕ್ಕೆ ಮುಂದಾಗಿರುವುದಾಗಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಹುಬ್ಬಳ್ಳಿ ಕೆ.ಆರ್‌.ಡಿ.ಸಿ.ಎಲ್‌ ನ 80 ಲಕ್ಷ ಅನುದಾನದಲ್ಲಿ ಕಲ್ಲೂರ-ಮಾರಡಗಿ ರಸ್ತೆಯ ಮಧ್ಯೆ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.   ಗ್ರಾಮದ ಹಾಗೂ ಮುಳ್ಳೂರ ಸುತ್ತಲಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಸೇತುವೆ ಕಾರ್ಯವನ್ನು ಕೈಗೊಂಡು ಅನುಕೂಲ ಕಲ್ಪಿಸಲಾಗುತ್ತಿದೆ. ಮಳೆ ಬಂದಾಗ …

Read More »

ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿಕೊಠಡಿಗೆ ನುಗ್ಗಿ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ

ಬೆಳಗಾವಿ: ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಕೊಠಡಿಗೆ ನುಗ್ಗಿದ ಪ್ರಯಾಣಿಕನೊಬ್ಬ ಬಸ್ ಸಂಚಾರ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ವಿಚಾರಣೆ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿ‌ ನಡೆದಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ಅಧಿಕಾರಿ ಮತ್ತು ಪ್ರಯಾಣಿಕ ಒಬ್ಬರ ಮೇಲೊಬ್ಬರು ಹಲ್ಲೆ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸಾರಿಗೆ …

Read More »

ಮೂವರು ಮಕ್ಕಳ ಸಾವಿಗೆ ಅಸಲಿ ಕಾರಣ ಬಿಚ್ಚಿಟ್ಟ ಲಸಿಕಾಧಿಕಾರಿ ಗಡಾದ್..!

ರಾಮದುರ್ಗ ತಾಲೂಕಿನಲ್ಲಿ ಮೂವರು ಮಕ್ಕಳ ನಿಗೂಢ ಸಾವು ಪ್ರಕರಣದಲ್ಲಿ ಮೂವರು ಕಂದಮ್ಮಗಳ ಸಾವಿನ ಅಸಲಿ ಕಾರಣ ಬೆಳಕಿಗೆ ಬಂದಿದೆ. ಆರೋಗ್ಯ ಸಿಬ್ಬಂದಿ ಯಡವಟ್ಟಿನಿಂದ ಮೂವರು ಕಂದಮ್ಮಗಳು ಬಲಿಯಾಗಿದ್ದು, ಲಸಿಕಾರಣದ ಮಾರ್ಗಸೂಚಿ ಉಲ್ಲಂಘನೆಯೇ ಮಕ್ಕಳ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.ಈ ಬಗ್ಗೆ ಬೆಳಗಾವಿಯಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಲಸಿಕಾಧಿಕಾರಿ ಡಾ.ಈಶ್ವರ ಗಡಾದ ಅವರು ಜನೆವರಿ 10ರಂದು ಲಸಿಕೆಯನ್ನ ತೆಗೆದುಕೊಂಡು ಹೋಗಿದ್ದ ಸಾಲಹಳ್ಳಿ ಪ್ರಾಥಮಿಕ ಕೇಂದ್ರ …

Read More »

ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ.

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ. ರಾಮದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದು, ಜನರ ಬದುಕು ಬೀದಿಗೆ ಬಂದಂತಾಗಿದೆ. 2019ರಲ್ಲಿ ನೆರೆಯಿಂದ ರಾಮದುರ್ಗ ತಾಲೂಕಿನ ಹಿರೇಹಂಪಿಹೋಳಿ ಗ್ರಾಮ ಮುಳುಗಡೆಯಾಗಿತ್ತು. ಅಲ್ಲಿದ್ದ ಗ್ರಾಮಸ್ಥರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಆಗ ಸುರೇಬಾನ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ್ದ ವಸತಿ ಗೃಹದಲ್ಲಿ ನೆರೆ ಸಂತ್ರಸ್ತರಿಗೆ ಜಿಲ್ಲಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿತ್ತು. ತಗಡಿನ ಶೆಡ್ ನಿರ್ಮಿಸಿ ಕೊಡುವವರೆಗೆ …

Read More »

ಮುಳ್ಳೂರು ಘಾಟ್‌ ಮಾರ್ಗದಲ್ಲೆ ಪ್ರಯಾಣ: ಆತಂಕ

ರಾಮದುರ್ಗ (ಬೆಳಗಾವಿ ಜಿಲ್ಲೆ): ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ವಾಹನಗಳು ಅಪಾಯಕಾರಿಯಾದ ರಸ್ತೆಯಲ್ಲೇ ಸಂಚರಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ‘ಮೃತ್ಯುಕೂಪ’ ಎಂದೇ ಅಪಖ್ಯಾತಿ ಹೊಂದಿದ್ದ ಇಲ್ಲಿನ ಮುಳ್ಳೂರು ಘಾಟ್‌ನಲ್ಲಿ ವಾಹನಗಳಲ್ಲಿ ಹೋಗುವವರು ಕೈಯಲ್ಲಿ ಜೀವ ಹಿಡಿದುಕೊಂಡೆ ಪ್ರಯಾಣಿಸಬೇಕಿತ್ತು. ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಪಘಾತಗಳಾಗಿ ಸಾವು-ನೋವು ಸಂಭವಿಸಿರುವ ಘಾಟ್ ಸುಧಾರಣೆಗೆ ಸಾಕಷ್ಟು ಹೋರಾಟಗಳು ನಡೆದಿದ್ದವು. ಹೊಸ ಮಾರ್ಗ ನಿರ್ಮಿಸುವಂತೆ ಬೇಡಿಕೆ ಇತ್ತು. ಹಿಂದಿನ ಶಾಸಕ ಅಶೋಕ ಪಟ್ಟಣ ಅವರ ಪ್ರಯತ್ನದಿಂದ ರಾಜ್ಯ ಸರ್ಕಾರದಿಂದ ವಿಶೇಷ …

Read More »

ಅಕ್ರಮ ಸಂಬಂಧ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಜೋಡಿಯನ್ನ ಟ್ರ್ಯಾಕ್ಟರ್ ಗೆ ಕಟ್ಟಿ ಹಾಕಿದ ಗ್ರಾಮಸ್ಥರು

ಬೆಳಗಾವಿ: ವಿವಾಹೇತರ ಸಂಬಂಧ ಹೊಂದಿದ್ದ ಜೋಡಿಯನ್ನ ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದು ಟ್ಯಾಕ್ಟರ್ ಗೆ ಕಟ್ಟಿ ಹಾಕಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಮುರಕಟನಾಳ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಚುಂಚನೂರ ಗ್ರಾಮದ ಭೀಮಸಿ ಜೆಟ್ಟೆನ್ನವರ್ ಎಂಬಾತ ಮುರಕಟನಾಳದ ವಿವಾಹಿತ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ. ನಿನ್ನೆ ತಡರಾತ್ರಿ ಮನೆಯವರ ಕಣ್ತಪ್ಪಿಸಿ ಹೊರ ಹೊದಾಕೆ ಮುರಕಟನಾಳ ಗ್ರಾಮ ಹೊರವಲಯದ ಹೊಲದಲ್ಲಿ ಪ್ರಿಯಕರನನ್ನು ಭೇಟಿ …

Read More »

ಪೊಲೀಸ್ ದಾಳಿಗೆ ಹೆದರಿ ನದಿಗೆ ಹಾರಿದ ಯುವಕರ ಮೃತದೇಹ ಪತ್ತೆ!!

ರಾಮದುರ್ಗ: ಜೂಟಾಟ ವೇಳೆ ಪೊಲೀಸರು ದಾಳಿ  ನಡೆಸಿದ ವೇಳೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರ ಮೃತದೇಹ    ಪತ್ತೆಯಾಗಿವೆ. ಮಂಜು ಬಂಡಿವಡ್ಡರ್(30), ಸಮೀರ್ ಬಟಕುರ್ಕಿ(22) ಮೃತರು. ಮಲಪ್ರಭಾ ನದಿ ದಡದಲ್ಲಿ ಜೂಜಾಡುತ್ತಿದ್ದ ಯುವಕರ ಗುಂಪಿನ ಮೇಲೆ ರಾಮದುರ್ಗ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬಂಧನ ಭೀತಿಯಿಂದ ಆರು ಜನರು ಮಲಪ್ರಭಾ ನದಿಗೆ ಹಾರಿದ್ದರು. ಈ ವೇಳೆ ನಾಲ್ವರು ಈಜಿ ದಡ ಸೇರಿದ್ರೆ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಬೆಳಗ್ಗೆಯಿಂದ …

Read More »

ಪೊಲೀಸ್ ದಾಳಿಗೆ ಹೆದರಿ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ನೀರು ಪಾಲು

ರಾಮದುರ್ಗ: ಯುವಕರ ಗುಂಪು ಜೂಜಾಟದಲ್ಲಿ ತೊಡಗಿದ್ದು, ಪೊಲೀಸ್ ದಾಳಿ ನಡೆಸಿದ್ದರಿಂದ ಇಬ್ಬರು ಮಲಪ್ರಭಾ ನದಿಗೆ ಹಾರಿದ ಘಟನೆ ನಡೆದಿದೆ. ನದಿಯ ಪಕ್ಕದ ಪೊದೆಯ ಬಳಿ ಗುಂಪು ಪೊಲೀಸರು ಬಂದಿದ್ದರಿಂದ ಹೆದರಿ ಓಡಿಹೋಗಿದ್ದಾರೆ. ಈ ವೇಳೆ ಇಬ್ಬರು ನದಿ ನೀರಿಗೆ ಹಾರಿದ್ದಾರೆ. ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆದಿದೆ.ಪೊಲೀಸರು, ಅಗ್ನಿಶಾಮಕ ದಳದವರು ಹಾಗೂ ಈಜು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮಂಜುನಾಥ ಲಕ್ಷ್ಮಣ ಬಂಡಿವಡ್ಡರ (28) ಹಾಗೂ ಸಮೀರ ಮಹಮದಸಾಬ ಬಟಕುರ್ಕಿ (23) ನದಿಗೆ …

Read More »

ಹುಲಕುಂದ ಪಂಚಾಯ್ತಿ 13 ಸದಸ್ಯರು, 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

  ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 14 ಸದಸ್ಯರ ಪೈಕಿ 13 ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಹೌದು ಮಂಗಳವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 13 ಸದಸ್ಯರು ಹಾಗೂ 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ …

Read More »