Breaking News

ರಾಯಬಾಗ

ಕುಡಚಿ ಪೋಲಿಸರ ನವರಂಗಿ ಆಟ, ಎಗ್ಗಿಲ್ಲದೇ ನಡೆಯುತ್ತಿದೆ ಮಟ್ಕಾ ಓಟ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಅಕ್ರಮ ಮಟ್ಕಾ ದಂಧೆ ಎಗ್ಗಿಲ್ಲದೆ ಸಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಗೋಕಾಕ್, ರಾಯಬಾಗ, ಘಟಪ್ರಭಾ, ಮೂಡಲಗಿ, ಕುಡಚಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಮಟಕಾ ಹಾವಳಿ ಮಿತಿ ಮೀರಿದೆ. ಈ ಮಟ್ಕಾ ದಂಧೆಗೆ ಬೀಟ್ ಪೊಲೀಸರ ಮುಖಾಂತರ ಪಿಎಸ್ಐ ಲೆವೆಲ್ ಅಧಿಕಾರಿಗಳು ಬುಕ್ಕಿಗಳ ಸಂಗ ಬೆಳೆಸಿದ್ದು, ಎಂಜಲ ಕಾಸಿಗಾಗಿ ಪೊಲೀಸರ ಕರಿ ನೆರಳಲ್ಲೇ ಈ ಅಕ್ರಮ ಮಟ್ಕಾ ದಂಧೆ ನಡೆಯುತ್ತಿದೆ. ಇನ್ನು ರಾಯಬಾಗ ತಾಲೂಕಿನ …

Read More »

ಕುಡಚಿ ಪಟ್ಟಣದಲ್ಲಿ ಗಾಂಜಾ ಮಾರಾಟ : ಮೂವರ ಬಂಧನ

ಚಿಂಚಲಿ :  ಕುಡಚಿ ಪಟ್ಟಣದ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಧಿಕ ನಬಿಲಾಲ ಮೇವೆಗಾರ (41), ಜಾಫರ ಬಾಬಾಸಾಬ ಮುಲ್ಲಾ(60) , ಪರಶುರಾಮ ಕಾಂಬಳೆ (32) ಬಂಧಿತರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 22.000 ಸಾವಿರ ಮೊತ್ತದ 2025 ಗ್ರಾಮ ಗಾಂಜಾ ಹಾಗೂ 450 ನಗದು, 4 ಮೊಬೈಲ್  ವಶಕ್ಕೆ ಪಡೆದುಕೊಂಡಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

ರಾಯಬಾಗ ಬಳಿ ರೈಲ್ವೆ ಹಳಿ ಮೇಲೆ ನಾಲ್ವರ ಆತ್ಮಹತ್ಯೆ ತಂದೆ, ತಾಯಿ ಮಕ್ಕಳು

ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಒಂದೇ ಕುಟುಂಬದ 4 ಜನರು ರಾಯಬಾಗ ರೈಲ್ವೆ ಹಳಿ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಘಟನೆ ನಡೆದಿದೆ. ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಕಲ್ಲಪ್ಪ ಬಡಿಗೇರ ಮತ್ತು ಆತನ ಪತ್ನಿ ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾತಪ್ಪ ಅಣ್ಣಪ್ಪ ಸುತಾರ (60),ಮಹಾದೇವಿ ಸಾತಪ್ಪ ಸುತಾರ (50), ಸಂತೋಷ ಸಾತಪ್ಪ ಸುತಾರ (26), ದತ್ತಾತ್ರಯ ಸಾತಪ್ಪ ಸುತಾರ (28) ಆತ್ಮಹತ್ಯೆ ಮಾಡಿಕೊಂಡವರು. ತಂದೆ …

Read More »

ಮೋದಿಯ ಬಣ್ಣದ ಮಾತಿಗೆ ದೇಶ ಮರುಳಾಗಿದೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ರಾಯಬಾಗ: ‘ ಪ್ರಧಾನಿ ಮೋದಿಯ ಬಣ್ಣದ ಮಾತಿಗೆ ಈಗಾಗಲೇ ದೇಶ ಮರುಳಾಗಿದೆ. ಇದೇನು ಹೊಸದೆನಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಏನು ಹೊಸದಲ್ಲ. 1965ರಲ್ಲಿಯೇ ನೆಹರು ಅವರು ಜಾರಿಗೆ ತಂದಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಅದಕ್ಕೆ ಸುಣ್ಣ ಬಣ್ಣ ಬಳೆದು, ಅಲಂಕರಿಸಿ ಹೊರಟ್ಟಿದ್ದಾರೆ. ದೇಶದ ಜನರು ಬಣ್ಣದ ಮಾತಿಗೆ …

Read More »

ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನ ವಿರೋಧಿ: ಸತೀಶ ಜಾರಕಿಹೊಳಿ 

ರಾಯಬಾಗ:  ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನ ವಿರೋಧಿ ಕಾಯ್ದೆಗಳ ಜಾರಿಗೆ ತರುವ ಮೂಲಕ  ಜನ ಸಾಮಾನ್ಯರಿಗೆ ತೊಂದರೆಗೀಡು ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ವಾಗ್ದಾಳಿ ನಡೆಸಿದರು. ತಾಲಕಿನ ಕುಡಚಿಯಲ್ಲಿ  ಮಂಗಳವಾರ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ರಾಜ್ಯ ಸರ್ಕಾರ ಇತ್ತೀಚಿಗೆ ಗೋ ಹತ್ಯೆ ನಿಷೇಧ ಜಾರಿಗೆ ತಂದಿದೆ. ಇದರಿಂದ ರೈತಾಪಿ ವರ್ಗಕ್ಕೆ ತುಂಬ ನಷ್ಟವಾಗಲಿದೆ ಅಂತಾ ಹೇಳಿದರು.  ಕೃಷಿ …

Read More »

ರಾಯಬಾಗ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳ ಜನ ಪ್ರವಾಹದ ಭೀತಿಗೆ ಒಳಗಾಗಿದ್ದಾರೆ.

ಬೆಳಗಾವಿ: ‘ಕೃಷ್ಣಾ ನದಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದಾಗಿ, ನೆರೆಯ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಾಯಬಾಗದ ಕುಡಚಿ-ಉಗಾರ ಸೇತುವೆ ಶುಕ್ರವಾರ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಯಬಾಗ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳ ಜನ ಪ್ರವಾಹದ ಭೀತಿಗೆ ಒಳಗಾಗಿದ್ದಾರೆ. ಸೇತುವೆ ಜಲಾವೃತವಾಗಿರುವುದನ್ನು ತಹಶೀಲ್ದಾರ್‌ ಚಂದ್ರಕಾಂತ ಭಂಜತ್ರಿ ಪರಿಶೀಲಿಸಿದರು. ‘ಸತತ ಮಳೆಯಿಂದಾಗಿ ತಾಲ್ಲೂಕಿನ ಪ್ರಮುಖ ರಸ್ತೆಗಳು ಹಾಳಾಗಿವೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗುವುದು. ವಿವಿಧ 11 ಗ್ರಾಮಗಳಲ್ಲಿ ಬೆಳೆ ಹಾನಿಯಾಗಿದ್ದು …

Read More »

ನೀರಾವರಿ ಯೋಜನೆಗಳಿಗೆ 1699 ಕೋಟಿ

ರಾಯಬಾಗ: ಮತಕ್ಷೇತ್ರದ ರೈತರ ಬಹುದಿನಗಳ ಬೇಡಿಕೆಯ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ರೂ.1699 ಕೋಟಿ ಹಣ ಮಂಜೂರು ಮಾಡಿದ್ದಾರೆ ಎಂದು ಶಾಸಕ ಡಿ.ಎಮ್‌.ಐಹೊಳೆ ಹೇಳಿದರು. ಸೋಮವಾರ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಯಬಾಗ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ, ಸತತ ಬರಗಾಲ ಅನುಭವಿಸುತ್ತಿರುವ ಗ್ರಾಮಗಳ ರೈತರ ಬೆಳೆಗಳಿಗೆ ಹಾಗೂ ಜನ-ಜಾನುವಾರುಗಳಿಗೆ ಕುಡಿಯಲು ಕಾಯಂ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ …

Read More »

ವರ್ಷ ಕಳೆದರೂ ತಪ್ಪಿಲ್ಲ ಬೆಳಗಾವಿ ಪ್ರವಾಹ ಸಂತ್ರಸ್ತರ ಸಂಕಟ!

ಬೆಳಗಾವಿ: ಪ್ರವಾಹಕ್ಕೆ ನಲುಗಿ ಒಂದು ವರ್ಷ ಕಳೆದರೂ ಜಿಲ್ಲೆಯ ಎಲ್ಲ ಸಂತ್ರಸ್ತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ಕೊಡುವಂತೆ ಒತ್ತಾಯಿಸಿ, ಈಗಲೂ ಅಲ್ಲೊಂದು, ಇಲ್ಲೊಂದು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಕಳೆದ ವರ್ಷ ಆಗಸ್ಟ್‌ ತಿಂಗಳಿನಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ಸೇರಿದಂತೆ ಬಹುತೇಕ ಎಲ್ಲ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿತ್ತು. ಇದರ ಜೊತೆ ಅತಿವೃಷ್ಟಿಯೂ ಕೂಡಿಕೊಂಡು ಅಪಾರ ಹಾನಿಯನ್ನುಂಟು ಮಾಡಿತ್ತು. ಬೆಳಗಾವಿ, ಖಾನಾಪುರ, ಚಿಕ್ಕೋಡಿ, ಅಥಣಿ, ಗೋಕಾಕ, ರಾಮದುರ್ಗ, ಸವದತ್ತಿ, ರಾಯಬಾಗ, ಹುಕ್ಕೇರಿ …

Read More »

ಖಾದಿ ಮಂಡಳಿಗೆ ನೇಮಕ ನಿರೀಕ್ಷಿಸಿರಲಿಲ್ಲ, ಖುಷಿಯಾಗಿದೆ: ದುರ್ಯೋಧನ ಐಹೊಳೆ…?

ಬೆಳಗಾವಿ: ‘ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷನಾಗಿ ನೇಮಕಗೊಂಡಿರುವುದಕ್ಕೆ ಖುಷಿಯಾಗಿದೆ. ನಾನು ಈ ಹುದ್ದೆ ನಿರೀಕ್ಷಿಸಿರಲಿಲ್ಲ’ ಎಂದು ರಾಯಬಾಗದ ಶಾಸಕ ದುರ್ಯೋಧನ ಐಹೊಳೆ ಪ್ರತಿಕ್ರಿಯಿಸಿದರು. ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶ್ರಾವಣ ಸೋಮವಾರದ ದಿನ ಒಳ್ಳೆಯ ಕೊಡುಗೆ ನೀಡಿದ್ದಾರೆ. ಮಂಡಳಿಯಲ್ಲಿ ಕೆಲಸ ಮಾಡಲು ಬಹಳಷ್ಟು ಅವಕಾಶವಿದೆ. ಅದನ್ನು ಬಳಸಿಕೊಳ್ಳುತ್ತೇನೆ’ ಎಂದರು. ‘ಜಿಲ್ಲಾ ನಾಯಕರ ಸಹಕಾರ ಮತ್ತು ರಾಜಕಾರಣದಲ್ಲಿ ನನ್ನ ಗಾಡ್‌ಫಾದರ್‌ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ …

Read More »

ಕಳ್ಳರನ್ನು ಹಿಡಿಯಲು ಹೋದ‌ ಮಾಲಿಕ ಕಳ್ಳರ ಹಲ್ಲೆಯಿಂದ ಸಾವು

    ಬೆಂಡವಾಡ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದ ತೋಟದ ಮನೆಗೆ ತಡರಾತ್ರಿ ಆರು ಜನರು ಕಳ್ಳರು ಕಳ್ಳತನಕ್ಕೆ ಯತ್ನ್ಸಿದ್ದಾಗ ಮನೆಯ ಮಾಲಿಕ ಹಾಗೂ ಮಾಲಿಕನ ಮಗ ಕಳ್ಳರನ್ನು ಹಿಡಿಯಲು ಬೆನ್ನತ್ತಿದ್ದಾಗ ಕಳ್ಳರು ತಂದೆ, ಮಗನನ್ನು ಬಡೆದು ಹಲ್ಲೆ ನಡೆಸಿ ರಸ್ತೆ ಪಕ್ಕದಲ್ಲಿದ್ದ ಬಾವಿಗೆ ಎಸೆದು ಕಳ್ಳರು ಓಡಿ ಹೋಗಿದ್ದರೆ. ಇನ್ನೂ ಹಲ್ಲೆಯಿಂದ ತಂದೆ ಸಾವನ್ನೊಪ್ಪಿದ್ದು ಮಗನನ್ನು ಗೋಕಾಕ ದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೃತನನ್ನು …

Read More »