Breaking News

ಸವದತ್ತಿ

ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಮಾಮನಿ ನೇಮಕ

ಸವದತ್ತಿ / ಉಗರಗೋಳ: ಇಲ್ಲಿನ ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರನ್ನಾಗಿ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಕ್ಷೇತ್ರದ ಶಾಸಕರೂ ಆದ ಆನಂದ ಮಾಮನಿ ಅವರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ. ‘2018ರ ಮಾರ್ಚ್‌ 23ರಂದು 16 ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅದರ ಅಧಿಕಾರದ ಅವಧಿ ಮುಗಿದಿದ್ದು, ಹೊಸದಾಗಿ ರಚನೆ ಆಗಬೇಕಿದೆ. ಅಲ್ಲಿವರೆಗೆ ಅಧ್ಯಕ್ಷರನ್ನಾಗಿ ಆನಂದ ಮಾಮನಿ ಅವರನ್ನು ನೇಮಿಸಲಾಗಿದೆ’ ಎಂದು …

Read More »

ಯೂರಿಯಾ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಸವದತ್ತಿ ತಾಲ್ಲೂಕಿನ ಮುಗಳಿಹಾಳ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸಮರ್ಪಕವಾಗಿ ಯೂರಿಯಾ ಗೊಬ್ಬರ ವಿತರಿಸುವಂತೆ ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು. ‘ಸಂಘದಿಂದ ಅವಶ್ಯ ಪ್ರಮಾಣದಲ್ಲಿ ಯೂರಿಯಾ ನೀಡುತ್ತಿಲ್ಲ. ಇದರಿಂದ ತೊಂದರೆಯಾಗಿದೆ. ಇತರ ಗೊಬ್ಬರಗಳ ಬದಲಿಗೆ ಯೂರಿಯಾವನ್ನೇ ಕೊಡಬೇಕು’ ಎಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾ ಸಂಚಾಲಕ ಲಕ್ಕಪ್ಪ ಬಿಜ್ಜನ್ನವರ, ರಾಜು ಗಾಣಗಿ, ವಿಠ್ಠಲ ದೊಡಗೌಡ್ರ, ಬಸಪ್ಪ ದಳವಾಯಿ, ಮಲ್ಲಪ್ಪ ದಳವಾಯಿ, ವಿಠ್ಠಲ …

Read More »

ಕೊರೊನಾ ಸೋಂಕಿಗೆ ಸವದತ್ತಿಯ ನಿವೃತ್ತ ಪಿಎಸ್ ಐ ಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ.

ಬೆಳಗಾವಿ: ಕೊರೊನಾ ಸೋಂಕಿಗೆ ಸವದತ್ತಿಯ ನಿವೃತ್ತ ಪಿಎಸ್ ಐ ಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ವಿವಿಧೆಡೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಇವರು, ಕಳೆದ ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ದೃಢ ಪಟ್ಟಿರುವ ಹಿನ್ನೆಲೆ ಸವದತ್ತಿ ಆಸ್ಪತ್ರೆಯಿಂದ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಇಂದು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. 65 ವರ್ಷದ ನಿವೃತ್ತ ಪಿಎಸ್ ಐ ಮಗಳ ಸವದತ್ತಿಯಲ್ಲಿ‌ ನೆಲೆಸಿದ್ದರು. ಮಗಳ ಆಕ್ರಂದನ ಮುಗಿಲು …

Read More »

ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಭಕ್ತರ ಕಾತರ…?

ಸವದತ್ತಿ: ವರ್ಷದ 12 ತಿಂಗಳೂ ಭಕ್ತರು, ವ್ಯಾಪಾರಿಗಳಿಂದ ಗಿಜುಗುಡುತ್ತಿದ್ದ ತಾಲೂಕಿನ ಸುಕ್ಷೇತ್ರ ಯಲ್ಲಮ್ಮ ದೇವಿ ಸನ್ನಿಧಿಗೆ ಲಾಕ್‌ಡೌನ್‌ ಸಡಿಲಿಕೆಯಾದ ಬಳಿಕ ಮಂಗಳವಾರ ಮತ್ತು ಶುಕ್ರವಾರ ಬರುವ ಭಕ್ತರ ಸಂಖ್ಯೆ ಹೆಚ್ಚಿದೆ. ಇದರಿಂದ ತಾಲೂಕಿಗೆ ಅಲ್ಪ ಪ್ರಮಾಣದಲ್ಲಿದ್ದ ಕೋವಿಡ್‌ ಸೋಂಕು ಹರಡುವ ಸಾಧ್ಯತೆಗಳಿವೆ. ಈಗಾಗಲೇ ಸರಕಾರದ ಆದೇಶದನ್ವಯ ರಾಜ್ಯದ ಬಹುತೇಕ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನಕ್ಕೆ ಅನುಮತಿ ನೀಡಲಾಗಿದೆ. ಯಲ್ಲಮ್ಮ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಹೆಚ್ಚು ಭಕ್ತರು ಬರುವ ನಿರೀಕ್ಷೆಯಿಂದ ಸರಕಾರ ಮತ್ತು ಜಿಲ್ಲಾಧಿಕಾರಿಗಳು …

Read More »

ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ.

ಬೆಳಗಾವಿ, ಜೂನ್ 30 : ಸವದತ್ತಿ ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ. ಬೆಳಗಾವಿ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕು ಹರಡುವ ಆತಂಕ ಮತ್ತು ಭಕ್ತರ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸವದತ್ತಿ …

Read More »

ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಬಡ ಕುಟುಂಬದವರಿಗೆ ದಿನ ಬಳಕೆಗೆ ಬೇಕಾದ ದಿನಸಿ ಸಾಮಗ್ರಿಗಳ ವಿತರಣೆ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕುಟುರನಟ್ಟಿ ಗ್ರಾಮದಲ್ಲಿ 300 ಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ಬೇಕಾದ ಆಹಾರ ಕಿಟ್ ಗಳನ್ನು ಅಖಿಲ ಕರ್ನಾಟಕ ವಿಶ್ವ ಕರ್ಮ ಸಮಿತಿಯ ರಾಜ್ಯ ಪ್ರದಾನ ಕಾರ್ಯದರ್ಶಿಯಾದ ಸುರೇಶ ಪತ್ತಾರ ರವರು ವಿತರಿದರು. ಮಾತನಾಡಿ ನಮ್ಮ ಸಮಿತಿಯಿಂದ ಪ್ರತಿ ಹಳ್ಳಿ ಹಳ್ಳಿಗೂ ವಿಷಯ ತಿಳಿದು ಕೊಂಡು ಬಡ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳು ಪೂರೈಸಲು ಮುಂದಾಗಿದ್ದು. ಕುಟುರನಟ್ಟಿ ಗ್ರಾಮಸ್ಥರಿಗೆ ಸರ್ಕಾರದಿಂದ ಸರಿಯಾಗಿ ಸೌಲಭ್ಯಗಳು ದೊರೆತಾಯಿಲ್ಲ.ಆದುದರಿಂದ ದಯಮಾಡಿ ಈ …

Read More »

ಕರ್ನಾಟಕ ವಿಧಾನಸಭೆಯ ಉಪಸಭಾಪತಿಯಾಗಿ ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಆಯ್ಕೆ

ಕರ್ನಾಟಕ ವಿಧಾನಸಭೆಯ ಉಪಸಭಾಪತಿಯಾಗಿ ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಆಯ್ಕೆಯಾಗಿದ್ದಾರೆ. ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ಮಾಮನಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಅವರ ಆಯ್ಕೆ ಖಚಿತವಾಗಿದೆ. ಮಂಗಳವಾರ ಈ ಕುರಿತು ಅಧಿಕೃತ ಘೋಷಣೆಯಾಗಲಿದ್ದು, ಅಂದೇ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ತಮ್ಮ ತಂದೆಯೂ ಉಪಸಭಾಪತಿಯಾಗಿ ಕೆಲಸ ಮಾಡಿದ್ದರಿಂದ ತಮ್ಮನ್ನೂ ಉಪಸಭಾಪತಿ ಮಾಡಬೇಕೆನ್ನುವ ಬೇಡಿಕೆಯನ್ನು ಮಾಮನಿ ಮುಂದಿಟ್ಟಿದ್ದರು. ಆದರೆ ಅರಗ ಜ್ಞಾನೇಂದ್ರ ಕೂಡ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದರಿಂದ ತೊಡಕಾಗಿತ್ತು. …

Read More »

ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಯಲ್ಲಮ್ಮಾ ದೇವಸ್ಥಾನದಲ್ಲಿ ಗುರುವಾರದಿಂದ ಎರಡು ವಾರದ ಅವಧಿಯವರೆಗೆ ದೇವಿಯ ದರ್ಶನವನ್ನು ನಿಷೇಧಿಸಲಾಗಿದೆ

2 ವಾರ ಸವದತ್ತಿ ಯಲ್ಲಮ್ಮ ದರ್ಶನವಿಲ್ಲ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ತೀರ್ಮಾನ ಸವದತ್ತಿ: ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಯಲ್ಲಮ್ಮಾ ದೇವಸ್ಥಾನದಲ್ಲಿ ಗುರುವಾರದಿಂದ ಎರಡು ವಾರದ ಅವಧಿಯವರೆಗೆ ದೇವಿಯ ದರ್ಶನವನ್ನು ನಿಷೇಧಿಸಲಾಗಿದೆ ಎಂದು ದೇವಸ್ಥಾನ ಕಾರ್ಯನಿರ್ವಣಾಧಿಕಾರಿ ರವಿ ಕೊಟಾರಗಸ್ತಿ ತಿಳಿಸಿದ್ದಾರೆ. ಶ್ರೀ ಕ್ಷೇತ್ರದಲ್ಲಿ ಬುಧವಾರದಂದು ನಡೆದ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಭಕ್ತಾಧಿಗಳ ಆರೋಗ್ಯದ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಸಮಿತಿಯು ತೀರ್ಮಾನ ತೆಗೆದುಕೊಂಡಿದೆ. …

Read More »

ಆಟಕ್ಕುಂಟು-ಲೆಕ್ಕಕ್ಕಿಲ್ಲ ಇದೇನು ವಿಪರ್ಯಾಸವೇ? ಕಟು ಸತ್ಯವೇ? ಈಗ ಸ್ಪಷ್ಟ ಹೇಳುವುದಿಷ್ಟೇ. ಕಾಲಾಯ ತಸ್ಮೈಯ್ ನಮಃ. :ಆನಂದ್ ಮಾಮನಿ

ಬೆಂಗಳೂರು, ಫೆ.4- ಆಟಕ್ಕುಂಟು-ಲೆಕ್ಕಕ್ಕಿಲ್ಲ ಇದೇನು ವಿಪರ್ಯಾಸವೇ? ಕಟು ಸತ್ಯವೇ? ಈಗ ಸ್ಪಷ್ಟ ಹೇಳುವುದಿಷ್ಟೇ. ಕಾಲಾಯ ತಸ್ಮೈಯ್ ನಮಃ. ಬೆಳಗಾವಿ ಜಿಲ್ಲೆ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಮಾಮನಿ ಮಾಡಿರುವ ಟ್ವೀಟ್ ಇದು. ಪಕ್ಷದ ನಿಷ್ಠಾವಂತರನ್ನು ಕಡೆಗಣಿಸಿ ಕೆಲವರಿಗೆ ಮಣೆ ಹಾಕುತ್ತಿರುವುದಕ್ಕೆ ಅಸಮಾಧಾನ ವ್ಯಕ್ತವಾಗುತ್ತಿದೆ.mla# ಇದೇ ಸಂದರ್ಭದಲ್ಲಿ ಆನಂದ್ ಮಾಮನಿ ಮಾಡಿರುವ ಈ ಟ್ವೀಟ್ ಸಾಕಷ್ಟು ಗೂಡಾರ್ಥವನ್ನು ನೀಡಿದೆ. ಸಾಮಾನ್ಯವಾಗಿ ಎಂದೂ ಬಹಿರಂಗವಾಗಿ ಮಾತನಾಡದೆ ಪಕ್ಷದ ಚೌಕಟ್ಟಿನಲ್ಲೇ ಇರುವ ಆನಂದ್ …

Read More »

ನಿಷ್ಠಾವಂತರಾಗಿ ದುಡಿದು ಸಾಕಷ್ಟು ಬಾರಿ ಶಾಸಕರಾದರೂ ಲೆಕ್ಕಕ್ಕಿಲ್ಲ :ಆನಂದ್ ಮಾಮನಿ

ಸವದತ್ತಿ: ಫೆ.6ರಂದು ರಾಜ್ಯ ಸಚಿವ ಸಂಪುಟಗೆ ಮುಹೂರ್ತ ಫಿಕ್ಸ್ ಆಗಿದ್ದು, ಈಗಾಗಲೇ ಬಿಜೆಪಿ ಶಾಸಕರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಸವದತ್ತಿ ಶಾಸಕ ಆನಂದ್ ಮಾಮನಿ, ಹೊಸದಾಗಿ ಪಕ್ಷ ಸೇರಿ ಮಂತ್ರಿಯಾಗುವವರೆದುರಿಗೆ, ಪಕ್ಷಕ್ಕೆ ಅಡಿಪಾಯ ಹಾಕಿ, ಕಟ್ಟಿ, ನಿಷ್ಠಾವಂತರಾಗಿ ದುಡಿದು ಸಾಕಷ್ಟು ಬಾರಿ ಶಾಸಕರಾದರೂ ಲೆಕ್ಕಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್ ಮೂಲಕ ಒಂದು ರೀತಿಯಲ್ಲಿ ಬಂಡಾಯದ ಬಾವುಟ ಹಾರಿಸಿರುವ ಆನಂದ್ ಮಾಮನಿ, ಬಿಜೆಪಿ ಮೇಲಿಟ್ಟಿರುವ ಕ್ಷೇತ್ರದ ಜನತೆಯ …

Read More »