Home / ಜಿಲ್ಲೆ / ಬೆಳಗಾವಿ (page 106)

ಬೆಳಗಾವಿ

ಬೆಳಗಾವಿಯ ಶಿವಾಜಿ ನಗರದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಯ ಬರ್ಬರ ಹತ್ಯೆ ಕೇಸ್‍ಗೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ

ಬೆಳಗಾವಿಯ ಶಿವಾಜಿ ನಗರದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಯ ಬರ್ಬರ ಹತ್ಯೆ ಕೇಸ್‍ಗೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಇದೇ ಅಕ್ಟೋಬರ್ 19ರಂದು ಬೆಳಗಾವಿಯ ಶಿವಾಜಿ ನಗರದ 5ನೇ ಕ್ರಾಸ್‍ನ ಪ್ರಜ್ವಲ್ ಶಿವಾನಂದ ಕರಿಗಾರ ಎಂಬ 16 ವರ್ಷದ ಬಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿ ಶವವನ್ನು ಮುಚ್ಚಂಡಿ ಗ್ರಾಮದ ಬಳಿ ಹಂತಕರು ಎಸೆದು ಹೋಗಿದ್ದರು. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ …

Read More »

ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ

ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದ್ದು, ವೀರಜ್ಯೋತಿಯ ಸ್ವಾಗತ, ಆನೆಯ ಮೇಲೆ ವೀರಮಾತೆ ಚನ್ನಮ್ಮಾಜಿಯ ಭವ್ಯ ಮರವಣಿಗೆಗೆ ಕಿತ್ತೂರು ಕಲ್ಮಠದ ರಾಜಯೋಗಿಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಈ ಅದ್ಭುತ ಕ್ಷಣಕ್ಕೆ ಹಲವು ಗಣ್ಯರು, ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ಹೌದು ಬೆಂಗಳೂರಿನಿಂದ ಆರಂಭವಾಗಿ ಇಡೀ ರಾಜ್ಯ ಸಂಚರಿಸಿ ಬೈಲಹೊಂಗಲದ ಚನ್ನಮ್ಮಾಜಿ ಸಮಾಧಿಯಿಂದ ಆಗಮಿಸಿದ ವೀರಜ್ಯೋತಿಯನ್ನು ಕಿತ್ತೂರು ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಸ್ವಾಗತಿಸಲಾಯಿತು. …

Read More »

ಚನ್ನಮ್ಮ ಕಿತ್ತೂರು ಉತ್ಸವ-2022ರ ಭವ್ಯ ಮೆರವಣಿಗೆಗೆ ಚಾಲನೆ

ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದ್ದು, ವೀರಜ್ಯೋತಿಯ ಸ್ವಾಗತ, ಆನೆಯ ಮೇಲೆ ವೀರಮಾತೆ ಚನ್ನಮ್ಮಾಜಿಯ ಭವ್ಯ ಮೆರವಣಿಗೆಗೆ ಕಿತ್ತೂರು ಕಲ್ಮಠದ ರಾಜಯೋಗಿಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಈ ಅದ್ಭುತ ಕ್ಷಣಕ್ಕೆ ಹಲವು ಗಣ್ಯರು, ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ಬೆಂಗಳೂರಿನಿಂದ ಆರಂಭವಾಗಿ ಇಡೀ ರಾಜ್ಯ ಸಂಚರಿಸಿ ಬೈಲಹೊಂಗಲದ ಚನ್ನಮ್ಮಾಜಿ ಸಮಾಧಿಯಿಂದ ಆಗಮಿಸಿದ ವೀರಜ್ಯೋತಿಯನ್ನು ಕಿತ್ತೂರು ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಸ್ವಾಗತಿಸಲಾಯಿತು. ಈ …

Read More »

ಬೆಳಗಾವಿ: ದೀಪಾವಳಿ ಬಟ್ಟೆ ಖರೀದಿಗೆ ಬಂದಿದ್ದ ಬಾಲಕ ಮಾಂಜಾ ದಾರಕ್ಕೆ ಬಲಿ

ಬೆಳಗಾವಿ: ದೀಪಾವಳಿ ಹಬ್ಬಕ್ಕೆ ಬಟ್ಟೆ ಖರೀದಿಸಿ ಊರಿಗೆ ದ್ವಿಚಕ್ರ ವಾಹನದ ಮೇಲೆ ಹೊರಟಿದ್ದಾಗ ಮಾಂಜಾ ದಾರ ಕುತ್ತಿಗೆಗೆ ಬಿಗಿದು ಐದು ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಇಲ್ಲಿಯ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ 4ಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ.   ಯಮಕನಮರಡಿ ಸಮೀಪದ ಅನಂತಪುರ ಗ್ರಾಮದ ವರ್ಧನ ಈರಣ್ಣ ಬೇಲಿ(5) ಎಂಬ ಬಾಲಕ ಮೃತಪಟ್ಟಿದೆ. ಗಾಂಧಿ ನಗರದ ಹಣ್ಣಿನ ಮಾರುಕಟ್ಟೆ ಎದುರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಾಲಕನ ಕುತ್ತಿಗೆಗೆ ಮಾಂಜಾ …

Read More »

ಆನಂದ ಮಾಮನಿ ಅವರ ಅಂತಿಮ ದರ್ಶನವನ್ನು ಪಡೆದುಕೊಂಡ C.M.

ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾದ ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ಆನಂದ ಮಾಮನಿ ಅವರ ಅಂತಿಮ ದರ್ಶನವನ್ನು ಪಡೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸರಕಾರದ ಪರವಾಗಿ ಅಂತಿಮ ನಮನ ಸಲ್ಲಿಸಿದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲವು ವಾರಗಳಿಂದ ಚಿಕಿತ್ಸೆಯನ್ನು ಪಡೆಯುತ್ತಿದ್ದ ಉಪ ಸಭಾಧ್ಯಕ್ಷ ಆನಂದ ಮಾಮನಿ(56) ಅವರು ಭಾನುವಾರ(ಅ.23) ನಿಧನರಾಗಿದ್ದರು. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ತಾಲ್ಲೂಕು ಕ್ರೀಡಾಂಗಣದಲ್ಲಿ ಮಾಮನಿಯವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ ಮುಖ್ಯಮಂತ್ರಿ …

Read More »

ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

    ಗೋಕಾಕ್- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ. ಮೃತರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮಾಮನಿ …

Read More »

ಕರ್ನಾಟಕ ರಾಜ್ಯೋತ್ಸವ: 67 ಪ್ರಶಸ್ತಿಗೆ 28 ಸಾವಿರ ಅರ್ಜಿಗಳು!

ಬೆಂಗಳೂರು: ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ನಾಡಿನ ವಿವಿಧ ವಲಯದಿಂದ 28 ಸಾವಿರ ಅರ್ಜಿಗಳ ಸಲ್ಲಿಕೆಯಾಗಿವೆ. ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇಮಕ ಮಾಡಿದ್ದ ಉಪಸಮಿತಿ, ಸಲಹಾ ಸಮಿತಿ ಅರ್ಜಿ ಪ್ರಕ್ರಿಯೆಯ ಪರಿಶೀಲನೆ ಪೂರ್ಣಗೊಳಿಸಿದ್ದು ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಸಭೆ ನಡೆಯಲಿದ್ದು ಇಲ್ಲಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.   ಈ ವರ್ಷ 67ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ವಿವಿಧ …

Read More »

ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ….

ಕಿತ್ತೂರು :ಉತ್ಸವ ನಾಳೆಗೆ ಮುಂದೂಡಿಕೆ..   ಚನ್ನಮ್ಮನ ಕಿತ್ತೂರಿನಲ್ಲಿ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವವನ್ನು ನಾಳೆ ಸೋಮವಾರ(ಅ.24)ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

Read More »

ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ರಾಮದುರ್ಗ: ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದಲ್ಲಿ ಇಲ್ಲಿನ ಸುಶೀಲಾತಾಯಿ ಕುಲಗೋಡ ಪಿಯು ಕಾಲೇಜಿನ ವಿದ್ಯಾರ್ಥಿಗಳು ನೆಟ್ ಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಸನಗೌಡಾ ದ್ಯಾಮನಗೌಡ್ರ-ಕಬಡ್ಡಿ, ವಿಜಯ ಕಳಸಗೌಡರ-5 ಕಿ.ಮೀ ನಡಿಗೆ ಮತ್ತು ಸಾನೀಯಾ ನಾಸಿಪೂರ ಜಾವಲಿನ್‌ ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷ ಎಸ್.ಎ. ಶೆಟ್ಟಿಸದಾವರ್ತಿ, ಉಪಾಧ್ಯಕ್ಷ ಕೆ.ಮೋಹನ, ಗೌರವ ಕಾರ್ಯದರ್ಶಿ ಎಸ್.ಎಸ್. ಸುಲ್ತಾನಪೂರ, ಪ್ರಾಚಾರ್ಯ ಪ್ರೊ.ಎಂ.ಬಿ. …

Read More »

ರಾಜ್ಯೋತ್ಸವ: ಅದ್ಧೂರಿ ಆಚರಣೆಗೆ ಸೂಚನೆ

ನಿಪ್ಪಾಣಿ: ‘ಈ ಬಾರಿ ರಾಜ್ಯೋತ್ಸವವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ. ಎಲ್ಲರೂ ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತನ್ನಿ’ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಕರೆ ನೀಡಿದರು. ಇಲ್ಲಿನ ನಗರಸಭೆಯಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ಮತ್ತು ಕನ್ನಡಪರ ಸಂಘಟನೆಗಳ ಆಶ್ರಯದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು.   ‘ಎಲ್ಲ ಇಲಾಖೆಯ ಕಾರ್ಯಾಲಯಗಳನ್ನು ಅಲಂಕರಿಸಿ ಹಬ್ಬದ ವಾತಾವರಣ ಸೃಷ್ಟಿಸಬೇಕು. ಅ.28ರಂದು ರಾಜ್ಯದಾದ್ಯಂತ ನಡೆಯುವ ಕೋಟಿ ಕಂಠ ಗೀತಗಾಯನ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ …

Read More »