Home / ಜಿಲ್ಲೆ / ಬೆಳಗಾವಿ (page 107)

ಬೆಳಗಾವಿ

ಮಕ್ಕಳಲ್ಲಿ ದೇಶಾಭಿಮಾನ ಮೂಡಿಸಿ’

ಬೈಲಹೊಂಗಲ: ‘ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣನ ತ್ಯಾಗ, ಬಲಿದಾನ, ರಾಷ್ಟ್ರಪ್ರೇಮದ ಕುರಿತು ಮಕ್ಕಳಿಗೆ ತಿಳಿಸಿ, ಅವರಲ್ಲಿ ದೇಶಾಭಿಮಾನ ಬೆಳೆಸಬೇಕು’ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಪಟ್ಟಣದ ಕಿತ್ತೂರು ಚನ್ನಮ್ಮನ ಸಮಾಧಿ ಸ್ಥಳದಲ್ಲಿ ಶನಿವಾರ ವೀರಜ್ಯೋತಿ ವಾಹನಕ್ಕೆ ಪೂಜೆ ಸಲ್ಲಿಸುವ ಮೂಲಕ ಸ್ವಾಗತಿಸಿ ಅವರು ಮಾತನಾಡಿದರು.   ‘ಇದೇ ಮೊದಲ ಬಾರಿಗೆ ರಾಜ್ಯದಾದ್ಯಂತ ಸಂಚರಿಸಿದ ಜ್ಯೋತಿ ವಾಹನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಬರುವ ದಿನಗಳಲ್ಲಿ ಕಿತ್ತೂರು ಉತ್ಸವ ರಾಷ್ಟ್ರ ಮಟ್ಟದಲ್ಲಿ …

Read More »

ಇಂದಿನಿಂದ 3 ದಿನ `ಕಿತ್ತೂರು ಉತ್ಸವ’

ಬೆಳಗಾವಿ : ಇಂದಿನಿಂದ ಬೆಳಗಾವಿ ಜಿಲ್ಲೆಯ ಚನ್ನಮ್ಮನ್ನ ಕಿತ್ತೂರಿನಲ್ಲಿ ಮೂರು ದಿನಗಳ ಕಾಲ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದಲ್ಲಿ ಉತ್ಸವವಾಗಿ ಆಚರಿಸುತ್ತಿದೆ. ಇಂದು ಸಂಜೆ 7 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಿತ್ತೂರು ಉತ್ಸವ ಉದ್ಘಾಟಿಸಲಿದ್ದು, ಅಕ್ಟೋಬರ್ 23,24,25 ರಂದು ಕಾರ್ಯಕ್ರಮಗಳು ನಡೆಯಲಿವೆ. ಮೂರು ದಿನಗಳ ಉತ್ಸವದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ.   ಕಿತ್ತೂರು ರಾಣಿ ಚನ್ನಮ್ಮ ಮುಖ್ಯ ವೇದಿಕೆ ಹಾಗೂ …

Read More »

ವಿಧಾನಸಭೆ ಉಪಸಭಾಪತಿ, ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ

ಬೆಳಗಾವಿ: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ‌ ಚಂದ್ರಶೇಖರ ಮಾಮನಿ ಅವರು ಅನಾರೋಗ್ಯದಿಂದ ಶನಿವಾರ ರಾತ್ರಿ ಕೊನೆಯುಸಿರೆಳೆದರು. ಅನಾರೋಗ್ಯದಿಂದ ಬಳಲುತ್ತಿದ್ದ ಅನಂದ ಮಾಮನಿ ಅವರು ಬೆಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಅನೇಕ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ರವಿವಾರ ಪಾರ್ಥಿವ ಶರೀರ ತವರು ಜಿಲ್ಲೆಗೆ ಆಗಮಿಸಲಿದೆ.‌ ಶಾಸಕ ಆನಂದ ಮಾಮನಿ ನಿಧನದಿಂದ ಜಿಲ್ಲೆಯಾದ್ಯಂತ ಶೋಕ ಮಡುಗಟ್ಟಿದ್ದು, ಹಿರಿಯ ರಾಜಕೀಯ ನೇತಾರನನ್ನು ಕಳೆದುಕೊಂಡ ಜಿಲ್ಲೆ …

Read More »

ಗೋಕಾಕ ತಾಲೂಕಿನ ಸಜ್ಜೆಹಾಳ ಗ್ರಾಮದಲ್ಲಿ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಸಜ್ಜೆಹಾಳ ಗ್ರಾಮದಲ್ಲಿ ಕಮಲಾದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ರಾಯಪ್ಪ ತಿರ್ಕಣ್ಣವರ, ಸಿದ್ದಪ್ಪ ಅವರಾದಿ, ವಾಸು ಗಲಗಲಿ, …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ

ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ ಗೋಕಾಕ : ಹಿರೇನಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸ್ಕೌಟ್ಸ್, ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರವನ್ನು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಮತ್ತು ಶಾಲಾ ಸುಧಾರಣಾ ಸಮಿತಿಯವರು ಉಪಸ್ಥಿತರಿದ್ದರು.

Read More »

ಕಾರ್ಮಿಕ ಕಾರ್ಡ ಬಸ್‍ಪಾಸ್‍ಗಾಗಿವಿತರಣೆ ವಿಳಂಬ ,ಕಾರ್ಮಿಕ ಇಲಾಖೆಗೆ ಮುತ್ತಿಗೆ ಹಾಕಿದ ಕಾರ್ಮಿಕರು

ಕಾರ್ಮಿಕ ಕಾರ್ಡ ವಿತರಣೆ ಮಾಡಲು ವಿಳಂಬ ಹಾಗೂ ಕಾರ್ಮಿಕ ಕಾರ್ಡ ಇದ್ದವರಿಗೆ ಸರ್ಕಾರದ ಸೌಲಭ್ಯಗಳು ದೊರಕದ ಹಿನ್ನೆಲೆ ಬೆಳಗಾವಿಯಲ್ಲಿ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಹೌದು ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಕಟ್ಟಡ ಕಾರ್ಮಿಕರು ಶುಕ್ರವಾರ ಬೆಳಗಾವಿಯ ಕಾರ್ಮಿಕ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಾರ್ಮಿಕರ ಕಾರ್ಡಗಾಗಿ ಅರ್ಜಿ ಹಾಕಿದ್ರೂ ಬೇಗನೇ ಕಾರ್ಡಗಳು ಸಿಗುತ್ತಿಲ್ಲ. ಇನ್ನು ಕಾರ್ಡಗಳು ಇದ್ದವರಿಗೆ ಸರ್ಕಾರದ ಸೌಲಭ್ಯಗಳು ಸರಿಯಾಗಿ ಮುಟ್ಟುತ್ತಿಲ್ಲ. ಶಿಕ್ಷಣ ಸೌಲಭ್ಯ, …

Read More »

ಬೆಳಗಾವಿಯಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ: ಪ್ರಾಣವನ್ನು ಕಳೆದುಕೊಂಡ ವೀರ ಪೊಲೀಸರಿಗೆ ಇಂದು ಗೌರವ ಸಲ್ಲಿಸುವ ದಿನ

ದೇಶದ ಗಡಿಯಲ್ಲಿ ನಿಂತ ಒಬ್ಬ ಯೋಧ ನಮ್ಮನ್ನ ಶತ್ರುಗಳಿಂದ ಕಾಪಾಡಿದರೆ, ದೇಶದ ಒಳಗಡೆ ಎಲ್ಲ ಹಂತದಲ್ಲೂ ನಮಗೆ ರಕ್ಷಣೆ ನೀಡುವುದು “ಪೊಲೀಸ್” ನಮ್ಮ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡ ವೀರ ಪೊಲೀಸರಿಗೆ ಇಂದು ಗೌರವ ಸಲ್ಲಿಸುವ ದಿನವೇ ಅಕ್ಟೋಬರ್ 21. ಹೌದು 1959ರ ಅ. 21ರಂದು ಚೀನಾ-ಭಾರತ ಗಡಿ ಭಾಗದ ಹಾಟ್ ಸ್ಟ್ರೀಗ್ ಪೆÇೀಸ್ಟ್ ಹತ್ತಿರ ಸಿಆರ್‍ಪಿಎಫ್ ಡಿಎಸ್‍ಪಿ ಕರಣಸಿಂಗ್ ನೇತೃತ್ವದಲ್ಲಿ ಪೆÇಲೀಸ್ ದಳವು ಪಹರೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಆಧುನಿಕ …

Read More »

ಒಂದು ಮತದ ಅಂತರದಲ್ಲಿ ಸೋತ ಅಭ್ಯರ್ಥಿ; ಮರು ಎಣಿಕೆಗಾಗಿ ಕೋರ್ಟ್​​​ ಮೊರೆ ಹೋದಾಗ ಮುಖಭಂಗ

ಚಿಕ್ಕೋಡಿ : ಕಳೆದ ಒಂದೂವರೆ ವರ್ಷದ ಹಿಂದೆ ನಡೆದಿದ್ದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪರಾಭವಗೊಂಡು ಮರು ಮತ ಎಣಿಕೆಗೆ ಕೋರ್ಟ್ ಮೆಟ್ಟಿಲೇರಿದ್ದ ಅಭ್ಯರ್ಥಿಗೆ ಮುಖಭಂಗವಾದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯತಿಯ 2020 ರ ಡಿಸೆಂಬರ್ 30 ರಂದು ನಡೆದಿದ್ದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಮತ ಎಣಿಕೆ ಸರಿಯಾಗಿಲ್ಲ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿಯಾದ ರಾವಸಾಹೇಬ್ ಪಾಟೀಲ್ , ಸಂಕೇಶ್ವರದ ಜೆ.ಎಂ.ಎಫ್​​.ಸಿ ಕೋರ್ಟ್ ಮೊರೆ ಹೋಗಿದ್ದರು. …

Read More »

ಎಂ.ಕೆ.ಹುಬ್ಬಳ್ಳಿಯಲ್ಲಿ ನೀರಿಗಾಗಿ ಹಾಹಾಕಾರ:

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಳೆದ 8 ದಿನಗಳಿಂದ ನೀರು ಬಿಡದ ಹಿನ್ನೆಲೆ ಆಕ್ರೋಶಗೊಂಡಿರುವ ಇಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದರು. ಹೌದು ಎಂಕೆ ಹುಬ್ಬಳ್ಳಿ ಪಟ್ಟಣದ ವಾರ್ಡ ನಂ.1, 2, 3ರಲ್ಲಿ ಕಳೆದ ಎಂಟು ದಿನಗಳಿಂದ ನೀರು ಬಿಟ್ಟಿಲ್ಲ. ಇಲ್ಲಿನ ಜನ ನೀರಿಗಾಗಿ ಪರಿತಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಆಕ್ರೋಶಗೊಂಡಿರುವ ಇಲ್ಲಿನ ನಿವಾಸಿಗಳು ಕೈಯಲ್ಲಿ ಖಾಲಿ ಕೊಡಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ಈ ವೇಳೆ ಪಟ್ಟಣ …

Read More »

ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ದಲಿತರಿಗೆ ಅನ್ಯಾಯ ಆಗಲು ಬಿಡೋಲ್ಲ: ಎಸ್‍ಪಿ ಡಾ.ಸಂಜೀವ್ ಪಾಟೀಲ್

ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ದಲಿತರಿಗೆ ಅನ್ಯಾಯ ಆಗಲು ಬಿಡೋದಿಲ್ಲ. ನಾನು ಕೂಡ ದಲಿತ ಕೇರಿಗೆ ಬಂದು ನಿಮ್ಮ ಸಮಸ್ಯೆ ಆಲಿಸುತ್ತೇನೆ ಎಂದು ಎಸ್‍ಪಿ ಡಾ.ಸಂಜೀವ್ ಪಾಟೀಲ್ ಭರವಸೆ ನೀಡಿದರು. ಗುರುವಾರ ಬೆಳಗಾವಿಯ ಎಸ್‍ಪಿ ಕಚೇರಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ದಲಿತ ಮುಖಂಡರ ಜೊತೆಗೆ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಸಭೆ ನಡೆಸಿದರು. ಈ ವೇಳೆ ದಲಿತ ಮುಖಂಡರು ತಮ್ಮ ವಿವಿಧ ಸಮಸ್ಯೆಗಳ ಬಗ್ಗೆ ಎಸ್‍ಪಿ ಅವರ ಗಮನಕ್ಕೆ ತಂದರು. ಈ …

Read More »