ಬೆಳಗಾವಿ: ಉದ್ಯೋಗ ಮಾಡೋದು ಎಲ್ಲರಿಗೂ ಗೊತ್ತು ಉದ್ಯೋಗ ಸುಮಾರು ಜನಾ ಮಾಡ್ತಾರೆ ಆದರೆ ಅದರಲ್ಲಿ ಸಾಧನೆ ಮಾಡಿದವರ ಸಂಖ್ಯೆ ಕಮ್ಮಿ ಇನ್ನೂ ಇವತ್ತಿನ ವಿಶ್ ಯಕ್ಕೆ ಬರೋದ ಆದ್ರೇ ನಿನ್ನೆ ಬೆಳಗಾವಿ ನಗರ ದಲ್ಲಿ ಡಿಕೆ ಮೋಟೀವ್ ಅಸೋಸಿಯೇಷನ್ ವತಿಯಿಂದ ಬೆಳಗಾವಿಯಲ್ಲಿ BUSINESS EXCELLENCE AWARD ಸಮಾರಂಭ ಆಯೋಜನೆ ಮಾಡಿ ದ್ದರು ಬೆಳ ಗಾವಿಯ ಎಲ್ಲ ಉದ್ಯಮಿ ಗಳು ಕೂಡ ಅದರಲ್ಲಿ ಭಾಗಿ ಯಾಗಿ ದ್ದರು ಹಾಗೂ ನಗರದ ಜನತೆ …
Read More »ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಆರನೇ ಹಂತದ ಹೋರಾಟದ ಸಮಾವೇಶದಲ್ಲಿ ಶಾಸಕ ವಿನಯ್ ಕುಲಕರ್ಣಿ ಭಾಗಿ
ಚಿಕ್ಕೋಡಿ (ಬೆಳಗಾವಿ): ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಹಾಗೂ ಕೆಲವು ಕಾನೂನು ತೊಡಕನ್ನು ಸರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚಮಸಾಲಿ ಸಮಾಜದಿಂದ ಮನವಿ ಮಾಡಲಾಗಿತ್ತು. ಅಧಿವೇಶನ ಮುಗಿದ ಬಳಿಕ ಕಾನೂನು ತಜ್ಞರ ಜೊತೆ ಸಭೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಆದರೆ ಇಂದು ಆ ಭರವಸೆ ಹುಸಿಯಾಗಿದೆ. ಇದರಿಂದಾಗಿ ಶ್ರೀಗಳು ನಿಪ್ಪಾಣಿಯಿಂದ ಹೋರಾಟ ಪ್ರಾರಂಭ ಮಾಡಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ …
Read More »ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ ಕಾರ್ಯ ಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಗೋಕಾಕ ನಗರಕ್ಕೆ ಅಂಟಿಕೊಂಡ ಗಾಂಜಾ ಘಾಟು! ನಿತ್ಯ ಹತ್ತಾರು ಯುವಕರು ಗಾಂಜಾ ಬಲೆಗೆ
ಗೋಕಾಕ : ನಗರದ ನದಾಫ್ ಗಲ್ಲಿ ಮಸ್ತಾನ್ ಸಾಬ್ ದರ್ಗಾ ಹತ್ತಿರ ನಿತ್ಯ ಹತ್ತಾರು ಯುವಕರು ಗಾಂಜಾ ಬಲೆಗೆ ಬೀಳುತ್ತಿದ್ದು ಗಾಂಜಾ ಸೇವನೆಗೆ ಬಳಸುವ ವಸ್ತುಗಳು ದಿನನಿತ್ಯ ಈ ಪ್ರದೇಶದಲ್ಲಿ ಕಂಡು ಬರುತ್ತಿವೆ. ಯುವಕರು ಸಿಗರೇಟ್ ಸೆದುತ್ತಿರುವಂತೆ ಕಂಡು ಬಂದರು ಸಹಿತ ಅದು ಸಿಗರೇಟ್ ಆಗಿರುವುದಿಲ್ಲ. ಬದಲಾಗಿ ಅದರೊಂದಿಗೆ ಗಾಂಜಾ ಕೂಡ ಸೇರಿಸಿ ಸಿಗರೇಟ್ ಸೆದುತ್ತಿರುವುದು ಕಂಡು ಬರುತ್ತದೆ. ಪೋಷಕರಿಗೆ ಆತಂಕ! ನಮ್ಮ ಮಗನೊಬ್ಬ ಗಾಂಜಾಗೆ ಬಲೆಗೆ ಸಿಲುಕಿದ್ದು ,ನಾವು …
Read More »ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ,
ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪವಿಭಾಗದಲ್ಲಿ ಆಡಳಿತ ವ್ಯವಸ್ಥೆ ಯಾವ ರೀತಿ, ಜನರ ಪರಿಸ್ಥಿತಿ ಹೇಗಿದೆ ಎಂಬುವುದಕ್ಕೆ ತಾಜಾ ಉದಾಹರಣೆ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ. ತಾಲೂಕು ಕೇಂದ್ರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡಲು ತಜ್ಞ ವೈದ್ಯರು ಹಿಂದೇಟು ಹಾಕುತ್ತಿದ್ದು ನಗರಪ್ರದೇಶಗಳಿಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರಿಂದ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಎದುರಾಗಿದ್ದು ಬಡರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಈ ಕುರಿತು ಡಿಟೇಲ್ ರಿಪೋರ್ಟ್ ಇಲ್ಲಿದೆ ನೋಡಿ… …
Read More »ನಿಪ್ಪಾಣಿ ತಾಲೂಕಿನ ನಂತರ ಅಥಣಿ, ಕಾಗವಾಡ, ರಾಯಬಾಗ, ಚಿಕ್ಕೋಡಿ ಕ್ಷೇತ್ರಗಳಲ್ಲೂ ಸಂಚರಿಸಿ ಮೀಸಲಾತಿಯ ಹೋರಾಟದ ಜಾಗೃತಿ
ಚಿಕ್ಕೋಡಿ: ‘ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಇಷ್ಟಲಿಂಗಪೂಜೆ ಮಾಡುವ ಮೂಲಕ ಸರ್ಕಾರದ ಗಮನ ಸಲ್ಲಿಸಿ ಮೀಸಲಾತಿಗಾಗಿ ಒತ್ತಡ ಹೇರಲಾಗುವುದು. ನಗರದಲ್ಲಿ ಸೆ.೧೦ರಂದು ಬೆಳಗಾವಿ ಜಿಲ್ಲಾ ಮಟ್ಟದ ಹೋರಾಟ ನಡೆಸಿ ಲಿಂಗಾಯತ ಸಮುದಾಯಕ್ಕೆ ೨ಎ ಮೀಸಲಾತಿ ಸಿಗಬೇಕು ಹಾಗೂ ಕೇಂದ್ರ ಸರ್ಕಾರವು ಓಬಿಸಿ ಪಟ್ಟಿಯಲ್ಲಿ ಸೇರ್ಪಡಿಸಿಕೊಳ್ಳಬೇಕೆಂದು ಒತ್ತಾಯಿಸಲಾಗುವುದು’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಪ್ರಸಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು …
Read More »30 ಶಾಲೆಗಳಿಗೆ ಲ್ಯಾಪಟಾಪ್ ಹಾಗೂ ಕಲರ್ ಪ್ರಿಂಟಗಳನ್ನು ವಿತರಿಸಿದರ ಶಾಸಕ ಗಣೇಶ ಹುಕ್ಕೇರಿ
ಶಿಕ್ಷಣ ಸಚಿವರನ್ನು ಚಿಕ್ಕೋಡಿಗೆ ಕರೆಯಿಸಿ ಶಿಕ್ಷಣ ಇಲಾಖೆಯ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು. ಚಿಕ್ಕೋಡಿ ಪಟ್ಟಣದ ಪರಟಿನಾಗಲಿಂಗೇಶ್ವರ ಸಭಾಭವನದಲ್ಲಿ ಆಯೋಜಿಸಿದ ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡುತ್ತಾ ತಂದೆ ತಾಯಿಯವರ ನಂತರ ಶಿಕ್ಷಕರೇ ಗುರುಗಳು,ಶಿಕ್ಷಕರನ್ನು ದೇವರಂತೆ ಕಾಣಬೇಕು.ಶಿಕ್ಷಕರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದರೆ ಯಶಸ್ಸು ಕಂಡಿತ ಎಂದರು. ಜಿಲ್ಲೆಯ ಎಲ್ಲ ಸಮಸ್ಯೆಗಳನ್ನು ನಾನು ಹಾಗೂ ದೆಹಲಿ ಪ್ರತಿನಿಧಿ ಪ್ರಕಾಶ ಹುಕ್ಕೇರಿಯವರು ಬಗೆಹರಿಸುತ್ತೇವೆ.ಮುಂದಿನ …
Read More »ರಸ್ತೆ ಅಪಘಾತದಲ್ಲಿ ಸಾವಿನಲ್ಲೂ ಒಂದಾದ ಅಣ್ಣ ತಂಗಿ
ಬೆಳಗಾವಿ : ಕಾರು ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಮೇಲಿದ್ದ ಅಣ್ಣ-ತಂಗಿ ಸಾವನ್ನಪ್ಪಿರುವ ಘಟನೆ ಮಲಿಕವಾಡ-ನಣದಿವಾಡಿ ರಸ್ತೆಯಲ್ಲಿ ನಡೆದಿದೆ. ಪ್ರಶಾಂತ ನಾಗರಾಜ ತುಳಸಿಕಟ್ಟಿ(21) ಮತ್ತು ಪ್ರಿಯಾಂಕ ನಾಗರಾಜ ತುಳಸಿಕಟ್ಟಿ (19) ಸಾವಿನಲ್ಲೂ ಒಂದಾದ ಅಣ್ಣ-ತಂಗಿ ಎಂದು ತಿಳಿದು ಬಂದಿದೆ. ಮೂಲತಃ ಸದಲಗಾ ಪಟ್ಟಣದ ನಿವಾಸಿಗಳಾಗಿದ್ದು, ಮಂಗಳವಾರ ಮಧ್ಯಾಹ್ನ ಚಿಕ್ಕೋಡಿಯ ಪರಟಿನಾಗಲಿಂಗೇಶ್ವರ ದೇವಸ್ಥಾನಕ್ಕೆ ಎಂದು ದ್ವಿಚಕ್ರ ವಾಹನ ಮೇಲೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ ಡಿಕ್ಕಿ ಹೊಡೆದಿದೆ. ಪರಿಣಾಮ …
Read More »ಕೌಜಲಗಿಯ ಕಳ್ಳಿಗುದ್ದಿ ಕ್ರಾಸ್-ಕೆವ್ಹಿಜೆ ಬ್ಯಾಂಕ್‍ವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ರಸ್ತೆಯ ಅಕ್ಕ-ಪಕ್ಕದ ಸಾರ್ವಜನಿಕರ ಆಶಯದಂತೆ ಕೌಜಲಗಿ-ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿಯೇ ಈ ರಸ್ತೆ ಕಾಮಗಾರಿಯು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ 1.80 ಕೋಟಿ ರೂ. ವೆಚ್ಚದ ಬಾದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾ.ಹೆ-134 ರ ಸರಪಳಿ 87.065 ರಿಂದ 87.59 ಕಿ.ಮೀ ವರೆಗಿನ ಕೌಜಲಗಿ ಗ್ರಾಮ ವ್ಯಾಪ್ತಿಯ ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ …
Read More »ನಾಗನೂರ: ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ*: ನಾಗನೂರು ಪಟ್ಟಣದ ಜನರ ಪ್ರಮುಖ ಬೇಡಿಕೆಯಾಗಿದ್ದ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ರೂಪಾಯಿ ಅನುದಾನ ಬಂದಿದ್ದು, ಇದೇ ನವೆಂಬರ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರದಂದು ತಾಲೂಕಿನ ನಾಗನೂರ ಪಟ್ಟಣದ ಲಕ್ಷ್ಮೀದೇವಿ ದೇವಸ್ಥಾನ ಹತ್ತಿರ ಸಣ್ಣ ನೀರಾವರಿ ಇಲಾಖೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಬ್ಯಾರೇಜ್ ನಿರ್ಮಾಣದಿಂದ ರೈತರು …
Read More »