Breaking News
Home / ಜಿಲ್ಲೆ / ಬೆಳಗಾವಿ (page 11)

ಬೆಳಗಾವಿ

ತಮ್ಮ ಪಕ್ಷದ ವಿರುದ್ಧವೇ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಬೇಸರ

ಬೆಳಗಾವಿ: ಯಾರೇ ಮಂತ್ರಿಯಾಗಬೇಕಂದರೂ, ಅದಕ್ಕೆ ಜಾದು ಮಾಡ್ಬೇಕು. ನಮಗೆ ಮಂತ್ರಿಯಾಗೋ ಜಾದುವೇ ಗೊತ್ತಿಲ್ಲ. ಇನ್ನು ಮುಖ್ಯಮಂತ್ರಿಯಾಗೋದು ಎಲ್ಲಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪರೋಕ್ಷವಾಗಿ ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಚರ್ಚೆಯಲ್ಲಿ ಬಿ.ಆರ್‌. ಪಾಟೀಲ್‌ ಮಾತನಾಡುತ್ತಾ, ಕೇಂದ್ರ ಸಾರಿಗೆ ಸಚಿವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯ ಕೆಲಸ ಮಾಡುವ ಕನಸುಗಳಿವೆ. ಆದರೆ, ನಿಮ್ಮವರು ಅದನ್ನು ಮಾಡಲು ಬಿಡುತ್ತಿಲ್ಲ. ನನಗೆ ಅನುಕಂಪ ಇದೆ …

Read More »

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ನಾಮಕರಣ ಮಾಡುವ ನಿರ್ಣಯ ಅಂಗೀಕಾರ

ಬೆಳಗಾವಿ : ವಿಧಾನಸಭೆಯಲ್ಲಿ ರಾಜ್ಯದ ನಾಲ್ಕು ಏರ್​ಪೋರ್ಟ್​ಗಳಿಗೆ ನಾಮಕರಣ ಮಾಡುವ ನಿರ್ಣಯ ಅಂಗೀಕಾರ ಪಡೆದುಕೊಳ್ಳಲಾಯಿತು. ಈ ಸಂಬಂಧ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ ಪಾಟೀಲ್, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯ ಮಂಡಿಸಿದರು.   ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹೆಸರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ …

Read More »

ಮಹಿಳೆ ಮೇಲಿನ ಹಲ್ಲೆ ಅಮಾನವೀಯ ಹೇಯಕೃತ್ಯ: ಹೆಬ್ಬಾಳ್ಕರ್

ಬೆಳಗಾವಿ : ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತ ಮಹಿಳೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.   ಸಂತ್ರಸ್ತ ಮಹಿಳೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಯಾವುದೇ ಕಾರಣಕ್ಕೂ ಧೃತಿಗೆಡದಂತೆ ಧೈರ್ಯ ಹೇಳಿದರು. …

Read More »

ಮುಂದಿನ ವರ್ಷದಿಂದ ಉಚಿತ ಸೈಕಲ್​ ನೀಡಲಾಗುವುದು : ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯದ ಪ್ರಾಥಮಿಕ ಹಾಗು ಪ್ರೌಢಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ಯೋಜನೆಯಡಿ ಮುಂದಿನ ವರ್ಷದಿಂದ ಸೈಕಲ್ ವಿತರಣೆ ಆರಂಭಿಸಲಾಗುತ್ತದೆ. ಆದರೆ, ಈ ಬಾರಿ ಸೈಕಲ್ ವಿತರಣೆ ಅಸಾಧ್ಯ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಕ್ಕಳಿಗೆ ಸೈಕಲ್ ಕೊಡಬಾರದಂತಲ್ಲ, ಇದಕ್ಕೆ ನಮಗೆ ಹಣಕಾಸು ಸಮಸ್ಯೆಯೂ ಆಗುವುದಿಲ್ಲ. ಆದರೆ, ಒಂದೇ ಬಾರಿ ಅಷ್ಟು …

Read More »

ಸಣ್ಣಪುಟ್ಟ ಸಮಾಜವಿರಲಿ,ದೊಡ್ಡ ಸಮಾಜವಿರಲಿ. ಈ ಎಲ್ಲ ಸಮಾಜಗಳ ಅಭಿವೃದ್ಧಿಗೆ ಬದ್ಧನಿರುವೆ.: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ( ಹಕ್ಕ- ಬುಕ್ಕ ವೇದಿಕೆ ಸುಣಧೋಳಿ) – ಸಣ್ಣಪುಟ್ಟ ಸಮಾಜವಿರಲಿ,ದೊಡ್ಡ ಸಮಾಜವಿರಲಿ. ಈ ಎಲ್ಲ ಸಮಾಜಗಳ ಅಭಿವೃದ್ಧಿಗೆ ಬದ್ಧನಿರುವೆ. ಸಮಾಜಗಳ ಅಶೋತ್ತರಗಳಿಗೆ ಸ್ಪಂದಿಸುವ ಮೂಲಕ ಎಲ್ಲ ಸಮುದಾಯಗಳಿಗೆ ಬೆನ್ನಲಬು ಆಗಿ ಕೆಲಸ ಮಾಡುತ್ತೇನೆ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರದಂದು ಜರುಗಿದ ಭಕ್ತ ಕನಕದಾಸರ 536ನೇ ಜಯಂತಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಸಮುದಾಯಗಳ ಆಶೀರ್ವಾದದಿಂದ …

Read More »

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಡಿಸೆಂಬರ್​ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಚಿಕ್ಕೋಡಿ (ಬೆಳಗಾವಿ) : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರಗಳು ಮೀನಾಮೇಷ ಎಣಿಸುತ್ತಿವೆ. ಹಿಂದಿನ ಸರ್ಕಾರ ನಮಗೆ 2ಡಿ ಮೀಸಲಾತಿ ಘೋಷಣೆ ಮಾಡಲಾಗಿತ್ತು. ಅದಿನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಮಾಜದ ಮುಖಂಡರ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದು ಮಾತು ಕೊಟ್ಟು ತಪ್ಪಿದ್ದಾರೆ. ಈ ಸಂಬಂಧ ಸರ್ಕಾರವನ್ನು ಎಚ್ಚರಿಸಲು ಡಿಸೆಂಬರ್​ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು …

Read More »

ಬೆಳಗಾವಿ ಅಧಿವೇಶನದಲ್ಲಿ ಕಬ್ಬು ಕಟಾವು ಕಾರ್ಮಿಕರ ಸಮಸ್ಯೆಗಳ ಚರ್ಚೆಗೆ ಒತ್ತಾಯ

ಚಿಕ್ಕೋಡಿ: ರಾಜ್ಯದಲ್ಲೇ ಅತಿ ಹೆಚ್ಚು ಕಬ್ಬು ಬೆಳೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದೆ. ಆದರೆ ಕಬ್ಬು ಕಟಾವು ಮಾಡಿ ಸಾಗಿಸುವ ಕಾರ್ಮಿಕರಿಗೆ ನ್ಯಾಯಯುತ ಸಂಬಳ ಸಿಗದೆ ಇರೋದ್ರಿಂದ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಈ ಸಮಸ್ಯೆಗಳ ಕುರಿತಾಗಿ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ನಡೆಸುವಂತೆ ಚಿಕ್ಕೋಡಿ ಭಾಗದ ಕಬ್ಬು ಕಟಾವು ಕಾರ್ಮಿಕರು ಒತ್ತಾಯಿಸಿದ್ದಾರೆ. ಮೂರು ವರ್ಷಗಳಿಂದ ಕಾರ್ಮಿಕರಿಗೆ ಪ್ರತಿ ಟನ್ 324 ರೂ ನೀಡುತ್ತಿದ್ದು, ಈ ಕೂಲಿ ದರವನ್ನು ಸಕ್ಕರೆ ಕಾರ್ಖಾನೆಗಳು …

Read More »

ಆರ್ಥಿಕ‌ ಹೊರೆ ಹಿನ್ನೆಲೆ: ಕೃಷಿ ಪಂಪ್​ ಸೆಟ್‌ಗಳ ಮೂಲಸೌಕರ್ಯ ವೆಚ್ಚ ಭರಿಸುವ ಪ್ರಸ್ತಾವನೆ ಮುಂದೂಡಿದ ಸಂಪುಟ ಸಭೆ

ಬೆಳಗಾವಿ: ಕೃಷಿ ಪಂಪ್​ ಸೆಟ್‌ಗಳಿಗೆ ಮೂಲಸೌಕರ್ಯ ಒದಗಿಸುವ ವೆಚ್ಚನ್ನು ರೈತರೇ ಭರಿಸಬೇಕು ಎಂಬ ಆದೇಶ ಪರಿಷ್ಕರಿಸುವ ಪ್ರಸ್ತಾವನೆ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಈ ಪ್ರಸ್ತಾವನೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಈ ಹಿಂದೆ ಕೃಷಿ ಪಂಪ್‌ ಸೆಟ್‌ಗಳಿಗೆ ಮೂಲಸೌಕರ್ಯ ಕಲ್ಪಿಸಲು, ವೆಚ್ಚವನ್ನು ರೈತರೇ ಭರಿಸಬೇಕು …

Read More »

ಸುವರ್ಣಸೌಧದಿಂದ ಸಾವರ್ಕರ್ ಫೋಟೋ ತೆಗೆದರೆ ಸೂಕ್ತ, ನನಗೆ ಬಿಟ್ಟರೆ ಇವತ್ತೇ ತೆರವು ಮಾಡುವೆ: ಪ್ರಿಯಾಂಕ್ ಖರ್ಗೆ

ಬೆಳಗಾವಿ : ಸುವರ್ಣಸೌಧ ವಿಧಾನಸಭೆಯಿಂದ ಸ್ವಾತಂತ್ರ್ಯ ವೀರ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ತೆಗೆದರೆ ಸೂಕ್ತ. ನನಗೆ ಬಿಟ್ಟರೆ ಇವತ್ತೇ ತೆರವು ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಇಂದು ಮಾತನಾಡಿದ ಅವರು,‌ ಸಾವರ್ಕರ್ ಫೋಟೋ ತೆರವುಗೊಳಿಸುವ ವಿಚಾರವಾಗಿ ಪ್ರತಿಕ್ರಿಯಿಸಿ, ಯಾವ ತತ್ವ ಸಿದ್ದಾಂತದಲ್ಲಿ ಸಮಾನತೆ‌ ಇಲ್ಲವೋ, ಸ್ವಾಭಿಮಾನದ ಬದುಕಿಲ್ಲವೋ‌ ಅದನ್ನು ನಾನು ಒಪ್ಪಲ್ಲ.‌ ಗಾಂಧಿ ಹತ್ಯೆಗೆ ಪ್ರೇರಣೆಯಾದ ತತ್ವವನ್ನು ಒಪ್ಪಲ್ಲ. ಹೀಗಾಗಿ ವಿಧಾನಸಭೆಯಿಂದ …

Read More »

ಸುಳ್ಳು ಆರೋಪ ಮಾಡಿದ ಬಿಜೆಪಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ: ಪ್ರಿಯಾಂಕ್‌ ಖರ್ಗೆ

ಬೆಳಗಾವಿ: ಕಾರು ಅಪಘಾತ ಪ್ರಕರಣವನ್ನು ಹಲ್ಲೆ ಎಂದು ಬಿಂಬಿಸಿ ತಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದ ಮಣಿಕಠ ರಾಠೋಡ್ ಹಾಗೂ ಬಿಜೆಪಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತೇನೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಎಚ್ಚರಿಕೆ ನೀಡಿದ್ದಾರೆ.   ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಕಂಠ ರಾಠೋಡ್‌ ಮೇಲಿನ ಹಲ್ಲೆ ಪ್ರಕರಣದ ಸತ್ಯಾಸತ್ಯತೆ ಪೊಲೀಸರ ತನಿಖೆಯಿಂದ ಬಯಲಾಗಿದೆ. ಅಪಘಾತವನ್ನು ಹಲ್ಲೆ ಎಂದು ಕಥೆ ಕಟ್ಟಿ, ನನ್ನ ವಿರುದ್ಧ ಆರೋಪ …

Read More »