Breaking News

ಬೆಳಗಾವಿ

ಜೈನಮುನಿ ಕಾಮಕುಮಾರ ನಂದಿ ಮಹಾರಾಜರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಜಯಮೃತ್ಯುಂಜಯ ಶ್ರೀ

ಚಿಕ್ಕೋಡಿ: ಹಿರೇಕೊಡಿ ನಂದಿ ಪರ್ವತ ಮಹಾರಾಜರ ಹತ್ಯೆಯಿಂದ ಭಾರತದ ಅಧ್ಯಾತ್ಮ ಪರಂಪರೆಗೆ ಧಕ್ಕೆ ಆಗಿದೆ. ಒಕ್ಕೊರಲಾಗಿ ಖಂಡಿಸಿ ನ್ಯಾಯ ಕೊಡಿಸುವ ಕೆಲಸ ಎಲ್ಲರೂ ಕೂಡಿ ಮಾಡಬೇಕು. ನೊಂದ ಮನಸ್ಸುಗಳಿಗೆ ಧೈರ್ಯ ಹೇಳಿ ಮುಂದೆ ಈ ರೀತಿ ಘಟನೆ ಆಗದಂತೆ ಎಲ್ಲರೂ ಸಾಮೂಹಿಕ ಪ್ರಯತ್ನ ಮಾಡಬೇಕಾಗಿದೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಆಶ್ರಮಕ್ಕೆ ಭೇಟಿ ನೀಡಿ ಮಾಧ್ಯಮಗಳ …

Read More »

ಸ್ನೇಹಿತನನ್ನು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಇಲ್ಲಿನ ಪೀರನವಾಡಿಯ ಯುವಕ ಅರ್ಬಾಜ್ ರಫೀಕ್ ಮುಲ್ಲಾ(22) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪೀರನವಾಡಿ ಗ್ರಾಮದ ಪ್ರಸಾದ ನಾಗೇಶ ವಡ್ಡರ, ಪ್ರಶಾಂತ ಕರ್ಲೇಕರ್ ಬಂಧಿತ ಆರೋಪಿಗಳು. ಇನ್ನು ಕೊಲೆಗೆ ಹಳೆ ದ್ವೇಷವೇ ಕಾರಣ ಎಂದು ತಿಳಿದು ಬಂದಿದೆ. ಆರೋಪಿಗಳಾದ ಪ್ರಸಾದ ವಡ್ಡರ, ಪ್ರಶಾಂತ ಕರ್ಲೇಕರ್ ಮತ್ತು ಕೊಲೆಯಾದ ಅರ್ಬಾಜ್ ಮುಲ್ಲಾ ಮೂವರು ಸ್ನೇಹಿತರು. ಮೂರು ವರ್ಷಗಳ ಹಿಂದೆ ಪೀರನವಾಡಿಯ ಜನ್ನತ್ …

Read More »

ಕಪರಟ್ಟಿಯ ಬಸವರಾಜ ಹಿರೇಮಠ ಅವರನ್ನ ಪ್ರಶಂಶಿಸಿದ ಸರ್ವೊತ್ತಮ ಜಾರಕಿಹೊಳಿ

ಗೋಕಾಕ್- ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರತಿ ಹಳ್ಳಿ- ಹಳ್ಳಿಗಳಲ್ಲಿಯೂ ನಡೆಯಬೇಕು. ಇದರಿಂದ ಇಂದಿನ ಯುವ ಜನಾಂಗಕ್ಕೆ ಮಹಾನ್ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಬೆಳಗಾವಿ:ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಸಿದ್ದರಾಮಪ್ಪಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಬೆಳಗಾವಿ:ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಸಿದ್ದರಾಮಪ್ಪ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಡಿಸಿಪಿಗಳಾದ ಪಿ.ವಿ.ಸ್ನೇಹಾ, ಶೇಖರ ಟಕ್ಕೆಣ್ಣವರ  ಸ್ವಾಗತಿಸಿದರು

Read More »

ಚಂದ್ರಯಾನ – 3 ಮಿಷನ್​ನಲ್ಲಿ ಬೆಳಗಾವಿ ಯುವ ವಿಜ್ಞಾನಿ

ಬೆಳಗಾವಿ: ಇಸ್ರೋದಿಂದ ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಈ ಮಹತ್ಕಾರ್ಯದಲ್ಲಿ ಬೆಳಗಾವಿ ಜಿಲ್ಲೆ ಯುವಕನೊಬ್ಬ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಖಾನಾಪುರ ತಾಲೂಕಿನ ಅನಗಡಿ ಗ್ರಾಮದ ‘ಪ್ರಕಾಶ ಪೆಡ್ನೇಕರ್’ ಎಂಬ ಯುವ ವಿಜ್ಞಾನಿ ಚಂದ್ರಯಾನ- 3 ಮಿಷನ್​ನಲ್ಲಿ ಕೆಲಸ ಮಾಡುತ್ತಿರುವವರು. ಚಂದ್ರಯಾನ-2 ರಲ್ಲಿಯೂ ಇವರು ಕೆಲಸ ಮಾಡಿದ್ದರು. ಶುಭ ಹಾರೈಸಿದ ಸ್ವಾಮೀಜಿ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಚಂದ್ರಯಾನ – 3 ಉಡಾವಣೆ ಬಗ್ಗೆ ಮಾತನಾಡಿರುವ ಬೆಳಗಾವಿಯ ನಾಗನೂರು ರುದ್ರಾಕ್ಷಿ …

Read More »

ಜೈನ ಮುನಿ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ವಿಚಾರಣೆ ತೀವ್ರಗೊಂಡಿದೆ.

ಚಿಕ್ಕೋಡಿ: ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣದ ಇಬ್ಬರೂ ಆರೋಪಿಗಳನ್ನು ಪೊಲೀಸರು ಏಳು ದಿನ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಆರೋಪಿಗಳು ಜೈನಮುನಿಯ ಡೈರಿ ಸುಟ್ಟು ಹಾಕಿದ್ದರು. ಸದ್ಯ ಚಿಕ್ಕೋಡಿ ಪೊಲೀಸರು ಡೈರಿಯಲ್ಲಿದ್ದ ವಿಷಯದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜೈನಮುನಿ ಹತ್ಯೆ ಕೇಸ್‌ನಲ್ಲಿ ಬಂಧಿಸಿದ್ದ ಇಬ್ಬರು ಆರೋಪಿಗಳ ವಿಚಾರಣೆಯೂ ಚುರುಕು ಪಡೆದುಕೊಂಡಿದೆ. ಜೈನ ಮುನಿಯ ಹತ್ಯೆ ಬಳಿಕ ಆಶ್ರಮದಲ್ಲಿ ಕಾಮಕುಮಾರ ನಂದಿ ಮಹಾರಾಜರ ಡೈರಿಯನ್ನು ಸಹ ಅಲ್ಲಿಂದ ಆರೋಪಿಗಳು ಹೊತ್ಯೊಯ್ದಿದ್ದರು. ಅದಾದ …

Read More »

ಅಪರಿಚಿತ ವ್ಯಕ್ತಿಯೋರ್ವ ಬಾಲಕಿಯನ್ನು ಅಪಹರಿಸಲು ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪ್ರಕರಣ ದಾಖಲಾದ 12 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಖೆಡ್ಡಾಕ್ಕೆ ಬೀಳಿಸಿದ್ದಾರೆ.

ಬೆಳಗಾವಿ: ಅಪರಿಚಿತ ವ್ಯಕ್ತಿಯೋರ್ವ 12 ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿ ಸಿಕ್ಕಿ ಬಿದ್ದಿರುವ ಘಟನೆ ನಗರದ ಹಿಂದವಾಡಿಯ ಮಹಾವೀರ ಗಾರ್ಡನ್ ಬಳಿ ಮಂಗಳವಾರ ಸಂಜೆ ನಡೆದಿದೆ. ಆರೋಪಿ ಬಾಲಕಿಯನ್ನು ಹೊತ್ತೊಯ್ಯುವ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ಬಗ್ಗೆ ದೂರು ದಾಖಲಾದ 12 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ. ಮಾರುತಿ ನಗರದ ಗಜಾನನ ಪಾಟೀಲ (40) ಖೆಡ್ಡಾಕ್ಕೆ ಬಿದ್ದ ಆರೋಪಿ. ಆರೋಪಿ ಗಜಾನನ ಟ್ಯೂಶನ್​​ಗೆ ಹೊರಟಿದ್ದ ಬಾಲಕಿಗೆ ಚಾಕಲೇಟ್ ಆಮಿಷವೊಡ್ಡಿ …

Read More »

ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.:C.M.

ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಪ್ರತಿಭಾವಂತ ನಟ ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಟನಾ ಕೌಶಲದಿಂದ ಮಾತ್ರವಲ್ಲ ತಮ್ಮ ವಿನಯಶೀಲ ನಡೆ-ನುಡಿಗಳಿಂದಲೂ ಕೋಟ್ಯಂತರ ಜನರ ಪ್ರೀತಿ-ಅಭಿಮಾನಗಳಿಗೆ ಪಾತ್ರರಾಗಿರುವ ಶಿವರಾಜ್ ಕುಮಾರ್ ಅವರಿಗೆ ಆಯುಷ್ಯ ಮತ್ತು ಆರೋಗ್ಯದ ಭಾಗ್ಯ ಕೂಡಿಬರಲಿ ಎಂದು ಹಾರೈಸುತ್ತೇನೆ.

Read More »

ಕುಡಿಯಲು ಹಣ ನೀಡುವಂತೆ ಮನೆಯವರಿಗೆ ಪೀಡಿಸುತ್ತಿದ್ದ ಯುವಕನ ಹೊಡೆದು ಕೊಂದ ತಂದೆ, ಸಹೋದರ!

ಚಿಕ್ಕೋಡಿ: ಕುಡಿತದ ಚಟಕ್ಕೆ ದಾಸನಾಗಿ ಕುಟುಂಬಸ್ಥರನ್ನು ಪೀಡಿಸುತ್ತಿದ್ದ ಯುವಕನನ್ನು ಸ್ವಂತ ತಂದೆ ಮತ್ತು ಅಣ್ಣನೇ ಹೊಡೆದು ಸಾಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಸೋಮಯ್ಯ ಮಹಾಲಿಂಗಯ್ಯ ಹಿರೇಮಠ (24) ಮೃತ ದುರ್ದೈವಿ. ಆರೋಪಿಗಳಾದ ಮಹಾಲಿಂಗಯ್ಯ ಗುರುಸಿದ್ದಯ್ಯ ಹಿರೇಮಠ, ಬಸಯ್ಯ ಹಿರೇಮಠ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾರುಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ : ಜುಲೈ 10ರಂದು ಸೋಮಯ್ಯ ಮದ್ಯಪಾನ ಮಾಡಲು ಹಣ …

Read More »