Breaking News

ಬೆಳಗಾವಿ

ಅಪರಾದ ತಗ್ಗಿಸಲು ಶ್ವಾನಗಳಿಗೆ ಹೆಚ್ಚಿನ ತರಬೇತಿ ಅವಶ್ಯ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ನಿಷ್ಕಲ್ಮಶ, ಪ್ರೀತಿ, ನಿಷ್ಠೆಗೆ ಶ್ವಾನಗಳಿಗೆ ಶ್ವಾನಗಳೇ ಸರಿಸಾಟಿ, ಶ್ವಾನವನ್ನು ಪ್ರೀತಿಯಿಂದ ಬೆಳೆಸಿದಾಗ ಮಾತ್ರ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತವೆ. ಅವುಗಳನ್ನು ಸ್ನೇಹಮಯವಾಗಿ ಬೆಳೆಸಬೇಕು ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಸರ್ದಾರ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾದ ಬೆಳಗಾವಿ ಶ್ವಾನ ಮತ್ತು ಬೆಕ್ಕುಗಳ ಪ್ರದರ್ಶನಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.‌ ಪ್ರಾಣಿ ಹಿಂಸೆ ವಿರುದ್ಧ …

Read More »

ಪ್ರಯತ್ನ ಸಂಘಟನೆಯಿಂದ ನಿರ್ಗತಿಕರಿಗೆ ರಗ್ಗು – ಕಂಬಳಿ ವಿತರಣೆ

ಬೆಳಗಾವಿ : ಬೆಳಗಾವಿಯ ಪ್ರಯತ್ನ ಸಂಘಟನೆಯ ವತಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಲಗುವ ನಿರ್ಗತಿಕರಿಗೆ ರಗ್ಗು ಹಾಗೂ ಕಂಬಳಿಗಳನ್ನು ವಿತರಣೆ ಮಾಡಲಾಯಿತು. ರಾತ್ರಿ ವೇಳೆ ನಗರದ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ಚಳಿಯಲ್ಲಿ ನಡುಗುತ್ತ ಮಲಗಿದ್ದ ಸುಮಾರು 20 ನಿರ್ಗತಿಕರಿಗೆ ಕಂಬಳಿಗಳನ್ನು ವಿತರಿಸಲಾಯಿತು. ವೃದ್ಧಾಶ್ರಮ, ಅನಾಥಾಶ್ರಮ, ಅಂಧ ಮಕ್ಕಳ ಶಾಲೆಗಳಿಗೆ ದೇಣಿಗೆ ಹಾಗೂ ಬಡ ಮಕ್ಕಳ ಶಾಲಾ ಶುಲ್ಕ ಭರಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿರುವ ಪ್ರಯತ್ನ ಸಂಘಟನೆ ಈ …

Read More »

ಸುಳೇಬಾವಿ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆರಂಭ

ಬೆಳಗಾವಿ : ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಸುಳೇಬಾವಿಯ ಮಹಾಲಕ್ಷ್ಮೀ ಮೈದಾನದಲ್ಲಿ ಭಾನುವಾರ ಆರಂಭವಾಗಿದ್ದು, 8 ತಂಡಗಳು ಭಾಗವಹಿಸಿವೆ. ಪ್ರಥಮ ಬಹುಮಾನ 50 ಸಾವಿರ ರೂ. ಇದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಾಯೋಜಕತ್ವವಹಿಸಿದ್ದಾರೆ. ದ್ವಿತೀಯ ಬಹುಮಾನ 30 ಸಾವಿರ ರೂ. ಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ತೃತೀಯ ಬಹುಮಾನ 25 ಸಾವಿರ ರೂ.ಗಳನ್ನು ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಪ್ರಾಯೋಜಿಸಿದ್ದಾರೆ. ಪ್ರಥಮ ಹಾಗೂ ತೃತೀಯ ಟ್ರೋಫಿಯನ್ನು ಹನುಮಂತ …

Read More »

ಬೆಳಗಾವಿ | ದೇಶದ ಅತಿದೊಡ್ಡ ರಾಬರಿ ಪ್ರಕರಣ ಬೆಳಕಿಗೆ – ಚಲಾವಣೆ ಇಲ್ಲದ 400 ಕೋಟಿ ದರೋಡೆ

ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ  ಸಾಗಿಸುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನ ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ಹೈಜಾಕ್ ಮಾಡಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ದರೋಡೆ ಪ್ರಕರಣ  ಅಂತಾರಾಜ್ಯ ಮಟ್ಟದ್ದಾಗಿದ್ದು, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ 3 ರಾಜ್ಯಗಳ ಪೊಲೀಸರು ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸುತ್ತಿದ್ದಾರೆ. ದರೋಡೆ ನಡೆದಿದ್ದು ಯಾವಾಗ? ಗೋವಾದಿಂದ (Goa) ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ …

Read More »

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯದ ಐತಿಹಾಸಿಕ ತೀರ್ಪು

ಬೆಳಗಾವಿ ನಗರವನ್ನು ಬೆಚ್ಚಿಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತೀರ್ಪು ಇಂದು ಪ್ರಕಟವಾಗಿದ್ದು, ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ನಾಲ್ವರಿಗೆ ಕಠಿಣ ಶಿಕ್ಷೆ!!!ಇಬ್ಬರಿಗೆ ಜೀವಾವಧಿ, ಉಳಿದಿಬ್ಬರಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಕಳೆದ ವರ್ಷದ ಮೇ ನಲ್ಲಿ ನಗರದ ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗ್ಯಾಂಗ್ ರೇಪ್ ಪ್ರಕರಣದ ತೀರ್ಪು ಇಂದು ಹೊರಬಿದ್ದಿದ್ದು, ನಾಲ್ವರು ಅತ್ಯಾಚಾರಿಗಳಿಗೆ 20 ವರ್ಷ ಕಾರಾಗೃಹ ಕಠಿಣ ಶಿಕ್ಷೆಯನ್ನು …

Read More »

ರಾಜ್ಯ ವಿದ್ಯುತ್‌ ಗುತ್ತಿಗೆದಾರರ ಸಮಸ್ಯೆ ಪರಿಹರಿಸಲು ಸರ್ಕಾರ ಬದ್ಧ: ಸಚಿವ ಸತೀಶ ಜಾರಕಿಹೊಳಿ

ರಾಜ್ಯ ವಿದ್ಯುತ್‌ ಗುತ್ತಿಗೆದಾರರ ಸಮಸ್ಯೆ ಪರಿಹರಿಸಲು ಸರ್ಕಾರ ಬದ್ಧ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ: ರಾಜ್ಯ ವಿದ್ಯುತ್‌ ಗುತ್ತಿಗೆದಾರರ ಸಂಘದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಖಾಸಗಿ ಗಾರ್ಡ್ ನಲ್ಲಿ ಆಯೋಜಿಸಲಾದ ರಾಜ್ಯ ವಿದ್ಯುತ್‌ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಗುತ್ತಿಗೆದಾರರ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವುದು ಸರ್ಕಾರದ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಕೊಳವಿ ಗ್ರಾಮದ ಶ್ರೀ ಗೂಳಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕರೆಪ್ಪಾ ಬಡಿಗವಾಡ. ಬಾಳಯ್ಯ …

Read More »

ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಶನ್ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಷನ್‌ನ 9ನೇ ವಾರ್ಷಿಕ ಮಹಾಸಭೆ ಬೆಳಗಾವಿಯ ಶಹಾಪುರದ ದೈವಜ್ಞ ಮಂಗಲ ಕಾರ್ಯಾಲಯದಲ್ಲಿ ನಡೆಯಿತು. ಸಭೆಯಲ್ಲಿ 150 ಕ್ಕೂ ಹೆಚ್ಚು ಆಜೀವ ಸದಸ್ಯರು ಭಾಗವಹಿಸಿದ್ದರು. ಕಾರ್ಯದರ್ಶಿ ಸೌರಭ್ ರೇವಣಕರ್ ವರದಿಯನ್ನು ಮಂಡಿಸಿದರು. ಖಜಾಂಚಿ ಪ್ರಶಾಂತ್ ರೇವಣಕರ್ ಲೆಕ್ಕಪತ್ರ ಪುಸ್ತಕಗಳು ಮತ್ತು ಬ್ಯಾಲೆನ್ಸ್ ಶೀಟ್ ಅನ್ನು ಮಂಡಿಸಿದರು. ಅಧ್ಯಕ್ಷ ವೈಭವ್ ವೆರ್ಣೇಕರ್ ಸಂಘದ ಸಾಧನೆಗಳು ಮತ್ತು ಬೆಳವಣಿಗೆಗಳ ಕುರಿತು ವಿವರಿಸಿದರು. ದಯಾನಂದ ನೇತಲ್ಕರ್ ಅವರ ನೇತೃತ್ವದಲ್ಲಿ 2026- …

Read More »

KLE ಕಾರ್ಯಾಧ್ಯಕ್ಷ ಸ್ಥಾನದಿಂದ ಪ್ರಭಾಕರ ಕೋರೆ ನಿರ್ಗಮನ

ಬೆಳಗಾವಿ: ಸುದೀರ್ಘ 40 ವರ್ಷಗಳ ಕಾರ್ಯಾಧ್ಯಕ್ಷರಾಗಿ ಕರ್ನಾಟಕ ಲಿಂಗಾಯತ ಎಜುಕೇಶನ್‌ ಸಂಸ್ಥೆಯ ನೊಗ ಹೊತ್ತಿದ್ದ ಡಾ. ಪ್ರಭಾಕರ ಕೋರೆ ಈಗ ಆ ಸ್ಥಾನದಿಂದ ಮುಕ್ತರಾಗಿದ್ದಾರೆ. ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿಗೆ ಸಲ್ಲಿಸಿದ್ದ ನಾಮಪತ್ರವನ್ನು ದಿಢೀರ್‌ ಹಿಂದಕ್ಕೆ ಪಡೆದು ಅಚ್ಚರಿ ಮೂಡಿಸಿದ್ದಾರೆ. ನಿರ್ದೇಶಕ (Director) ಹುದ್ದೆಗೆ ಮೊದಲು ನಾಮಪತ್ರವನ್ನು ಪ್ರಭಾಕರ ಕೋರೆ ಸಲ್ಲಿಸಿದ್ದರು. ಆದರೆ ಅವರು ನಾಮಪತ್ರ ವಾಪಸ್ ಪಡೆಯುವ ಮೂಲಕ ಅಚ್ಚರಿಯ ನಿರ್ಧಾರವನ್ನು ಕೈಗೊಂಡಿದ್ದಾರೆ. 1984 ರಲ್ಲಿ ಕೆಎಲ್ಇ ಸಂಸ್ಥೆಯ …

Read More »

ವಿಚಾರಣೆಗೆ ಬರಲಿಲ್ಲ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಅರ್ಜಿ

ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯಬೇಕಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ  ನಡೆಯಲಿಲ್ಲ. ನ್ಯಾಯಮೂರ್ತಿ ಸಂಜಯಕುಮಾರ್, ಅಲೋಕ ಆರಾಧ್ಯೆ ನೇತೃತ್ವದ ದ್ವಿಸದಸ್ಯ ಪೀಠದ ಎದುರು ಈ ಅರ್ಜಿಯ ವಿಚಾರಣೆ ನಡೆಸಲು ಕಳೆದ ವರ್ಷದ ಅಕ್ಟೊಬರ್‌ನಲ್ಲಿ ನಿಗದಿಯಾಗಿತ್ತು. ಆದರೆ ಇಬ್ಬರೂ ನ್ಯಾಯಮೂರ್ತಿಗಳು ಬೇರೆ ಬೇರೆ ಪೀಠಗಳಲ್ಲಿ ಮಹತ್ವದ ಪ್ರಕರಣಗಳ ವಿಚಾರಣೆ ನಡೆಸಲು ನಿಯುಕ್ತಿಗೊಂಡ ಹಿನ್ನೆಲೆಯಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಲಿಲ್ಲ ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 …

Read More »