ಬೆಳಗಾವಿ : ಕುಡಿದ ಅಮಲಿನಲ್ಲಿ ಶಿಕ್ಷಕನೊಬ್ಬ ಶಾಲೆಯಲ್ಲಿಯೇ ನಿದ್ದೆಗೆ ಜಾರಿ ಕರ್ತವ್ಯಲೋಪ ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಕನ್ನಡ ಶಿಕ್ಷಕ ರವಿ ಪಾಟೀಲ ಕುಡಿದು ಶಾಲೆಗೆ ಬಂದು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ನಗರದ ಮಹಾದ್ವಾರ ರಸ್ತೆಯಲ್ಲಿರುವ ಸರ್ಕಾರಿ ಮರಾಠಿ ಮಾಧ್ಯಮ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕ ರವಿ ಪಾಟೀಲ ಇಂದು ಮದ್ಯ ಸೇವಿಸಿ ಶಾಲೆಗೆ ಬಂದು ಇಲ್ಲೇ ಮಲಗಿದ್ದಾರೆ ವಿದ್ಯಾರ್ಥಿಗಳು ಹಾಗೂ ಪೋಷಕರು ಆರೋಪಿಸಿದ್ದಾರೆ. …
Read More »ಗೋಕಾಕ ಕಳ್ಳತನ ಪ್ರಕರಣಗಳು; ಇನ್ನೂ ಪತ್ತೆಯಾಗದ ಖತರ್ನಾಕ್ ಕಳ್ಳರು? ಯಾವಾಗ ಖದೀಮರನ್ನ ಹೆಡೆಮುರಿ ಕಟ್ಟುತೆ ಖಾಕಿ ಪಡೆ?
ಗೋಕಾಕ : ಗೋಕಾಕ ನಗರ ಸೇರಿದಂತೆ ಅನೇಕ ಕಡೆಗಳಲ್ಲಿ ಕೆಲವು ತಿಂಗಳ ಹಿಂದೆ ಸಾಕಷ್ಟು ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಇನ್ನೂವರೆಗೂ ಯಾವುದೇ ರೀತಿಯ ಕಳ್ಳರನ್ನು ಬಂಧಿಸುವದಾಗಲಿ, ಆಭರಣ ಹಾಗೂ ನಗದು ಪತ್ತೆಯಾಗಿಲ್ಲ. ಹೌದು ನಗರದಲ್ಲಿ ಏಳು ತಿಂಗಳ ಹಿಂದೆ ಪ್ರಥಮ ದರ್ಜೆ ಗುತ್ತಿಗೆದಾರ ಪ್ರಕಾಶ್ ತೋಳಿನವರ ಅವರ ಮನೆಯಲ್ಲಿ ಕನ್ನ ಹಾಕಿದ ಖದೀಮರು 30 ಲಕ್ಷ ಕ್ಕೂ ಹೆಚ್ಚು ರೂ , 130 ತೋಲಿ ಬಂಗಾರ , 10kg ಬೆಳ್ಳಿ …
Read More »ಲೋಕಸಭೆ ಚುನಾವಣೆಯವರೆಗೆ ಮಾತ್ರ ಕಾಂಗ್ರೆಸ್ ಗ್ಯಾರಂಟಿ, ಆಮೇಲೆ ಕೈ ಕೊಡ್ತಾರೆ : ರಮೇಶ್ ಜಾರಕಿಹೊಳಿ
ಚಿಕ್ಕೋಡಿ (ಬೆಳಗಾವಿ): ಅಥಣಿ ಶಾಸಕ ಲಕ್ಷ್ಮಣ್ ಸವದಿ ಅಭಿವೃದ್ಧಿಗೋಸ್ಕರ ಕಾಂಗ್ರೆಸ್ ಪಕ್ಷ ಸೇರಿದ್ದು, ಕ್ಷೇತ್ರದ ಅಭಿವೃದ್ಧಿ ಮಾಡಲಿ. ನಾವು ಅವರಿಗೆ ಸಹಕಾರ ಕೊಡುತ್ತೇವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಅಥಣಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಸೋಲಿನ ಬಗ್ಗೆ ಕಾರ್ಯಕರ್ತರೊಂದಿಗೆ ಪರಾಮರ್ಶೆಯ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಅಥಣಿ ಕಾಗವಾಡ ವಿಧಾನಸಭೆ ಸೋಲು ಜನರ ಕೊಟ್ಟ ತೀರ್ಪನ್ನು ನಾವು ಸ್ವಾಗತ ಮಾಡುತ್ತೇವೆ. ಬರುವ …
Read More »*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಸಾಲಾಪುರ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »3ನೇ ಬಾರಿ ಸತೀಶ್ ಜಾರಕಿಹೊಳಿಗೆ ಒಲಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಟ್ಟ
ಬೆಳಗಾವಿ: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಇಂದು ಹಂಚಿಕೆಯಾಗಿದ್ದು, ನಿರೀಕ್ಷೆಯಂತೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸತೀಶ ಜಾರಕಿಹೊಳಿ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ಮೂರನೇ ಬಾರಿ ಜಿಲ್ಲಾ ಮಂತ್ರಿಯಾಗಿದ್ದಾರೆ. ಎರಡು ವರ್ಷದ ಬಳಿಕ ಬೆಳಗಾವಿ ಜಿಲ್ಲೆಯವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಜಿಲ್ಲೆಯ ಜನತೆಗೆ ಸಂತಸ ತಂದಿದೆ. 2020ರ ಫೆಬ್ರವರಿಯಲ್ಲಿ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿದ್ದ ರಮೇಶ ಜಾರಕಿಹೊಳಿ ಮಾರ್ಚ್ 3, 2021ರಂದು ಸಿಡಿ ಪ್ರಕರಣ ಹಿನ್ನೆಲೆಯಲ್ಲಿ ರಾಜೀನಾಮೆ …
Read More »ಶಿರಹಟ್ಟಿ ಗ್ರಾಮದಲ್ಲಿ ಸಂಭ್ರಮದ ಹನುಮಾನ್ ಓಕುಳಿ: ಕಂಬ ಹತ್ತುವುದೇ ಹಬ್ಬಕ್ಕೆ ಮೆರುಗು
ಚಿಕ್ಕೋಡಿ (ಬೆಳಗಾವಿ): ಆಧುನಿಕತೆ ಎಷ್ಟೇ ಬೆಳೆದರೂ ಇನ್ನೂ ಕೂಡ ಗ್ರಾಮೀಣ ಭಾಗದಲ್ಲಿ ಜಾತ್ರೆ ಹಬ್ಬ ಹರಿದಿನಗಳನ್ನು ಗ್ರಾಮಸ್ಥರು ಒಟ್ಟಾಗಿ ಸೇರಿ ಆಚರಿಸಿ ಸಂಭ್ರಮಿಸುವ ಪದ್ಧತಿ ಇದೆ. ಇಂದು ಶಿರಹಟ್ಟಿ ಗ್ರಾಮದಲ್ಲಿ ಕಣ್ಮನ ಸೆಳೆಯುವ ಹನುಮಾನ್ ಓಕುಳಿ ನಡೆಯಿತು. ಗ್ರಾಮಸ್ಥರೆಲ್ಲ ಸೇರಿ ಆಚರಿಸಿ ಖುಷಿಪಟ್ಟರು. ಒಂದೆಡೆ ಡಿಜೆ ಶಬ್ದಕ್ಕೆ ಹೆಜ್ಜೆ ಹಾಕುತ್ತಿರುವ ಯುವಕರಾದರೆ, ಮತ್ತೊಂದೆಡೆ ಗ್ರಾಮದ ಹಿರಿಯರು ಓಕುಳಿ ಕಂಬಕ್ಕೆ ಪೂಜೆ ಸಲ್ಲಿಸುತ್ತಿರುವ ದೃಶ್ಯ ಕಂಡುಬಂತು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ …
Read More »ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವುದೇ ಪ್ರಾಣಿಯ ಹತ್ಯೆಯನ್ನು ನಾನು ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಸದ್ಯ ಕಾಂಗ್ರೆಸ್ ಸರ್ಕಾರದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟ ಸಚಿವರು ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾನೂನು ಮತ್ತು ಇತರೆ ಕಾಯ್ದೆಗಳನ್ನು ಪರಿಶೀಲಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಸರ್ಕಾರದ ಈ ನಿಲುವನ್ನು ವಿರೋಧಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ಸಹ ಹಮ್ಮಿಕೊಂಡಿದೆ. ಈ ಮಧ್ಯೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಈ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾನು ಮಹಿಳೆಯಾಗಿ ಹೇಳುತ್ತೇನೆ. ಗೋಹತ್ಯೆ …
Read More »ಆಸ್ತಿ ವಿಚಾರವಾಗಿ ಸಹೋದರರ ಮಧ್ಯೆ ನಡೆದ ಜಗಳ ಓರ್ವನ
ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಸಹೋದರರ ಮಧ್ಯೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಭಾನುವಾರ ನಡೆದಿದೆ. ಹತ್ಯೆಯಾದ ವ್ಯಕ್ತಿ ತಿಗಡಿ ಗ್ರಾಮದ ನಿವಾಸಿ ಸುರೇಶ್ ಖಣಗಾಂವಿಯಾಗಿದ್ದು, ಶಂಕರ್ ಖಣಗಾಂವಿ ಕೊಲೆ ಮಾಡಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಹತ್ಯೆಗೀಡಾದ ಸುರೇಶ್ ಮಾಜಿ ಸೈನಿಕನಾಗಿದ್ದು, ಸದ್ಯ ಜಮೀನಿನಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರು. ಆಸ್ತಿ ವಿಚಾರವಾಗಿ ಆರೋಪಿ ಶಂಕರ್ ಖಣಗಾಂವಿ ಹಾಗೂ ಹತ್ಯೆಗೀಡಾದ …
Read More »ಹಾವೇರಿಯಲ್ಲಿದೆ ಸುಸಜ್ಜಿತ ಅತ್ಯಾಧುನಿಕ ಗ್ರಂಥಾಲಯ:
ಹಾವೇರಿ: ಮೊಬೈಲ್ ಹಾವಳಿಗೆ ಮರೆಮಾಚುತ್ತಿರುವ ಹವ್ಯಾಸಗಳಲ್ಲಿ ಓದುವ ಹವ್ಯಾಸ ಸಹ ಒಂದು. ಈ ಹಿಂದೆ ಪ್ರತಿ ಗ್ರಾಮಕ್ಕೆ ಒಂದು ಗ್ರಂಥಾಲಯಗಳಿದ್ದವು. ಗ್ರಾಮದ ಜನರು ದಿನಪತ್ರಿಕೆ ವಾರಪತ್ರಿಕೆ ಮಾಸಿಕ ಪತ್ರಿಕೆ ಸೇರಿದಂತೆ ವಿವಿಧ ಪತ್ರಿಕೆ ಓದಲು ಗ್ರಂಥಾಲಯಕ್ಕೆ ಬರುತ್ತಿದ್ದರು. ಅದರ ಜೊತೆಗೆ ಕನ್ನಡ ನುಡಿಯ ಗ್ರಂಥಗಳು ಗ್ರಂಥಾಲಯದಲ್ಲಿ ಸಿಗುತ್ತಿದ್ದವು. ಕವನಸಂಕಲನ, ಕಾದಂಬರಿ, ಕಾವ್ಯ ಪ್ರಭಂದಗಳು ಕಾದಂಬರಿಗಳು ಕಥಾಸಂಕಲನ ಸೇರಿದಂತೆ ವಿವಿಧ ಪ್ರಕಾರದ ಗ್ರಂಥಗಳು ಗ್ರಂಥಾಲಯದಲ್ಲಿ ಸಿಗುತ್ತಿದ್ದವು. ಅಷ್ಟೇ ಯಾಕೆ ಕನ್ನಡದ ಆದಿಕವಿಗಳಿಂದ ಹಿಡಿದು …
Read More »ದೇಶ ಸೇವೆಗೆ ಸನ್ನದ್ಧರಾದ ಅಗ್ನಿವೀರರು: ತರಬೇತಿಯಲ್ಲಿ ಕ್ಷಮತೆ ತೋರಿದ ವೀರರಿಗೆ ಸಿಕ್ತು ಏರ್ ಮಾರ್ಷಲ್ ಕಡೆಯಿಂದ ಬಹುಮಾನ
ಬೆಳಗಾವಿ: ಬೆಳಗಾವಿ ಏರ್ಮನ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದ ಅಗ್ನಿವೀರರನ್ನು ಅದ್ಧೂರಿಯಾಗಿ ಬೀಳ್ಕೊಡಲಾಯಿತು. ಅಗ್ನಿಪಥ್ ಯೋಜನೆಯಡಿ ದೇಶದಲ್ಲೇ ತರಬೇತಿ ಪೂರ್ಣಗೊಳಿಸಿದ ಮೊದಲ ಅಗ್ನವೀರರು ಎಂಬ ಖ್ಯಾತಿಗೆ ಈ ಶಿಬಿರಾರ್ಥಿಗಳು ಪಾತ್ರರಾಗಿದ್ದಾರೆ. ಸಾಂಬ್ರಾದಲ್ಲಿನ ಏರ್ಮನ್ ತರಬೇತಿ ಶಾಲೆಯಲ್ಲಿ 22 ವಾರಗಳ ಕಾಲ ತರಬೇತಿ ಪಡೆದ 2675 ಅಗ್ನಿವೀರರ ಬೀಳ್ಕೊಡುಗೆ ಕಾರ್ಯಕ್ರಮ ಶನಿವಾರ ಅದ್ಧೂರಿಯಾಗಿ ನೆರವೇರಿತು. ತರಬೇತಿ ಅವಧಿಯಲ್ಲಿ ತಾವು ಪಡೆದ ವಿವಿಧ ಕೌಶಲ್ಯಗಳನ್ನು ಅಗ್ನಿವೀರರು ಪ್ರದರ್ಶಿಸಿ, ತಮ್ಮ ಸಾಮರ್ಥ್ಯ ಸಾಬೀತು ಮಾಡಿದರು. ಅಗ್ನಿ …
Read More »