Breaking News

ಬೆಳಗಾವಿ

ಅಂದು ಸ್ಮಶಾನದಲ್ಲಿ ಸತೀಶ್​ ಜಾರಕಿಹೊಳಿ ನುಡಿದಿದ್ದ ಭವಿಷ್ಯ ಈಗ ನಿಜವಾಯ್ತು..!

ಬೆಳಗಾವಿ: ನಮ್ಮ ಕಾಂಗ್ರೆಸ್ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದು, 2020 ರಲ್ಲಿಯೇ ತಾವು ತೆಗೆದುಕೊಂಡಿದ್ದ ಹೊಸ ಕಾರಿಗೆ 2023 ಎಂದು ನಂಬರ್‌ ಪ್ಲೇಟ್‌ ಹಾಕಿಸಿ ಸ್ಮಶಾನದಲ್ಲಿ ಪೂಜೆ ಸಲ್ಲಿಸಿದ್ದ ಸತೀಶ್‌ ಜಾರಕಿಹೊಳಿ ಅವರ ಭವಿಷ್ಯ ನಿಜವಾಗಿದ್ದು, ಈಗ ಕಾಂಗ್ರೆಸ್‌ 135 ಕ್ಷೇತ್ರಗಳಲ್ಲಿ ಗೆದ್ದು ಸ್ಪಷ್ಟ ಬಹುಮತದಿಂದ ಸರ್ಕಾರ ರಚಿಸುತ್ತಿದೆ.   ಹೌದು, ಸದಾ ಕಾಲ ಮೌಢ್ಯತೆಗೆ ಸೆಡ್ಡು ಹೊಡೆಯುವ ಮೂಲಕ ವಿವಿಧ ಕಾರ್ಯಕ್ರಮ ಆಯೋಜಿಸಿಕೊಂಡು ಬಂದಿರುವ ಸತೀಶ್​ …

Read More »

ರಕ್ಕಸಕೊಪ್ಪ ನೀರಿನ ಮಟ್ಟ ತಗ್ಗಿದರೂ ನೋ ಟೆನ್ಶನ್‌

ಬೆಳಗಾವಿ: ಬೇಸಿಗೆ ಕಾಲ ಬಂತೆಂದರೆ ನೀರಿನ ಬವಣೆ ಸಹಜ. ಅದರಂತೆ ಬೆಳಗಾವಿ ನಗರಕ್ಕೆ ಕುಡಿಯುವ ನೀರು ಪೂರೈಸುವ ರಕ್ಕಸಕೊಪ್ಪ ಜಲಾಶಯದ ನೀರಿನ ಮಟ್ಟ ತಗ್ಗಿದ್ದರಿಂದ ಸದ್ಯ ವಾರಕ್ಕೊಮ್ಮೆ ನೀರು ಪೂರೈಕೆ ಆಗುತ್ತಿದೆ. ನೀರಿನ ಮಟ್ಟ ತಗ್ಗಿದರೂ ಜೂನ್‌ ಮಧ್ಯದವರೆಗೂ ಈ ನೀರನ್ನು ಸಮರ್ಪಕವಾಗಿ ಪೂರೈಸಬಹುದಾಗಿದೆ.   ಬೆಳಗಾವಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ರಕ್ಕಸಕೊಪ್ಪ ಜಲಾಶಯದ ನೀರಿನ ಮಟ್ಟ ಕಳೆದ ವರ್ಷಕ್ಕಿಂತಲೂ ಈ ಸಲ ತುಸು ಕಡಿಮೆ ಆಗಿದೆ. ಈಗ …

Read More »

ಏಕಾಏಕಿ ಹೊತ್ತಿ ಉರಿದ ಕಾರು.!

ಬೆಳಗಾವಿ : ಬೆಳಗಾವಿಯ ಆರ್‌ಪಿಡಿ ವೃತ್ತದ ಸಮೀಪ ನಿನ್ನೆ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಮೂಲದ ಕುಟುಂಬ ಖಾನಾಪುರ ತಾಲೂಕಿನ ಅಸೋಗಾದಿಂದ ಸ್ವಗ್ರಾಮಕ್ಕೆ ವಾಪಸ್ಸಾಗುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಟಿಳಕವಾಡಿಯ ಆರ್‌ಪಿಡಿ ವೃತ್ತದ ಮಾರ್ಗವಾಗಿ ಬರುತ್ತಿದ್ದಾಗ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಎಚ್ಚೆತ್ತ ಚಾಲಕ ಕಾರು ನಿಲ್ಲಿಸಿ ಕಾರಿನಲ್ಲಿದ್ದವರನ್ನು‌ ಕೆಳಗಿಳಿಸಿದ್ದಾನೆ. …

Read More »

ಹತ್ತರಗಿ ಹತ್ತಿರ ಟೋಲ್ ನಾಕಾ ಬಳಿ ಕಾಡಾನೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಸಮೀಪ ಹತ್ತರಗಿಯಲ್ಲಿ ಕಾಡಿನಿಂದ ಆಹಾರ ಹುಡುಕುತ್ತಾ ಆನೆಯೊಂದು ನಾಡಿಗೆ ಬಂದಿದೆ ಎನ್ನಲಾಗಿದೆ.ಇನ್ನೂ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೆಟಿ ನೀಡಿ ಆನೆಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲು ಸಿದ್ದತೆ ನಡೆಸಿದ್ದಾರೆ. ರಾಷ್ಟಿಯ ಹೇದ್ದಾರಿ 4 ಕ್ಕೆ ಹೊಂದಿಕೊಂಡಿರುವ ರಿಲಾಯನ್ಸ ಪೆಟ್ರೊಲ್ ಪಂಪನಲ್ಲಿ ಆನೆಯನ್ನು ಕಂಡು ಸ್ಥಳಿಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ, ವಿಷಯ ತಿಳಿದ ಅರಣ್ಯ ಅಧಿಕಾರಿಗಳು ಆನೆಯನ್ನ ಹಿಡಿಯಲು ಸಿದ್ದತೆ …

Read More »

ರಿಲ್ಯಾಕ್ಸ್ ಮೂಡ್ ನಲ್ಲಿರುವ ಬೊಮ್ಮಾಯಿ ದೇವಸ್ಥಾನಗಳಿಗೆ ಭೇಟಿ

ಬೆಳಗಾವಿ: ವಿಧಾನಸಭಾ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ಫಲಿತಾಂಶಕ್ಕಾಗಿ ರಾಜಕೀಯ ನಾಯಕರು, ರಾಜ್ಯದ ಜನತೆ ಕಾಯುತ್ತಿದ್ದಾರೆ. ಈ ನಡುವೆ ರಿಲ್ಯಾಕ್ಸ್ ಮೂಡ್ ನಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗಾವಿಯ ಸವದತ್ತಿ ಯೆಲ್ಲಮ್ಮ ದೇವಸ್ಥಾನಕ್ಕೆ ಪತ್ನಿ ಚೆನ್ನಮ್ಮ ಜೊತೆ ಭೇಟಿ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ರೇಣುಕಾ ಯೆಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಚಿವ ಸಿ.ಸಿ.ಪಾಟೀಲ್ …

Read More »

ಜನರ, ಕಾರ್ಯಕರ್ತರ ಆಸೆಯಂತೆ ಗೆಲುವಿನ ಅಂತರ ಹೆಚ್ಚಿನ ಪ್ರಮಾಣದಲ್ಲಾಗಲೆಂದು ದೇವರಲ್ಲಿ ಪ್ರಾರ್ಥನೆ: ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಹೊಸಪೇಟ ಗಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ‌೩ ಮತಗಟ್ಟೆ ೧೩೧ ರಲ್ಲಿ ಬುಧವಾರ ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಸಿಎಂ ಬೊಮ್ಮಾಯಿ ಅವರು ಈಗಾಗಲೇ ಈ …

Read More »

ಮತಗಟ್ಟೆಗೆ ಬಿಜೆಪಿ ಕಾರ್ಯಕರ್ತರು ಕೇಸರಿಶಾಲು ಧರಿಸಿ ಬಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅಕ್ರೋಶ

ಖಾನಾಪುರ: ಬೆಳಿಗ್ಗೆಯಿಂದ ಶಾಂತಿಯುತವಾಗಿ ನಡೆಯುತ್ತಿದ್ದ ಮತದಾನ ಮಧ್ಯಾಹ್ನವಾಗುತ್ತಿದ್ದಂತೆ ಕೆಲ ಮತಗಟ್ಟೆಗಳ ಬಳಿ ಬಿಗುವಿನ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. ಮತಗಟ್ಟೆಗೆ ಬಿಜೆಪಿ ಕಾರ್ಯಕರ್ತರು ಕೇಸರಿಶಾಲು ಧರಿಸಿ ಬಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ದೇವಲತ್ತಿ ಗ್ರಾಮದಲ್ಲಿ ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ಕೇಸರು ಶಾಲು ಧರಿಸಿ ಬಂದಿರುವುದಲ್ಲದೇ, ಕೇಸರಿ ಶಾಲು ಬೀಸಿ ಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ. ಮತಗಟ್ಟೆಯ ಬಳಿ …

Read More »

ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿಮತಯಾಚಿಸಿ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿ ಈ ಬಾರಿಯೂ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು, ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡಿ ಜನಸೇವೆಗೆ ಮತ್ತೊಮ್ಮೆ ಅವಕಾಶ ನೀಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದರು. ತಾಲ್ಲೂಕಿನ ಕುಲಗೋಡ ಗ್ರಾಮದಲ್ಲಿ ಚುನಾವಣೆ ಪ್ರಚಾರದ ನಿಮಿತ್ಯ ಮತಯಾಚಿಸಿ ಮಾತನಾಡಿದ ಅವರು, ಅಭಿವೃದ್ಧಿ ಆಧಾರದ ಮೇಲೆ ಮತ ಯಾಚನೆ ಮಾಡುತ್ತಿರುವುದಾಗಿ ತಿಳಿಸಿದರು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ …

Read More »

ನಿಪ್ಪಾಣಿ ನಗರಕ್ಕೆ ಇಂದುನಿತಿನ್ ಗಡ್ಕರಿ

ನಿಪ್ಪಾಣಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂದು ನಿಪ್ಪಾಣಿ ನಗರಕ್ಕೆ ಆಗಮಿಸಲಿದ್ದಾರೆ. ಅವರು ಮುಜರಾಯಿ ಮತ್ತು ವಕ್ಫ್ ಸಚಿವೆ ಹಾಗೂ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಅವರ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಲ್ಲಿನ ಸರಕಾರಿ ಕನ್ನಡ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಪ್ರಚಾರ ಸಭೆ ಆಯೋಜನೆಗೊಂಡಿದೆ.

Read More »

ಬೆಳಗಾವಿ ಹಿರೇಬಾಗೇವಾಡಿ‌ಯಲ್ಲಿ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.

ಬೆಳಗಾವಿ: ಹಿರೇಬಾಗೇವಾಡಿ‌ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಲವಾರು ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಬೆಳಗಾವಿಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಸೇರಿದ್ದಾರೆ.ಮುಖಂಡರುಗಳಾದ ದಯಾನಂದ ಹಂಚಿನಮನಿ, ಬಸವರಾಜ ಹಂಚಿನಮನಿ, ಬಾಬು ಮುಸೆನ್ನವರ, ಅಜ್ಜಪ್ಪ ಮುಗಪ್ಪಗೋಳ, ನಾಗಪ್ಪ ಕಲಭಾಂವಿ, ನಿಜಲಿಂಗ ಅಂಗಡಿ, ಮಲ್ಲಪ್ಪ ಕಬ್ಬೂರ, ದೊಡ್ಡಯ್ಯ ಹಿರೇಮಠ, ಚಂದ್ರು ತಳವಾರ, ಮಾಂತಯ್ಯ ಹಿರೇಮಠ, ಉದಯ ಹುಲಮನಿ, ಬಾಳೇಶ ಕಕ್ಕಾಳಿ ಮತ್ತು ಅಪಾರ ಸಂಖ್ಯೆಯಲ್ಲಿ …

Read More »