Breaking News

ಬೆಳಗಾವಿ

ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು 3 ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ಕಳೆದ ಭಾನುವಾರದಂದು ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವದಾಗಿ ತಿಳಿಸಿದರು. ಪ್ರವಾಹ ಬಂದ ಸಂದರ್ಭದಲ್ಲಿ ನದಿ ತೀರದ ಗ್ರಾಮಗಳು ಮುಳುಗಡೆಯಾಗಿದ್ದರಿಂದ ಇನ್ನು ಕೆಲವರಿಗೆ ಮನೆಗಳು ಮಂಜೂರಾಗಿಲ್ಲ. ದಂಡಿನ ಮಾರ್ಗ …

Read More »

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ದಿ. 27 ರಂದು ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ …

Read More »

ಅಥಣಿಯಲ್ಲಿ ಲಕ್ಷಣ ಸವದಿ v/s ರಮೇಶ್‌ ಜಾರಕಿಹೊಳಿ ಫೈಟ್;‌ ಹೈಕಮಾಂಡ್‌ ಹೇಳಿದ್ದಂತೆ ಎಲ್ಲರು ಕೇಳಬೇಕು; ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಲಕ್ಷಣ ಸವದಿ ಮತ್ತು ರಮೇಶ್‌ ಜಾರಕಿಹೊಳಿ ನಡುವೆ ಫೈಟ್‌ ಶುರುವಾಗಿದೆ. ಈ ವಿಚಾರವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆ ದಿನಾಂಕ ಘೋಷಣೆಯಾಗಿದೆ. ಹೀಗಾಗಿ ಎಲ್ಲ ಪಕ್ಷದಲ್ಲೂ ಟಿಕೆಟ್‌ ಆಕಾಂಕ್ಷಿಗಳು ಬಹಳಷ್ಟು ಜನ ಇದ್ದಾರೆ. ಆದರೆ ಟಿಕೆಟ್‌ ಹಂಚಿಕೆ ಆದ್ಮೇಲೆ ಅಸಮಾಧಾನ ಉಂಟಾಗುವುದು. ಸಹಜ. ಆದರೆ ಇದಲ್ಲವನ್ನೂ ಹೈಕಮಾಂಡ್ ಏನ್ ನಿರ್ಧಾರ ಕೈಗೊಳ್ಳುತ್ತದೆ ಅದನ್ನು ಎಲ್ಲರೂ ಕೇಳಬೇಕಾಗುತ್ತದೆ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿ ಓರ್ವ ಸಾವು

ಖಾನಾಪುರ: ತಾಲೂಕಿನ ದೇವಟ್ಟಿಯಿಂದ ಪಾರಿಷ್ವಾಡಕ್ಕೆ ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ದಾವಲ್ ಸಾಬ್ ಫಯಾಜ್ ಮುನವಳ್ಳಿ ಮೃತಪಟ್ಟವರು. ಚಾಲಕ ಮಂಜುನಾಥ ಚಂದ್ರು ಕುಕಡೊಳ್ಳಿ ಹಾಗೂ ಕಾರ್ಮಿಕ ಮಂಜುನಾಥ ಗುರನ್ನವರ ಗಾಯಗೊಂಡವರು. ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಪಕ್ಕದಲ್ಲಿ ಪಲ್ಟಿಯಾಯಿತು. ಅಪಘಾತದಲ್ಲಿ ವಾಹನದಲ್ಲಿದ್ದ ಇಟ್ಟಿಗೆಗಳು ಸಹ ನಷ್ಟಕ್ಕೀಡಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ರಾಮನವಮಿ ಮೆರವಣಿಗೆಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಗಂಭೀರ ಹಲ್ಲೆ

ಬೆಳಗಾವಿ: ರಾಮನವಮಿ ಮೆರವಣಿಗೆ ವೇಳೆ ಕನ್ನಡ ಬಾವುಟ ಪ್ರದರ್ಶಿಸಿದ್ದಕ್ಕಾಗಿ ಯುವಕನೊಬ್ಬನ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ.                     ನಗರದ ರಾಮಲಿಂಗಖಿಂಡಗಲ್ಲಿಯಲ್ಲಿ ಈ ಘಟನೆ ನಡೆದಿದೆ. ರಾಮನವಮಿ ಮೆರವಣಿಗೆ ಶಿವಸೇನೆ ಕಚೇರಿ ಎದುರಿನಿಂದ ಹಾದು ಹೋಗುತ್ತಿದ್ದ ವೇಳೆ ಕೈಯ್ಯಲ್ಲಿ ಕನ್ನಡ ಬಾವುಟ ಹಿಡಿದಿದ್ದ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಇದರಿಂದಾಗಿ ಕನ್ನಡಿಗ ಯುವಕನ ಬೆನ್ನು, ಹೊಟ್ಟೆಗೆ ತೀವ್ರ ಗಾಯಗಳಾಗಿವೆ. …

Read More »

ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ ಡಾ.ಅಂಜಲಿ ನಿಂಬಾಳಕರ್

ಖಾನಾಪುರ: ಸ್ಥಳೀಯ ಶಾಸಕಿ ಡಾ.ಅಂಜಲಿ ನಿಂಬಾಳಕರ ಗುರುವಾರ ಪಟ್ಟಣದ ಚೌರಾಶಿದೇವಿ ಮತ್ತು ತಾಲೂಕಿನ ಕಕ್ಕೇರಿ ಗ್ರಾಮದ ಬಿಷ್ಠಾದೇವಿ ದೇವಾಲಯಗಳಲ್ಲಿ ಉಭಯ ಶಕ್ತಿದೇವಿಯರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಂಬರುವ ಚುನಾವಣೆಯ ಪ್ರಚಾರ ಕಾರ್ಯಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಕಕ್ಕೇರಿ ಗ್ರಾಮದ ಬಿಷ್ಠಾದೇವಿ ಆಲಯದ ಮುಂಭಾಗದಲ್ಲಿ ತಮ್ಮ ಬೆಂಬಲಿಗರು ಮತ್ತು ಕಾಂಗ್ರೆಸ್ ಮುಖಂಡರೊಂದಿಗೆ ಪಕ್ಷದ ಪ್ರಚಾರ ವಾಹನಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, “ತಾಲೂಕಿನ ವಿವಿಧ ಭಾಗಗಳಲ್ಲಿ ಕಳೆದ 5 ವರ್ಷಗಳಿಂದ ಹಲವು …

Read More »

ಸ್ವಾತಂತ್ರ್ಯ ಹೋರಾಟದಲ್ಲಿ ರಂಗಭೂಮಿ ಪಾತ್ರ ಮುಖ್ಯ; ಅಜಿತ ವಾರಕರಿ

ಬೆಳಗಾವಿ: ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ರಂಗಭೂಮಿಯ ಪಾತ್ರ ಬಹು ಮುಖ್ಯವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಹೆಚ್ಚು ಜನ ಅನಕ್ಷರಸ್ಥರಿದ್ದರು. ಜನರಲ್ಲಿ ದೇಶಾಭಿಮಾನ ಮೂಡಿಸುವುದು, ದೇಶದ ಸ್ವಾತಂತ್ರ್ಯದ ಅವಶ್ಯಕತೆ ಕುರಿತು ತಿಳಿಸಿಕೊಡುವುದು ಅಷ್ಟೇ ಅಲ್ಲದೆ, ಎಲ್ಲರಲ್ಲಿ ಒಗ್ಗಟ್ಟನ್ನು ಮೂಡಿಸುವುದು ಕಷ್ಟದ ಕೆಲಸವಾಗಿತ್ತು. ಈ ಎಲ್ಲ ಕೆಲಸವನ್ನು ಮಾಡುವಲ್ಲಿ ನಾಟಕ ಪ್ರಮುಖ ಪಾತ್ರ ವಹಿಸಿತು ಎಂದು ಬೆಳಗಾವಿಯ ಭಾರತೀಯ ಜೀವ ವಿಮಾ ನಿಗಮದ ಹಿರಿಯ ವಿಭಾಗಾಧಿಕಾರಿ ಅಜಿತ ವಾರಕರಿ ಹೇಳಿದರು. ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ …

Read More »

ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಗೋಕಾಕ : ಕೆಎಂಎಫ್ ರೈತರ ಬೃಹತ್ ಸಂಸ್ಥೆಯಾಗಿದ್ದು ರೈತರ ಶ್ರೇಯೋಭಿವೃದ್ಧಿಗೆ ಮತ್ತು ಅವರ ಆರ್ಥಿಕ ಬಲವರ್ಧನೆಗಾಗಿ ಸಾಕಷ್ಟು ಯೋಜನೆಗಳನ್ನು ಅನುಷ್ಠಾನ ಮಾಡಿದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ಇಲ್ಲಿನ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ಒಟ್ಟು ೮.೬೦ ಲಕ್ಷ ರೂ.ಗಳ ಚೆಕ್‌ಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ರೈತರು ಹೈನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದರೆ ಹಾಲು ಉತ್ಪಾದಕರ ಸಂಘಗಳು …

Read More »

ವಕೀಲರ ಮೇಲೆ ಹಲ್ಲೆ: ಪ್ರತಿಭಟನೆ

ಅಥಣಿ: ವಾಹನ ನಿಲುಗಡೆ ವಿಚಾರವಾಗಿ ಪೊಲೀಸರು ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಖು ಎಂದು ಆಗ್ರಹಿಸಿ ಅಥಣಿ ವಕೀಲರ ಸಂಘದಿಂದ ಶಿವಯೋಗಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮೇತ್ರಿ ಮಾತನಾಡಿ, ‘ಮೂಲತಃ ರಾಮದುರ್ಗದ ವಕೀರೊಬ್ಬರು ಪ್ರಸ್ತುತ ಬೆಳಗಾವಿಯಲ್ಲಿ ವೃತ್ತಿ ನಡೆಸುತ್ತಿದ್ದು, ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆ ಹಿಂಬದಿ ವಾಹನ ನಿಲ್ಲಿಸಿದ್ದರು. ಈ ವೇಳೆ ಮಹಿಳಾ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿ ವಾಹನ …

Read More »

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಇನ್ನೂ ಅವಕಾಶ

ಬೆಳಗಾವಿ : ಚುನಾವಣಾ ಆಯೋಗವು ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಇನ್ನೂ ಅವಕಾಶವಿದ್ದು, ಏಪ್ರಿಲ್ 10 ರವರೆಗೂ ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಮಾ.29) ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುವ ಮತದಾರರ ಹೆಸರನ್ನು ಮತದಾರರ …

Read More »