ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ. ಚುನಾವಣೆ ದಿನಾಂಕ ಪ್ರಕಟ ಬೆನ್ನಲೇ ಟ್ವಿಟರ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ‘ಶಾಂತಿ ಮತ್ತು ಸಮೃದ್ಧಿಯ ಹೊಸ ಕರ್ನಾಟಕ ನಿರ್ಮಾಣಕ್ಕಾಗಿ ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡೋಣ’ ಎಂದು ಕರೆ ನೀಡಿದ್ದಾರೆ. …
Read More »ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನಮಾಡಲು ಅವಕಾಶ
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ. ಇದರಿಂದಾಗಿ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಯ ನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು) ತಮ್ಮ ಮತವಿರುವ ಕ್ಷೇತ್ರದಲ್ಲಿ …
Read More »ಹಾರೂಗೇರಿ ಕ್ರಾಸ್ ನಲ್ಲಿ ಅಪಾರ ಪ್ರಮಾಣದ ನಗದು, ಹೊಲಿಗೆ ಮಷಿನ್, ಕೂಲರ್ ವಶ
ಬೆಳಗಾವಿ: ರಾಜ್ಯದಲ್ಲಿ ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾರರಿಗೆ ಆಮಿಷವೊಡ್ಡಲು ಕೆಲ ಅಭ್ಯರ್ಥಿಗಳು ಅಕ್ರಮದ ಹಾದಿ ಹಿಡಿದಿದ್ದರೆ ಇತ್ತ ಜಿಲ್ಲೆಯ ಪೊಲೀಸ್ ವ್ಯವಸ್ಥೆ ಕೂಡ ಚುರುಕಾಗಿದ್ದು ಇದಕ್ಕೆ ಬ್ರೇಕ್ ಹಾಕುವ ಕಾರ್ಯದಲ್ಲಿ ತೊಡಗಿದೆ. ಜಿಲ್ಲೆಯಲ್ಲಿ ಬುಧವಾರ ಲಕ್ಷಾಂತರ ರೂ. ಅಕ್ರಮ ಹಣವನ್ನು ಚೆಕ್ ಪೋಸ್ಟ್ ಕರ್ತವ್ಯದಲ್ಲಿರುವ ಪೊಲೀಸರು ಜಪ್ತಿ ಮಾಡಿದ್ದಾರೆ. ಹಾರೂಗೇರಿ ಕ್ರಾಸ್ ನಲ್ಲಿರುವ ಚೆಕ್ ಪೋಸ್ಟ್ …
Read More »ಚುನಾವಣೆಗೆ ಸ್ಪರ್ಧಿಸಲೇಬೇಕೆಂದು ಲಕ್ಷ್ಮಣ ಸವದಿ ನಿರ್ಧರಿಸಿದರೆ ಜಿಲ್ಲೆಯಷ್ಟೇ ಅಲ್ಲ, ರಾಜ್ಯ ರಾಜಕಾರಣದಲ್ಲೂ ಬಿಜೆಪಿಯಲ್ಲಿ ದೊಡ್ಡ ಗೊಂದಲ ಸೃಷ್ಟಿ
ಬೆಳಗಾವಿ : ಬಿಜೆಪಿಯ ಟಿಕೆಟ್ ಘೋಷಣೆ ದಿನಾಂಕ ಮುಂದಕ್ಕೆ ಹೋಗಿರುವುದರಿಂದ ನನ್ನ ನಿರ್ಧಾರ ತೆಗೆದುಕೊಳ್ಳುವ ದಿನವನ್ನು ಮುಂದೂಡಿದ್ದೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಮಾರ್ಚ್ 27ರೊಳಗೆ ಎಲ್ಲ ಸಮುದಾಯದ ನಾಯಕರ ಜೊತೆ ಚರ್ಚಿಸಿ, 27ರಂದು ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಲಕ್ಷ್ಮಣ ಸವದಿ ಈ ಮೊದಲು ತಿಳಿಸಿದ್ದರು. ಆದರೆ ಬಿಜೆಪಿಯ ಟಿಕೆಟ್ ಘೋಷಣೆ ಸಮಯ ಮುಂದಕ್ಕೆ ಹೋಗಿದೆ. ಹಾಗಾಗಿ ನಾನು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು …
Read More »ಗೋಕಾಕ ನಗರದ ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿದ C.M. ಬೊಮ್ಮಾಯಿ:
ಬೆಳಗಾವಿ : ಗೋಕಾಕ ನಗರ ಹಾಗೂ ಲೋಳಸೂರ ಗ್ರಾಮವನ್ನು ಪ್ರವಾಹದಿಂದ ತಡೆಗಟ್ಟುವ ಸಲುವಾಗಿ ಘಟಪ್ರಭ ನದಿಗೆ ತಡೆಗೋಡೆ ನಿರ್ಮಿಸುವ ಯೋಜನೆ ಹಾಗೂ ಘಟ್ಟಿ ಬಸವಣ್ಣ ಡ್ಯಾಂ ನಿರ್ಮಿಸುವುದು, ಕುಡಿಯುವ ನೀರು ಸರಬರಾಜು ಯೋಜನೆ ಸೇರಿದಂತೆ ಗೋಕಾಕ, ಅಥಣಿ, ಅರಭಾವಿ ಕ್ಷೇತ್ರದ ವಿವಿಧ ಕಾಮಗಾರಿಗಳ ಶಿಲಾನ್ಯಾಸಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು. ಗೋಕಾಕ ನಗರದ ಚಿಕ್ಕೊಳ್ಳಿ ಸೇತುವೆ ಬಳಿ ಮಂಗಳವಾರ (ಮಾ.28) ವಿವಿಧ ಕಾಮಗಾರಿಗಳ ಪೂಮಿ ಪೂಜೆ ಹಾಗೂ ಶಿಲಾನ್ಯಾಸಗಳನ್ನು ಅವರು …
Read More »ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 27 ಲಕ್ಷಕ್ಕೂ ಅಧಿಕಹಣ ಪೊಲೀಸರ ವಶಕ್ಕೆ
ಕೌಜಲಗಿ: ‘ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹ. ಅವರ ಕೆಸಲಗಳಿಗೆ ಜನ ಸಹಕಾರ ನೀಡಬೇಕು’ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸಮೀಪದ ಕುಲಗೋಡ ಗ್ರಾಮದಲ್ಲಿ ₹1.32 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು. …
Read More »ಸಂವಿಧಾನದ ಆಶಯಕ್ಕೆ ಬದ್ಧರಾಗಿ’
ಅಥಣಿ: ‘ಡಾ.ಅಂಬೇಡ್ಕರ್ ನೇತೃತ್ವದ ತಂಡ ನೀಡಿರುವ ಸಂವಿಧಾನ ಸದೃಢ ಭಾರತ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಈ ಸಂವಿಧಾನದ ಮೂಲಕ ಸಮಾನತೆ, ಸರ್ವರಿಗೂ ಶಿಕ್ಷಣ ದೊರೆತಿದ್ದು, ಮೂಲಭೂತ ಹಕ್ಕುಗಳ ಜೊತೆ ಮೂಲಭೂತ ಕರ್ತವ್ಯಗಳ ಬಗ್ಗೆ ನಾವು ಗಮನ ಹರಿಸಬೇಕು’ ಅಥರ್ವ ಸಾಂಗ್ಲಿಕರ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಸಾಂಗ್ಲಿಕರ ಹೇಳಿದರು. ಪಟ್ಟಣದ ಆದರ್ಶ ನಗರದ ಅನಿಲ ಕಾಂಬಳೆ ಇವರ ಸಂಸ್ಕೃತ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಅಥಣಿ ತಾಲ್ಲೂಕು ಘಟಕದಿಂದ …
Read More »ಬೆಂಕಿ ತಗುಲಿ 20 ಕಣಕಿ ಬಣವಿಗಳು ಭಸ್ಮ: ₹ 1 ಕೋಟಿ ಹಾನಿ
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಸಮೀಪದ ಇಂಚಲ ಗ್ರಾಮದಲ್ಲಿ ಸೋಮವಾರ ಬೆಂಕಿ ತಗುಲಿ 20 ಕಣಕಿ ಬಣವಿಗಳು ಭಸ್ಮವಾಗಿವೆ. ಒಂದು ಟ್ರ್ಯಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳು ಸುಟ್ಟಿವೆ. ಇದರಿಂದ ₹ 1 ಕೋಟಿಗೂ ಹೆಚ್ಚು ಹಾನಿಯಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಬಿಳಿಜೋಳ, ಗೋವಿನ ಜೋಳ ಮತ್ತಿತರ ಬೆಳೆಗಳ ರಾಶಿ ಮುಗಿಸಿದ ರೈತರು ಗ್ರಾಮದ ಹೊರವಲಯದಲ್ಲಿ ಒಂದೇ ಕಡೆ ಬಣವಿ ಒಟ್ಟಿದ್ದರು. ಸೋಮವಾರ ಮಧ್ಯಾಹ್ನ ಒಂದು ಬಣವಿಗೆ ಬೆಂಕಿ ಹೊತ್ತಿಕೊಂಡಿತು. ಜನ ಅದನ್ನು …
Read More »ಹುಕ್ಕೇರಿ ಕ್ಷೇತ್ರದಲ್ಲಿ ನಿಖಿಲ್ ಕತ್ತಿ ಹಾಗೂ ರಮೇಶ್ ಕತ್ತಿ ನಡುವೆ ಟಿಕೆಟ್ ಕಸರತ್ತು..
ಹುಕ್ಕೇರಿ: ಉತ್ತರ ಕರ್ನಾಟಕದ ಅತ್ಯಂತ ಗಟ್ಟಿ ಧ್ವನಿ ಎಂದೇ ಹೆಸರಾಗಿದ್ದ ಉಮೇಶ ಕತ್ತಿ ಅವರ ಅಕಾಲಿಕ ಅಗಲಿಕೆಯಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರ ಖಾಲಿಖಾಲಿ ಎನಿಸುತ್ತಿದೆ. ಕತ್ತಿ ಕುಟುಂಬಕ್ಕೆ ನಿಷ್ಠರಾದ ಮತದಾರರನ್ನು ಸೆಳೆದು ಹೊಸ ಮುಖ ಗೆಲ್ಲುವುದೋ ಅಥವಾ ವಂಶವಾಹಿ ಪರಂಪರೆ ಮುಂದುವರಿಯುವುದೋ ಎಂಬುದೇ ಈಗಿರುವ ಕುತೂಹಲ. ‘ಉಮೇಶ ಕತ್ತಿ ಅಗಲಿಕೆಯಿಂದ ಅನುಕಂಪದ ಮತಗಳನ್ನು ಪಡೆದು ಗೆಲ್ಲುವ ಅವಶ್ಯಕತೆ ಇಲ್ಲ. ಕತ್ತಿ ಕುಟುಂಬಕ್ಕೇ ಸಾಂಪ್ರದಾಯಿಕ ಮತಗಳಿವೆ. ಕುಟುಂಬದಲ್ಲಿ ಯಾರು ನಿಂತರೂ ಜನ …
Read More »ಲೇಖಕಿ ಜಯಶ್ರೀ ಅಬ್ಬಿಗೇರಿಗೆ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ
ಬೆಳಗಾವಿ : ಬೈಲಹೊಂಗಲ ತಾಲೂಕಿನ ನಾಗನೂರ ಸರ್ಕಾರಿ ಎಸ್‌ಪಿಎಮ್ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಜಯಶ್ರೀ. ಅಬ್ಬಿಗೇರಿ ಅವರಿಗೆ ಹೆಣ್ಣು ಜಗದ ಕಣ್ಣು ಸಾಹಿತ್ಯ ವೇದಿಕೆ ರಾಯಚೂರು ಇವರ ವತಿಯಿಂದ ಲಿಂಗಸೂರಿನ ಶ್ರೀ ವಿಜಯ ಮಹಂತೇಶ್ವರ ಅನುಭವ ಮಂಟಪದಲ್ಲಿ ಇತ್ತೀಚಿಗೆ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತ್ಯುತ್ತಮ ಸಾಹಿತ್ಯ ಸೇವೆಗಾಗಿ ರಾಜ್ಯ ಮಟ್ಟದ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿಖರ, ನಿರಂತರ ಮ
Read More »
Laxmi News 24×7