Breaking News

ಬೆಳಗಾವಿ

ನಾಲ್ಕು ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ: ಕುಮಠಳ್ಳಿ

ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದಲ್ಲಿ ಇಂದು ನಾಲ್ಕು ಕಾಮಗಾರಿಗಳಿಗೆ ಚಾಲನೆ ನೀಡಿದರು 2ಕೋಟಿ 20ಲಕ್ಷ ರೂ ವೆಚ್ಚದ ಶೆಡಶಾಳ ರಸ್ತೆ ಕಾಮಗಾರಿಕೆ ಭೂಮಿ ಪೂಜೆ, 5ಲಕ್ಷ ರೂ ಮೊತ್ತದ ಶ್ರೀ ಲಕ್ಷ್ಮಿ ದೇವಸ್ಥಾನ ಸಮುದಾಯ ಭವನ ಕಾಮಗಾರಿ ಭೂಮಿ ಪೂಜೆ,  5ಲಕ್ಷ ರೂ ಮೊತ್ತದ ಇಂಚಗೇರಿ ಮಠದ ಸಮುದಾಯ ಭವನ ಕಾಮಗಾರಿ ಭೂಮಿ ಪೂಜೆ, 57ಲಕ್ಷ ರೂ ಮೊತ್ತದ ಗೋಕಾಕ್ ಮುಖ್ಯ ರಸ್ತೆಯಿಂದ ಮಂಗಸೂಳಿ ತೋಟದ ರಸ್ತೆ ವರೆಗೆ ಸಿ. …

Read More »

ಚುನಾವಣೆ ಸಮೀಪಿಸುತ್ತಿದ್ದಂತೆ ವೈಯಕ್ತಿಕ ಟೀಕೆ ಟಿಪ್ಪಣಿ ಮಾಡುವುದು ಬೇಡ.: ಬಾಲಚಂದ್ರ ಜಾರಕಿ

ಬೆಳಗಾವಿ: ಮೂರೂ ಕುಟುಂಬಗಳು ರಾಜಕೀಯವಾಗಿ ಬೆಳೆದಿವೆ. ಚುನಾವಣೆ ಸಮೀಪಿಸುತ್ತಿರುವುದರಿಂದ ರಮೇಶ ಜಾರಕಿಹೊಳಿ, ಡಿ.ಕೆ. ಶಿವಕುಮಾರ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವೈಯಕ್ತಿಕ ದ್ವೇಷ, ನಿಂದನೆ ಮಾಡುವುದು ಬೇಡ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೈಮುಗಿದು ಮನವಿ ಮಾಡಿದರು.   ಗೋಕಾಕ ತಾಲೂಕಿನ‌ ಖಂಡ್ರಟ್ಟಿ ಗ್ರಾಮದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದ್ದಂತೆ ವೈಯಕ್ತಿಕ ಟೀಕೆ ಟಿಪ್ಪಣಿ ಮಾಡುವುದು ಬೇಡ. ರಾಜಕೀಯವಾಗಿ ಎಲ್ಲರೂ ಬೆಳೆದಿದ್ದೀರಿ, ಬಹಿರಂಗ ಹೇಳಿಕೆ ನೀಡುವುದು ಬೇಡ. …

Read More »

ಕವಿಯತ್ರಿಯರ ಸಮ್ಮೇಳನ ಸಂಪನ್ನ

ಬೆಳಗಾವಿ: ಇಲ್ಲಿನ ಶಿವಬಸವ ನಗರದ ಡಾ.ಎಸ್‌.ಜಿ. ಬಾಳೇಕುಂದ್ರಿ ತಾಂತ್ರಿಕ ಸಂಸ್ಥೆ ಸಭಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ 22ನೇ ಅಖಿಲ ಭಾರತ ಕವಯತ್ರಿಯರ ಸಮ್ಮೇಳನ ಸೋಮವಾರ ಸಂಪನ್ನಗೊಂಡಿತು. ಪಂಜಾಬ್‌ನ ಅಮೃತಸರದಲ್ಲಿ 23ನೇ ಸಮ್ಮೇಳನ ನಡೆಸುವ ನಿರ್ಣಯ ಕೈಗೊಳ್ಳಲಾಯಿತು.   ಪದಾಧಿಕಾರಿಗಳ ಆಯ್ಕೆ: ಆಲ್‌ ಇಂಡಿಯಾ ಪೋಯಿಟ್‌ ಕಾನ್ಫರೆನ್ಸ್‌(ಎಐಪಿಸಿ) ರಾಷ್ಟ್ರೀಯ ಅಧ್ಯಕ್ಷೆಯಾಗಿ ಅಸ್ಸಾಂನ ಮೋನೋಮತಿ ಕುರಮಿ, ಉಪಾಧ್ಯಕ್ಷರಾಗಿ ವಿಜಯಲಕ್ಷ್ಮಿ ಕೋಸಗಿ, ಮಂಗಲಾ ಮೆಟಗುಡ್ಡ, ಜ್ಯೋತಿ ಬದಾಮಿ, ಡಾ.ಕೆ.ಪಿ.ಸುಧೀರಾ, ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಡಾ.ಸರೋಜಾ …

Read More »

ಪಂಚಮಸಾಲಿ ಮೀಸಲಾತಿ: ಆಯೋಗದ ವರದಿ ಸಲ್ಲಿಸಲು ಸಮಯ ಕೇಳಿದ ಸರ್ಕಾರ

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡುವ ಕುರಿತ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಫೆ.3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.   ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರವೆಂದು ಆದೇಶಿಸುವಂತೆ ಕೋರಿ ಬೆಂಗಳೂರಿನ ಡಿ.ಜಿ. ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ …

Read More »

ಸಾವಯವ ಕೃಷಿಗಾಗಿ ಜಾಗೃತಿ: ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ನಿರ್ಣಯ

ಬೆಳಗಾವಿ: ರೈತರು ಸಾವಯವ ಕೃಷಿಗೆ ಆದ್ಯತೆ ನೀಡುವಂತೆ ದೇಶದ ಒಂದು ಲಕ್ಷ ಹಳ್ಳಿಗಳಲ್ಲಿ ಜಾಗೃತಿ ಅಭಿಯಾನ ನಡೆಸಲು ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು. ನಗರದಲ್ಲಿ ಎರಡು ದಿನಗಳ ಕಾಲ ಜರಗಿದ ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಕೊನೆಯ ದಿನವಾದ ಸೋಮವಾರ ಸಭೆಯ ಸಮಾರೋಪದಲ್ಲಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ, ಕೃಷಿ ಸಚಿವ ಬಿ.ಸಿ. ಪಾಟೀಲ್‌, ರೈತ …

Read More »

ಎಸಿಪಿ ನಾರಾಯಣ ಭರಮಣಿ ವರ್ಗಾವಣೆ ಗೊಳಿಸಿ ಆದೇಶ

ಎಸಿಪಿ ನಾರಾಯಣ ಭರಮಣಿ ಅವರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ಉಪವಿಭಾಗಕ್ಕೆ ಹಾಗೂ ಗ್ರಾಮೀಣ ಎಸಿಪಿ ಎಸ್ ವಿ ಗಿರೀಶ್ ರನ್ನು ಹುಬ್ಬಳ್ಳಿ – ಧಾರವಾಡ ಸಿಸಿಬಿ ಗೆ ವರ್ಗಾವಣೆ ಮಾಡಲಾಗಿದೆ. ನಗರ ಕಾನೂನು ಹಾಗೂ ಸುವ್ಯವಸ್ಥೆ ಉಪ ಪೋಲೀಸ್ ಆಯುಕ್ತ ರವೀಂದ್ರ ಗಡಾದಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಎಚ್.ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ರವೀಂದ್ರ ಗಡಾದಿ ಅವರನ್ನು ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು …

Read More »

ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ವರ್ಗಾವಣೆ !

ಬೆಳಗಾವಿ : ಬೆಳಗಾವಿ ನಗರ ಕಾನೂನು ಹಾಗೂ ಸುವ್ಯವಸ್ಥೆ ಉಪ ಪೋಲೀಸ್ ಆಯುಕ್ತ ರವೀಂದ್ರ ಗಡಾದಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಎಚ್. ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ರವೀಂದ್ರ ಗಡಾದಿ ಅವರನ್ನು ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು ಇಲ್ಲಿಗೆ ವರ್ಗಾಯಿಸಲಾಗಿದೆ.

Read More »

ಅಣ್ಣ ತಮ್ಮಂದಿರಂತಿದ್ದ ಡಿಕೆಶಿ ಮತ್ತು ನನ್ನ ಸಂಬಂಧ ಹಾಳಾಗಿದ್ದೇ ವಿಷಕನ್ಯೆಯಿಂದ – ರಮೇಶ್ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ಶಾಸಕ, ಮಾಜಿ ಮಂತ್ರಿ, ಸಿಡಿ ಕೇಸ್​​ ಆರೋಪಿ ರಮೇಶ್ ಜಾರಕಿಹೊಳಿ ನಗರದ ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಡಿಕೆಶಿ, ರಮೇಶ್ ಜಾರಕಿಹೊಳಿ ನಡುವೆ ವೈಯಕ್ತಿಕ ಜಿದ್ದು ಹೆಚ್ಚಾಗಿದೆ. ನನ್ನನ್ನು ಟಾರ್ಗೆಟ್ ಮಾಡಿ ಡಿಕೆ ಶಿವಕುಮಾರ್ ಹೊಡೆದಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ನಾನೂ ಕಾಯುತ್ತಿದ್ದೇನೆ. ರಾಜಕಾರಣ ಮಾಡಲು ಡಿ.ಕೆ.ಶಿವಕುಮಾರ್​ ನಾಲಾಯಕ್. ನನ್ನ ಬಳಿ 128 ಸಾಕ್ಷ್ಯಗಳಿವೆ ಎಂದು ರಮೇಶ್ …

Read More »

ರಮೇಶ್ ಮಾಡಿರುವ ಆರೋಪಗಳು ವೈಯಕ್ತಿಕವಾಗಿವೆ, ನಾನು ಪ್ರತಿಕ್ರಿಯಿಸುವುದು ಉಚಿತವಲ್ಲ: ಸತೀಶ್ ಜಾರಕಿಹೊಳಿ

ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸತೀಶ್ ಅವರು, ಅವರ ಆರೋಪಗಳಿಗೆ ಸಂಬಂಧಿಸಿದಂತೆ ಪಕ್ಷದ ಅಧ್ಯಕ್ಷರು ಮತ್ತು ಸಿ ಎಲ್ ಪಿ ನಾಯಕ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು. ಬೆಳಗಾವಿ:ರಮೇಶ್ ಜಾರಕಿಹೊಳಿ (Ramesh Jarkiholi) ಅವರು ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ವಿರುದ್ಧ ಆರೋಪಗಳನ್ನು ಮಾಡಿದ ಬಳಿಕ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು …

Read More »

ಕಾಂಗ್ರೆಸ್ ಹಾಳಾಗಲು ವಿಷ ಕನ್ಯೆ ಕಾರಣ: ರಮೇಶ ಜಾರಕಿಹೊಳಿ

ಬೆಳಗಾವಿ: ನನ್ನ ಸಿಡಿ‌ ಪ್ರಕರಣದಲ್ಲಿ ‌ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮರ್, ಉದ್ಯಮಿ‌ ಪರಶಿವಮೂರ್ತಿ, ನರೇಶ, ಶ್ರವಣ, ಡಿ.ಕೆ. ಶಿವಕುಮಾರ್ ವಾಹನ ಚಾಲಕ ಹಾಗೂ ಮಂಡ್ಯ ಮೂಲದ ಇಬ್ಬರು ಪ್ರಮುಖ ಆರೋಪಿಗಳನ್ನು ‌ಕೂಡಲೇ ಬಂಧಿಸಬೇಕು ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಆಗ್ರಹಿಸಿದರು.   ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್​ ರಾಜಕಾರಣ‌ ಮಾಡಲು ಯೋಗ್ಯನಲ್ಲ. ಷಡ್ಯಂತ್ರದ ಮೂಲಕ ರಾಜಕಾರಣ ಹಾಳು ಮಾಡುವ ಮತ್ತು ನನ್ನ ರಾಜಕೀಯ ಜೀವನ ಮುಗಿಸಲು ಪ್ರಯತ್ನಿಸಿರುವ ಡಿ.ಕೆ.ಶಿವಕುಮಾರ್​ ಅವರನ್ನು …

Read More »