ಹುಕ್ಕೇರಿ: ಕಾರು ಖರೀದಿಸಿ ಮಾರಾಟ ಮಾಡಿ, ಅದೇ ಕಾರನ್ನು ಕಳ್ಳತನ ಮಾಡಿ ಮತ್ತೆ ಮಾರಾಟ ಮಾಡುತ್ತಿದ್ದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಕಿಂಗ್ ಪಿನ್ ಮಹಾರಾಷ್ಟ್ರದ ಔರಂಗಾಬಾದ್ ನಿವಾಸಿಯಾಗಿದ್ದು ಗಡಹಿಂಗ್ಲಜ್ ನಲ್ಲಿ ಮಹಾರಾಷ್ಟ್ರರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದ. ನಂತರದಲ್ಲಿ ಕೆಲಸ ಕಳೆದುಕೊಂಡಿದ್ದ ಈತ ಹಳೆಯ ಕಾರುಗಳನ್ನು ಕೊಳ್ಳುವಿಕೆ ವ್ಯವಹಾರ ಪ್ರಾರಂಭಿಸಿದ್ದ. ಬೇರೆಯವರ ಕಾರುಗಳನ್ನು ತಾನು ನಡೆಸುವುದಾಗಿ ಹೇಳಿ ಅವುಗಳನ್ನು ಪಡೆದ ನಂತರ ನಂಬರ್ ಪ್ಲೇಟ್ ಗಳನ್ನು …
Read More »ಬೆಳಗಾವಿಯಿಂದ ಸೇವೆ ನೀಡುತ್ತಿದ್ದ 12 ವಿಮಾನಗಳ ಸೇವೆ ಬಂದ್
ಬೆಳಗಾವಿ: ಬೆಳಗಾವಿಯಿಂದ ಸೇವೆ ನೀಡುತ್ತಿದ್ದ ಕೆಲ ವಿಮಾನ ಸೇವೆ ಬಂದ್ ಆಗಿವೆ. ಇದರಿಂದ ಉದ್ಯಮಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಕುರಿತು ಸರಕಾರ ಹಾಗೂ ಇಲ್ಲಿನ ಜನಪ್ರತಿನಿಧಿಗಳು ಗಮನ ಹರಿಸುವ ಅವಶ್ಯಕತೆ ಇದೆ ಎಂದು ಬೆಳಗಾವಿ ಚೆಂಬರ್ ಆಫ್ ಕಾಮಸ್೯ ಸಭಾಂಗಣದಲ್ಲಿ ಉದ್ಯಮಿಗಳು ಹಕ್ಕೊತ್ತಾಯ ಮಾಡಿದರು. ಮಂಗಳವಾರ ವಿವಿಧ ಉದ್ಯಮಿಗಳು ನಡೆಸಿದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಯಿತು. ಚೇಂಬರ್ ಆಫ್ ಕಾಮಸ್೯ನ ಅಧ್ಯಕ್ಷ ಹೇಮೇಂದ್ರ ಪೋರವಾಲ್ ಮಾತನಾಡಿ, ಬೆಳಗಾವಿಯಲ್ಲಿ ಈಗಾಗಲೇ ಸಾಕಷ್ಟು ಬಾರಿ …
Read More »ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿ: ಎಂಇಎಸ್ ನಾಡವಿರೋಧಿ ಘೋಷಣೆ
ಬೆಳಗಾವಿ: ಇಲ್ಲಿನ ಹುತಾತ್ಮ ಚೌಕ್‌ನಲ್ಲಿ ಮಂಗಳವಾರ ನಡೆದ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ಕರ್ನಾಟಕ-ಮಹಾರಾಷ್ಟ್ರ ಗಡಿ ಹೋರಾಟದಲ್ಲಿ ಮಡಿದವರಿಗೆ ಗೌರವ ಸಲ್ಲಿಸಿದರು. ‘ರಾಜ್ಯದಲ್ಲಿ ಮರಾಠಿ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು’ ಎಂದು ಒತ್ತಾಯಿಸಿದ ಕಾರ್ಯಕರ್ತರು, ‘ಬೆಳಗಾವಿ, ಖಾನಾಪುರ, ನಿಪ್ಪಾಣಿ, ಬೀದರ್, ಭಾಲ್ಕಿ, ಕಾರವಾರ ಸಹ ಸಂಯುಕ್ತ ಮಹಾರಾಷ್ಟ್ರ ಝಾಲಾಚ್ ಪಾಹಿಜೆ’ ಎಂದು ನಾಡವಿರೋಧಿ ಘೋಷಣೆ ಕೂಗಿದರು. ‘ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು …
Read More »ಗಡ್ಕರಿಗೆ ಬೆದರಿಕೆ: ಜೈಲಿನೊಳಗೆ ಮೊಬೈಲ್ ಹೋಗಿದ್ದು ಹೇಗೆ? ಇನ್ನೂ ಸಿಗದ ಸುಳಿವು
ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್ ಪೂಜಾರಿ ಕೈಗೆ ಮೊಬೈಲ್ ಫೋನ್ ಕೊಟ್ಟಿದ್ದು ಯಾರು? ಜೈಲಿನೊಳಗೆ ಮೊಬೈಲ್ ಫೋನ್ ಹೋಗಿದ್ದು ಹೇಗೆ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ. ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ಶನಿವಾರ ಕರೆ ಮಾಡಿದ್ದ ಕೈದಿ, ತಾನು ಭೂಗತಪಾತಕಿ ದಾವೂದ್ ಇಬ್ರಾಹಿಂ ತಂಡದ ಸದಸ್ಯ, ₹100 ಕೋಟಿ ನೀಡುವಂತೆ ಬೆದರಿಕೆ ಒಡ್ಡಿದ್ದ. ಈ ಬಗ್ಗೆ …
Read More »ಆಕಸ್ಮಿಕ ಬೆಂಕಿ: ಉರಿದ ಲಾರಿ
ಚನ್ನಮ್ಮನ ಕಿತ್ತೂರು: ಸಮೀಪದ ಶಿವ ಪೆಟ್ರೋಲ್ ಪಂಪ್ ಬಳಿ ತಮಿಳನಾಡಿಗೆ ಸೇರಿದ ಲಾರಿಯೊಂದಕ್ಕೆ ಶನಿವಾರ ಸಂಜೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟಿದೆ. ಪೊಟ್ರೋಲ್ ಪಂಪ್ ಸಮೀಪದಲ್ಲೇ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಭಯದ ವಾತಾವರಣ ಮನೆ ಮಾಡಿತು. ಮುಂಬೈಗೆ ಹೊರಟಿದ್ದ ಲಾರಿ ಚಾಲಕರು ಪಂಪ್ ಬಳಿ ವಿಶ್ರಾಂತಿಗಾಗಿ ತಂಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಲಾರಿಯಲ್ಲಿದ್ದ ಎಳನೀರು ಕಾಯಿಗಳೂ ಸುಟ್ಟಿವೆ. ಅಗ್ನಿಶಾಮಕ ದಳದವರು ಮತ್ತು ಪೊಲೀಸರು …
Read More »ಹಳೇ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ
ತೆಲಸಂಗ: ಗ್ರಾಮದ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ 1979ನೇ ಬ್ಯಾಚಿನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಶನಿವಾರ ನಡೆಯಿತು. ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುಭಾಸ ಸಜ್ಜನ, ‘ನಮ್ಮ ಶಿಕ್ಷಕರು ಕೇವಲ ಪಠ್ಯ ಬೋಧಿಸಲಿಲ್ಲ. ಜೀವನದಲ್ಲಿ ಎದುರಾಗಬಹುದಾದ ಕಷ್ಟ ಹೇಗೆ ಎದುರಿಸಬೇಕೆಂದು ಕಲಿಸಿದರು. ಮಾದರಿಯಾಗಿ ನಮ್ಮ ಬದುಕು ರೂಪಿಸಿದರು’ ಎಂದು ಸ್ಮರಿಸಿದರು. ಓಗೆಪ್ಪ ಅರಟಾಳ, ಸಾವಿತ್ರಿ ಹಿರೇಮಠ, ಉಮಾ ಪೋತದಾರ, ಶಾಲೆಯಲ್ಲಿ ತಾವು ಕಳೆದ ಬಾಲ್ಯದ ದಿನಗಳನ್ನು ಮೆಲಕು ಹಾಕಿದರು. …
Read More »ರಾಮದುರ್ಗ ಸರ್ಕಾರಿ ಶಾಲೆ ‘ಸ್ಮಾರ್ಟ್’
ರಾಮದುರ್ಗ: ಶಿಕ್ಷಕರು ಮನಸ್ಸು ಮಾಡಿದರೆ ಸಮುದಾಯದ ಸಹಭಾಗಿತ್ವದೊಂದಿಗೆ ಸರ್ಕಾರಿ ಶಾಲೆಯನ್ನೂ ಮಾದರಿಯಾಗಿ ಅಭಿವೃದ್ಧಿಪಡಿಸಬಹುದು. ಇದಕ್ಕೆ ಉತ್ತಮ ಉದಾಹರಣೆ, ತಾಲ್ಲೂಕಿನ ಕುನ್ನಾಳ ಪ್ರಾಥಮಿಕ ಶಾಲೆ. 1926ರಲ್ಲಿ ಈ ಶಾಲೆ ಸ್ಥಾಪನೆಯಾಗಿದೆ. ಇಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಹಳೆಯ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪಾಲಕರು ಹಾಗೂ ಗ್ರಾಮಸ್ಥರಿಂದ ದೇಣಿಗೆ ಸಂಗ್ರಹಿಸಿ, ಶಾಲೆಗೆ ಹೈಟೆಕ್ ಸ್ಪರ್ಶ ಕೊಟ್ಟಿದ್ದಾರೆ. 1ರಿಂದ 8ನೇ ತರಗತಿಯಲ್ಲಿ 253 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕಂಪ್ಯೂಟರ್ ಲ್ಯಾಬ್: ಈ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ …
Read More »ಮಿ ವಿವೇಕಾನಂದರು ಕೇವಲ ವ್ಯಕ್ತಿ ಅಲ್ಲ, ಅದೊಂದು ದಿವ್ಯ ಶಕ್ತಿ.:ವೈದ್ಯಾಧಿಕಾರಿ ಡಾ| ಭುವಿ
ಚಿಕ್ಕೋಡಿ: ಸ್ವಾಮಿ ವಿವೇಕಾನಂದರು ಕೇವಲ ವ್ಯಕ್ತಿ ಅಲ್ಲ, ಅದೊಂದು ದಿವ್ಯ ಶಕ್ತಿ. ಅವರು ಚಿಕ್ಯಾಗೊ ಸಮ್ಮೇಳನದಲ್ಲಿ ಮಾಡಿದ ಉಪನ್ಯಾಸ ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತದ್ದು ಎಂದು ಕಬ್ಬೂರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಭುವಿ ನುಡಿದರು. ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೆಹರು ಯುವ ಕೇಂದ್ರ ಬೆಳಗಾವಿ, ಯುವ ಸಂಘಗಳ ಒಕ್ಕೂಟದ ತಾಲೂಕಾ ಘಟಕ, ಡಾ.ಅಂಬೇಡ್ಕರ ಕಲಾ ಮತ್ತು …
Read More »ಸಂತೋಷ್ ಖಂಡ್ರಿ ಗೋಕಾಕ ನಗರದ ಯುವಕರ ಕಣ್ಮಣಿ ನಿಧನ: ಸಂತಾಪ ಸೂಚಿಸಿದ ಜಾರಕಿಹೊಳಿ ಕುಟುಂಬ
ಗೋಕಾಕ: ಸಂತೋಷ್ ಖಂಡ್ರಿ ಗೋಕಾಕ ನಗರದ ಯುವಕರ ಕಣ್ಮಣಿ ಅನ್ಯಾಯದ ವಿರುದ್ಧ ಸಮರಕ್ಕೆ ಸಿದ್ದವಾಗುವ ಯುವಕ, ಇವರು ಹಾಗೂ ಸಂಗಡಿಗರೊಂದಿಗೆ ಶಬರಿ ಮಲೆ ಯಾತ್ರೆಗೆ ಗೋಕಾಕ ನಿಂದ ತೆರಳಿದ್ದರು, ಕೇರಳದ ಕಣ್ಣೂರು ರೈಲ್ವೇ ನಿಲ್ದಾಣದ ಬಳಿ ರೈಲ್ವೇ ಅಪಘಾತದಲ್ಲಿ ಇವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ, ಗೋಕಾಕ ನಗರದ ಬಿಜೆಪಿ ಕಾರ್ಯಕರ್ತರು, ಹಾಗೂ ಕರವೇ ಸ್ವಾಭಿಮಾನಿ ಬಣದ ಗೋಕಾಕ ತಾಲೂಕಾಧ್ಯಕ್ಷರಾಗಿ ಕೂಡ ಗುರುತಿಸಿ ಕೊಂಡಿದ್ದಾರೆ, ಸಾಹುಕಾರ ಮನೆತನದ ಚಿಕ್ಕವರು ಹಾಗೂ ದೊಡ್ಡವರ …
Read More »ಕೆಪಿಟಿಸಿಎಲ್ ಅಕ್ರಮ ಪರೀಕ್ಷೆ: ಬಂಧಿತರ ಸಂಖ್ಯೆ ಅರ್ಧ ಶತಕ
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಲಿಖಿತ ಪರೀಕ್ಷೆಯಲ್ಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ತೆಗೆದುಕೊಂಡು ಪರೀಕ್ಷೆ ಬರೆದಿದ್ದ ಮತ್ತೊಬ್ಬ ಅಭ್ಯರ್ಥಿಯನ್ನು ಗುರುವಾರ ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ಅರ್ಧ ಶತಕವಾಗಿದೆ. ಕಲ್ಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದರ್ಗಾಶಿರೂರ ಗ್ರಾಮದ ಶಿವರಾಜ್ ಲಕ್ಷ್ಮೀಪುತ್ರ ಪೊಲೀಸ್ ಪಾಟೀಲ್ (28) ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈವರೆಗೆ ಒಟ್ಟು 50 ಜನರನ್ನು ಬಂಧಿಸಿದಂತಾಗಿದೆ. 7 ಆಗಸ್ಟ್ 2022ರಂದು ನಡೆದಿದ್ದ ಪರೀಕ್ಷೆ ಬರೆದಿದ್ದರು. ಪರೀಕ್ಷೆ ವೇಳೆ …
Read More »