Breaking News

ಬೆಳಗಾವಿ

ವಿಮೆ ಹಣ ಜಮೆಗೆ ದ್ರಾಕ್ಷಿ ಬೆಳೆಗಾರರ ಆಗ್ರಹ

ವಿಜಯಪುರ: ದ್ರಾಕ್ಷಿ ಬೆಳೆಯ ವಿಮೆ ತುಂಬಿದ ರೈತರಿಗೆ ಅವಧಿ ಮುಗಿದರೂ ಹಣ ಬಿಡುಗಡೆ ಆಗಿಲ್ಲ. ಕೂಡಲೇ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಟಿ.ಭೂಬಾಲನ ಅವರಿಗೆ ಮನವಿ ಸಲ್ಲಿಸಲಾಯಿತು.   ಮನವಿ ಸಲ್ಲಿಸಿ ಮಾತನಾಡಿದ ನಾಂದ್ರೇಕರ್ ಈಗಾಗಲೇ ನಮ್ಮ ನೆರೆ ಜಿಲ್ಲೆಯಾದ ಬೆಳಗಾವಿ ದ್ರಾಕ್ಷಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ ₹1.80 ಲಕ್ಷ ಜಮೆಯಾಗಿದೆ. ಹವಾಮಾನ ವಿಜಯಪುರ ಮತ್ತು ಬಾಗಲಕೋಟೆಯಲ್ಲಿ …

Read More »

ಬೆಳಗಾವಿ ಶಾಲೆಗಳಲ್ಲಿ ‘ಡೆಸ್ಕ್‌ ಅಭಿಯಾನ’: ಅಗತ್ಯ ಶಾಲೆಗಳಿಗೆ ವಿತರಣೆ

ಬೆಳಗಾವಿ: ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಬಳಕೆಯಾಗದೇ ಇರುವ ಹೆಚ್ಚುವರಿ ಡೆಸ್ಕ್‌ಗಳನ್ನು ಅಗತ್ಯವಿರುವ ಶಾಲೆಗಳಿಗೆ ನೀಡಿ, ಸದ್ಬಳಕೆ ಮಾಡುವ ‘ಡೆಸ್ಕ್ ಅಭಿಯಾನ’ ಆರಂಭಗೊಂಡಿದೆ. ಡೆಸ್ಕ್‌ಗಳ ಕೊರತೆ ನೀಗಿಸಲು ಜಿಲ್ಲಾ ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆಯು ಆರಂಭಿಸಿರುವ ಈ ಅಭಿಯಾನವು ಕೆಲ ಶಾಲೆಗಳಲ್ಲಿ ಡೆಸ್ಕ್‌ಗಳ ಕೊರತೆ ನೀಗಿಸಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಸಮೀಕ್ಷೆ ನಡೆಸಿ, ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 1,407, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 6,080 …

Read More »

ಕಿತ್ತೂರು ಉತ್ಸವಕ್ಕೆ ಚಾಲನೆ ವೇಳೆ CM ಸಿದ್ದರಾಮಯ್ಯ ಬಟ್ಟೆಗೆ ತಾಕಿದ ಬೆಂಕಿ!

ಬೆಳಗಾವಿ: ಕಿತ್ತೂರು ವಿಜಯ ಜ್ಯೋತಿ ಯಾತ್ರೆ ರಥದ ಮುಂದೆ ಸಿಎಂ ಸಿದ್ದರಾಮಯ್ಯ ( CM Siddaramaiah) ದೀಪ ಬೆಳಗಿಸುವಾಗ ಆಕಸ್ಮಿಕವಾಗಿ ಸಣ್ಣ ಕಿಡಿ ಹಾರಿ ಸಿಎಂ ದೋತಿಗೆ ತಗುಲಿತು. ತಕ್ಷಣ ಭದ್ರತಾ ಸಿಬ್ಬಂದಿ ಕಿಡಿಯನ್ನು ನಂದಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡುವಾಗ ಸಿಎಂ ( CM ) ಬಟ್ಟೆಗೆ ಸಣ್ಣ ಬೆಂಕಿಯ ಕಿಡಿ ತಾಗಿದೆ. …

Read More »

ಕಾರಿಗೆ ಬೆಂಕಿ ತಗುಲಿ ವ್ಯಕ್ತಿ ಮೃತ್ಯು

ಚಿಕ್ಕೋಡಿ: ಕಾರಿಗೆ ಬೆಂಕಿ ತಗುಲಿ ಓರ್ವ ವ್ಯಕ್ತಿ ಸುಟ್ಟು ಕರಕಲಾದ ಘಟನೆ ತಾಲೂಕಿನ ಜೈನಾಪೂರ ಗ್ರಾಮದ ಬಳಿ ಆ.1ರ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ. ಚಿಕ್ಕೋಡಿ ನಗರದ ಮುಲ್ಲಾ ಪ್ಲಾಟ್ ನಿವಾಸಿ ಪೈರೋಜ ಬಡಗಾಂವ(40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಾರು ಮಧ್ಯರಾತ್ರಿ ಬೆಂಕಿಗೆ ಧಗಧಗ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ವ್ಯಕ್ತಿ ಸುಟ್ಟು ಕರಕಲಾಗಿದ್ದಾರೆ. ಇದು ಅಪಘಾತವೋ ಅಥವಾ ಕೊಲೆಯೋ ಎಂಬ ಸಂಶಯ ವ್ಯಕ್ತವಾಗಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ …

Read More »

ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಕೂಡಲೇ ಪಾಲಿಕೆಯನ್ನು ರಾಜ್ಯ ಸರ್ಕಾರ ಸೂಪರ್ ಸೀಡ್ ಮಾಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ(ಸೆ30) ಪ್ರತಿಭಟನೆ ನಡೆಸಲಾಯಿತು. ನಗರದ ಸದಾರ‍್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶ್ರೀರಾಮ ಸೇನಾ ಹಿಂದೂಸ್ಥಾನ, ಮಹಾರಾಷ್ಟç ಏಕೀಕರಣ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.   ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಎಸ್‌ಪಿಎಂ …

Read More »

ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ

ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ ಚಿಕ್ಕೋಡಿ: ಮಕ್ಕಳ ಆರೋಗ್ಯ ವೃದ್ಧಿಗೆ ಹಾಗೂ ಅಪೌಷ್ಟಿಕತೆ ತಡೆಗೆ ಸರಕಾರ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಶಿಕ್ಷಕರು ಅವುಗಳ ಕುರಿತು ಅರಿವು ಮೂಡಿಸಬೇಕು. ಆದಷ್ಟೂ ಮಕ್ಕಳಿಗೆ ಬಿಸಿಯೂಟ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೂಚಿಸಿದರು. ತಾಲೂಕಿನ ನಣದಿ ಗ್ರಾಮದ ಕೆಎಚ್‌ ಪಿಎಸ್‌ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಸೋಮವಾರ ಜಿಲ್ಲಾ ಪಂಚಾಯತ್‌, …

Read More »

ನಿಯಂತ್ರಣಕ್ಕೆ ಬಾರದ ಅಕ್ರಮ ಚಟುವಟಿಕೆ

ಚನ್ನಮ್ಮನ ಕಿತ್ತೂರು: ‘ಜೂಜಾಟ, ಮಟ್ಕಾ, ಪಡ್ಡೆ ಹುಡುಗರ ಕಿಡಿಗೇಡಿತನ ಹಾಗೂ ಮನೆ ಕಳ್ಳತನ ನಿಯಂತ್ರಿಸುವಲ್ಲಿ ಯಶಸ್ಸು ಕಾಣದ ಕಿತ್ತೂರು ಪೊಲೀಸರ ವರ್ತನೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮಡುಗಟ್ಟಿದೆ’ ಎಂಬ ಆರೋಪಗಳು ಕೇಳಿಬರುತ್ತಿವೆ. ‘ಎತ್ತರದ ಪ್ರದೇಶ, ಹೊರವಲಯದ ಹೊಲದಲ್ಲಿರುವ ಮನೆಗಳು ಇಸ್ಪೀಟ್ ಅಡ್ಡೆಗಳಾಗಿ ಪರಿವರ್ತನೆಯಾದ ವಿಷಯ ಗುಟ್ಟಾಗೇನು ಉಳಿದಿಲ್ಲ. ಹಾಡುಹಗಲೇ ಮನೆ ಕಳ್ಳತನಗಳಾಗಿವೆ. ಕೆಲವು ಪ್ರಕರಣಗಳು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ದಾಖಲಾದ ಚಿತ್ರಗಳು ಸ್ಪಷ್ಟವಾಗಿದ್ದರೂ ಅದರಲ್ಲಿರುವ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಇನ್ನೂ …

Read More »

ಕೆಟ್ಟುನಿಂತ ಶುದ್ಧ ನೀರಿನ ಘಟಕಗಳು

ರಾಯಬಾಗ: ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳು ಕೆಟ್ಟು ನಿಂತಿವೆ. 107 ಘಟಕಗಳಲ್ಲಿ ಸುಮಾರು 25 ಘಟಕಗಳು ವರ್ಷದ ಹಿಂದಿನಿಂದಲೂ ಬಂದ್ ಆಗಿವೆ. ಮತ್ತೆ ಕೆಲವು ನಿರ್ವಹಣೆ ಇಲ್ಲದೇ ಸೊರಗಿವೆ. ಇದರಿಂದ ತಾಲ್ಲೂಕಿನ ಜನರಿಗೆ ಶುದ್ಧ ನೀರು ಇನ್ನೂ ಕನಸಾಗಿದೆ.   ಈ ಘಟಕಗಳನ್ನು ಏಜೆನ್ಸಿಗಳ ಅಸಮರ್ಪಕ ನಿರ್ವಹಣೆ ಮಾಡುತ್ತಿಲ್ಲ. ಮೋಟರ್‌ ದುರಸ್ತಿ, ಫಿಲ್ಟರ್‌ ಸಮಸ್ಯೆ, ವಿದ್ಯುತ್‌ ಸಮಸ್ಯೆ, ಪೈಪ್‌ಲೈನ್‌ಗಳಲ್ಲಿ ದೋಷ ಮುಂತಾದ ಕಾರಣಗಳಿಂದ ಸ್ಥಗಿತಗೊಂಡಿವೆ. ಒಮ್ಮೆ …

Read More »

ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬೆಳಗಾವಿ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ರವಿವಾರ ಬೆಳಗ್ಗೆ(ಸೆ29) ನಡೆದಿದೆ. ಯಲ್ಲವ್ವ ಅರ್ಜುನ ಕರಿಹೋಳ (30) ಎಂಬಾಕೆ ಸಾತ್ವಿಕ್ (5) ಹಾಗೂ ಒಂದು ವರ್ಷದ ಮುತ್ತಪ್ಪ ನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ದುರ್ದೈವಿಗಳು.ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More »

ಸಿದ್ದರಾಮಯ್ಯ ನೈತಿಕತೆ ಈಗ ಎಲ್ಲಿಗೆ ಹೋಗಿದೆ?: ಶಾಸಕ ಅಭಯ ಪಾಟೀಲ

ಬೆಳಗಾವಿ: ‘ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಆರೋಪ ಕೇಳಿಬಂದಾಗ, ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದರು. ಈಗ ಅವರ ನೈತಿಕತೆ ಎಲ್ಲಿಗೆ ಹೋಗಿದೆ’ ಎಂದು ಶಾಸಕ ಅಭಯ ಪಾಟೀಲ ಪ್ರಶ್ನಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾದರೂ ಸಿದ್ದರಾಮಯ್ಯ ರಾಜೀನಾಮೆ ಕೊಡದ ವಿಚಾರವಾಗಿ, ಇಲ್ಲಿ ಭಾನುವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು.   ‘ರಾಜ್ಯದಲ್ಲಿ ಅಧಿಕಾರಕ್ಕೆ ಅಂಟಿಕೊಳ್ಳದೆ ಕೆಲಸ ಮಾಡಿದ ಕೆಲವೇ ರಾಜಕಾರಣಿಗಳ ಪೈಕಿ ಸಿದ್ದರಾಮಯ್ಯ …

Read More »