ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ನೌಕರರ …
Read More »ಒಂದೇ ವೇದಿಕೆಯಲ್ಲಿ ಅಕ್ಕ-ಪಕ್ಕ ನಿಂತ ಸತೀಶ್ & ಅಭಯ್
ಬೆಳಗಾವಿ: ಬೆಳಗಾವಿ ಸುವರ್ಣಸೌಧ ಸಭಾಂಗಣದಲ್ಲಿ ಮಂಗಳವಾರ ದೈವಜ್ಞ ಜ್ಯುವೆಲರ್ಸ್ ನ ಅಸೋಸಿಯೇಷನ್ ನಿಂದ ಆಯೋಜಿಸಿದ್ದ ಸುವರ್ಣ ಸಮ್ಮೇಳನ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಶಾಸಕ ಅಭಯ್ ಪಾಟೀಲ ಈ ಇಬ್ಬರು ರಾಜಕೀಯ ಬದ್ಧ ವೈರಿಗಳು ಅಕ್ಕ-ಪಕ್ಕ ನಿಂತು ಗಮನ ಸೆಳೆದರು. ಹೌದು… ಇಂದು ಸುವರ್ಣಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಶಾಸಕ ಅಭಯ್ ಪಾಟೀಲ ಅಕ್ಕ-ಪಕ್ಕದಲ್ಲಿ ನಿಂತರೂ ಈ ಇಬ್ಬರು ಒಬ್ಬರಿಗೊಬ್ಬರು ಹೆಚ್ಚೇನು ಮಾತನಾಡಲಿಲ್ಲ. …
Read More »ಫೈನಾನ್ಸ್ ನಲ್ಲಿ ಸಾಲ ಹೊಟೆಲ್ ಬಂದ್ ಆಗಿದ್ದಕ್ಕೆ ಮಾಲೀಕ ಆತ್ಮಹತ್ಯೆ
ಫೈನಾನ್ಸ್ ನಲ್ಲಿ ಸಾಲ ಹೊಟೆಲ್ ಬಂದ್ ಆಗಿದ್ದಕ್ಕೆ ಮಾಲೀಕ ಆತ್ಮಹತ್ಯೆ. ಗ್ಯಾಸ್ ಸಿಲಿಂಡರ್ ಸಿಗದ ಕಾರಣಕ್ಕೆ ಹೊಟೆಲ್ ಬಂದ್ ಆಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಮಾಲೀಕ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಘಟನೆ. ರಾಮು ಹಳ್ಳೂರಿ ಆತ್ಮಹತ್ಯೆ ಮಾಡಿಕೊಂಡ ಹೊಟೇಲ್ ಮಾಲೀಕ. ಹುಕ್ಕೇರಿ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಹನುಮಾನ ಹೊಟೆಲ್ ಮಾಲೀಕರಾಗಿದ್ದ ರಾಮು. ಮಾರ್ಚ್ ಅಂತ್ಯದ ವೇಳೆ ಬಡ್ಡಿ ಹಣವನ್ನ ಕಟ್ಟಬೇಕಿದ್ದ ರಾಮು. ಇದೇ ಹೊತ್ತಲ್ಲಿ ಹೊಟೆಲ್ …
Read More »ಬೆಳಗಾವಿಯಲ್ಲಿ ಧಾರಾಕಾರ ಮಳೆ: ರಸ್ತೆ, ಅಂಗಡಿಗಳಿಗೆ ನುಗ್ಗಿದ ಚರಂಡಿ ನೀರು; ತರಕಾರಿ, ಹಣ್ಣುಗಳು ನೀರುಪಾಲು
ಬೆಳಗಾವಿಯಲ್ಲಿ ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆ, ಅಂಗಡಿಗಳು, ಮಾರ್ಕೆಟ್, ಮನೆಗಳಿಗೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸಂಪೂರ್ಣ ಪೋರ್ಟ್ ರೋಡ್ ನೀರಿನಿಂದ ತುಂಬಿಕೊಂಡಿರುವುದರಿಂದ ರವಿವಾರ ಪೇಟೆ ಬೆಲ್ಲದ ಮಾರ್ಕೆಟ್ ಹಾಗೂ ಕಾಂದಾ ಮಾರುಕಟ್ಟೆ ನದಿಯಂತಾಗಿದೆ. ಮಾರುಕಟ್ಟೆಯಲ್ಲಿ ತರಕಾರಿ, ಹಣ್ಣು, ಹೂಗಳು ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ವ್ಯಾಪಾರಸ್ಥರು ಪರದಾಡುವಂತಾಯಿತು. ಕೆಲ ನಿವಾಸಿಗಳು ಕಸಗಳನ್ನು ತಂದು ಘಟಾರಕ್ಕೆ ಸುರಿಯುವುದರಿಂದ ಮಳೆ ನೀರು ಸರಾಗವಾಗಿ ಹರಿಯದೆ …
Read More »ಬೆಳಗಾವಿ ನ್ಯಾಯಾಲಯದಲ್ಲಿ 78 ಪ್ರಕರಣಗಳ ಇತ್ಯರ್ಥ
ಬೆಳಗಾವಿ: ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿ ಪೀಠ ಬೆಳಗಾವಿಯಲ್ಲಿ ನ್ಯಾಯಾಂಗ ಸದಸ್ಯರಾದ ರವಿಶಂಕರ ಮತ್ತು ಮಹಿಳಾ ಸದಸ್ಯರಾದ ಸುನಿತಾ ಚ. ಬಾಗೇವಾಡಿ ಇವರುಗಳು ಮಾರ್ಚ 16 ರಿಂದ 18 ರವರೆಗೆ ಭೌತಿಕ ಕೋರ್ಟ ಕಲಾಪ ಜರುಗಿಸಿ ಒಟ್ಟು 257 ಪ್ರಕರಣಗಳ ವಿಚಾರಣೆ ನಡೆಸಿ ಅದರಲ್ಲಿ 78 ಪ್ರಕರಣಗಳನ್ನು ಇತ್ಯರ್ಥಗೊಳಿಸಿರುತ್ತಾರೆ ಎಂದು ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ, ಖಾಯಂ ಸಂಚಾರಿ ಪೀಠದ ಸಹಾಯಕ …
Read More »ಪೆಟ್ರೋಲ್ ಸಿಗಲ್ಲ ಅಂತ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಜನ
ಬೆಳಗಾವಿ: ನಾಲ್ಕೈದು ದಿನ ಪೆಟ್ರೋಲ್ ಸಿಗುವುದಿಲ್ಲ ಎಂಬ ಫೇಕ್ ಮೆಸೇಜ್ ನೋಡಿದ ಜನತೆ ತಮ್ಮ ವಾಹನಗಳಿಗೆ ಪೆಟ್ರೋಲ್ ತುಂಬಿಸಲು ಮುಗಿಬಿದ್ದ ಘಟನೆ ಬೆಳಗಾವಿಯಲ್ಲಿನಡೆದಿದೆ. ಸೋಮವಾರ ರಾತ್ರಿ ಬಹುತೇಕ ಪೆಟ್ರೋಲ್ ಬಂಕ್‌ಗಳಲ್ಲಿ ಜನರು ಸರತಿ ಸಾಲಿನಲ್ಲಿ ವಾಹನ ನಿಲ್ಲಿಸಿದ್ದರು. ಅಜಮ್ ನಗರ, ವೈಭವ್ ನಗರ, ಕೊಲ್ಲಾಪುರ ಸರ್ಕಲ್, ನೆಹರು ನಗರ, ಸೇಠ್ ಪೆಟ್ರೋಲ್ ಬಂಕ್, ವೈಭವ ನಗರ ಗಾಂಧಿ ನಗರ, ಚೆನ್ನಮ್ಮ ಸರ್ಕಲ್ ಹೀಗೆ ನಗರದಲ್ಲಿ ಬೈಕ್, ಕಾರುಗಳಿಗೆ ಪೆಟ್ರೋಲ್ ಹಾಕಿಸಿದ್ದಾರೆ. …
Read More »ಕುಟುಂಬ ರಾಜಕಾರಣ ಎಲ್ಲ ಪಕ್ಷದಲ್ಲೂ, ಪಕ್ಕದ ರಾಜ್ಯದಲ್ಲೂ ಇದೆ
ಬೆಳಗಾವಿ: ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಗೆ ಕುಟುಂಬದಲ್ಲೇ ಟಿಕೆಟ್‌ಗಾಗಿ ಸ್ಪರ್ಧೆ ಇರುವುದರಿಂದ ಆಯಾ ಕುಟುಂಬದಲ್ಲೇ ಅವಕಾಶ ನೀಡಲಾಗಿದೆ. ಕುಟುಂಬ ರಾಜಕಾರಣ ನಮ್ಮ ಪಕ್ಷದಲ್ಲಿ ಮಾತ್ರವಲ್ಲ, ಎಲ್ಲ ಪಕ್ಷದಲ್ಲೂ, ಪಕ್ಕದ ರಾಜ್ಯದಲ್ಲೂ ಇದೆ. ಗೆಲ್ಲುವ ಅಭ್ಯರ್ಥಿಗಳನ್ನು ಹುಡುಕಿ ಚುನಾವಣೆಗೆ ನಿಲ್ಲಿಸಬೇಕಾಗುತ್ತದೆ ಎಂದು ಸಚಿವ ಸತೀಶ ಜಾರಕಿಹೊಳಿ ಸಮರ್ಥಿಸಿಕೊಂಡರು. ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆಯಲ್ಲಿ ನಿರೀಕ್ಷೆಯಂತೆ ಅಭ್ಯರ್ಥಿ ಆಯ್ಕೆಯಾಗಿದೆ. ಹಂತ-ಹಂತದಲ್ಲಿ ಚುನಾವಣೆ ಮಾಡುತ್ತೇವೆ. ಪಕ್ಷದೊಳಗಿನ ಗಲಾಟೆಗಳಿಂದ ನಮ್ಮಲ್ಲಿದ್ದ ಮೂರು …
Read More »ಸೈಬರ್ ವಂಚನೆ ಪ್ರಕರಣಗಳಲ್ಲಿ ಜಿಲ್ಲೆಯಲ್ಲಿ 8 ಜನ ಆರೋಪಿಗಳ ವಿರುದ್ಧ ಪ್ರಕರಣ
ಬೆಳಗಾವಿ: ದೇಶದ ವಿವಿಧೆಡೆ ನಡೆದ ಸೈಬರ್ ವಂಚನೆ ಪ್ರಕರಣಗಳಲ್ಲಿ ಜಿಲ್ಲೆಯಲ್ಲಿ 1,400 ಬ್ಯಾಂಕ್ ಖಾತೆಗಳು ಕೆಲಸ ಮಾಡಿರುವ ಬಗ್ಗೆ ಸಂಶಯವಿದ್ದು, ಈ ಸಂಬಂಧಿತ ತನಿಖೆಯ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ 8 ಜನ ಆರೋಪಿಗಳ 24 ಮ್ಯೂಲ್ ಅಕೌಂಟ್‌ಗಳಿಂದ 1,02,66,928ರೂ. ವ್ಯವಹಾರ ನಡೆದಿರುವುದನ್ನು ಪತ್ತೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು. ನಗರದ ಸಿಸಿಪಿಎಸ್ ಠಾಣೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಪ್ಪಾಣಿಯ ಶುಭಂ ಲಕ್ಕನ್ನವರ, ಅಮಿತ ಶಿಂಧೆ, ರಾಹುಲ …
Read More »ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ
ಬೆಳಗಾವಿ: ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ಸಂರಕ್ಷಣೆ) ತಿದ್ದುಪಡಿ ಮಸೂದೆ-2026ನ್ನು ವಿರೋಧಿಸಿ ನಗರದಲ್ಲಿ ಸೋಮವಾರ ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು. ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿ, ಕೆಲಹೊತ್ತು ತಮ್ಮ ಬೇಡಿಕೆಗಳ ಬಗ್ಗೆ ಘೋಷಣೆ ಕೂಗಿದ ಪ್ರತಿಭಟನಕಾರರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿಗೆ ಮನವಿ ಪತ್ರ ಸಲ್ಲಿಸಿದರು. ತಿದ್ದುಪಡಿ ಮಸೂದೆ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಗಳ ಗೌರವಕ್ಕೆ ಹಾನಿ ಮಾಡುವಂತಿದೆ. ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಸ್ವಯಂ ನಿರ್ಣಯದ …
Read More »ಸೂಕ್ತ ಸಂಗಾತಿ ಆಯ್ಕೆ ದಾಂಪತ್ಯ ಬುದಕಿಗೆ ಮುಖ್ಯ
ಬೆಳಗಾವಿ: ದಾಂಪತ್ಯ ಜೀವನ ಬುದಕಿಗೆ ಬಹುದೊಡ್ಡದು. ಧರ್ಮ, ಅರ್ಥ, ಕಾಮ, ಮೋಕ್ಷಗಳು ಚತುರ್ವಿಧ ಪುರುಷಾರ್ಥಗಳಲ್ಲಿ ಬಹು ಮುಖ್ಯವೆನಿಸಿದೆ. ಇವುಗಳನ್ನು ಈಡೇರಿಸಿಕೊಳ್ಳುವುದು ಜೀವನದ ಕರ್ತವ್ಯವೆನಿಸಿದೆ. ಹಾಗಾಗಿ ಸೂಕ್ತ ಸಂಗಾತಿ ಆಯ್ಕೆ ಬಹು ಮುಖ್ಯ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವಧು-ವರ ಅನ್ವೇಷಣಾ ಕೇಂದ್ರದ ಅಧ್ಯಕ್ಷ ಡಾ.ಎಫ್.ವಿ.ಮಾನ್ವಿ ಹೇಳಿದರು. ನಗರದ ಜೆಎನ್‌ಎಂಸಿ ಜೀರಿಗೆ ಸಭಾಂಗಣದಲ್ಲಿ ಭಾನುವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವಧು-ವರ ಅನ್ವೇಷಣಾ ಕೇಂದ್ರ ಹಾಗೂ ಕೆಎಲ್ಇ …
Read More »
Laxmi News 24×7