ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾರೀ ಮಳೆ ಮುಂದುವರೆದಿದ್ದು, ಕೃಷ್ಣಾ ನದಿ ಮತ್ತು ಅದರ ಉಪನದಿಗಳ ಮೇಲಿನ ಆರು ಸೇತುವೆಗಳು ಜಲಾವೃತಗೊಂಡಿವೆ. ನೀರಿನ ಒಳಹರಿವು ಹೆಚ್ಚಾದಂತೆ ನದಿ ದಡದಲ್ಲಿರುವ ಗ್ರಾಮಗಳಿಗೆ ಎಚ್ಚರಿಕೆ ನೀಡಲಾಗಿದೆ. ಘಟಪ್ರಭಾ ನದಿಯ ಹಿಡಕಲ್ ಜಲಾಶಯ ಮತ್ತು ಬೆಳಗಾವಿ ಜಿಲ್ಲೆಯ ನವಿಲತೀರ್ಥ ಜಲಾಶಯಗಳು ಬಹುತೇಕ ಪೂರ್ಣ ಸಾಮರ್ಥ್ಯವನ್ನು ತಲುಪಿವೆ. ಭಾನುವಾರ ಸುಮಾರು 20 ಸಾವಿರ ಕ್ಯೂಸೆಕ್ ನೀರನ್ನು ಘಟಪ್ರಭಾ ನದಿಗೆ ಹರಿಯ ಬಿಡಲಾಗಿದೆ. ಮಳೆ ಮುಂದುವರಿದರೆ ನೀರಿನ …
Read More »ಗಣೇಶ ವಿಸರ್ಜನೆಯಲ್ಲಿ ಗಲಾಟೆ- ಯುವಕನ ಕೊಲೆಯಲ್ಲಿ ಅಂತ್ಯ
ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಆರಂಭವಾದ ಗಲಾಟೆಯು ಯುವಕನ(Young Man) ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ(Belagavi) ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದ ನಿವಾಸಿ ಅರ್ಜುನಗೌಡ ಪಾಟೀಲ್ (20) ಕೊಲೆಯಾದ ಯುವಕನಾಗಿದ್ದಾನೆ. ನಿನ್ನೆ ಸಂಜೆ ನಡೆದ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ. ಮತ್ತೊಂದು ಗುಂಪಿನ ಯುವಕನೊಬ್ಬ ಅರ್ಜುನಗೌಡನಿಗೆ ಚಾಕು ಇರಿದಿದ್ದಾರೆ. ಈ ವೇಳೆ ಅರ್ಜುನಗೌಡ ಕುಸಿದು …
Read More »ಬೆಳಗಾವಿಯಲ್ಲಿ ಮಹಾಮಳೆಗೆ ಮಹಿಳೆ ಬಲಿ
ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಕಾರ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಗಂಗವ್ವ ರಾಮಣ್ಣ ಮೂಲಿಮನಿ (55) ಮೃತ ಮಹಿಳೆ. ಕಳೆದ ಎರಡು ದಿನಗಳಿಂದ ಬೆಳಗಾವಿ ನಗರ ಸೇರಿದಂತೆ ವಿವಿಧ ಕಡೆ ವರುಣನ ಆರ್ಭಟ ಜೋರಾಗಿಯೇ ಇದೆ. ಹೂಲಿಕಟ್ಟಿ ಗ್ರಾಮದಲ್ಲಿಯೂ ಸಹ ಮಳೆ ಸಾಕಷ್ಟು ಹಾನಿ ಮಾಡಿದೆ. ಇಂದು …
Read More »ಕೊಚ್ಚಿ ಹೋಗಿದ್ದ ಯುವಕನ ಶವ 3 ದಿನ ಆದ್ಮೇಲೆ ಪತ್ತೆ
ಭಾರಿ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಯುವಕನ ಮೃತದೇಹ ಪತ್ತೆಯಾಗಿದೆ. ಹೌದು ಸೆ.9ರಂದು ಹೊಲಕ್ಕೆ ಹೋಗುವಾಗ ನೀರಿನಲ್ಲಿ ಕೊಳವಿ ಗ್ರಾಮದ ದುಂಡಪ್ಪ ಮಾಲದಿನ್ನಿ(25) ಎಂಬ ಯುವಕ ಕೊಚ್ಚಿಕೊಂಡು ಹೋಗಿದ್ದ. ಬಳಿಕ ಅಗ್ನಿಶಾಮಕ ಸಿಬ್ಬಂದಿಗಳಿಂದ ಸತತವಾಗಿ ಮೂರು ದಿನಗಳ ಕಾರ್ಯಾಚರಣೆ ಬಳಿಕ ಇಂದು ಬೆನಚಿನಮರಡಿ ಕೊಳವಿ ಮಾರ್ಗದ ಮಧ್ಯೆ ಶವ ಪತ್ತೆಯಾಗಿದೆ. ಗೋಕಾಕ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಹಿಡಕಲ್ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ
ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ ಎಂದು ತಹಶೀಲ್ದಾರ ಡಾ.ಡಿ.ಎಚ್.ಹೂಗಾರ್ ಅವರು ಮಾಹಿತಿ ನೀಡಿದ್ದಾರೆ. ರವಿವಾರ ದಿನ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡಾ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ ಕಾರಣ ಘಟಪ್ರಭಾ ನದಿ ಪಾತ್ರದ ಜನರು ತಮ್ಮ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ಹೋಗಬೇಕು ಎಂದು ಹುಕ್ಕೇರಿ ತಹಶೀಲ್ದಾರ ಡಾ.ದೊಡ್ಡಪ್ಪಾ ಹೂಗಾರ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಈಗಾಗಲೆ ಪ್ರತಿ …
Read More »ಬೆಳಗಾವಿ | ಮಕ್ಕಳ ಕಳ್ಳರೆಂಬ ಸಂಶಯ: ಮೂವರು ವಶಕ್ಕೆ
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮರಿಗೇರಿ- ಇಟಗಾ ಗ್ರಾಮದಲ್ಲಿ ಶನಿವಾರ ಮಕ್ಕಳ ಕಳ್ಳತನ ಮಾಡಲು ಯತ್ನಿಸಿದರು ಎಂಬ ಸಂಶಯದಿಂದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇವರೊಂದಿಗೆ ಇದ್ದ ಇನ್ನೂ ಮೂವರು ಪರಾರಿಯಾಗಿದ್ದಾರೆ. ರಗ್ಗು, ಬೆಡ್ ಸೀಟ್, ಪ್ಲಾಸ್ಟಿಕ್ ಬುಟ್ಟಿಗಳನ್ನು ಮಾರಲು ಆರು ಜನ ವಾಹನದಲ್ಲಿ ಬಂದಿದ್ದರು. ರಸ್ತೆ ಬದಿ ಸೈಕಲ್ ಓಡಿಸುತ್ತಿದ್ದ ಬಾಲಕನನ್ನು ವಾಹನದಲ್ಲಿ ಹತ್ತಿಸಿಕೊಳ್ಳಲು ಯತ್ನಿಸಿದರು. ಇದರಿಂದ ಕಿರುಚಿದ 12 ವರ್ಷದ ಬಾಲಕ ಮನೆಗೆ ಓಡಿದ. ಇದನ್ನು …
Read More »ಮತ್ತೆ ಅಧಿಕಾರದ ಕಹಳೆ ಮೊಳಗಿಸಿದ ಕಮಲ ಪಡೆ
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಬಿಜೆಪಿ ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಸಾರಿದೆ. “ಜನಸ್ಪಂದನ’ದ ವೇದಿಕೆಯಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿಯ ಕಮಲ ಅರಳಿಸುವ ಸಂಕಲ್ಪವನ್ನು ಮಾಡಿದೆ. ಆ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂಬ ಸಂದೇಶವನ್ನೂ ಬಿಜೆಪಿ ನಾಯಕರು ನೀಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜನ್ಮ ದಿನಾಚರಣೆಯ …
Read More »ಬೆಳಗಾವಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
ಪ್ರಸ್ತುತ ಸಾಮಾಜಿಕ ಪರಿಸ್ಥಿತಿಯಲ್ಲಿರುವ ಮಠಗಳ ಪೀಠಾಧಿಪತಿಗಳು ಐತಿಹಾಸಿಕ ಶ್ರೇಷ್ಠ ಗುರುವರ್ಯ ಬ್ರಹ್ಮಶ್ರೀ ನಾರಾಯಣ ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಗಜಾನನ ನಾಯ್ಕ ಅಭಿಪ್ರಾಯಪಟ್ಟರು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಇಂದು ಶನಿವಾರ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತ್ಯೋತ್ಸವ-2022 …
Read More »ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ್ ಪೋಡಿ, ಭೂ ಪರಿವರ್ತನಾ ನಕ್ಷೆಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದು ಚಪ್ಪಲಿ ಸವೆಸುವ ಜಂಜಾಟ ಇನ್ನು ತಪ್ಪಲಿದೆ!
ಬೆಳಗಾವಿ :ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ್ ಪೋಡಿ, ಭೂ ಪರಿವರ್ತನಾ ನಕ್ಷೆಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದು ಚಪ್ಪಲಿ ಸವೆಸುವ ಜಂಜಾಟ ಇನ್ನು ತಪ್ಪಲಿದೆ! ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಸಾರ್ವಜನಿಕರಿಗೆ ವಿಳಂಬವಿಲ್ಲದೆ ಸೇವೆ ಕಲ್ಪಿಸುವುದಕ್ಕೆ ‘ಸ್ವಾವಲಂಬಿ’ ವೆಬ್ಸೈಟ್ ವರದಾನವಾಗಿದೆ. ಈ ವೆಬ್ಸೈಟ್ ಮೂಲಕವೇ ಭೂಮಿಯ ಮಾಲೀಕರು ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ್ ಪೋಡಿ, ಭೂ ಪರಿವರ್ತನಾ ನಕ್ಷೆ ಇತ್ಯಾದಿ ಪಡೆಯಲು ಅರ್ಜಿ ಸಲ್ಲಿಸಬಹುದು. …
Read More »ಹಾನಿ ಪರಿಶೀಲನೆ: ಕೇಂದ್ರ ತಂಡಕ್ಕೆ ಹಾನಿ ಮನವರಿಕೆ: ಡಿಸಿ ನಿತೇಶ್ ಪಾಟೀಲ್
ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯನ್ನು ಕೇಂದ್ರ ನೆರೆ ಅಧ್ಯಯನ ತಂಡವು ಶನಿವಾರ(ಸೆ.10) ಪರಿಶೀಲನೆ ನಡೆಸಿತು. ಕೇಂದ್ರ ಜಲ ಆಯೋಗದ ಜಲಶಕ್ತಿ ಸಚಿವಾಲಯದ ನಿರ್ದೇಶಕರಾದ ಅಶೋಕ ಕುಮಾರ್ ವಿ. ಅವರ ನೇತೃತ್ವದ ಕೇಂದ್ರ ಅಧ್ಯಯನ ತಂಡದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ಧಾರಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ವಿ.ವಿ.ಶಾಸ್ತ್ರಿ ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಿರಿಯ ಸಲಹೆಗಾರರಾದ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ಅವರು ಜತೆಗಿದ್ದರು. ಬೆಳಗಾವಿಯಿಂದ ಪ್ರವಾಸ …
Read More »