Breaking News

ಬೆಳಗಾವಿ

ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ: ಕಾಂಬಳೆ

ಚಿಕ್ಕೋಡಿ: ‘ಪೋಷಣ್‌ ಅಭಿಯಾನದ ಮೂಲಕ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಿ, ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಚಿಕ್ಕೋಡಿ ಸಿಡಿಪಿಒ ಸಂತೋಷ ಕಾಂಬಳೆ ಹೇಳಿದರು. ತಾಲೂಕಿನ ಇಂಗಳಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಕಚೇರಿ ಆಯೋಜಿಸಿದ್ದ ‘ಪೋಷಣ್‌ ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.   ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಚ್.ಸಿದ್ದಪ್ಪಾ ಮಾತನಾಡಿ, ‘ಎಲ್ಲರೂ ಸೇರಿ ಅಭಿಯಾನ ಯಶಸ್ವಿಗೊಳಿಸೋಣ’ ಎಂದರು. ಪ್ರಾಥಮಿಕ ಆರೋಗ್ಯ …

Read More »

ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಗಳಿಸಿದ ರೈತ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕೇರೂರ ಗ್ರಾಮದ ರೈತ ಅಪ್ಪಾಸಾಬ ರೇಂದಾಳೆ ಅವರು, ಒಂದು ಎಕರೆಯಲ್ಲಿ ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಆದಾಯ ಗಳಿಸಿದ್ದಾರೆ. ಅಪ್ಪಾಸಾಬ ಅವರಿಗೆ 8 ಎಕರೆ ಜಮೀನಿದೆ. 7 ಎಕರೆಯಲ್ಲಿ ಕಬ್ಬು ಬೆಳೆದಿದ್ದು, 1 ಎಕರೆಯಲ್ಲಿ ಕೊತ್ತಂಬರಿ ಬೀಜ ಬಿತ್ತಿದ್ದರು. ಹದ ಮಳೆ ಸುರಿದಿದ್ದರಿಂದ ಉತ್ತಮ ಇಳುವರಿ ಬಂದಿದೆ. ಕೊತ್ತಂಬರಿ ಸೊಪ್ಪಿನ ದರ ಏರಿಕೆಯಿಂದಾಗಿ ಕೈತುಂಬ ಹಣವೂ ಸಿಕ್ಕಿದೆ. ಕೆ.ಜಿಗೆ ₹370ರ ದರದಲ್ಲಿ ಅಶೋಕ ತಳಿಯ …

Read More »

ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ- ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆಯು ನಮ್ಮ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ.

ಮೂಡಲಗಿ- ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ- ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆಯು ನಮ್ಮ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ. ಅದು ಯಾವುದೇ ಕೆಲಸವಿರಲಿ. ಶುಭ ಕೆಲಸವಿದ್ದಾಗ ಗಣೇಶನನ್ನು ಪೂಜಿಸಿ ಆರಾಧಿಸಿದರೆ ಕಷ್ಟ- ಕಾರ್ಪಣ್ಯಗಳು ದೂರವಾಗಲಿವೆ ಎಂಬ ನಂಬಿಕೆಯು ಈಗಲೂ ನಮ್ಮ ಪೂರ್ವಜರಲ್ಲಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಏಕದಂತ ಉತ್ಸವ ಸಮೀತಿಯಿಂದ ಜರುಗಿದ ಮೂಡಲಗಿ ಮಹಾರಾಜ ಗಣೇಶನ …

Read More »

3 ವರ್ಷದ ಬಾಲಕಿಯ ಅಪಹರಣ,ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ

ಬೆಳಗಾವಿ ಜಿಲ್ಲೆಯ ಹಾರೂಗೇರಿಯಲ್ಲಿ 7 ವರ್ಷಗಳ ಹಿಂದೆ ನಡೆದಿದ್ದ 3 ವರ್ಷದ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ತನಿಖಾ ಅಂತಿಮ ಹಂತ ತಲುಪಿದ್ದು, ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. 2017ರ ಸೆಪ್ಟೆಂಬರ್ 21ರಂದು, ಕುರುಬಗೋಡಿ ಹಾರೂಗೇರಿಯ ನಿವಾಸಿ ಸುಧಾ ಅಪ್ಪಾಸಾಬ ಸಣ್ಣಕ್ಕಿ ಅವರು ತಮ್ಮ 3 ವರ್ಷದ ಮಗಳ ನಾಪತ್ತೆ ಬಗ್ಗೆ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ …

Read More »

ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ರಾಜೀನಾಮೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಏನಂದ್ರು?

ಬೆಳಗಾವಿ, ಸೆಪ್ಟೆಂಬರ್‌ 28: ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.   ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದಸಚಿವೆ ಲಕ್ಷ್ಮೀ ಹೆಬ್ಬಾಳಕರ್ , ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. 6 ಸಾವಿರ …

Read More »

ಬಿಜೆಪಿಗೆ ಈಶ್ವರಪ್ಪ ಕರೆತರಲು ಯತ್ನಿಸಿಲ್ಲ: ರಮೇಶ ಜಾರಕಿಹೊಳಿ

ಬೆಳಗಾವಿ: ‘ನಾನು ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ ಕೆ.ಎಸ್.ಈಶ್ವರಪ್ಪ ಅವರನ್ನು ಮತ್ತೆ ಬಿಜೆಪಿಗೆ ಕರೆತರಲು ಯತ್ನಿಸುತ್ತಿದ್ದೇವೆ ಎಂಬುದು ಸುಳ್ಳು. ಈಶ್ವರಪ್ಪ ಅವರನ್ನು ಪಕ್ಷದಿಂದ ಹೊರಹಾಕಿದ್ದು ರಾಷ್ಟ್ರೀಯ ನಾಯಕರು. ಸೇರಿಸಿಕೊಳ್ಳಬೇಕಾದವರೂ ಅವರೇ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.   ‘ಈಶ್ವರಪ್ಪ ಅವರ ಬೆಂಗಳೂರು ನಿವಾಸದಲ್ಲಿ ನಾವೆಲ್ಲ ಸೇರಿದ್ದು ನಿಜ. ಆದರೆ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಮತ್ತು ಕುರುಬ ಸಮಾಜಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿಯ ಬೇಡಿಕೆ ಕುರಿತು …

Read More »

ಸೈಬರ್‌ ಅಪರಾಧ ತಡೆಗೆ ಯುವಕರ ತಂಡ; ಜನರಿಗೂ ಡಿಜಿಟಲ್ ಸಾಕ್ಷರತೆ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಜಿಲ್ಲೆಯಲ್ಲಿ ಸೈಬರ್‌ ಅಪರಾಧಗಳನ್ನು ತಡೆಯಲು ಹಾಗೂ ಜನರನ್ನು ಜಾಗೃತಗೊಳಿಸಲು ಯುವಕರ ತಂಡವೊಂದು ನಾಲ್ಕು ವರ್ಷಗಳಿಂದ ಸದ್ದಿಲ್ಲದೇ ಕೆಲಸ ಮಾಡುತ್ತಿದೆ. ‘ಸೈಬರ್‌ ಕ್ರೈಂ ಅವೇರ್‌ನೆಸ್‌ ಟೀಮ್‌ ಚಿಕ್ಕೋಡಿ’ ಎಂಬ ಹೆಸರಿನಲ್ಲಿ ಎಂಟು ಯುವಕರು ತಂಡ ಉಚಿತವಾಗಿ ಡಿಜಿಟಲ್‌ ಸಾಕ್ಷರತೆ ನಡೆಸಿದೆ. 2020ರಲ್ಲಿ ರಚನೆಯಾದ ತಂಡವು ಈವರೆಗೆ 3,700ಕ್ಕೂ ಹೆಚ್ಚು ಸೈಬರ್‌ ವಂಚನೆ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸ್‌ ಇಲಾಖೆಗೆ ನೆರವಾಗಿದೆ. 2,500 ‘ಲೋನ್‌ ಆಯಪ್’ ವಂಚನೆ ಪ್ರಕರಣ, 1,000 ವಿಡಿಯೊ …

Read More »

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ದಾಸನಹಟ್ಟಿ ಗ್ರಾಮದ ಶ್ರೀ ಬಂಡೆಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …

Read More »

ನಾನು ಸಿಎಂ ಆದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ ಕೊಡುತ್ತೇನೆ: ಯತ್ನಾಳ್ ಹೇಳಿಕೆ

ಬೆಳಗಾವಿ: ನಾನು ಮುಖ್ಯಮಂತ್ರಿಯಾದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ ಕೊಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ನಾನು ಸಿಎಂ ಆದ್ರೆ ಪೊಲಿಸರಿಗೆ AK47 ಗನ್ ಗೆ ಅನುಮತಿ ಕೊಡುತ್ತೇನೆ. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವ ಮೊದಲೇ ಫೈರಿಂಗ್ ಮಾಡುತ್ತೇವೆ ಎಂದು ಹೇಳಿದ್ದಾರೆ. ನಮ್ಮ ಕೈಗೆ ಅಧಿಕಾರ ಕೊಟ್ಟು ನೋಡಿ. ಅಲ್ಲಿ ಯೋಗಿ, ಇಲ್ಲಿ ನಾವು. ಮುಂದಿನ ಬಾರಿ …

Read More »

ದ್ರಾಮಯ್ಯ ಚಿಲ್ಲರೆ ರಾಜಕಾರಣಿಯಲ್ಲ, ಗೌರವದಿಂದ ರಾಜೀನಾಮೆ ಕೊಡಲಿ-ಯತ್ನಾಳ್

ಬೆಳಗಾವಿ : ಚಿಲ್ಲರೆ ರಾಜಕಾರಣಿಗಳ ರೀತಿ ನೀವು ಮಾಡದೇ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದರು. ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶದಂತೆ ಇಂದು ಸಿಎಂ ವಿರುದ್ಧ FIR ದಾಖಲಾಗಿದ್ದು, ಈ ಬಗ್ಗೆ ಬೈಲಹೊಂಗಲದಲ್ಲಿ ಪ್ರತಿಕ್ರಿಯೆ ನೀಡಿರುವ ಯತ್ನಾಳ್, ಸಿದ್ದರಾಮಯ್ಯ ಅವರೇ..   ನಿಮ್ಮ ಸುತ್ತಮುತ್ತಲಿನ ಪಟಾಲಂನಿಂದ ನಿಮಗೆ ತಪ್ಪು ಸಲಹೆ ನೀಡಲಾಗಿದೆ. ನಿಮ್ಮ ಹೆಸರು ಉಳಿಯಬೇಕು …

Read More »