Home / ಜಿಲ್ಲೆ / ಬೆಳಗಾವಿ (page 178)

ಬೆಳಗಾವಿ

ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಬಣನೂ ಇಲ್ಲ, ಬಾಣನೂ ಇಲ್ಲ: ಲಕ್ಷ್ಮಣ ಸವದಿ

ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಬಣನೂ ಇಲ್ಲ, ಬಾಣನೂ ಇಲ್ಲ ಎಂದು ಮಾಜಿ ಡಿಸಿಎಂ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪುರ ವಿರುದ್ಧ ಕಾರ್ಯಕರ್ತರ ಅಸಮಾಧಾನ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸಲು ಲಕ್ಷ್ಮಣ ಸವದಿ ಪ್ರಯತ್ನಿಸಿದರು. ಅದು ಬಹುತೇಕ ನಿಮ್ಮಂತ ಸ್ನೇಹಿತರು ಹುಟ್ಟು ಹಾಕಿದ ಗುಟುಕು ಅಂತಾ ನಾ ತಿಳಿದುಕೊಂಡಿದ್ದೇನೆ ಎಂದರು. ಪ್ರಭಾಕರ್ ಕೋರೆ ಬಿಜೆಪಿ …

Read More »

ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಗೋಕಾಕ್, ಹುಕ್ಕೇರಿ, ಹಾಗೂ ಅಥಣಿಯ ಎಲ್ಲಾ ಸಾಹುಕಾರ್‍ಗಳು ಸೇರಿ ಕೆಲಸ ಮಾಡುತ್ತೇವೆ:ಬಾಲಚಂದ್ರ ಜಾರಕಿಹೊಳಿ

ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಗೋಕಾಕ್, ಹುಕ್ಕೇರಿ, ಹಾಗೂ ಅಥಣಿಯ ಎಲ್ಲಾ ಸಾಹುಕಾರ್‍ಗಳು ಸೇರಿ ಕೆಲಸ ಮಾಡುತ್ತೇವೆ ಎಂದು ಹೇಳುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಒಗ್ಗಟ್ಟಿನ ಮಂತ್ರವನ್ನು ಪಠಿಸಿದ್ದಾರೆ. ವಾಯುವ್ಯ ಪದವೀಧರ, ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬೆಳಗಾವಿ ನಗರದಲ್ಲಿ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಪ್ರಾಮಾಣಿಕವಾಗಿ …

Read More »

ಇಬ್ಬರು ಖತರ್ನಾಕ್ ಆರೋಪಿಗಳನ್ನು ಬಂಧಿಸಿದ ನಿಪ್ಪಾಣಿ ಠಾಣೆ ಪೊಲೀಸರು

ಮನೆಗಳುವು ಹಾಗೂ ಮೋಟಾರ್ ಸೈಕಲ್ ಸ್ಪೇರ್ ಪಾರ್ಟ್ಸ್ ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಿಪ್ಪಾಣಿ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು 27 ವರ್ಷದ ನಿಹಾಲ ಅಸ್ಲಾಂ ಬಾಲೇಖಾನ ಹಾಗೂ 47 ವರ್ಷದ ರಮೀಜಾ ದಸ್ತಗೀರ ಮಲ್ನೋಡಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದು ಕಾರು, ಬೈಕ್ ಸ್ಪೇರ್ ಪಾರ್ಟ್ಸ್, ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದು, ಒಟ್ಟು 4,13,000 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.ಬೆಳಗಾವಿ ಎಸ್.ಪಿ. …

Read More »

ಬೆಳಗಾವಿಯ ಫೋರ್ಟ್ ರಸ್ತೆಯಲ್ಲಿ ವಿದ್ಯುತ್ ತಂತಿಗೆ ನೂಪುರ್ ಶರ್ಮಾ ಪ್ರತಿಕೃತಿಯನ್ನು ಜೋತು ಹಾಕಿ ಆಕ್ರೋಶ

ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತಂತೆ ಬಿಜೆಪಿ ನಾಯಕಿ ನೂಪುರ್ ಶರ್ಮಾ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಬೆಳಗಾವಿ ನಗರದಲ್ಲಿ ತೀವೃ ಖಂಡನೆ ವ್ಯಕ್ತವಾಗಿದೆ. ನೂಪುರ್ ಶರ್ಮಾ ಪ್ರತಿಕೃತಿಯನ್ನು ವಿದ್ಯುತ್ ತಂತಿಗೆ ಜೋತು ಹಾಕುವ ಮೂಲಕ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ನಾಯಕಿ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ ಪೈಗಂಬರರ ಬಗ್ಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಬೆಳಗಾವಿಯ ಫೋರ್ಟ್ ರಸ್ತೆಯಲ್ಲಿ ವಿದ್ಯುತ್ ತಂತಿಗೆ ನೂಪುರ್ ಶರ್ಮಾ ಪ್ರತಿಕೃತಿಯನ್ನು ಜೋತು ಹಾಕಿ …

Read More »

ಕಾಡು ಬೆಕ್ಕು ಬೇಟೆಯಾಡಿದ್ದ ಆರೋಪಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ..

ಕಾಡು ಬೆಕ್ಕನ್ನು ಬೇಟೆಯಾಡಿದ್ದ ಖದೀಮರನ್ನು ಅರಣ್ಯ ಇಲಾಖೆ ಸಿಬ್ಬಂದಿ ಹೆಡೆಮುರಿಕಟ್ಟಿದ ಘಟನೆ ಖಾನಾಪುರ ತಾಲೂಕಿನ ಖುದ್ದಾನಪೂರ್ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಕಿತ್ತೂರು ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡು ಬೆಕ್ಕು ಬೇಟೆಯಾಡಿದ್ದ ಆರೋಪಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ.. ಖುದ್ದಾನಪೂರ ವ್ಯಾಪ್ತಿಯಲ್ಲಿ ಬೇಟೆಯಾಡಿ ಬೆಳವಡಿಯ ಹರಿಜನಕೆರೆಯ ಮನೆಯಲ್ಲಿ ಇದನ್ನು ಇಟ್ಟಿದ್ದುರು. ಅಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಬೇಟೆಯಾಡಿದ ಕಾಡು ಬೆಕ್ಕಿನ ಮಾಂಸ ಸೇರಿದಂತೆ ಬೇಟೆಗೆ ಬೆಳೆಸಿದ ದಾರದ ಬೆಲೆ, 3 …

Read More »

ಲಕ್ಷ್ಮಣ ಸವದಿಯವರು ತಿಳಿಗೇಡಿತನದ ಹೇಳಿಕೆಯನ್ನು ತಿದ್ದಿಕೊಳ್ಳಲಿ – ಸಿದ್ಧಾರ್ಥ ಸಿಂಗೆ

ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ತಿಳಿಗೇಡಿತನದ ಹೇಳಿಕೆಯನ್ನು ತಿದ್ದಿಕೊಳ್ಳಲಿ – ಸಿದ್ಧಾರ್ಥ ಸಿಂಗೆ 🔴 ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ವಿಧಾನ ಪರಿಷತ್ ವಾಯುವ್ಯ ಶಿಕ್ಷಕ ಹಾಗೂ ಪದವಿಧರ ಮತಕ್ಷೇತ್ರದ ಚುನಾವಣೆಯ ತಮ್ಮ ಪಕ್ಷದ ಪ್ರಚಾರ ಸಭೆ ಬೆಳಗಾವಿಯಲ್ಲಿ ಕೆಲವು ಹಾಸ್ಯಾಸ್ಪದ ಮಾತುಗಳನ್ನಾಡಿ ನಗೆಪಾಟಲಿಗೆ ಈಡಾಗಿರುವದು ಕೆಲವರಿಗೆ ಸೋಜಿಗ ಎನಿಸಿದರೂ ನಿಜವಾಗಿಯೂ ಅವರೊಬ್ಬ ನಗೆಪಾಟಲಿನ ವ್ಯಕ್ತಿತ್ವ ಹೊಂದಿರುವವರು ಎಂದೆ ಹೇಳಬೇಕಾಗುತ್ತದೆ 🟠 ಚುನಾವಣಾ ಪ್ರಚಾರದಲ್ಲಿ ಅಂಗವೈಕಲ್ಯವನ್ನು ಅವಹೇಳನಕ್ಕೆ ಉಪಯೋಗಿಸಿ ಎಲ್ಲ …

Read More »

ರೈತನ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ ಶ್ರೀಮಂತ ಪಾಟೀಲ

ಅಥಣಿ : ಎರಡು ವರ್ಷಗಳ ಹಿಂದೆ ಪ್ರವಾಹದಲ್ಲಿ ಮನೆ ಕಳೆದುಕೊಂದಿದ್ದ ಬಡ ರೈತ ಕಲ್ಲಪ್ಪ ಅವರಿಗೆ ಸರಕಾರ ಹೊಸ ಮನೆ ಮಂಜೂರು ಮಾಡಿ ಎರಡು ಕಂತು ಕೂಡ ನೀಡಿದೆ. ಆದರೆ, ಮೂರನೇ ಕಂತಿಗೆ ಸಹಾಯಕಾಗಿ ಎರಡು ವರ್ಷ ಕಳೆದರೂ ಅಧಿಕಾರಿಗಳು ನಿರ್ಲಕ್ಷ ಮಾಡಿದರು. ಕೊನೆಗೆ ಈ ಬಡ ರೈತ ಶಾಸಕರಾದ ಶ್ರೀಮಂತ ಪಾಟೀಲರನ್ನು ಭೇಟಿಯಾಗಿ ಸಮಸ್ಯೆ ತೋಡಿಕೊಂಡಿದ್ದಾರೆ. ತಕ್ಷಣ ಸ್ಪಂದಿಸಿದ ಶಾಸಕರು ಶಾಸಕರು ನೇರವಾಗಿ ಕೃಷ್ಣಾ ಕಿತ್ತೂರಿಗೆ ತೆರಳಿ ಅಧಿಕಾರಿಗಳನ್ನು …

Read More »

ಜೂನ್ 11 ರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯ: ನಿತೇಶ್ ಪಾಟೀಲ

ಬೆಳಗಾವಿ: ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಹಾಗೂ ವಾಯವ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 13 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂನ್ 11 ರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 ರ ಪ್ರಕಾರ ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುನ್ನ ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಬಹಿರಂಗ ಪ್ರಚಾರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ …

Read More »

ಕಬ್ಬು ಬೆಳೆಗಾರರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಫ್‌ಆರ್‌ಪಿಪಿ ದರ ಹೆಚ್ಚಿಸುವ ವಿಚಾರದಲ್ಲಿ ಮೋಸ ಮಾಡುತ್ತಿವೆ

ಕಬ್ಬು ಬೆಳೆಗಾರರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಫ್‌ಆರ್‌ಪಿಪಿ ದರ ಹೆಚ್ಚಿಸುವ ವಿಚಾರದಲ್ಲಿ ಮೋಸ ಮಾಡುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ಡಿಸಿ ಕಚೇರಿ ಮುಂದೆ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಮತ್ತು ರಾಜ್ಯದಲ್ಲಿ …

Read More »

ಹಿರೇ ಬಾಗೇವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಪುಂಡರಿಗೆ ಹೆಡೆಮುರಿ ಕಟ್ಟಿದ್ದಾರೆ.

ನಿನ್ನೆ ರಾತ್ರಿ ಹಿರೇ ಬಾಗೇವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಪುಂಡರಿಗೆ ಹೆಡೆಮುರಿ ಕಟ್ಟಿದ್ದಾರೆ. ಹೌದು ಹಿರೇಬಾಗೇವಾಡಿ ಠಾಣೆ ಸಿಪಿಐ ವಿಜಯಕುಮಾರ್ ಸಿನ್ನೂರ್ ಮಾರ್ಗದರ್ಶನದಲ್ಲಿ ಪಿಎಸ್‍ಐ ಶಶಿಕುಮಾರ್ ಕೊರಲೆ ನೇತೃತ್ವದಲ್ಲಿ ಈ ದಾಳಿ ಮಾಡಲಾಗಿದ್ದು. ನಿನ್ನೆ ರಾತ್ರಿ ಸುಮಾರು 2.30ರ ಸುಮಾರಿಗೆ ಹಾಲಗಿಮರಡಿ ಕ್ರಾಸ್ ಮೂಲಕ ಎರಡು ವ್ಯಾನ್‍ಗಳಲ್ಲಿ ಗೋವಾಗೆ ಗೋಮಾಂಸವನ್ನು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಗೋಮಾಂಸ ಸಮೇತ ಇಬ್ಬರು …

Read More »