Home / ಜಿಲ್ಲೆ / ಬೆಳಗಾವಿ (page 182)

ಬೆಳಗಾವಿ

ಗಂಡ ಹೊಡೆದ ಏಟಿಗೆ ಪ್ರಜ್ಞೆ ತಪ್ಪಿದ ಹೆಂಡತಿ ; ಸತ್ತಳೆಂದು ಆತ್ಮಹತ್ಯೆ ಮಾಡಿಕೊಂಡ ಗಂಡ.!

ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ (Naganur) ಪಟ್ಟಣದಲ್ಲಿ ತಾನು ಹೊಡೆದ ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿಯೂ (husband)   ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.   ಆತ್ಮಹತ್ಯೆ (suicide) ಮಾಡಿಕೊಂಡ ಯುವಕನನ್ನು ನಾಗನೂರು ಪಟ್ಟಣದ ಅರಣ್ಯಸಿದ್ದೇಶ್ವರ ತೋಟದ ನಿವಾಸಿ ಮಹಾಂತೇಶ ಸಿದ್ದಪ್ಪ ಗೂಡೆನ್ನವರ ಎಂದು ಗುರುತಿಸಲಾಗಿದೆ.   ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಾಂತೇಶ, ಬುಧವಾರ ಹೆಂಡತಿಯೊಡನೆ   ಜಗಳವಾಡಿದ್ದಾನೆ. …

Read More »

ನಾನೇ ಲೇಬರ್, ನಾನೇ ಓನರ್! ಅಂತಾರೆ ಆಳಾಗಿ ದುಡಿದು ಅರಸನಾಗಿ ಉಣ್ಣುವ ಬೆಳಗಾವಿಯ ಉದ್ಯಮಿ

ಬೆಳಗಾವಿ: ಕೋವಿಡ್​ ಲಾಕ್‌ಡೌನ್ ಎಫೆಕ್ಟ್​​‌ನಿಂದ (Covid 19 Lockdown) ಸಣ್ಣ, ಮಧ್ಯಮ, ಮತ್ತು ಅತಿ ಸಣ್ಣ ಉದ್ಯಮಗಳು ಆರ್ಥಿಕ ಸಂಕಷ್ಟಕ್ಕೆ (Economic Crisis) ಸಿಲುಕಿದ್ದವು. ಆದರೆ ಬೆಳಗಾವಿ ನಗರದ (Belagavi) ನೇಕಾರಿಕೆ ಕುಟುಂಬವೊಂದು ಲಾಕ್‌ಡೌನ್ ಅನ್ನೇ ಸದ್ಭಳಕೆ ಮಾಡಿಕೊಂಡು ಸ್ವಾವಲಂಬನೆಯ ಬದುಕು ಕಟ್ಟಿಕೊಂಡಿದೆ. ಜರಿ ಉದ್ಯಮದಲ್ಲಿ (Jari Business) ಸ್ವಾವಲಂಬಿ ಬದುಕು ಕಟ್ಟಿಕೊಂಡ ಬೆಳಗಾವಿ ನಗರದ ನಿವಾಸಿ ಲೋಹಿತ್ ಮೋರಕರ್ ಎಂಬುವರು ಜರಿ ಉದ್ಯಮದಿಂದ (ಸೀರೆಗೆ ಬೇಕಾಗುವ ಕಚ್ಚಾ ವಸ್ತು …

Read More »

ರಸ್ತೆ ಬದಿ ನಡೆದು ಹೋಗುತ್ತಿದ್ದವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಗೈದಿರುವ ಘಟನೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.

ಗೋಕಾಕ್: ರಸ್ತೆ ಬದಿ ನಡೆದು ಹೋಗುತ್ತಿದ್ದವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.   ಹುಕ್ಕೇರಿಯ ದುಂಡಯ್ಯಾ ನಂದಿಕೊಳ್ಳಮಠ (50) ಕೊಲೆಯಾದ ವ್ಯಕ್ತಿ. ಇಂದು ಬೆಳ್ಳಂ ಬೆಳಿಗ್ಗೆ ಈ ಕೊಲೆ ನಡೆದಿದ್ದು, ನಡೆದು ಹೋಗುತ್ತಿದ್ದವನನ್ನು ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಸಾಯಿಸಿದ್ದಾರೆ.   ಕೊಣ್ಣೂರ ಉಪ ಪೊಲೀಸ್ ಹಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಪಿಎಸ್ ಐ ಭೇಟಿ ನೀಡಿ ಪರಿಶೀಲನೆ …

Read More »

ಸುವರ್ಣ ವಿಧಾನಸೌಧ ಘನತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು: ನಿತೇಶ್ ಪಾಟೀಲ

ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧ ಘನತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು. ಭದ್ರತೆ, ಸ್ವಚ್ಛತೆ ಸೇರಿ ಸೌಧದ ಸಮರ್ಪಕ ನಿರ್ವಹಣೆಗೆ ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.   ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಕಾರ್ಮಿಕರ ಜೊತೆ ಚರ್ಚಿಸಿದ ನಂತರ ಅವರು ಮಾತನಾಡಿದರು. ‘ಸುವರ್ಣ ವಿಧಾನಸೌಧದ ಮುಂದೆ ಶಾವಿಗೆ ಒಣಗಿಸಲು ಹಾಕಿದ್ದ ಮಹಿಳಾ ಕಾರ್ಮಿಕರೊಬ್ಬರ ವಿರುದ್ಧ ಈಗಾಗಲೇ …

Read More »

‘ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವವರೆಗೂ ಹೋರಾಡುತ್ತೇವೆ.: ಎಂಇಎಸ್‌ ಆಗ್ರಹ

ಬೆಳಗಾವಿ: ‘ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸಿ ನೀವೂ ಹೋರಾಟ ಮುಂದುವರಿಸಿ. ನಾವೂ ನಿಮ್ಮ ಜೊತೆಗಿದ್ದೇವೆ’ ಎಂದು ಮಹಾರಾಷ್ಟ್ರದ ಶಿವಸೇನೆ ಮುಖಂಡ ಅರುಣ ದುಧವಾಡ್ಕರ್ ಮರಾಠಿಗರಿಗೆ ತಮ್ಮ ಬೆಂಬಲ ಸೂಚಿಸಿದರು. 1986ರಲ್ಲಿ ನಡೆದ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹೋರಾಟದಲ್ಲಿ ಹುತಾತ್ಮರಾದ 9 ಜನರಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಹಾಗೂ ಶಿವಸೇನೆ ಕಾರ್ಯಕರ್ತರು ತಾಲ್ಲೂಕಿನ ಹಿಂಡಲಗಾ ಗ್ರಾಮದಲ್ಲಿ ಬುಧವಾರ ಶ್ರದ್ಧಾಂಜಲಿ ಸಭೆ ಏರ್ಪಡಿಸಿದ್ದರು. ‘ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಬಗೆಹರಿಯುವವರೆಗೂ ಬೆಳಗಾವಿಯನ್ನು …

Read More »

ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಚಿಕ್ಕೋಡಿ: ತಾಯಿಯೊಬ್ಬರು ಎಂಟು ವರ್ಷಗಳ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ನಡೆದಿದೆ. ಸವೀತಾ ಮದಗೋಂಡ ಬೆಳಗಲಿ (24) ಪವಿತ್ರಾ ಮದಗೋಂಡ ಬೆಳಗಲಿ (8) ಮೃತ ದುರ್ದೈವಿಗಳು. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಶವಗಳನ್ನು ಸ್ಥಳೀಯರು ಹೊರತೆಗೆದಿದ್ದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಟಿಸಿ ಸರಿಪಡಸಲು ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಹೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ

ಟಿಸಿ ಸರಿಪಡಸಲು ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಹೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಅಥಣಿಯಲ್ಲಿ ನಡೆದಿದೆ. ಹೌದು ಟಿಸಿ ಸರಿಪಡಿಸಲು ಹೆಸ್ಕಾಂ ಸಿಬ್ಬಂದಿಗಳು ಹಣ ಪಡೆಯುತ್ತಿದ್ದಾರೆ ಎಂದ ಆರೋಪಿಸಿದ ಅಥಣಿ ಪಟ್ಟಣದ ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದ ಅಥಣಿ ಶಾಖೆ ಮುಂದೆ ರೈತರು ಧರಣಿ ನಡೆಸಿದರು. ಹಲವು ರೈತರಿಂದ ಹಣ ಪಡೆದು ಸರ್ವಿಸ್ ಕೊಟ್ಟಿದ್ದು ಬಡ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಮ್ಮ …

Read More »

ಆ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿದ ಭೀಮ ವಾದ

ಖಾನಾಪುರ ತಾಲೂಕಿನ ಚಿಕ್ಕ ಮುನವಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ದಲಿತ ಕುಟುಂಬಗಳಿಗೆ ನಿಷೇಧಿಸಲಾಗಿತ್ತು. ಇದೀಗ ಈ ದಲಿತ ಕುಟುಂಬಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮ ವಾದ) ಜಿಲ್ಲಾ ಘಟಕದ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. ಹೌದು ಚಿಕ್ಕಮುನವಳ್ಳಿ ಗ್ರಾಮದಲ್ಲಿ ಇತ್ತಿಚಿಗೆ ಗ್ರಾಮದೇವಿಗೆ ಉಡಿ ತುಂಬುವ ಕಾರ್ಯಕ್ರಮವಿತ್ತು. ಈ ವೇಳೆ ದಲಿತರಿಗೆ ದೇವಸ್ಥಾನಗದ ಒಳಗೆ ಪ್ರವೇಶ ಇಲ್ಲ ಎಂದು ಕಮೀಟಿ ಅವರು ಹೇಳಿದ್ದರು. ಈ ವಿಚಾರ ಇಡೀ ರಾಜ್ಯದಲ್ಲಿಯೇ ತೀವ್ರ …

Read More »

ಬೈಲಹೊಂಗಲ ತಾಲೂಕಿನ ಮುರಕಿಭಾವಿ ಗ್ರಾಮದ ಜೈನ ಮಂದಿರವೊಂದರಲ್ಲಿ ಶಿವಲಿಂಗ ಮೂರ್ತಿ ಇರುವುದು ಪತ್ತೆ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮುರಕಿಭಾವಿ ಗ್ರಾಮದ ಜೈನ ಮಂದಿರವೊಂದರಲ್ಲಿ ಶಿವಲಿಂಗ ಮೂರ್ತಿ ಇರುವುದು ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದ್ದ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಗ್ರಾಮಸ್ಥರು ಮಾಹಿತಿ ನೀಡಿದ್ದು, ಮುರಕಿಭಾವಿ ಗ್ರಾಮದಲ್ಲಿ ಜೈನ ಸಮುದಾಯದ ಯಾವುದೇ ಕುಟುಂಬಗಳಿಲ್ಲ. ಹಲವು ವರ್ಷಗಳಿಂದ ಜೈನ ಮಂದಿರ ಪಾಳು ಬಿದ್ದಿದೆ. ಹೀಗಾಗಿ ಊರಿನ ಜನರೆಲ್ಲರೂ ಸೇರಿಕೊಂಡು ಶಿವಲಿಂಗ ಮತ್ತು ಬಸವಣ್ಣನವರ ಮೂರ್ತಿ ಸ್ಥಾಪನೆ ಮಾಡಿ ಪೂಜೆ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.  …

Read More »

ಅಭಯ್ ಪಾಟೀಲ್ ತಮ್ಮ ಸ್ವಂತ ಜಾಗದ ಎದುರುಗಿನ ಸಾಯಿ ಮಂದಿರ ತೆರವು ಮಾಡಿರುವ ಆರೋಪ : ಮನ್ಸೂರ್ ಖಾನ್

ಬೆಳಗಾವಿ: ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ತಮ್ಮ ಸ್ವಂತ ಜಾಗದ ಎದುರುಗಿನ ಸಾಯಿ ಮಂದಿರ ತೆರವು ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಕಾಂಗ್ರೆಸ್ ಮುಖಂಡ ಮನ್ಸೂರ್ ಖಾನ್ ಸಾಯಿ ಮಂದಿರ ತೆರವು ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ. ತಾಲೂಕಿನ ಆನಗೋಳ ನಗರದ ಅನಗೋಳ ಮುಖ್ಯ ರಸ್ತೆಯಲ್ಲಿರುವ ಸಾಯಿ ಮಂದಿರ ತೆರವು ಮಾಡಿರುವ ಆರೋಪ ಕೇಳಿಬಂದಿದೆ. ಶಾಸಕ ಅಭಯ್ ಪಾಟೀಲ್ ತಮ್ಮ ಸ್ವಂತ ಜಾಗದ ಎದುರುಗಿನ ಸಾಯಿ ಮಂದಿರವನ್ನು …

Read More »