ಗೋಕಾಕ್- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ. ಮೃತರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮಾಮನಿ …
Read More »ಕರ್ನಾಟಕ ರಾಜ್ಯೋತ್ಸವ: 67 ಪ್ರಶಸ್ತಿಗೆ 28 ಸಾವಿರ ಅರ್ಜಿಗಳು!
ಬೆಂಗಳೂರು: ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ನಾಡಿನ ವಿವಿಧ ವಲಯದಿಂದ 28 ಸಾವಿರ ಅರ್ಜಿಗಳ ಸಲ್ಲಿಕೆಯಾಗಿವೆ. ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇಮಕ ಮಾಡಿದ್ದ ಉಪಸಮಿತಿ, ಸಲಹಾ ಸಮಿತಿ ಅರ್ಜಿ ಪ್ರಕ್ರಿಯೆಯ ಪರಿಶೀಲನೆ ಪೂರ್ಣಗೊಳಿಸಿದ್ದು ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಸಭೆ ನಡೆಯಲಿದ್ದು ಇಲ್ಲಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಈ ವರ್ಷ 67ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ವಿವಿಧ …
Read More »ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ….
ಕಿತ್ತೂರು :ಉತ್ಸವ ನಾಳೆಗೆ ಮುಂದೂಡಿಕೆ.. ಚನ್ನಮ್ಮನ ಕಿತ್ತೂರಿನಲ್ಲಿ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವವನ್ನು ನಾಳೆ ಸೋಮವಾರ(ಅ.24)ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
Read More »ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ರಾಮದುರ್ಗ: ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದಲ್ಲಿ ಇಲ್ಲಿನ ಸುಶೀಲಾತಾಯಿ ಕುಲಗೋಡ ಪಿಯು ಕಾಲೇಜಿನ ವಿದ್ಯಾರ್ಥಿಗಳು ನೆಟ್ ಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಸನಗೌಡಾ ದ್ಯಾಮನಗೌಡ್ರ-ಕಬಡ್ಡಿ, ವಿಜಯ ಕಳಸಗೌಡರ-5 ಕಿ.ಮೀ ನಡಿಗೆ ಮತ್ತು ಸಾನೀಯಾ ನಾಸಿಪೂರ ಜಾವಲಿನ್ ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷ ಎಸ್.ಎ. ಶೆಟ್ಟಿಸದಾವರ್ತಿ, ಉಪಾಧ್ಯಕ್ಷ ಕೆ.ಮೋಹನ, ಗೌರವ ಕಾರ್ಯದರ್ಶಿ ಎಸ್.ಎಸ್. ಸುಲ್ತಾನಪೂರ, ಪ್ರಾಚಾರ್ಯ ಪ್ರೊ.ಎಂ.ಬಿ. …
Read More »ರಾಜ್ಯೋತ್ಸವ: ಅದ್ಧೂರಿ ಆಚರಣೆಗೆ ಸೂಚನೆ
ನಿಪ್ಪಾಣಿ: ‘ಈ ಬಾರಿ ರಾಜ್ಯೋತ್ಸವವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ. ಎಲ್ಲರೂ ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತನ್ನಿ’ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಕರೆ ನೀಡಿದರು. ಇಲ್ಲಿನ ನಗರಸಭೆಯಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ಮತ್ತು ಕನ್ನಡಪರ ಸಂಘಟನೆಗಳ ಆಶ್ರಯದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು. ‘ಎಲ್ಲ ಇಲಾಖೆಯ ಕಾರ್ಯಾಲಯಗಳನ್ನು ಅಲಂಕರಿಸಿ ಹಬ್ಬದ ವಾತಾವರಣ ಸೃಷ್ಟಿಸಬೇಕು. ಅ.28ರಂದು ರಾಜ್ಯದಾದ್ಯಂತ ನಡೆಯುವ ಕೋಟಿ ಕಂಠ ಗೀತಗಾಯನ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ …
Read More »ಮಕ್ಕಳಲ್ಲಿ ದೇಶಾಭಿಮಾನ ಮೂಡಿಸಿ’
ಬೈಲಹೊಂಗಲ: ‘ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣನ ತ್ಯಾಗ, ಬಲಿದಾನ, ರಾಷ್ಟ್ರಪ್ರೇಮದ ಕುರಿತು ಮಕ್ಕಳಿಗೆ ತಿಳಿಸಿ, ಅವರಲ್ಲಿ ದೇಶಾಭಿಮಾನ ಬೆಳೆಸಬೇಕು’ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಪಟ್ಟಣದ ಕಿತ್ತೂರು ಚನ್ನಮ್ಮನ ಸಮಾಧಿ ಸ್ಥಳದಲ್ಲಿ ಶನಿವಾರ ವೀರಜ್ಯೋತಿ ವಾಹನಕ್ಕೆ ಪೂಜೆ ಸಲ್ಲಿಸುವ ಮೂಲಕ ಸ್ವಾಗತಿಸಿ ಅವರು ಮಾತನಾಡಿದರು. ‘ಇದೇ ಮೊದಲ ಬಾರಿಗೆ ರಾಜ್ಯದಾದ್ಯಂತ ಸಂಚರಿಸಿದ ಜ್ಯೋತಿ ವಾಹನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಬರುವ ದಿನಗಳಲ್ಲಿ ಕಿತ್ತೂರು ಉತ್ಸವ ರಾಷ್ಟ್ರ ಮಟ್ಟದಲ್ಲಿ …
Read More »ಇಂದಿನಿಂದ 3 ದಿನ `ಕಿತ್ತೂರು ಉತ್ಸವ’
ಬೆಳಗಾವಿ : ಇಂದಿನಿಂದ ಬೆಳಗಾವಿ ಜಿಲ್ಲೆಯ ಚನ್ನಮ್ಮನ್ನ ಕಿತ್ತೂರಿನಲ್ಲಿ ಮೂರು ದಿನಗಳ ಕಾಲ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದಲ್ಲಿ ಉತ್ಸವವಾಗಿ ಆಚರಿಸುತ್ತಿದೆ. ಇಂದು ಸಂಜೆ 7 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಿತ್ತೂರು ಉತ್ಸವ ಉದ್ಘಾಟಿಸಲಿದ್ದು, ಅಕ್ಟೋಬರ್ 23,24,25 ರಂದು ಕಾರ್ಯಕ್ರಮಗಳು ನಡೆಯಲಿವೆ. ಮೂರು ದಿನಗಳ ಉತ್ಸವದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ. ಕಿತ್ತೂರು ರಾಣಿ ಚನ್ನಮ್ಮ ಮುಖ್ಯ ವೇದಿಕೆ ಹಾಗೂ …
Read More »ವಿಧಾನಸಭೆ ಉಪಸಭಾಪತಿ, ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ
ಬೆಳಗಾವಿ: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಚಂದ್ರಶೇಖರ ಮಾಮನಿ ಅವರು ಅನಾರೋಗ್ಯದಿಂದ ಶನಿವಾರ ರಾತ್ರಿ ಕೊನೆಯುಸಿರೆಳೆದರು. ಅನಾರೋಗ್ಯದಿಂದ ಬಳಲುತ್ತಿದ್ದ ಅನಂದ ಮಾಮನಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನೇಕ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ರವಿವಾರ ಪಾರ್ಥಿವ ಶರೀರ ತವರು ಜಿಲ್ಲೆಗೆ ಆಗಮಿಸಲಿದೆ. ಶಾಸಕ ಆನಂದ ಮಾಮನಿ ನಿಧನದಿಂದ ಜಿಲ್ಲೆಯಾದ್ಯಂತ ಶೋಕ ಮಡುಗಟ್ಟಿದ್ದು, ಹಿರಿಯ ರಾಜಕೀಯ ನೇತಾರನನ್ನು ಕಳೆದುಕೊಂಡ ಜಿಲ್ಲೆ …
Read More »ಗೋಕಾಕ ತಾಲೂಕಿನ ಸಜ್ಜೆಹಾಳ ಗ್ರಾಮದಲ್ಲಿ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಸಜ್ಜೆಹಾಳ ಗ್ರಾಮದಲ್ಲಿ ಕಮಲಾದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ರಾಯಪ್ಪ ತಿರ್ಕಣ್ಣವರ, ಸಿದ್ದಪ್ಪ ಅವರಾದಿ, ವಾಸು ಗಲಗಲಿ, …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ
ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ ಗೋಕಾಕ : ಹಿರೇನಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸ್ಕೌಟ್ಸ್, ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರವನ್ನು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಮತ್ತು ಶಾಲಾ ಸುಧಾರಣಾ ಸಮಿತಿಯವರು ಉಪಸ್ಥಿತರಿದ್ದರು.
Read More »