Breaking News
Home / ಜಿಲ್ಲೆ / ಬೆಳಗಾವಿ (page 196)

ಬೆಳಗಾವಿ

ನೂತನವಾಗಿ ಆಯ್ಕೆಯಾದ ತಾಲೂಕಿನ ಪಿಎಸ್‌ಐ ಗಳಿಗೆ ಸನ್ಮಾನ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ

ಗೋಕಾಕ  ನಗರದ ಸಾಹುಕಾರ ಗೃಹ ಕಛೇರಿಯಲ್ಲಿ ಇಂದು 2021. 22ನೇ ಸಾಲಿನ ಪಿಎಸ್‌ಐ ಹುದ್ದೆಗೆ ಆಯ್ಕೆಯಾದ ಗೋಕಾಕ ತಾಲೂಕಿನ ಶಿವಾಪೂರ.ಕೊ ಗ್ರಾಮದ ಕು.ಕಿರಣ ಬಸಗೌಡ ಪಾಟೀಲಘಟಪ್ರಭಾ ಪಟ್ಟಣದ ಕು.ಚೈತ್ರಾ ಹಣಮಂತ ಗಿಡುರಮಮದಾಪೂರ ಗ್ರಾಮದ ಕು.ಕೀರ್ತಿ ನಿಂಗಪ್ಪ ಕಮತ ಇವರಿಗೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸನ್ಮಾನಿಸಿ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು, ಈ ಸಂದರ್ಭದಲ್ಲಿ ಭೀಮನಗೌಡ ಪೋಲೀಸಗೌಡರ,ಟಿ.ಆರ್ ಕಾಗಲ್,ಮಡ್ಡೆಪ್ಪ ತೋಳಿನವರ,ಬಿಇಓ ಜಿ.ಬಿ ಬಳಗಾರ,ಸುರೇಶ ಸನದಿ, ಲಕ್ಷ್ಮೀಕಾಂತ ಎತ್ತಿನಮನಿ …

Read More »

ಲೋಳಸುರ ಗ್ರಾಮದಲ್ಲಿ ಟ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಅಜ್ಜಿ ಸ್ಥಳದಲ್ಲಿ ಸಾವು..

ಗೋಕಾಕ ತಾಲೂಕಿನ ಲೋಳಸುರ ಗ್ರಾಮದಲ್ಲಿ ಟ್ರಾಕ್ಟರ್ ಹಾಯ್ದು ಮಹಿಳೆಯೊಬ್ಬರು ಸಾವಪ್ಪನ್ನಪಿದ ಘಟನೆ ನಡೆದಿದೆ.   ಗೋಕಾಕ ತಾಲೂಕಿನ ಲೋಳಸುರದಲ್ಲಿ ರಸ್ತೆ ದಾಟುವ ವೇಳೆ ಈ ಅವಘಡ ನಡೆದಿದ್ದು ಮಹಿಳೆ ಟ್ರಾಕ್ಟರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮಹಿಳೆಯ ಹೆಸರು ಯಲ್ಲವ್ವ ಕೊಡ್ಲಿವಾಡ .‌ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ‌ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಸೂಕ್ಷ್ಮ ಸ್ವಭಾವದ ವ್ಯಕ್ತಿತ್ವವುಳ್ಳ ಇಲ್ಲಿನ ಪಿಎಸ್‌ಐ ಶಿವಾನಂದ ಗುಡಗನಟ್ಟಿ, ಶಿಕ್ಷಣ ಹಾಗೂ ಸಂಗೀತ ಕ್ಷೇತ್ರದಲ್ಲಿ ಅಪಾರ ಆಸಕ್ತಿ

ಸವದತ್ತಿ: ಪೊಲೀಸ್ ಅರ್ಥ ರಕ್ಷಕ ಮತ್ತು ಕಾನೂನು ಪಾಲಕ. ಇವೆರಡರ ಜೊತೆಗೂ ಇಲ್ಲೊಂದು ಸಮಾಜಮುಖಿ ಕಾರ್ಯ ನಡೆದಿದೆ. ಸವದತ್ತಿ ಠಾಣೆಯ ಪೊಲೀಸ್ ಅಧಿಕಾರಿ ಕಾನೂನು ಪಾಲನೆ ಜೊತೆಗೆ ಸಂಗೀತ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಾವೂ ಸಹ ಮುಂದಿದ್ದೇವೆಂದು ನಿಖರವಾಗಿ ತೋರಿಸಿ ಸಾರ್ವಜನಿಕ ವಲಯದಲ್ಲಿ ಅತೀವ ಪ್ರಂಶಸೆಗೆ ಪಾತ್ರರಾಗಿದ್ದಾರೆ. ಸೂಕ್ಷ್ಮ ಸ್ವಭಾವದ ವ್ಯಕ್ತಿತ್ವವುಳ್ಳ ಇಲ್ಲಿನ ಪಿಎಸ್‌ಐ ಶಿವಾನಂದ ಗುಡಗನಟ್ಟಿ, ಶಿಕ್ಷಣ ಹಾಗೂ ಸಂಗೀತ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಬೆತ್ತದ ಜೊತೆಗೆ …

Read More »

ಪ್ರತಿ ಮನೆಯ್ಲೂ ಕನಿಷ್ಠ ಒಂದಾದರೂ ಹಸು ಸಾಕಬೇಕು. ಸರ್ವೋತ್ತಮ ಜಾರಕಿಹೊಳಿ

ಕಕಮರಿ (ಬೆಳಗಾವಿ ಜಿಲ್ಲೆ): ‘ಪ್ರತಿ ಮನೆಯ್ಲೂ ಕನಿಷ್ಠ ಒಂದಾದರೂ ಹಸು ಸಾಕಬೇಕು. ಹೈನುಗಾರಿಕೆ ಮಾಡಬೇಕು. ಹಾಲು ಉತ್ಪಾದಕರ ಸಂಘದಲ್ಲಿ ಸದಸ್ಯತ್ವ ಪಡೆದು ಸವಲತ್ತುಗಳನ್ನು ಗಳಿಸಿಕೊಂಡು ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಬೇಕು’ ಎಂದು ಗೋಕಾಕದ ಲಕ್ಷ್ಮಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಸಲಹೆ ನೀಡಿದರು. ಗ್ರಾಮದ ರಾಯಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.   ‘ಹಾಲು ಉತ್ಪಾದಕರ ಸಂಘದಿಂದ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅದನ್ನು …

Read More »

ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿದೇರ್ಶನ ನೀಡಿದ ಗೋಕಾಕ ಪಿಎಸ್ಐ ಕೆ. ವಾಲಿಕರ.

ಗೋಕಾಕ : ಪ್ರಥಮ ಬಾರಿಗೆ ಸ್ಥಳೀಯ ಶಹರ ಪೊಲೀಸ್ ಠಾಣೆಯ ಪಿಎಸ್ಐ ಕೆ.ವಾಲಿಕರ ಅವರು ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿರ್ದೇಶನ ನೀಡಿ ಎಲ್ಲರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಧ್ಯಮ ಪ್ರತಿನಿಧಿಗಳು ಪಿಎಸ್ಐ ಕೆ.ವಾಲಿಕರ ಅವರಿಗೆ ಸತ್ಕರಿಸಿ ,ಗೌರವಿಸಿದರು.   ಈ ಸಂದರ್ಭದಲ್ಲಿ ಕರವೇ ಮುಖಂಡ ಬಸವರಾಜ ಖಾನಪ್ಪನವರ , ಸಾದಿಕ ಹಲ್ಯಾಳ ,ಮಹಾನಿಂಗ ಕೆಂಚನ್ನವರ ಜಾಪರ ಶಾಬಾಶಖಾನ, ಬಸವರಾಜ ದೇಶನೂರ, ಜೇಮ್ಸ ವರ್ಗಿಸ, ಉಪಸ್ಥಿತರಿದ್ದರು.

Read More »

ಭೂಮಿಯ ಮೇಲೆ ಸಂಗೊಳ್ಳಿ ರಾಯಣ್ಣನ ಹೆಸರನ್ನು ಶಾಶ್ವತವಾಗಿಸಲು ಸರಕಾರ ಕ್ರಮ-ಸಚಿವ ಗೋವಿಂದ ಕಾರಜೋಳ್

ಬೆಳಗಾವಿ ನಗರದಲ್ಲಿ ಸಂಗೊಳ್ಳಿ ರಾಯಣ್ಣನ ಜಯಂತಿ ಪ್ರಯುಕ್ತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ನಗರದಲ್ಲಿ ಜನೇವರಿ 26 ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣನವರ ಜಯಂತಿ ಪ್ರಯುಕ್ತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಬಸವರಾಜ ಕಟ್ಟಿಮನಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ್ ಕಾರಜೋಳ್ ಭಾಗಿಯಾಗಿದ್ದರು.ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಾಡಿನಾದ್ಯಂತ ಸಂಗೊಳ್ಳಿ ರಾಯಣ್ಣನವರ ಹುತಾತ್ಮ ದಿನವನ್ನು ಆಚರಿಸುತ್ತಿದ್ದೇವ. ರಾಯಣ್ಣ ದೇಶಕ್ಕಾಗಿ, ಹಾಗೂ …

Read More »

ಬೆಳಗಾವಿ ಪಾಲಿಕೆ: ಮೇಯರ್-ಸಾಮಾನ್ಯ ಮಹಿಳೆ, ಉಪಮೇಯರ್-ಹಿಂದುಳಿಗ ವರ್ಗ ಬ ಮಹಿಳೆ, ಮೀಸಲಾತಿ ಪ್ರಕಟ

ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಮೀಸಲಾತಿ ಘೋಷಣೆ ಆಗಿದೆ:ಮೇಯರ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದರೆ, ಉಪಮೇಯರ್ ಸ್ಥಾನ ಹಿಂದುಳಿಗ ವರ್ಗ ಬ ಮಹಿಳೆಗೆ ಮೀಸಲಾಗಿದ್ದು. ಪಾಲಿಕೆ ಚುನಾವಣೆ ಮುಗಿದ ಹಲವು ತಿಂಗಳು ಕಳೆದರೂ ಮೇಯರ್, ಉಪಮೇಯರ್ ಆಯ್ಕೆಗೆ ಮುಹೂರ್ತ ಕೂಡಿ ಬಂದಿರಲಿಲ್ಲ. ಆದರೆ ಇದೀಗ ಮೀಸಲಾತಿ ಘೋಷಣೆ ಆಗಿದ್ದು. ಬಿಜೆಪಿಯಲ್ಲಿಯೇ ಯಾರಿಗೆ ಮೇಯರ್, ಉಪಮೇಯರ್ ಭಾಗ್ಯ ಸಿಗುತ್ತದೆ ಎಂದು ಕಾದು ನೋಡಬೇಕಿದೆ.

Read More »

ರಮೇಶ್ ಜಾರಕಿಹೊಳಿಯವರು ಒಬ್ಬ ಪವರ್ ಫುಲ್ ನಾಯಕರು ಎಷ್ಟು ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರಬಹುದು- ಗೋವಿಂದ್ ಕಾರಜೋಳ್

ರಮೇಶ್ ಜಾರಕಿಹೊಳಿ ಒಬ್ಬ ಸಮರ್ಥ ನಾಯಕರು. ಅವರು ಬಿಜೆಪಿಗೆ ಎಷ್ಟು ಜನರನ್ನು ಬೇಕಾದರೂ ಕರೆ ತರಬಹುದು. ಅವರಲ್ಲಿ ಆ ಶಕ್ತಿ ಇದೆ. ಅವರು ಎಷ್ಟು ಜನ ಶಾಸಕರನ್ನು ಬೇಕಾದರೂ ಕರೆತರಬಹುದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.ಬೆಳಗಾವಿಯಲ್ಲಿ ಗಣರಾಜ್ಯೋತ್ಸವ ಸಂಬರ್ಭದಲ್ಲಿ ಧ್ವಜಾರೋಹಣದ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳರವರು, ರಮೇಶ್ ಜಾರಕಿಹೊಳಿ ಒಬ್ಬ ಹಿರಿಯ ರಾಜಕಾರಣಿಗಳು. ಮಾಜಿ ಮಂತ್ರಿ ಹಾಗೂ ಅನುಭವಿ ರಾಜಕಾರಣಿ. ಅವರ …

Read More »

ಮಕ್ಕಳಿಗಾಗಿ 882 ಹಾಸಿಗೆಗಳನ್ನು ಮೀಸಲು

ಬೆಳಗಾವಿ: ಕೋವಿಡ್ 3ನೇ ಅಲೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಕ್ಕಳಿಗಾಗಿ 882 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಔಷಧಿಗಳೂ ಲಭ್ಯ ಇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಜ.1ರಿಂದ ಆರಂಭವಾದ ಅಲೆ ವೇಗವಾಗಿ ಹರಡುತ್ತಿದೆ. ನಿಯಂತ್ರಣಕ್ಕೆ ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 1,05,233 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ಸಿಡಿದ ಕೊರೊನಾ ಬಾಂಬ್: ಇಂದು 977 ಪಾಸಿಟಿವ್, 4 ಸಾವು

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಹಾಮಾರಿ ಕೊರೊನಾ ಮತ್ತೆ ತನ್ನ ಅಟ್ಟಹಾಸ ಮೆರೆದಿದೆ. ಇಂದು ಹೊಸದಾಗಿ 977 ಹೊಸ ಕೊರೊನಾ ಕೇಸ್‍ಗಳು ಪತ್ತೆಯಾಗಿವೆ. ಅದೇ ರೀತಿ ನಾಲ್ವರು ಸಾವನ್ನಪ್ಪಿದ್ದಾರೆ.ಮಂಗಳವಾರ ಬೆಳಗಾವಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಜಿಲ್ಲೆಯಲ್ಲಿ 977 ಹೊಸ ಕೇಸ್‍ಗಳು ಕಾಣಿಸಿಕೊಂಡಿವೆ. ಅದೇ ರೀತಿ ಇಂದು ನಾಲ್ವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿಯ 36 ವರ್ಷ ವ್ಯಕ್ತಿ, 64 ವರ್ಷದ ವೃದ್ಧ, 73 …

Read More »