ಬೆಳಗಾವಿ: ಇಲ್ಲಿನ ಮಾರುತಿ ನಗರದಿಂದ ಶಿಂಧೊಳ್ಳಿ ಕ್ರಾಸ್‌ವರೆಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ₹21.82 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ರಾಯಚೂರು-ಬಾಚಿ ರಾಜ್ಯ ಹೆದ್ದಾರಿಯಲ್ಲಿನ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಅನಿಲ ಬೆನಕೆ ಭೂಮಿಪೂಜೆ ನೆರವೇರಿಸಿದರು. ಬಳಿಕ ಅವರು ಮಾತನಾಡಿ, ‘ಇದು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಗರದ ಮುಖ್ಯರಸ್ತೆಯಾಗಿದೆ. ಜನರಿಗೆ ಅನುಕೂಲವಾಗಲೆಂದು ಇದನ್ನು ಅಭಿವೃದ್ಧಿಪಡಿಸುತ್ತಿದ್ದು, ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ನಿಗದಿತ ಕಾಲಮಿತಿಯಲ್ಲಿ …
Read More »194 ಕೋಟಿ ರೂ. ವೆಚ್ಚದ ಕೌಜಲಗಿ ಭಾಗದ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ರೈತರಿಗೆ ವರದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೌಜಲಗಿ ಭಾಗದ ರೈತರ ಬಹು ವರ್ಷಗಳ ಬೇಡಿಕೆಯಾಗಿರುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈತರ ಎಫ್.ಐ.ಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಚಿಕ್ಕ ನೀರಾವರಿ ಇಲಾಖೆಯಿಂದ 162 ಕೋಟಿ ರೂ. ಮೊತ್ತದ ಕಲ್ಮಡ್ಡಿ ಏತ ನೀರಾವರಿ ಯೋಜನೆಯ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದೆ. ರೈತರ ಜಮೀನುಗಳಿಗೆ ಹೊಲಗಾಲುವೆ ಮೂಲಕ ನೀರು …
Read More »ತಡರಾತ್ರಿ ಹಿಂಡಲಗಾ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 3 ತಿಂಗಳ ಹಿಂದೆ ಪೋಕ್ಸೋ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿತ್ತು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದ ಮಂಜುನಾಥ ಮಹಾಂತೇಶ ನಾಯ್ಕರ (20) ನೇಣಿಗೆ ಶರಣಾಗಿರುವ ಕೈದಿ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕಳೆದ ಮೂರು ತಿಂಗಳಿಂದಲೂ ಆರೋಪಿ ಹಿಂಡಲಗಾ ಜೈಲಿನಲ್ಲಿದ್ದನು. …
Read More »ಅಥಣಿಯಲ್ಲಿ ಭಾರಿ ಮಳೆಗೆ ಕೊಚ್ಚಿಹೋದ ಸೇತುವೆ
ಅಥಣಿ(ಬೆಳಗಾವಿ): ಕಳೆದ ಎರಡು ದಿನದ ಹಿಂದೆ ಸುರಿದ ಧಾರಾಕಾರ ಮಳೆಗೆ ತೇಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು, ಶಾಲೆ ಮಕ್ಕಳು ಜೀವ ಪಣಕ್ಕಿಟ್ಟು ಹಳ್ಳ ದಾಟುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೇಲಸಂಗ- ಬಿಜ್ಜರಗಿ ರಸ್ತೆಯ ಡೋಣಿ ಹಳ್ಳಕ್ಕೆ ನಿರ್ಮಿಸಿದ ಸೇತುವೆ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು, ತೋಟದ ಕೆಲಸಕ್ಕೆ ಹೋದ ರೈತರು ಹಾಗೂ ಶಾಲೆ ಮಕ್ಕಳು ಹಗ್ಗ ಹಿಡಿದು ಹಳ್ಳ …
Read More »ಐಸಿಯುನಲ್ಲಿದ್ದ ಅಜ್ಜಿಯನ್ನು ಸಬ್ ರಿಜಿಸ್ಟರ್ ಕಚೇರಿಗೆ ಕರೆತಂದು ಆಸ್ತಿ ಪತ್ರಕ್ಕೆ ಸಹಿ: ಬೆಳಗಾವಿಯಲ್ಲೊಂದು ಘಟನೆ
ಬೆಳಗಾವಿ: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ 80 ವರ್ಷದ ವೃದ್ಧೆಯನ್ನೇ ಸಬ್ ರಿಜಿಸ್ಟರ್ ಕಚೇರಿಗೆ ಕರೆಯಿಸಿಕೊಂಡು ಉಪನೋಂದಣಾಧಿಕಾರಿಗಳು ಸಹಿ ಮಾಡಿಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ನಿವಾಸಿ ಮಹಾದೇವಿ ಅಗಸಿಮನಿ (79) ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ 80 ವರ್ಷದ ವೃದ್ಧೆ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿರೇಬಾಗೆವಾಡಿ ಗ್ರಾಮದಲ್ಲಿ ಮಹಾದೇವಿ ಹೆಸರಿನಲ್ಲಿ 2 ಎಕರೆ 35 ಗುಂಟೆ ಜಮೀನಿದ್ದು, ಆ ಜಮೀನನ್ನು ಮಕ್ಕಳಾದ …
Read More »ಕಿತ್ತೂರು ಉತ್ಸವಕ್ಕೆ : ₹ 2 ಕೋಟಿ ನೆರವು- ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವ
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಈ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಣೆ ಮಾಡಿದ ಬಳಿಕ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 2 ಕೋಟಿ ಅನುದಾನ ನೀಡಿದೆ. ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವವಾಗಿಯೂ ಆಚರಿಸಲಾಗುತ್ತಿದೆ. ಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಮಹಾಂತೇಶ ದೊಡ್ಡಗೌಡ್ರ, ಅ.23, 24, 25ರಂದು ವೈಭವ ಮರುಕಳಿಸಲಿದೆ. ಅ.2ರಂದು ಬೆಂಗಳೂರಿನಿಂದ ಹೊರಡುವ ವೀರಜ್ಯೋತಿ ಯಾತ್ರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ’ …
Read More »ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ
ಗೋಕಾಕ : ಸದ್ದಿಲ್ಲದೆ, ಯಾವುದೇ ರೀತಿಯ ಪ್ರಚಾರ ಬಯಸದೆ ನಿಸ್ವಾರ್ಥ ಸೇವೆಯಿಂದ ಜನತೆಯ ಮನದಲ್ಲಿ ಮನೆ ಮಾಡಿದ್ದಾರೆ ಸಾಹುಕಾರ್ ಮನೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ. ಹೌದು ಸಂತೋಷ ಜಾರಕಿಹೊಳಿ ಅವರು ಸಾಕಷ್ಟು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅನೇಕ ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ಮಾಡಿದ್ದಾರೆ. ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …
Read More »ನಿಪ್ಪಾಣಿ: ಡೆಂಗಿಯಿಂದ ಯುವಕ ಸಾವು
ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಡೆಂಗಿಯಿಂದ ಬಳಲುತ್ತಿದ್ದ ತಾಲ್ಲೂಕಿನ ಕಾರದಗಾ ಗ್ರಾಮದ ಯುವಕ ಶುಕ್ರವಾರ ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರೇಮ್ ಸಂಜಯ ಕಮತೆ (19) ಸಾವನ್ನಪ್ಪಿದವರು. ಬಿಎಸ್ಪಿ ಓದುತ್ತಿದ್ದ ಪ್ರೇಮ್ ಎಂಟು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದರು. ಗಡಿಗೆ ಹೊಂದಿಕೊಂಡ ಮಹಾರಾಷ್ಟ್ರದ ಇಚಲಕರಂಜಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಡೆಂಗಿ ತಗಲಿದ್ದು ಖಚಿತವಾಗಿತ್ತು. ಶುಕ್ರವಾರ ಆರೋಗ್ಯ ಹಠಾತ್ ಕ್ಷೀಣಿಸಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು ಕುಟುಂಬದ ಮೂಲಗಳು ತಿಳಿಸಿವೆ. ಯುವಕನ ಸಾವಿನಿಂದ ಗ್ರಾಮದಲ್ಲಿ ಡೆಂಗಿ ಭೀತಿ …
Read More »ರಾಯಬಾಗ :A.T.M.ಕಳವು ಯತ್ನ: ಆರೋಪಿ ಬಂಧನ
ರಾಯಬಾಗ: ತಾಲ್ಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ಎಟಿಎಂ ಒಡೆಯಲು ಯತ್ನಿಸಿದ ಆರೋಪಿಯನ್ನು ಎಂಟು ತಿಂಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಬಾವಾನಸೌದತ್ತಿ ನಿವಾಸಿ ಖಾಜಾಸಾಬ್ ಬಾಬಾಸಾಬ್ ಮುಜಾವರ (25) ಬಂಧಿತ. 2022ರ ಫೆಬ್ರುವರಿ 4ರಂದು ರಾತ್ರಿ ಎಟಿಎಂ ಮುರಿದು ಕಳ್ಳತನಕ್ಕೆ ಯತ್ನಿಸಿದ ಯುವಕ ತಲೆ ಮರೆಸಿಕೊಂಡಿದ್ದ. ಕಬ್ಬಿಣದ ರಾಡ್ ಬಳಸಿ ಎಟಿಎಂ ಮುರಿಯಲು ಯತ್ನಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಆದರೆ, ಆರೋಪಿ ಗುರುತು ಸರಿಯಾಗಿ ಪತ್ತೆಯಾಗಿರಲಿಲ್ಲ. ಪ್ರಕರಣದ ತನಿಖೆ ಕೈಗೊಂಡ ರಾಯಬಾಗ …
Read More »ಯಲ್ಲಮ್ಮನ ಗುಡ್ಡದ ಶ್ರೀ ರೇಣುಕಾದೇವಿ ದೇಗುಲಕ್ಕೆ ಸಿಎಂ ಪತ್ನಿ ಚನ್ನಮ್ಮ ಬೊಮ್ಮಾಯಿ
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪತ್ನಿ ಚನ್ನಮ್ಮ ಬೊಮ್ಮಾಯಿ ಅವರು ನವರಾತ್ರಿ ನಿಮಿತ್ತ ಮನೆ ದೇವತೆ ಸವದತ್ತಿ ಶ್ರೀ ರೇಣುಕಾ ದೇವಿಯ ದರ್ಶನ ಪಡೆದರು. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಘಟ್ಟಕ್ಕೆ ಎಣ್ಣೆ ಸಮರ್ಪಿಸಿದರು. ಬಳಿಕ ಭಕ್ತಿ ಭಾವದಿಂದ ರೇಣುಕಾದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ರೇಣುಕಾದೇವಿ ಯಲ್ಲಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ದೇವತೆ. ಹಾಗಾಗಿ ಹುಬ್ಬಳ್ಳಿಯಿಂದ ಖಾಸಗಿ ವಾಹನದಲ್ಲಿ ಬಂದು ಚನ್ನಮ್ಮ ಬೊಮ್ಮಾಯಿ ದೇವಿ ದರ್ಶನ ಪಡೆದರು. ಈ …
Read More »