ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು, ಬೈಕ್ ಹಾಗೂ ಲಾರಿ ನಡುವೆ ಭೀಕರ ಸರಣಿ ಅಪಘಾತವಾಗಿದ್ದು, ಓರ್ವ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ಎರಡು ಕಾರು, ಟ್ರಕ್ ಹಾಗೂ 4ಕ್ಕೂ ಹೆಚ್ಚು ಬೈಕ್ಗಳ ನಡುವೆ ಸರಣಿ ಅಪಘಾತವಾಗಿದೆ. ಇದಕ್ಕೂ ಮೊದಲು ಮೊಲ್ಯಾಸೀಸ್ ತುಂಬಿದ್ದ ಟ್ಯಾಂಕರ್ ನಿಂದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಮೊಲ್ಯಾಸೀಸ್ ಸೋರಿಕೆಯಾಗಿದೆ. ಈ …
Read More »200 ವರ್ಷ ಇತಿಹಾಸ ಇರುವ ದೇವನಾಥ ಮಂದಿರ ಕಾಮಗಾರಿ ಶಾಸಕರಿಂದ ಪೂಜೆ
ಅಥಣಿ ಮತಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಮಟಳ್ಳಿಯವರಿಂದ ಹಲ್ಯಾಳ ಗ್ರಾಮದಲ್ಲಿ ಸುಮಾರು 12ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ದೇವನಾಥ ದೇವಸ್ಥಾನ ಕಾಮಗಾರಿ ಭೂಮಿ ಪೂಜೆ ಹಾಗೂ 5 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ಹನುಮಾನ ದೇವಸ್ಥಾನದ ಸಮುದಾಯ ಭವನಗಳ ಕಾಮಗಾರಿ ಪೂಜೆಯನ್ನು ನೆರವೇರಿಸಲಾಯಿತು.. ಈ ಸಂದರ್ಭದಲ್ಲಿ ಶ್ರೀ ಮ. ನಿ ಪ್ರ ಗುರುಸಿದ್ದೆಶ್ವರ ಮಹಾಸ್ವಾಮಿಗಳು …
Read More »ಇಂಚಲ ಗ್ರಾಮದ ಪ್ರಸಿದ್ಧ ಅಂಬಾ ಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಷ್ಟಮಿ ಕಾರ್ಯಕ್ರಮಗಳು ವೈಭವದಿಂದ ನೆರವೇರಿದವು.
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ನವರಾತ್ರಿ ಮಹೋತ್ಸವ ಅಂಗವಾಗಿ ಸಮೀಪದ ಇಂಚಲ ಗ್ರಾಮದ ಪ್ರಸಿದ್ಧ ಅಂಬಾ ಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಷ್ಟಮಿ ಕಾರ್ಯಕ್ರಮಗಳು ವೈಭವದಿಂದ ನೆರವೇರಿದವು. ಹಲವಾರು ಮಹಿಳೆಯರು ಉಡಿ ತುಂಬುವ ಸಂಪ್ರದಾಯದಲ್ಲಿ ಪಾಲ್ಗೊಂಡರು. ಇಂಚಲ ಶಿವಯೋಗೀಶ್ವರ ಸಾಧು ಸಂಸ್ಥಾನಮಠದ ಪೀಠಾಧಿಪತಿ ಡಾ.ಶಿವಾನಂದ ಭಾರತಿ ಸ್ವಾಮೀಜಿ ಮಾರ್ಗದರ್ಶನದಲ್ಲಿ ದೇವಸ್ಥಾನ ಆಡಳಿತ ಮಂಡಳಿ, ಸಕಲ ವ್ಯವಸ್ಥೆ ಕಲ್ಪಿಸಿದರು. ಪರಮೇಶ್ವರಿ ಮೂರ್ತಿಗೆ ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಯಿತು. ಮಹಿಳೆಯರು ಆರತಿ ತಟ್ಟೆ ಹಿಡಿದು, ಕುಂಕುಮ, …
Read More »ದುರ್ಗಾಮಾತಾ ದೌಡ್ ಸ್ವಾಗತಿಸಿ, ಭಾವೈಕ್ಯ ಮೆರೆದ ಮುಸ್ಲಿಮರು
ಬೆಳಗಾವಿ: ನವರಾತ್ರಿ ಅಂಗವಾಗಿ ಶಿವ ಪ್ರತಿಷ್ಠಾನ ಹಿಂದೂಸ್ಥಾನ ವತಿಯಿಂದ 8ನೇ ದಿನವಾದ ಸೋಮವಾರ ದುರ್ಗಾಮಾತಾ ದೌಡ್ ನಡೆಯಿತು. ಇಲ್ಲಿನ ಕ್ಯಾಂಪ್ ಪ್ರದೇಶದಲ್ಲಿ ಮುಸ್ಲಿಮರು ಇದಕ್ಕೆ ಸ್ವಾಗತ ಕೋರಿ, ಭಾವೈಕ್ಯ ಸಂದೇಶ ಸಾರಿದರು. ದುರ್ಗಾಮಾತಾ ದೌಡ್ ಅಂಗವಾಗಿ ಕ್ಯಾಂಪ್‍ನ ಮಾರ್ಗಗಳಲ್ಲಿ ರಂಗೋಲಿ ಚಿತ್ತಾರ ಅರಳಿತ್ತು. ಯುವಕ-ಯುವತಿಯರು, ಮಕ್ಕಳು ಸಾಂಪ್ರದಾಯಿಕ ದಿರಿಸಿನಲ್ಲಿ ಗಮನ ಸೆಳೆದರು. ಬಾಲಕಿಯೊಬ್ಬಳು ಜೀಜಾಮಾತಾ ವೇಷ ಧರಿಸಿ, ಶಿವಾಜಿ ಮಹಾರಾಜರನ್ನು ಸ್ತುತಿಸಿದಳು. ದಂಡು ಮಂಡಳಿ ಮಾಜಿ ಉಪಾಧ್ಯಕ್ಷ ಸಾಜೀದ್ ಶೇಖ್ …
Read More »ಗಾಂಧಿ ಜಯಂತಿ ನಿಮಿತ್ತ ಶಾಂತಾಯಿ ವೃದ್ಧಾಶ್ರಮದ ಹಿರಿಜಿವಗಳಿಗೆ ಉಪಹಾರ ವ್ಯವಸ್ಥೆ ಮಾಡಿದ ಬಸವರಾಜ್ ಯಳ್ಳೂರು ಕರ
ಬೆಳಗಾವಿ : ಗಾಂಧಿ ಜಯಂತಿ ನಾಡಿನ ಪಿತಾಮಹ ಗಾಂಧಿ ಇಂದು ಇಡೀ ನಮ್ಮ ರಾಷ್ಟ್ರವೇ ಈ ಒಂದು ದಿನವನ್ನ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತೆ . ಇಂದು ಸುಮಾರು ಜನ ಸುಮಾರು ಕೆಲಸ ಗಳನ್ನಾ ಮಾಡುತ್ತಾರೆ ಆದ್ರೆ ಇಂದು ಸುಮಾರು ಸಮಾಜ ಸೇವೆಗಳನ್ನು ಮಾಡಿದರು ತೆರೆ ಮೇಲೆ ಬರದ ಒಬ್ಬ ವ್ಯಕ್ತಿಯ ಪರಿಚಯ ವನ್ನಾ ಮಾಡಿ ಕೊಡ್ತೇವೆ ಇಂದು ಕಣಬರಗಿ ಮೂಲದ ಬಸವರಾಜ ಯಳ್ಳೂರು ಕರ ಅವರು ಶಂತಾಯಿ …
Read More »ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿ: ಬೆನಕೆ
ಬೆಳಗಾವಿ: ಇಲ್ಲಿನ ಮಾರುತಿ ನಗರದಿಂದ ಶಿಂಧೊಳ್ಳಿ ಕ್ರಾಸ್‌ವರೆಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ₹21.82 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ರಾಯಚೂರು-ಬಾಚಿ ರಾಜ್ಯ ಹೆದ್ದಾರಿಯಲ್ಲಿನ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಅನಿಲ ಬೆನಕೆ ಭೂಮಿಪೂಜೆ ನೆರವೇರಿಸಿದರು. ಬಳಿಕ ಅವರು ಮಾತನಾಡಿ, ‘ಇದು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಗರದ ಮುಖ್ಯರಸ್ತೆಯಾಗಿದೆ. ಜನರಿಗೆ ಅನುಕೂಲವಾಗಲೆಂದು ಇದನ್ನು ಅಭಿವೃದ್ಧಿಪಡಿಸುತ್ತಿದ್ದು, ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ನಿಗದಿತ ಕಾಲಮಿತಿಯಲ್ಲಿ …
Read More »194 ಕೋಟಿ ರೂ. ವೆಚ್ಚದ ಕೌಜಲಗಿ ಭಾಗದ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ರೈತರಿಗೆ ವರದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೌಜಲಗಿ ಭಾಗದ ರೈತರ ಬಹು ವರ್ಷಗಳ ಬೇಡಿಕೆಯಾಗಿರುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈತರ ಎಫ್.ಐ.ಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಚಿಕ್ಕ ನೀರಾವರಿ ಇಲಾಖೆಯಿಂದ 162 ಕೋಟಿ ರೂ. ಮೊತ್ತದ ಕಲ್ಮಡ್ಡಿ ಏತ ನೀರಾವರಿ ಯೋಜನೆಯ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದೆ. ರೈತರ ಜಮೀನುಗಳಿಗೆ ಹೊಲಗಾಲುವೆ ಮೂಲಕ ನೀರು …
Read More »ತಡರಾತ್ರಿ ಹಿಂಡಲಗಾ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 3 ತಿಂಗಳ ಹಿಂದೆ ಪೋಕ್ಸೋ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿತ್ತು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದ ಮಂಜುನಾಥ ಮಹಾಂತೇಶ ನಾಯ್ಕರ (20) ನೇಣಿಗೆ ಶರಣಾಗಿರುವ ಕೈದಿ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕಳೆದ ಮೂರು ತಿಂಗಳಿಂದಲೂ ಆರೋಪಿ ಹಿಂಡಲಗಾ ಜೈಲಿನಲ್ಲಿದ್ದನು. …
Read More »ಅಥಣಿಯಲ್ಲಿ ಭಾರಿ ಮಳೆಗೆ ಕೊಚ್ಚಿಹೋದ ಸೇತುವೆ
ಅಥಣಿ(ಬೆಳಗಾವಿ): ಕಳೆದ ಎರಡು ದಿನದ ಹಿಂದೆ ಸುರಿದ ಧಾರಾಕಾರ ಮಳೆಗೆ ತೇಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು, ಶಾಲೆ ಮಕ್ಕಳು ಜೀವ ಪಣಕ್ಕಿಟ್ಟು ಹಳ್ಳ ದಾಟುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೇಲಸಂಗ- ಬಿಜ್ಜರಗಿ ರಸ್ತೆಯ ಡೋಣಿ ಹಳ್ಳಕ್ಕೆ ನಿರ್ಮಿಸಿದ ಸೇತುವೆ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು, ತೋಟದ ಕೆಲಸಕ್ಕೆ ಹೋದ ರೈತರು ಹಾಗೂ ಶಾಲೆ ಮಕ್ಕಳು ಹಗ್ಗ ಹಿಡಿದು ಹಳ್ಳ …
Read More »ಐಸಿಯುನಲ್ಲಿದ್ದ ಅಜ್ಜಿಯನ್ನು ಸಬ್ ರಿಜಿಸ್ಟರ್ ಕಚೇರಿಗೆ ಕರೆತಂದು ಆಸ್ತಿ ಪತ್ರಕ್ಕೆ ಸಹಿ: ಬೆಳಗಾವಿಯಲ್ಲೊಂದು ಘಟನೆ
ಬೆಳಗಾವಿ: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ 80 ವರ್ಷದ ವೃದ್ಧೆಯನ್ನೇ ಸಬ್ ರಿಜಿಸ್ಟರ್ ಕಚೇರಿಗೆ ಕರೆಯಿಸಿಕೊಂಡು ಉಪನೋಂದಣಾಧಿಕಾರಿಗಳು ಸಹಿ ಮಾಡಿಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ನಿವಾಸಿ ಮಹಾದೇವಿ ಅಗಸಿಮನಿ (79) ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ 80 ವರ್ಷದ ವೃದ್ಧೆ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿರೇಬಾಗೆವಾಡಿ ಗ್ರಾಮದಲ್ಲಿ ಮಹಾದೇವಿ ಹೆಸರಿನಲ್ಲಿ 2 ಎಕರೆ 35 ಗುಂಟೆ ಜಮೀನಿದ್ದು, ಆ ಜಮೀನನ್ನು ಮಕ್ಕಳಾದ …
Read More »
Laxmi News 24×7