Breaking News
Home / ಜಿಲ್ಲೆ / ಬೆಳಗಾವಿ (page 202)

ಬೆಳಗಾವಿ

ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ವಿರೋಧಿಸಿ

ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ ಮೂಡಲಗಿ : ತಾಲೂಕಿನ ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಬೆಲ್ಲದ ಬಾಗೇವಾಡಿಯ ವಿಶ್ವರಾಜ ಶುಗರ್ಸ್‍ನಿಂದ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುವುದನ್ನು ವಿರೋಧಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ. ಮಂಗಳವಾರದಂದು ವಡೇರಹಟ್ಟಿ ಗ್ರಾಮದ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಇಂದು ತಹಶೀಲ್ದಾರ ಕಛೇರಿಗೆ ಆಗಮಿಸಿ ಕಾರ್ಖಾನೆಯ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆಹಾರ ಮತ್ತು ನಾಗರೀಕ ಸರಬರಾಜು …

Read More »

ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ

ಬೆಳಗಾವಿ: ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಸದನದಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿಯವರು ಮಾತನಾಡುತ್ತ, ಈ ಬಗ್ಗೆ ಹೇಳಿದರು. ಇದೇ ವೇಳೆ ಅವರು ಮಾತನಾಡಿ, ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ವಿರೂಪಗೊಳಿಸಿದವರು ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಂತ ಬಂಧಿತರ ವಿರುದ್ಧ ಗುಂಡಾ ಕಾಯ್ದೆ ಹಾಗೂ ದೇಶದ್ರೋಹ ಕಾಯ್ದೆಗಳಡಿಯಲ್ಲಿ ಕೇಸ್ ದಾಖಲಿಸಿ, ತನಿಖೆಯ ಮೂಲಕ …

Read More »

ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

    ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನೇವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ತಾಲೂಕಿನ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೌಜಲಗಿ ಮತ್ತು ಸುತ್ತಮುತ್ತಲಿನ ರೈತರ ಜಮೀನುಗಳಿಗೆ ನೀರು ಹರಿಸುವ ಮೂಲಕ ಈ ಭಾಗವನ್ನು ಸಂಪೂರ್ಣ ನೀರಾವರಿ ಪ್ರದೇಶವನ್ನಾಗಿ ಮಾಡುವ …

Read More »

ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ

ಗೋಕಾಕ: ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ ಅವರನ್ನು ಇಲ್ಲಿಯ ಶ್ರೀ ಶಿವ ಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಪದಾಧಿಕಾರಿಗಳು ಸತ್ಕರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು-ಉಪಾಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಇದ್ದರು. ಕಲಾವಿದರಿಗೆ ಬೆನ್ನೆಲುಬಾಗಿ ನಿತ್ತ : ಸತೀಶ ಜಾರಕಿಹೊಳಿ….  

Read More »

ಮಧ್ಯರಾತ್ರಿ ದುಷ್ಕರ್ಮಿಗಳು ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಭಗ್ನಗೊಳಿಸಿದ್ದಾರೆ.

ಇಲ್ಲಿಯ ಆನಗೋಳದಲ್ಲಿ ಇಡಲಾಗಿದ್ದ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಮಧ್ಯರಾತ್ರಿ ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. ಇದರಿಂದಾ ಆಕ್ರೋಶಗೊಂಡ ರಾಯಣ್ಣ ಅಭಿಮಾನಿಗಳು ಪೊಲೀಸ್ ಠಾಣೆ ಎದುರು ಜಮಾಯಿಸಿದ್ದಾರೆ. ರಾತ್ರಿ 2.30ರ ಹೊತ್ತಿಗೆ ಬಂದ ನಾಲ್ವರು ದುಷ್ಕರ್ಮಿಗಳು ಮೂರ್ತಿಯ ಡಾಲ್ ಮುರಿದಿದ್ದು, ಖಡ್ಗವನ್ನೂ ಕಿತ್ತು ಹಾಕಿದ್ದಾರೆ. ರಾಯಣ್ಣ ಮುಖದ ಮೇಲೆಲ್ಲ ರಾಡ್ ನಿಂತ ಡ್ಯಾಮೇಜ್ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುದ್ದಿ ಹರಡುತ್ತಿದ್ದಂತೆ ಅಲ್ಲಿಯ ಜನ ಸೇರತೊಡಗಿದರು. ಈಗ ಅಲ್ಲಿನ ಯುವಕರು ಟಿಳಕವಾಡಿ ಪೊಲೀಸ್ …

Read More »

ಗೋಕಾಕ: ಇಲ್ಲಿಯ ಟಿಎಪಿಸಿಎಮ್‍ಎಸ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅಶೋಕ ನಾಯಿಕ ಅವರು ಮಾತನಾಡುತ್ತಿರುವುದು.

ಗೋಕಾಕ: ಇಲ್ಲಿಯ ಟಿಎಪಿಸಿಎಮ್‍ಎಸ್ ಪ್ರಸಕ್ತ ಸಾಲಿನಲ್ಲಿ 39.17 ಕೋಟಿ ರೂಗಳ ವಹಿವಾಟು ನಡೆಸಿ 60.53 ಲಕ್ಷ ಲಾಭವನ್ನು ಗಳಿಸಿ ಪ್ರಗತಿ ಪಥದತ್ತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಅಶೋಕ ನಾಯಿಕ ಹೇಳಿದರು. ಗುರುವಾರದಂದು ನಗರದ ಸಂಘದ ಸಭಾ ಭವನದಲ್ಲಿ ಜರುಗಿದ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸಂಘವು ಸದಸ್ಯರಿಗೆ ಹಲವಾರು ಸೌಲಭ್ಯಗಳನ್ನು ನೀಡಿ ಅವರ ಆರ್ಥಿಕ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಇನ್ನೂ ಮುಂದೆಯೂ ಸಂಘದ ಹಿತೈಸಿಗಳು …

Read More »

ಕನ್ನಡ ದ್ವಜ ಸುಟ್ಟು ಹಾಕಿದ ಎಂ.ಇ.ಎಸ್ ಪುಂಡರ ವಿರುದ್ಧ ಸೂಕ್ತ ಕ್ರಮಕ್ಕೆ ಕನ್ನಡಪರ ಸಂಘಟನೆಗಳ ವತಿಯಿಂದ ಆಗ್ರಹ*

ಘಟಪ್ರಭಾ; ನಾಡ ದ್ರೋಹಿ ಎಂ.ಇ.ಎಸ್ ಸಂಘಟನೆಯನ್ನು ನಿಷೇದಿಸುವಂತೆ ಹಾಗೂ ಕೊಲ್ಹಾಪುರದಲ್ಲಿ ಕನ್ನಡ ದ್ವಜ ಸುಟ್ಟಂತಹ ನಾಡ ದ್ರೋಹಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಘಟಪ್ರಭಾ ನಗರದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಮೃತ್ಯುಂಜಯ ವೃತ್ತದಲ್ಲಿ ಟೈರಗೆ ಬೆಂಕಿ ಹಚ್ಚಿ ನಾಡ ದ್ರೋಹಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ, ಕರ್ನಾಟಕ ರಕ್ಷಣಾ ವೇದಿಕೆ ಸಂತೋಷ …

Read More »

ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ಯ ಪೂರ್ವಭಾವಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಪಟ್ಟಣ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ವಾರ್ಡುವಾರು ಸಭೆಗಳನ್ನು ನಡೆಸಿ ನಾಳೆಯೊಳಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಸೋಮವಾರದಂದು ಮಾರುತಿ ದೇವಸ್ಥಾನದ ಸಭಾ ಭವನದಲ್ಲಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ಯ ಜರುಗಿದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಸಮುದಾಯದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದರು. ಇದೇ ತಿಂಗಳ 27 ರಂದು …

Read More »

ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎಂಬುವುದು ಯಾರಿಗೂ ಅರ್ಥವಾಗಿಲ್ಲ

ಬೆಳಗಾವಿ:: ಮುಂದಿನ ಚುನಾವಣೆ ಗೋಕಾಕನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಡೋಣ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎಂಬುವುದು ಯಾರಿಗೂ ಅರ್ಥವಾಗಿಲ್ಲ. ನಾವು ಯಾವುದೇ ಚುನಾವಣೆಯನ್ನು ಕೇಂದ್ರಿಕೃತ ಮಾಡಿಲ್ಲ, ಸ್ವತಂತ್ರವಾಗಿಯೇ ಮಾಡಿದ್ದೇವೆ. ಅವರು ಮಾತ್ರ ಅಧಿಕಾರವನ್ನು ಕೈಯಲ್ಲಿಯೇ ಹಿಡಿದುಕೊಂಡಿರುತ್ತಾರೆ ಎಂದು ತಿವಿದಿದ್ದಾರೆ. ಇನ್ನೂ ವಿಧಾನಪರಿಷತ್ ಫಲಿತಾಂಶಕ್ಕೆ ಸಂಬಂಧಿಸಿದಂತೆ …

Read More »

ಸಿ.ಟಿ.ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..?!

ಬೆಂಗಳೂರು,ಡಿ.8- ಮುಂಬರುವ 2023ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕೇಂದ್ರ ಬಿಜೆಪಿ ವರಿಷ್ಠರು ಹಾಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಲು ಮುಂದಾಗಿದ್ದಾರೆ. ಹಾಲಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರನ್ನು ಶೀಘ್ರದಲ್ಲಿ ಬದಲಾಯಿಸಿ ತೆರವಾಗಲಿರುವ ಈ ಸ್ಥಾನಕ್ಕೆ ಆರ್ ಎಸ್ ಎಸ್ ಹಾಗೂ ಸಂಘಪರಿವಾರದ ಹಿನ್ನೆಲೆಯ ರವಿ ಅವರಿಗೆ ಪಟ್ಟ ಕಟ್ಟಲು ದೆಹಲಿ ನಾಯಕರು ತೀರ್ಮಾನಿಸಿದ್ದಾರೆ. ಒಂದು ಕಡೆ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿರುವ …

Read More »