Breaking News

ಬೆಳಗಾವಿ

ಕಾಂಗ್ರೆಸ್, ಜೆಡಿಎಸ್ ಧರಣಿ ನಡುವೆ ನಾಲ್ಕು ವಿಧೇಯಕಗಳ ಅಂಗೀಕಾರ: ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿಧೇಯಕಗಳನ್ನು ಪ್ರತಿಪಕ್ಷಗಳ ಧರಣಿ ನಡುವೆ ವಿಧಾನ ಪರಿಷತ್​ನಲ್ಲಿ ಅಂಗೀಕಾರ ಮಾಡಲಾಗಿದ್ದು, ಕಲಾಪವನ್ನು ಅನಿರ್ದಿಷ್ಟಾವದಿಗೆ ಮುಂದೂಡಿಕೆ ಮಾಡಲಾಯಿತು. ವಿಧಾನ ಪರಿಷತ್ ಶೂನ್ಯವೇಳೆ ಕಲಾಪ ಮುಗಿಯುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ನಿನ್ನೆ ಗದ್ದಲದ ನಡುವೆ ಮಾಣಿಪ್ಪಾಡಿ ವರದಿ ಮಂಡಿಸಿದ್ದಾರೆ. ನಮಗೆ ಅದರ ಪ್ರತಿ ಕೊಡಿ ಎಂದು ಮಾಣಿಪ್ಪಾಡಿ ವರದಿ ಕುರಿತು ನಿಯಮ 59 ರ ಅಡಿ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ …

Read More »

ಕೃಷಿ ಕಾರ್ಮಿಕರ ಮಕ್ಕಳಿಗೂ ರೈತ ವಿದ್ಯಾನಿಧಿ: ಶಿವನಗೌಡ ಪಾಟೀಲ

ಬೆಳಗಾವಿ: ಕೃಷಿ ಕಾರ್ಮಿಕರ ಮಕ್ಕಳಿಗೆ ಇದು ಸಂತಸದ ಸುದ್ದಿ. ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ‘ಮುಖ್ಯಮಂತ್ರಿ ರೈತ ವಿದ್ಯಾವಿಧಿ’ ಯೋಜನೆ ವಿಸ್ತರಿಸಲಾಗಿದೆ. ‍ಹಿಂದೆ ತಂದೆ- ತಾಯಿ ಅಥವಾ ಅಜ್ಜ- ಅಜ್ಜಿ ಹೆಸರಿನಲ್ಲಿ ಹೊಲ ಇದ್ದವರು ಮಾತ್ರ ಅರ್ಹರಾಗಿದ್ದರು. ಪ್ರಸಕ್ತ (2022-23) ವರ್ಷದಿಂದ ಕೃಷಿ ಕಾರ್ಮಿಕರ ಮಕ್ಕಳೂ ಈ ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದರು. ರಾಜು ಕಡಕೋಳ ಎಂಬ ವಿದ್ಯಾರ್ಥಿಯ ಪ್ರಶ್ನೆಗೆ ಉತ್ತರಿಸಿದ …

Read More »

ಚನ್ನಮ್ಮನ ಕಿತ್ತೂರು: ಅರಳಿಕಟ್ಟಿ ಸರ್ಕಲ್‌ನಲ್ಲಿ ನಿಲ್ಲಲು ಸಮರ್ಪಕ ಬಸ್‌ ತಂಗುದಾಣ ಇಲ್ಲ

ಕಿತ್ತೂರು: ಅರಳಿಕಟ್ಟಿ ಸರ್ಕಲ್‌ನಲ್ಲಿ ನಿಲ್ಲಲು ಸಮರ್ಪಕ ಬಸ್‌ ತಂಗುದಾಣ ಇಲ್ಲದೇ ಸಾರ್ವಜನಿಕರು ಮಳೆಗಾಲ-ಬೇಸಿಗೆಯಲ್ಲಿ ಪರದಾಡುವಂತಾಗಿದೆ. ಕಿತ್ತೂರು ಸುತ್ತಮುತ್ತಲಿನ ಗ್ರಾಮಗಳಾದ ನಂದಿಹಳ್ಳಿ, ಕಲಭಾವಿ, ಶಿವನೂರು, ಮರಿಗೇರಿ, ಜಮಳೂರು, ಹೂಲಿಕಟ್ಟಿ, ಉಗರಕೋಡ, ತೇಗೂರು, ಖೋದಾನಪೂರ ಸಂಗೊಳ್ಳಿ ಸೇರಿದಂತೆ ಇನ್ನೂ ಅನೇಕ ಗ್ರಾಮಗಳಿಂದ ಕೆಲಸಕ್ಕೆ ಗ್ರಾಮಸ್ಥರು, ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಬಸ್‌ ಮುಖಾಂತರ ಆಗಮಿಸುತ್ತಾರೆ. ಅವರು ಮರಳಿ ತಮ್ಮ ತಮ್ಮ ಗ್ರಾಮಗಳಿಗೆ ಹೋಗುವಾಗ ಅರಳಿಕಟ್ಟಿ ಸರ್ಕಲ್‌ನಲ್ಲಿ ಇರುವ ಬಸ್‌ ತಂಗುದಾಣ ಚಿಕ್ಕದಿರುವುದರಿಂದ ಬಹುತೇಕರಿಗೆ ನೆರಳಲ್ಲಿ ನಿಲ್ಲಲು-ಕುಳಿತುಕೊಳ್ಳಲು …

Read More »

ಉಮೇಶ ಕತ್ತಿ ಉತ್ತರಾಧಿಕಾರಿ ಯಾರು?

ಬೆಳಗಾವಿ: ಹಿರಿಯ ನಾಯಕ ಉಮೇಶ ಕತ್ತಿ ನಿಧನದಿಂದ ತೆರವಾದ ಸ್ಥಾನಕ್ಕೆ ಯಾರು? ಬೆಳಗಾವಿ ಜಿಲ್ಲೆಯಲ್ಲಿ ಯಾರಿಗೆ ಈ ಅವಕಾಶ ದೊರೆಯಲಿದೆ? ಇಂತಹ ಹಲವಾರು ಪ್ರಶ್ನೆ ಮತ್ತು ಚರ್ಚೆಗಳು ಈಗ ನಡೆದಿವೆ. ಉಮೇಶ ಕತ್ತಿ ಸ್ಥಾನ ತುಂಬುವ ಕೆಲಸ ಅಂದುಕೊಂಡಷ್ಟು ಸರಳವಾಗಿಲ್ಲ. ಈಗಿನ ಪರಿಸ್ಥಿತಿಯಲ್ಲಿ ಅದು ಒಂದು ರೀತಿಯಲ್ಲಿ ಜೇನುಗೂಡಿಗೆ ಕೈ ಹಾಕಿದಂತೆ. ಸಂಪುಟ ವಿಸ್ತರಣೆ ಮಾಡಬೇಕೋ ಅಥವಾ ಪುನಾರಚನೆ ಮಾಡಬೇಕೋ ಎಂಬ ಗೊಂದಲದಲ್ಲಿರುವ ಸರ್ಕಾರ ಮತ್ತು ಪಕ್ಷದ ವರಿಷ್ಠರು ಇದೇ ಕಾರಣಕ್ಕೆ …

Read More »

ಬೆಳಗಾವಿ ಹಿಂಡಲಗಾ ಜೈಲಿನಿಂದ ಆರೋಪಿ ವಿಡಿಯೋ ಕಾಲ್

ಬೆಳಗಾವಿ: ಜೈಲಿನಿಂದಲೇ ಆರೋಪಿಯೊಬ್ಬರು ವಿಡಿಯೋ ಕಾಲ್ ಮೂಲಕ ಪುರಸಭೆ ಸಾಮಾನ್ಯ ಸಭೆಗೆ ಹಾಜರಾಗಿ ತನ್ನ ವಾರ್ಡ್ ಕುರಿತು ಸಭೆಯಲ್ಲಿ ಚರ್ಚೆ ನಡೆಸಿರುವ ಘಟನೆ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪುರಸಭೆಯ 14ನೇ ವಾರ್ಡ್​ನ ಬಿಜೆಪಿ ಸದಸ್ಯ ಉಮೇಶ ಕಾಂಬಳೆ ಎಂಬ ಆರೋಪಿ ಸಾಮಾನ್ಯ ಸಭೆಯಲ್ಲಿ ವಿಡಿಯೋ ಕಾಲ್​ ಮೂಲಕ ಭಾಗಿಯಾಗಿದ್ದಾರೆ. ಕಳೆದ ಎಂಟು ತಿಂಗಳ ಹಿಂದೆ ಕಂಟ್ರಿ ಪಿಸ್ತೂಲ್ ಬಳಸಿ ಗುಂಡಿಕ್ಕಿ ಮಹಿಳೆಯ ಕೊಲೆ ಆರೋಪದಲ್ಲಿ …

Read More »

ಬೆಳಗಾವಿ- ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪಿಎಫ್ಐ, ಎಸ್​ಡಿಪಿಐ ಕಾರ್ಯಕರ್ತರ ಪ್ರತಿಭಟನೆ

ಬೆಳಗಾವಿ/ಹುಬ್ಬಳ್ಳಿ : ದೇಶದ ವಿವಿಧೆಡೆ ಪಿಎಫ್ಐ ಮುಖಂಡರ ಮನೆ ಮೇಲೆ ಎನ್ಐಎ ದಾಳಿ ನಡೆಸಿದ ಹಿನ್ನೆಲೆ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಪಿಎಫ್ಐ, ಎಸ್​ಡಿಪಿಐ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ನಗರದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ ಪಿಎಫ್ಐ ಕಾರ್ಯಕರ್ತರು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು. ಆರ್‌ಎಸ್ಎಸ್ …

Read More »

ಅನಾರೋಗ್ಯಕ್ಕೆ ತುತ್ತಾಗಿ ಚೆನ್ನೈಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಬೆಳಗಾವಿ: ಅನಾರೋಗ್ಯದ ಕಾರಣಕ್ಕೆ ಚೆನ್ನೈ ‌ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ, ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಹುಕ್ಕೇರಿ ಹಿರೇಮಠದ ಚಂದ್ರಶೇಖರ್​ ಶಿವಾಚಾರ್ಯ ಸ್ವಾಮೀಜಿ ಹಾಗೂ ಶಾಸಕ ದುರ್ಯೋಧನ ಐಹೊಳೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಹುಕ್ಕೇರಿ ಶ್ರೀಗಳಿಂದ ಆನಂದ ಮಾಮನಿ ಆರೋಗ್ಯ ವಿಚಾರಣೆಈ ವೇಳೆ ಮಾತನಾಡಿದ ಚಂದ್ರಶೇಖರ ಸ್ವಾಮೀಜಿ, ಉಪಸಭಾಪತಿ ಆನಂದ ಮಾಮನಿ ಅವರ ಆರೋಗ್ಯ ಚೆನ್ನಾಗಿದೆ. ಯಾವುದೇ ಆತಂಕ …

Read More »

ಅಥಣಿಯಲ್ಲಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ.. ನವಜಾತ ಮಗು ಪತ್ತೆ.. ಸಿಕ್ಕಿ ಬಿದ್ದ ಕಳ್ಳಿ

ಅಥಣಿ: ಸಿನಿಮೀಯ ಮಾದರಿಯಲ್ಲಿ ಸರ್ಕಾರಿ ಆಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಆದರೆ, ಎರಡೂವರೆ ಗಂಟೆಯಲ್ಲಿ ಮಗುವನ್ನು ಬೆಳಗಾವಿ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ನಿನ್ನೆಯಷ್ಟೇ ಜನಿಸಿದ್ದ ನವಜಾತ ಗಂಡು ಮಗು ಪತ್ತೆ ಹಚ್ಚಿ ತಾಯಿಗೆ ಹಸ್ತಾಂತರಿಸುವಲ್ಲಿ ಅಥಣಿ ಮತ್ತು ಕಾಗವಾಡ ಪೊಲೀಸರು ಯಶಸ್ವಿಯಾಗಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಇಂದು ಬೆಳಗಿನ ಜಾವ 10.15 ಕ್ಕೆ ಸರ್ಕಾರಿ ಆಸ್ಪತ್ರೆಗೆ ನರ್ಸ್ …

Read More »

ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ*

  *ಮೂಡಲಗಿ*: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ ಮೂಡಲಗಿ, ಕುಲಗೋಡ, ಖಾನಟ್ಟಿ ಮತ್ತು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಗಳಿಗೆ ವಿದ್ಯಾರ್ಥಿಗಳ ಅನುಕೂಲಕ್ಕೋಸ್ಕರ ಹೊಸ ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿಸಲಾಗಿದೆ. ಇದರಿಂದ ಮೂಡಲಗಿ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೇರಿದೆ …

Read More »

ಬೆಳಗಾವಿಯಲ್ಲಿ ಮಕ್ಕಳ ಸುರಕ್ಷತೆ ಅರಿವು ಕಾರ್ಯಕ್ರಮ 2022 ಆಯೋಜನೆ

ಬೆಳಗಾವಿಯಲ್ಲಿ ನಗರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಕ್ಕಳ ಸುರಕ್ಷತೆ ಅರಿವು ಕಾರ್ಯಕ್ರಮ 2022ನ್ನು ಆಯೋಜಿಸಲಾಗಿತ್ತು. ಹೌದು ಇಂದು ಬುಧವರಾ ಬೆಳಗಾವಿ ನಗರದ ಜೀರಗೆ ಸಭಾ ಭವನದಲ್ಲಿ ಬೆಳಗಾವಿ ನಗರಪೊಲೀಸ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಲ್ಲ ಸುರಕ್ಷತೆ ಅರಿವು ಕಾರ್ಯಕ್ರಮ 2022ನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ಡಾ. ಎಂ.ಬಿ ಬೋರಲಿಂಗಯ್ಯ, ಡಿಡಿಪಿಐ ಬಸವರಾಜ್ ನಲವತ್‌ವಾಡ್, ಆರ್‌ಟಿಓ ಶಿವಾನಂದ ಮಗದುಮ್, ಪಾಲಿಕೆ ಆಯುಕ್ತರಾದ …

Read More »