Breaking News
Home / ಜಿಲ್ಲೆ / ಬೆಳಗಾವಿ (page 204)

ಬೆಳಗಾವಿ

ಚಮಕ್ ಚಮಕ್ ಲೈಟ್ ಹಚ್ಚಿಕೊಂಡು ಹೊಸ ಬಸ್ ಬರುತ್ತಿವೆ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​

ಅಥಣಿ : ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ 4 ಸಾವಿರಕ್ಕೂ ಅಧಿಕ ಮತಗಳಿವೆ. ಅವುಗಳನ್ನು ಹಿಡಿದಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಇದರ ನಡುವೆ ಹೊಸ ಹೊಸ ಬಸ್​​ಗಳಲ್ಲಿ ಚಮಕ್ ಚಮಕ್ ಲೈಟು ಹಚ್ಚಿಕೊಂಡು ಬರುತ್ತಿದ್ದಾರೆ. ಹೊಸ ಬಸ್​​ಗಳು ಜಾತ್ರೆ ಮಾಡಿಕೊಂಡು ಹೋಗುತ್ತಾರೆ, ಹಳೆ ಬಸ್​​ಗಳೇ ರೆಗ್ಯುಲರಾಗಿ ಇರುತ್ತವೆ. ಇದರಿಂದ ಮತದಾರಿಗೆ ತಿಳುವಳಿಕೆ ನೀಡಲು ಎರಡನೇ ಬಾರಿ ಅಥಣಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದರು. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ …

Read More »

ಸುವರ್ಣ ವಿಧಾನಸೌಧ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರ ಪಿ.ಹೇಮಲತಾ

ಬೆಳಗಾವಿ: ವಿಧಾನಮಂಡಲ ಚಳಿಗಾಲ ಅಧಿವೇಶನ ಇದೇ ಡಿಸೆಂಬರ್13 ರಿಂದ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಪಿ.ಹೇಮಲತಾ ಅವರು ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಬುಧವಾರ (ಡಿ.1) ಭೇಟಿ ನೀಡಿದ ಅವರು ಎಲ್ಲ ಸಿದ್ಧತೆಗಳನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ವಿಧಾನಸಭೆ, ಸಭಾಧ್ಯಕ್ಷರ ಕೊಠಡಿ, ಬ್ಯಾಂಕ್ವೆಟ್ ಸಭಾಂಗಣ, ಶಾಸಕರ ಹಾಗೂ ವಿರೋಧ ಪಕ್ಷದ ಮೊಗಸಾಲೆ, ಸೆಂಟ್ರಲ್ ಹಾಲ್, ಊಟದ ವ್ಯವಸ್ಥೆ, ಭದ್ರತಾ ವ್ಯವಸ್ಥೆಯನ್ನು, ಕಾರ್ಯದರ್ಶಿಗಳ ಕ್ಯುಬಿಕಲ್ಸ್ …

Read More »

ಬೆಳಗಾವಿ ಮಾರ್ಕೆಟ್ ಪೊಲೀಸರಿಂದ ಇಸ್ಪೀಟ್ ಅಡ್ಡೆ ಮೇಲೆ ದಾಳಿ: 9 ಮಂದಿ ಬಂಧನ

ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಇಸ್ಪೀಟ್ ಆಡುತ್ತಿದ್ದ ಬರೊಬ್ಬರಿ 9 ಮಂದಿಗೆ ಹೆಡೆಮುರಿ ಕಟ್ಟಿದ್ದಾರೆ. ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿ ಅವರ ನೇತೃತ್ವದ ತಂಡವು ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಾಧ್ವ ರೋಡ ಬಳಿ ದಾಳಿ ಮಾಡಿದ್ದಾರೆ. ಈ ವೇಳೆ 9 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರಿಂದ 1,03,440 ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಳಗಾವಿಯಲ್ಲಿ ನಡೆಯಲಿದೆ ಚಳಿಗಾಲ ಅಧಿವೇಶನ

ಬೆಂಗಳೂರು: ಕೊರೊನಾ ಆತಂಕ ಕಡಿಮೆಯಾದ್ರೂ ರೂಪಾಂತರಿಯ ಆತಂಕ ಕಡಿಮೆಯಾಗ್ತಿಲ್ಲ. ಈಗ ಎಲ್ಲೆಲ್ಲೂ ಓಮಿಕ್ರಾನ್ ಭಯ ಶುರುವಾಗಿದೆ. ಇದು ಅಧಿವೇಶನಕ್ಕೂ ತಟ್ಟುತ್ತಾ ಎಂಬ ಅನುಮಾನ ಕಾಡುತ್ತಿದೆ. ಕೊವೀಡ್ ಬಿಗಿ ಕ್ರಮಗಳೊಂದಿಗೆ ಸದನ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ. ನಿಗಧಿಯಂತೆ 13 ರಿಂದ 26ರ‌ವರೆಗೆ ಅಧಿವೇಶನ ನಡೆಸಲು ಸಿದ್ದತೆ ‌ನಡೆಸಲಾಗಿದೆ. ಈ ಹಿನ್ನೆಲೆ ಇಂದು ಸಂಜೆ ಬೆಳಗಾವಿಗೆ ತೆರಳುತ್ತಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ತಿಳಿಸಿದ್ದಾರೆ. ಅಧಿವೇಶನದ ಹಿನ್ನೆಲೆ ಸ್ಪೀಕರ್ ನಾಳೆ …

Read More »

ಚಳಿಗಾಲ ಅಧಿವೇಶನಕ್ಕೆ ನಡೆದಿರುವ ಪೂರ್ವ ಸಿದ್ಧತೆ

ಬೆಳಗಾವಿ: ಇದೇ 13ರಿಂದ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆರಂಭಗೊಳ್ಳಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನಕ್ಕೆ ನಡೆದಿರುವ ಪೂರ್ವ ಸಿದ್ಧತೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಪಿ.ಹೇಮಲತಾ ಬುಧವಾರ ಪರಿಶೀಲಿಸಿದರು. ವಿಧಾನಸಭೆ, ಸಭಾಧ್ಯಕ್ಷರ ಕೊಠಡಿ, ಬ್ಯಾಂಕ್ವೆಟ್ ಸಭಾಂಗಣ, ಶಾಸಕರು ಹಾಗೂ ವಿರೋಧ ಪಕ್ಷದ ಮೊಗಸಾಲೆ, ಸೆಂಟ್ರಲ್ ಹಾಲ್, ಊಟದ ವ್ಯವಸ್ಥೆ, ಭದ್ರತಾ ವ್ಯವಸ್ಥೆಯನ್ನು, ಕಾರ್ಯದರ್ಶಿಗಳ ಕ್ಯುಬಿಕಲ್‌ಗಳನ್ನು ಪರಿಶೀಲಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.  

Read More »

ಡಿ.14ಕ್ಕೆ ಡಿಕೆಶಿಗೆ ಎಲ್ಲ ಉತ್ತರ ಕೊಡುತ್ತೇನೆ: ಅವತ್ತು ಬೇಕಾದ್ರೆ ವಾರ್ ಆಗಲಿ: ಡಿಕೆಶಿಗೆ ರಮೇಶ ಜಾರಕಿಹೊಳಿ ಓಪನ್ ಚಾಲೆಂಜ್..!

ನನ್ನ ವ್ಯಕ್ಯಿತ್ವ ಏನು, ಡಿಕೆಶಿ ವ್ಯಕ್ತಿತ್ವ ಏನು ಎಂದು ಹೇಳ್ತಿನಿ. ಬೇಕಾದರೆ ಓಪನ್ ವಾರ್ ಆಗಲಿ. ಫಲಿತಾಂಶದ ದಿನ ಎಲ್ಲದಕ್ಕೂ ತಕ್ಕ ಉತ್ತರ ಕೊಡುತ್ತೇನೆ ಎಂದು ಕನಕಪುರ ಬಂಡೆ ಡಿಕೆ ಶಿವಕುಮಾರ್‍ಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದ್ದಾರೆ. ಎಂಎಲ್‍ಸಿ ಚುನಾವಣಾ ರಣಕಣದಲ್ಲಿ ಘಟಾನುಘಟಿ ನಾಯಕರ ಮಧ್ಯ ಮಾತಿನ ಸಮರ ಮುಂದುವರಿದಿದೆ. ಮೊನ್ನೆಯಷ್ಟೇ ರಮೇಶ ಜಾರಕಿಹೊಳಿ ವಿರುದ್ಧ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದ್ದರು. ಇದೀಗ ಡಿಕೆಶಿ …

Read More »

ನಮ್ಮದು ಯಾವಾಗಲೂ ಎ ಟೀಮ್, ಎ ಫಾರ್ ಎ ಒನ್-ಲಖನ್ ಜಾರಕಿಹೊಳಿ ಟಾಂಗ್ ಪರಿಷತ್ ಚುನಾವಣಾ ಅಖಾಡದಲ್ಲಿ ಸಹೋದರರ ಸವಾಲ್

ಬೆಳಗಾವಿ ತಾಲೂಕಿನ ಸುಳೇಬಾವಿಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ, ಯಾರ್ಯಾರೋ ಎ ಟೀಮ್ ಬಿ ಟೀಮ್ ಅಂತಾ ಏನೇನೋ ಹೇಳ್ತಾರೆ. ನಾವು ಯಾವಾಗಲೂ ಎ ಟೀಮ್. ಅಂದ್ರೆ ಎ ಫಾರ್ ಎ1. ನಮ್ಮದು ಎ ಟೀಮ್, ಅವರೇ ಬಿ ಟೀಮ್. ನಾವು ನೀವು ಎ ಟೀಮ್ ಅಂದ್ರೆ ಮತದಾರರು ಎಲ್ಲಾರೂ ನಮ್ಮನ್ನು ನೋಡಿ ಎ ಟೀಮ್ ಎನ್ನಬೇಕು. ಅವರದ್ದು ಒಂದು ಬಿ ಇನ್ನೊಂದು ಸಿ …

Read More »

ಪ್ರಥಮ ಪ್ರಾಶಸ್ತ್ಯದ ಮತ ನೀಡಿ:ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ!!

      ಬೈಲಹೊಂಗಲ: ಬೆಂಗಳೂರಿನಿಂದ ಬಂದು ಇಲ್ಲಿ ಬಂದು ಮಾತನಾಡುವವರ ಮಾತು ಬೆಳಗಾವಿಯಲ್ಲಿ ಏನೂ ನಡೆಯುವುದಿಲ್ಲ ಎಂದು ವಿಧಾನ ಪರಿಷತ್ತಿನ ಬೆಳಗಾವಿ ದ್ವಿಸದಸ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ಅವರು ಪಟ್ಟಣದ ಮುರಗೊಡ ರಸ್ತೆಯ ಪೃಥ್ವಿ ಗಾರ್ಡನ್‌ನಲ್ಲಿ ಮಂಗಳವಾರ ನಡೆದ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಪ್ರಚಂಡ ಬಹುಮತದಿಂದ …

Read More »

ಬೆಳಗಾವಿ ಜಿಲ್ಲೆಯ ದುಷ್ಟ ರಾಜಕಾರಣಕ್ಕೆ ಬಿಜೆಪಿ ನಾಯಕರು ಕೊನೆ ಹಾಡುತ್ತಾರೆ ಎಂದು ತಿಳಿದಿದ್ದೇನೆ

ಬೆಳಗಾವಿ: ರಮೇಶ್, ಲಖನ್​ ಗಾಡಿ ಕಳಿಸಿದ ಅಂದ ತಕ್ಷಣ ಹೋಗಬೇಡಿ. ನಮ್ಮ ಪಕ್ಷದ ಮುಖಂಡರು ಈ ಸಂಸ್ಕೃತಿಯನ್ನು ಬಿಟ್ಟುಬಿಡಬೇಕು. ಅರಭಾವಿ ಕ್ಷೇತ್ರದಲ್ಲಿ ಮತದಾರರಿಗೆ ₹10,000 ಮುಂಗಡ ಪಾವತಿ ಮಾಡಿದ್ದಾರೆ ಎಂಬ ಮಾತುಗಳಿವೆ. ಮೂರ್ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಹಾಕುವುದಿಲ್ಲವೆಂಬ ಮಾಹಿತಿ ಬಂದಿದೆ ಎಂದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಮತದಾರರ ಚೀಟಿ ಪಡೆದು ನಾವೇ ಮತ ಹಾಕುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. …

Read More »

ಲೋಕಸಭೆಯಲ್ಲಿ ಮಸೂದೆ ಕುರಿತು ಚರ್ಚೆಗೆ ಕಾಂಗ್ರೆಸ್ ಒತ್ತಾಯಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಗಲಾಟೆ ಶುರು

ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಯನ್ನು ಅಂಗೀಕರಿಸಲಾಗಿದೆ. ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಿದೆ. ಅಧಿವೇಶನದ ಮೊದಲ ದಿನವೇ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಯನ್ನು ಅಂಗೀಕರಿಸಲಾಗಿದೆ. ಇದರೊಂದಿಗೆ ಲೋಕಸಭೆಯ ಕಲಾಪವನ್ನು ಮುಂದೂಡಲಾಗಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಕಾನೂನುಗಳನ್ನು ಹಿಂಪಡೆಯುವ ಕುರಿತು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದರು. ಕೆಲವೇ ಸಮಯದಲ್ಲಿ ಕೃಷಿ ಕಾನೂನು ಹಿಂಪಡೆಯುವ ಮಸೂದೆಯನ್ನು ಲೋಕಸಭೆಯು ಅಂಗೀಕರಿಸಲಾಯ್ತು. ಲೋಕಸಭೆಯಲ್ಲಿ ಮಸೂದೆ ಕುರಿತು …

Read More »